ಅಲ್ಲಮನ ಅನನ್ಯ ಪದಪ್ರಯೋಗಗಳು | ಬೇಡೆಂದೆನೆ?

Date:

ಅಲ್ಲಮ ತನ್ನ ವಚನಗಳಲ್ಲಿ ಬಳಸಿರುವ ವಿಶಿಷ್ಟವಾದ 101 ಪದಗಳನ್ನು ಗುರುತಿಸಿ, ಪ್ರತಿ ಪದದ ಬಗ್ಗೆ ಈ ಕೆಳಗಿನ ಮಾದರಿಯಲ್ಲಿ ವಿವರಿಸಲಾಗುವುದು. ಈದಿನ ಓದುಗರಿಗಾಗಿ ಅಲ್ಲಮನ ಅರಿವು…

ಬೇಡೆಂದೆನೆ?
ಹುಟ್ಟುವರೆಲ್ಲರ ಹುಟ್ಟಬೇಡೆಂದೆನೆ?
ಹೊಂದುವರೆಲ್ಲರ ಹೊಂದಬೇಡೆಂದೆನೆ?
ಪ್ರಳಯದಲ್ಲಿ ಅಳಿವವರ ಅಳಿಯಬೇಡೆಂದೆನೆ?
ಗುಹೇಶ್ವರಾ, ನಿಮ್ಮನರಿದು ನೆರೆದ ಬಳಿಕ
ಧರೆಯ ಮೇಲುಳ್ಳವರನಿರಬೇಡೆಂದೆನೆ?

- Advertisement -

ವಚನಾರ್ಥ:
ಈ ಬ್ರಹ್ಮಾಂಡದ ಸೃಷ್ಟಿಗೆ ಕಾರಣವಾದ ವಿಶ್ವದ ಬೀಜ ಅಥವಾ ಸೃಷ್ಟಿಕರ್ತನನ್ನು ಹಿರಣ್ಯಗರ್ಭ ಎನ್ನುತ್ತಾರೆ. ಹಿರಣ್ಯಗರ್ಭನು ಈ ಜಗತ್ತಿನ ಎಲ್ಲಾ ಜೀವಿಗಳ ಹುಟ್ಟಿಗೆ ಕಾರಣನು. ಹುಟ್ಟುವ ಕ್ರಿಯೆ ನಿರಂತರವಾಗಿ ನಡೆಯುತ್ತಲೇ ಇರುತ್ತದೆ. ಬೇಡ ಎನ್ನಲಾಗದು. ಬೇಡ ಅಂದರೂ ಅದು ನಿಲ್ಲದು. ಹೀಗೆ ಹುಟ್ಟಿ ಬರುವ ಜೀವಿಗಳು ತಮ್ಮ ಅಸ್ತಿತ್ವಕ್ಕಾಗಿ ಹೊಂದುವುದನ್ನು ಹೊಂದುತ್ತಲೇ ಇರುತ್ತವೆ. ಅನ್ನ, ನೀರು, ವಸ್ತ್ರ, ವಸತಿ, ಭೋಗ, ಭಾಗ್ಯ ಇತ್ಯಾದಿಗಳನ್ನು. ಬೇಡ ಎನ್ನಲಾಗದು. ಕಡೆಯಲ್ಲಿ ಪ್ರತೀ ಜೀವಿಯು ಲಯವಾಗಲೇ ಬೇಕು. ಅಳಿಯಲೇ ಬೇಕು. ಅದು ಸೃಷ್ಟಿ ನಿಯಮ. ಬೇಡ ಎನ್ನಲಾಗದು. “ಸೃಷ್ಟಿಕತೆ ಕಟ್ಟು ಕಥೆ ವಿಲಯ ಕಥೆ ಬರಿಯ ಕಥೆ  ಹುಟ್ಟು ಸಾವುಗಳೊಂದೆ ಪುರುಳಿನೆರಡು ದಶೆ” ಎಂದು ಜೀವನದ ಹುರುಳನ್ನು ಕಗ್ಗ ಹೇಳುತ್ತದೆ. ಹುಟ್ಟುವುದಕ್ಕೆ, ಹೊಂದುವುದಕ್ಕೆ, ಹೋಗುವುದಕ್ಕೆ ಯಾರೂ ಬೇಡ ಅನ್ನಲಾಗದು. ಆದರೆ ಆ ಸೃಷ್ಟಿಕರ್ತನನ್ನು ಅರಿದು ಅವನನ್ನು ನೆನೆದು ಈ ಭೂಮಿಯ ಮೇಲೆ ಆನಂದದಿಂದ ಬದುಕುತ್ತೇವೆ ಅನ್ನುವವರನ್ನು ಇಲ್ಲಿ ಇರಬೇಡ ಎನ್ನಲಿಕ್ಕಾಗುತ್ತದೆಯೇ? ಆನಂದಮಯ ಈ ಜಗ ಹೃದಯ, ದೇವರ ದಯ ಕಾಣೋ!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಪದಪ್ರಯೋಗಾರ್ಥ:
ಬೇಡೆಂದೆನೆ? ಬೇಡ ಎಂದೆನೆ ಎಂದು ಆಡುಮಾತಿನಲ್ಲಿ ಕೇಳುವಂತಹ ಪದ. ನೀವು ಮಾಡುತ್ತಿರುವ ಕೆಲಸಕ್ಕೆ ನಾನು ಬೇಡ ಅನ್ನಲಿಲ್ಲವಲ್ಲಾ ಅಂತ ಮಾತಿನ ಮಧ್ಯದಲ್ಲಿ ಸಹಜವಾಗಿ ಬಳಸುವಂತಹ ನುಡಿಗಟ್ಟು. ಹುಟ್ಟುವರೆಲ್ಲರನು ಹುಟ್ಟಬೇಡಿ ಎನ್ನಲಾಗುತ್ತದೆಯೇ? ಸಾಯುವವರೆಲ್ಲರನು ಸಾಯಬೇಡಿ ಎನ್ನಲಾಗುತ್ತದೆಯೇ?  ತೊಟ್ಟಿಲುಗಳೆಷ್ಟೋ ಮಸಣಗಳಷ್ಟು ಧರೆಯೊಳಗೆ ಎಂಬ ಕವಿನುಡಿಯಿದೆ. ಐದು ಸಾಲಿನ ವಚನದಲ್ಲಿ ನಾಲ್ಕು ಬಾರಿ ಬೇಡೆಂದೆನೆ ಎಂಬ ಪದಪ್ರಯೋಗ ಮಾಡಿ ವಿಷಯ ನಿರೂಪಣೆ ಮಾಡಿರುವುದು ಈ ವಚನದ ಅನನ್ಯತೆ. ಒಂದು ಸಾಮಾನ್ಯ ಪದವನ್ನು ಬಳಸಿ ವಚನವನ್ನು ಹೇಗೆ ಪರಿಣಾಮಕಾರಿಯಾಗಿ ಬಿಂಬಿಸಬಹುದು ಎಂದು ರೂಪಿಸುವಲ್ಲಿ “ಬೇಡೆಂದೆನೆ” ಎಂಬ ಪದಪ್ರಯೋಗ ಗಮನ ಸೆಳೆಯುತ್ತದೆ.

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಒಡಲು

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಮಾಯದ ಮಂಜು

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ದಳದುಳಿ

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಬಯಲು

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ನಷ್ಟಸಂತಾನ

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಅಗ್ನಿಸ್ತಂಭದ ರಕ್ಷೆ

ಶಿವಕುಮಾರ್
ಹರಿಹರ ಶಿವಕುಮಾರ್
+ posts

ಲೇಖಕ, ವೃತ್ತಿಯಿಂದ ಚಾರ್ಟರ್ಡ್ ಅಕೌಂಟೆಂಟ್. ಲೆಕ್ಕಪರಿಶೋಧನೆ ಮತ್ತು ತೆರಿಗೆ ವಿಚಾರಗಳಲ್ಲಿ ಪರಿಣತಿ. ಕನ್ನಡದಲ್ಲಿ ಕಂಪ್ಯೂಟರ್ ಬಳಕೆ ಇವರ ಹವ್ಯಾಸ. ಕನ್ನಡ ಭಾಷೆ ಮತ್ತು ಸಾಹಿತ್ಯದಲ್ಲಿ ಆಸಕ್ತರು. ಶಿವಮೊಗ್ಗ ಜಿಲ್ಲೆಯವರು, ಸದ್ಯ ಬೆಂಗಳೂರಿನಲ್ಲಿ ನೆಲೆ.

ಪೋಸ್ಟ್ ಹಂಚಿಕೊಳ್ಳಿ:

ಹರಿಹರ ಶಿವಕುಮಾರ್
ಹರಿಹರ ಶಿವಕುಮಾರ್
ಲೇಖಕ, ವೃತ್ತಿಯಿಂದ ಚಾರ್ಟರ್ಡ್ ಅಕೌಂಟೆಂಟ್. ಲೆಕ್ಕಪರಿಶೋಧನೆ ಮತ್ತು ತೆರಿಗೆ ವಿಚಾರಗಳಲ್ಲಿ ಪರಿಣತಿ. ಕನ್ನಡದಲ್ಲಿ ಕಂಪ್ಯೂಟರ್ ಬಳಕೆ ಇವರ ಹವ್ಯಾಸ. ಕನ್ನಡ ಭಾಷೆ ಮತ್ತು ಸಾಹಿತ್ಯದಲ್ಲಿ ಆಸಕ್ತರು. ಶಿವಮೊಗ್ಗ ಜಿಲ್ಲೆಯವರು, ಸದ್ಯ ಬೆಂಗಳೂರಿನಲ್ಲಿ ನೆಲೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಚನ ಕಲ್ಯಾಣ | ಏಳ್ನೂರೆಪ್ಪತ್ತು ಅಮರಗಣಂಗಳ ಶ್ರೀಪಾದಕ್ಕೆ ಶರಣೆಂದು ಬದುಕಿದೆನು ಕಾಣಾ!

ಎನಗೆ ಗುರುಸ್ಥಲವ ತೋರಿದಾತ ಸಂಗನ ಬಸವಣ್ಣನು. ಎನಗೆ ಲಿಂಗಸ್ಥಲದ ತೋರಿದಾತ ಚನ್ನಬಸವಣ್ಣನು....

ಅಲ್ಲಮನ ಅನನ್ಯ ಪದಪ್ರಯೋಗಗಳು | ನಡೆದಡೆ ನುಡಿದಡೆ 

ಅಲ್ಲಮ ತನ್ನ ವಚನಗಳಲ್ಲಿ ಬಳಸಿರುವ ವಿಶಿಷ್ಟವಾದ 101 ಪದಗಳನ್ನು ಗುರುತಿಸಿ, ಪ್ರತಿ...

ವಚನ ಕಲ್ಯಾಣ | ಮರ್ತ್ಯಲೋಕದ ಮಹಾಮನೆ ಶೂನ್ಯವಾಯಿತ್ತಲ್ಲಾ ಬಸವಣ್ಣಾ…

ಬಸವಣ್ಣಾ, ನೀವು ಮರ್ತ್ಯಕ್ಕೆ ಬಂದು ನಿಂದಡೆ ಭಕ್ತಿಯ ಬೆಳವಿಗೆ ದೆಸೆದೆಸೆಗಲ್ಲಾ ಪಸರಿಸಿತ್ತಲ್ಲಾ!...

ಅವಳ ಕಣ್ಣೋಟ | ‘ಗಾಂಧಾರಿ’: ಕಣ್ಣು ಕಳೆದುಕೊಂಡವಳು, ಕುರುಡಳಂತೆ ನಟಿಸಿದವಳು

ಮಕ್ಕಳ ಕಳ್ಳಸಾಗಣೆಯ ಜಾಲವನ್ನು ಚಿತ್ರದ ಕೇಂದ್ರ ಸಮಸ್ಯೆಯಾಗಿ ಇಟ್ಟಿರುವುದು ಮಹತ್ವದ ಸಂಗತಿ....