ಅಲ್ಲಮನ ಅನನ್ಯ ಪದಪ್ರಯೋಗಗಳು | ನನ್ನಿಯ ನುಡಿ

Date:

ಅಲ್ಲಮ ತನ್ನ ವಚನಗಳಲ್ಲಿ ಬಳಸಿರುವ ವಿಶಿಷ್ಟವಾದ 101 ಪದಗಳನ್ನು ಗುರುತಿಸಿ, ಪ್ರತಿ ಪದದ ಬಗ್ಗೆ ಈ ಕೆಳಗಿನ ಮಾದರಿಯಲ್ಲಿ ವಿವರಿಸಲಾಗುವುದು. ಈದಿನ ಓದುಗರಿಗಾಗಿ ಅಲ್ಲಮನ ಅರಿವು…

ನನ್ನಿಯ ನುಡಿ
ಅನ್ನವನಿಕ್ಕಿ ನನ್ನಿಯ ನುಡಿದು
ಅರವಟ್ಟಿಗೆಯನಿಕ್ಕಿ ಕೆರೆಯ ಕಟ್ಟಿಸಿದಡೆ
ಮರಣದಿಂದ ಮೇಲೆ ಸ್ವರ್ಗ ಉಂಟಲ್ಲದೆ
ಶಿವನ ನಿಜವು ಸಾಧ್ಯವಾಗದು. ಗುಹೇಶ್ವರನನರಿದ ಶರಣಂಗೆ
ಆವ ಫಲವೂ ಇಲ್ಲ 

- Advertisement -

ಪದಾರ್ಥ:
ನನ್ನಿ  = ಪ್ರೀತಿ, ಸತ್ಯ
ಅರವಟ್ಟಿಗೆ  =  ನೀರು ಪಾನಕ ಕೊಡುವ ಸ್ಥಳ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

ವಚನಾರ್ಥ:
ಮರಣದ ನಂತರ ನಮಗೆ ಸ್ವರ್ಗ ಪ್ರಾಪ್ತಿ ಆಗಬೇಕು ಎಂಬುದು ಎಲ್ಲರ ಆಸೆ. ಮರಣದ ನಂತರ ದೊರೆಯುವ ಇಂತಹ ಸೌಲಭ್ಯಕ್ಕಾಗಿ ತಮ್ಮ ಜೀವಿತಾವಧಿಯಲ್ಲಿ ಸಾಧ್ಯವಾದಷ್ಟು ಧರ್ಮಕಾರ್ಯಗಳನ್ನು ಮಾಡುವಲ್ಲಿ ನಿರತರಾಗಿರುತ್ತಾರೆ. ಅನ್ನದಾನ ಮಾಡುತ್ತಾರೆ. ಪ್ರೀತಿ ಮಾತುಗಳನ್ನು ಆಡುತ್ತ ಸತ್ಯ ಮಾರ್ಗದಲ್ಲಿ ನಡೆದುಕೊಳ್ಳುತ್ತಾರೆ. ದೇವಾಲಯ ಮತ್ತಿತರ ಸಾರ್ವಜನಿಕ ಸ್ಥಳಗಳಲ್ಲಿ ಅರವಟ್ಟಿಗೆಯನ್ನು ಇಟ್ಟು ನೀರು, ಮಜ್ಜಿಗೆ, ಪಾನಕಗಳನ್ನು ಭಕ್ತರಿಗೆ ನೀಡುತ್ತಾರೆ. ಕೆರೆ ಕಟ್ಟೆಗಳನ್ನು ಕಟ್ಟಿಸಿ ಪುಣ್ಯ ಕಟ್ಟಿಕೊಳ್ಳುತ್ತಾರೆ. ಇವೆಲ್ಲಾ ಮಾಡುವುದು ಮರಣದಿಂದ ಮೇಲೆ ಸ್ವರ್ಗ ಉಂಟು. ಅಲ್ಲಿ ಸೇರಿಕೊಳ್ಳಬೇಕು ಎಂಬ ಆಸೆಯಿಂದ. ಅಲ್ಲಮ ಇದನ್ನು ಒಪ್ಪುವುದಿಲ್ಲ. ಅಲ್ಲಮ ಹೇಳುವಂತೆ ಸ್ವರ್ಗಲೋಕ ಮರ್ಥ್ಯ ಲೋಕಗಳನ್ನು ಜೀವಿತಾವಧಿಯಲ್ಲಿ ಇಲ್ಲಿಯೇ ಕಾಣಬೇಕು. ಶಿವನ ನಿಜವನ್ನು ಅರಿಯಬೇಕು. ಅಂತಹ ಅರಿವು ಫಲವಿಲ್ಲದ ಫಲ. ಮರಣಾನಂತರ ನಾನೇನಾಗುತ್ತೇನೆ ಎಂಬುದರ ಬಗ್ಗೆ ಚಿಂತಿಸದೆ ಬದುಕಿರುವಾಗ ಸುಂದರ ಜೀವನ ಸಾಗಿಸಬೇಕು. ಇದು ಕಠೋಪನಿಷತ್ ಸಂದೇಶ. ಇದೇ ಅಲ್ಲಮನ ವಚನದ ಆಶಯ.

ಪದಪ್ರಯೋಗಾರ್ಥ:
ನನ್ನಿಯ ನುಡಿ. ನನ್ನಿ ಅಂದರೆ ಪ್ರೀತಿ. ನನ್ನಿಯ ನುಡಿ ಅಂದರೆ ಪ್ರೀತಿಯ ಮಾತುಗಳು. ನನ್ನಿಯ ನುಡಿಗಳಿಗೆ ಶರಣ ಸಾಹಿತ್ಯದಲ್ಲಿ ವಿಶೇಷ ಸ್ಥಾನವಿದೆ. ಬಸವಣ್ಣನ ವಚನದಲ್ಲಿ ನನ್ನಿಯ ನುಡಿಗಳು ಹೇಗಿರಬೇಕು ಎಂಬ ಚಿತ್ರಣವೇ ಇದೆ. “ಕಂಡ ಭಕ್ತರಿಗೆ ಕೈಮುಗಿವಾತನೇ ಭಕ್ತ; ಮೃದುವಚನವೇ ಸಕಲ ಜಪಂಗಳಯ್ಯಾ, ಮೃದುವಚನವೇ ಸಕಲ ತಪಂಗಳಯ್ಯಾ, ಸದುವಿನಯವೇ ಸದಾಶಿವ ನೊಲುಮೆಯಯ್ಯಾ” ನನ್ನಿಯ ನುಡಿ ಅಲ್ಲಮ ಹುಟ್ಟು ಹಾಕಿದ ಅನನ್ಯ ಪದ. ಅಲ್ಲಮನ ನಂತರ 16ನೇ ಶತಮಾನದಲ್ಲಿ ಬಂದ ಸರ್ವಜ್ಞನು ಅಲ್ಲಮ ಹೇಳಿದ ಅನ್ನವನಿಕ್ಕಿ ನನ್ನಿಯ ನುಡಿದು ಎಂಬ ಪದಗಳನ್ನೇ ಆಧರಿಸಿ ತನ್ನ ತ್ರಿಪದಿಯನ್ನು ರಚಿಸಿದ್ದು ಗಮನ ಸೆಳೆಯುತ್ತದೆ. “ಅನ್ನವನು ಇಕ್ಕುವುದು ನನ್ನಿಯನು ನುಡಿಯುವುದು ತನ್ನಂತೆ ಪರರ ಬಗೆದಡೆ ಕೈಲಾಸ ಬಿನ್ನಣವಕ್ಕು ಸರ್ವಜ್ಞ” ಅಲ್ಲಮ ಹೇಳಿದ ಶಿವನ ನಿಜವು ಸಾಧ್ಯವಾಗುವುದು ಮತ್ತು ಸರ್ವಜ್ಞ ಹೇಳಿದ ಕೈಲಾಸ ಬಿನ್ನಣವಕ್ಕು ಎಂಬ ಎರಡೂ ಅಭಿವ್ಯಕ್ತಿಗಳ ಆಂತರ್ಯ ಒಂದೇ. ಹಾಗಾಗಿ ಅಲ್ಲಮನ ವಚನಗಳು ಇಂದಿಗೂ ಮತ್ತು ಎಂದೆಂದಿಗೂ ನಮಗೆ ನನ್ನಿಯ ನುಡಿಗಳು.

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಒಡಲು

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಮಾಯದ ಮಂಜು

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ದಳದುಳಿ

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಬಯಲು

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ನಷ್ಟಸಂತಾನ

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಅಗ್ನಿಸ್ತಂಭದ ರಕ್ಷೆ

ಶಿವಕುಮಾರ್
ಹರಿಹರ ಶಿವಕುಮಾರ್
+ posts

ಲೇಖಕ, ವೃತ್ತಿಯಿಂದ ಚಾರ್ಟರ್ಡ್ ಅಕೌಂಟೆಂಟ್. ಲೆಕ್ಕಪರಿಶೋಧನೆ ಮತ್ತು ತೆರಿಗೆ ವಿಚಾರಗಳಲ್ಲಿ ಪರಿಣತಿ. ಕನ್ನಡದಲ್ಲಿ ಕಂಪ್ಯೂಟರ್ ಬಳಕೆ ಇವರ ಹವ್ಯಾಸ. ಕನ್ನಡ ಭಾಷೆ ಮತ್ತು ಸಾಹಿತ್ಯದಲ್ಲಿ ಆಸಕ್ತರು. ಶಿವಮೊಗ್ಗ ಜಿಲ್ಲೆಯವರು, ಸದ್ಯ ಬೆಂಗಳೂರಿನಲ್ಲಿ ನೆಲೆ.

ಪೋಸ್ಟ್ ಹಂಚಿಕೊಳ್ಳಿ:

ಹರಿಹರ ಶಿವಕುಮಾರ್
ಹರಿಹರ ಶಿವಕುಮಾರ್
ಲೇಖಕ, ವೃತ್ತಿಯಿಂದ ಚಾರ್ಟರ್ಡ್ ಅಕೌಂಟೆಂಟ್. ಲೆಕ್ಕಪರಿಶೋಧನೆ ಮತ್ತು ತೆರಿಗೆ ವಿಚಾರಗಳಲ್ಲಿ ಪರಿಣತಿ. ಕನ್ನಡದಲ್ಲಿ ಕಂಪ್ಯೂಟರ್ ಬಳಕೆ ಇವರ ಹವ್ಯಾಸ. ಕನ್ನಡ ಭಾಷೆ ಮತ್ತು ಸಾಹಿತ್ಯದಲ್ಲಿ ಆಸಕ್ತರು. ಶಿವಮೊಗ್ಗ ಜಿಲ್ಲೆಯವರು, ಸದ್ಯ ಬೆಂಗಳೂರಿನಲ್ಲಿ ನೆಲೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಲ್ಲಮನ ಅನನ್ಯ ಪದಪ್ರಯೋಗಗಳು | ಕಂಗಳ ಕರುಳ

ಅಲ್ಲಮ ತನ್ನ ವಚನಗಳಲ್ಲಿ ಬಳಸಿರುವ ವಿಶಿಷ್ಟವಾದ 101 ಪದಗಳನ್ನು ಗುರುತಿಸಿ, ಪ್ರತಿ...

ವಚನ ಕಲ್ಯಾಣ | ಇವ ನಮ್ಮವನೆಂದೆನಿಸಯ್ಯಾ….

ಇವನಾರವ, ಇವನಾರವ, ಇವನಾರವನೆಂದೆನಿಸದಿರಯ್ಯಾ. ಇವ ನಮ್ಮವ, ಇವ ನಮ್ಮವ, ಇವ ನಮ್ಮವನೆಂದೆನಿಸಯ್ಯಾ....

ಅವಳ ಕಣ್ಣೋಟ | ಮಿಮಿ-ತಾಯ್ತನದ ನಡುವೆ ಮರೆಯಾದ ಕನಸು

ಮಹಿಳೆಯರ ಬದುಕಿನಲ್ಲಿ ಮದುವೆ, ತಾಯ್ತನ ಇವೆಲ್ಲವೂ ಸಹಜವಾದ ಆಯ್ಕೆಗಳೇ. ಆದರೆ ಅವಳ...

ಕೃಷಿರಂಗ | ಬರ ಪೀಡಿತ ಜಿಲ್ಲೆಗಳಿಗೆ ವರದಾನ- ಸಮಗ್ರ ಕೃಷಿ

ಸಮಗ್ರ ಕೃಷಿಯನ್ನು ಅರ್ಥಮಾಡಿಕೊಳ್ಳುವುದು ಕಠಿಣವಲ್ಲ. ಅದು ಸರಳವಾದ ಕ್ರಮ. ಸುಲಭವಾಗಿ ಪಾಲಿಸಬಹುದಾದ...