ಅಲ್ಲಮನ ಅನನ್ಯ ಪದಪ್ರಯೋಗಗಳು | ವಿಳಾಸ 

Date:

ಅಲ್ಲಮ ತನ್ನ ವಚನಗಳಲ್ಲಿ ಬಳಸಿರುವ ವಿಶಿಷ್ಟವಾದ 101 ಪದಗಳನ್ನು ಗುರುತಿಸಿ, ಪ್ರತಿ ಪದದ ಬಗ್ಗೆ ಈ ಕೆಳಗಿನ ಮಾದರಿಯಲ್ಲಿ ವಿವರಿಸಲಾಗುವುದು. ಈದಿನ ಓದುಗರಿಗಾಗಿ ಅಲ್ಲಮನ ಅರಿವು…

ವಿಳಾಸ
ಆಯಿತ್ತು ಬಸವಾ ನಿನ್ನಿಂದ ಗುರುಸ್ವಾಯತವೆನಗೆ.
ಆಯಿತ್ತು ಬಸವಾ ನಿನ್ನಿಂದ ಲಿಂಗಸ್ವಾಯತವೆನಗೆ.
ಆಯಿತ್ತು ಬಸವಾ ನಿನ್ನಿಂದ ಜಂಗಮಸ್ವಾಯತವೆನಗೆ.
ಆಯಿತ್ತು ಬಸವಾ ನಿನ್ನಿಂದ ಪ್ರಸಾದಸ್ವಾಯತವೆನಗೆ.
ಇಂತೀ ಚತುರ್ವಿಧ ಸ್ವಾಯತವನು
ಆಗು ಮಾಡಿದೆಯಾಗಿ
ಗುಹೇಶ್ವರಲಿಂಗಕ್ಕೆ ವಿಳಾಸವಾದೆಯಲ್ಲಾ ಸಂಗನಬಸವಣ್ಣಾ.

- Advertisement -

ವಚನಾರ್ಥ:
ಸ್ವಾಯತ ಅಂದರೆ ಧ್ಯಾನಿಸುವುದು, ಸಹವಾಸಿಸುವುದು, ಸಹಯೋಗದಲ್ಲಿರುವುದು ಎಂದರ್ಥ. ಗುರು, ಲಿಂಗ, ಜಂಗಮ, ಪ್ರಸಾದ ಎಂಬ ನಾಲ್ಕು ಶರಣ ಧರ್ಮದ ಪರಿಕಲ್ಪನೆಗಳು. ಈ ನಾಲ್ಕು ಅಂದರೆ ಚತುರ್ವಿಧ ಪರಿಕಲ್ಪನೆಗಳನ್ನು ಧ್ಯಾನಿಸುವಲ್ಲಿ ಮತ್ತು ಅವುಗಳೊಂದಿಗೆ ಸಹಯೋಗಿಸುವಲ್ಲಿ ಒಬ್ಬ ಅನುಭವಿಯ ಮಾರ್ಗದರ್ಶನ ಬೇಕಾಗುತ್ತದೆ. ಇಂತಹ ಮಾರ್ಗದರ್ಶನವನ್ನು ನೀಡಬಲ್ಲ ಸಾಮರ್ಥ್ಯ ಇರುವ ವ್ಯಕ್ತಿ ಬಸವಣ್ಣ ಎಂದು ಅಲ್ಲಮನ ಅನಿಸಿಕೆ. ಗುರು, ಲಿಂಗ, ಜಂಗಮ, ಪ್ರಸಾದಗಳ ಸ್ವಾಯತವು ತನಗೆ ಬಸವಣ್ಣನಿಂದ ಆಯಿತು ಎಂದು ಅಲ್ಲಮಪ್ರಭು ಬಸವಣ್ಣನನ್ನು ಹಾಡಿ ಹೊಗಳುವ ವಚನವಿದು. ಹೊಗಳಿಕೆಯ ಮಟ್ಟ ತಾರಕಕ್ಕೇರಿ ಗುಹೇಶ್ವರಲಿಂಗಕ್ಕೆ ವಿಳಾಸವಾದೆಯಲ್ಲಾ ಸಂಗನಬಸವಣ್ಣಾ ಎಂದು ವಚನ ಕೊನೆಯಾಗುತ್ತದೆ. ದೇವರು ಎಲ್ಲಾ ಸದ್ಭಕ್ತರ ಮನೆಯಲ್ಲಿ ಅವರೊಂದಿಗೆ ನೆಲೆಸಿರುತ್ತಾನೆ ಎಂಬ ಸಾಮಾನ್ಯ ತಿಳಿವಳಿಕೆಯನ್ನು ಆಕರ್ಷಕವಾಗಿ ವಿಳಾಸ ಎಂಬ ಪದ ಬಳಸಿ ಹೇಳಿರುವುದು ವಚನ ವಿಶೇಷ. ಇದು ಅಲ್ಲಮ ಬಸವಣ್ಣರ ಮಧ್ಯೆ ಇದ್ದ ಪರಸ್ಪರ ಗೌರವವನ್ನು, ಅನ್ಯೋನ್ಯತೆಯನ್ನು ಮತ್ತು ಬಸವಣ್ಣನಲ್ಲಿ ಇದ್ದ ಮೇರು ವ್ಯಕ್ತಿತ್ವವನ್ನು ಅಲ್ಲಮ ಗುರುತಿಸಿದ ಪರಿಯನ್ನು ಪರಿಚಯಿಸುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಸವಣ್ಣನವರಿಂದ ಗಾಂಧಿಯವರೆಗೆ: ಆಯ್ದ ಕಥನಗಳ ಮೂಲಕ ಇತಿಹಾಸವನ್ನು ತಿರುಚುವ...

ಇತಿಹಾಸವನ್ನು ವಿಮರ್ಶಿಸುವ ಹಕ್ಕು ಎಲ್ಲರಿಗೂ ಇದೆ; ಆದರೆ ಇತಿಹಾಸವನ್ನು ತಿರುಚುವ ಹಕ್ಕು ಯಾರಿಗೂ ಇಲ್ಲ. ಬಸವಣ್ಣನವರನ್ನು ವೈದಿಕ ಚೌಕಟ್ಟಿಗೆ ಸೀಮಿತಗೊಳಿಸುವುದಾಗಲಿ, ಗಾಂಧಿಯವರ ಹತ್ಯೆಯನ್ನು ಗೋಡ್ಸೆಯ ಸಮರ್ಥನೆಯ ಮೂಲಕ ನ್ಯಾಯೀಕರಿಸುವುದಾಗಲಿ ಇತಿಹಾಸದ ಸಮಗ್ರ ಅಧ್ಯಯನಕ್ಕೆ...

ಕೋಲಾರ ಕ್ಲಾಕ್ ಟವರ್ ವಿವಾದ: ಜಿಲ್ಲಾಡಳಿತದ ನಿರ್ಧಾರದತ್ತ ಜನರ...

ಕೋಲಾರ ನಗರದ ಇತಿಹಾಸ ಪ್ರಸಿದ್ಧ ಕ್ಲಾಕ್‌ ಟವರ್‌ನಲ್ಲಿ ಸಂಸದರ ಅನುದಾನದಲ್ಲಿ ಅಳವಡಿಸಲಾಗುತ್ತಿರುವ ಎಚ್‌ಎಂಟಿ ಗಡಿಯಾರದಲ್ಲಿ ಸಂಸದ ಮಲ್ಲೇಶ್‌ ಬಾಬು ಹೆಸರಿರಬೇಕೋ, ಬೇಡವೋ ಎಂದು ಕಳೆದ ಮೂರ್ನಾಲ್ಕು ದಿನಗಳಿಂದ ನಡೆಯುತ್ತಿರುವ ಚರ್ಚೆ ಈಗ ವಿವಾದದ...

ಅಧಿಕೃತ ಕೆಲಸಕ್ಕೆ WHATSAPP ವೆಬ್ ಅಪಾಯಕಾರಿ ಏಕೆ? ಗೃಹ...

ಕಚೇರಿ, ಸಾರ್ವಜನಿಕ ಅಥವಾ ಹಲವರು ಹಂಚಿಕೊಂಡು ಬಳಸುವ ಕಂಪ್ಯೂಟರ್‌ಗಳಲ್ಲಿ WHATSAPP ವೆಬ್ ಬಳಸುವವರಿಗೆ ಕೇಂದ್ರ ಗೃಹ ಸಚಿವಾಲಯ ಮಹತ್ವದ ಭದ್ರತಾ ಎಚ್ಚರಿಕೆ ನೀಡಿದೆ. ಸಚಿವಾಲಯದ ಅಧೀನದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ...

ಪದ ಪ್ರಯೋಗಾರ್ಥ:
ವಿಳಾಸ. ಇದು ಒಬ್ಬ ವ್ಯಕ್ತಿಯು ವಾಸಿಸುವ ಅಥವಾ ಕೆಲಸ ಮಾಡುವ ಸ್ಥಳಸೂಚಿ. ಹೊಸದಾಗಿ ಪರಿಚಯವಾದವರು ಅವರ ವಿಳಾಸಗಳನ್ನು ಪರಸ್ಪರ ವಿನಿಮಯ ಮಾಡಿಕೊಂಡು ಸ್ನೇಹ ಸಂಬಂಧವನ್ನು ವೃದ್ಧಿಗೊಳಿಸಿಕೊಳ್ಳುವ ರೂಢಿ ನಡೆದುಬಂದಿದೆ. ವಿಳಾಸದ ನಿಖರತೆಯನ್ನು ಕಾಪಾಡುವ ಉದ್ದೇಶದಿಂದ ನಮ್ಮ ದೇಶದಲ್ಲಿ 1972ರಲ್ಲಿ ಮೊದಲ ಬಾರಿಗೆ ಪಿನ್ ಕೋಡ್ ವ್ಯವಸ್ಥೆ ಬಂತು. ಹೀಗೆ ಯಾರು ಯಾವ ವಿಳಾಸದಲ್ಲಿ ಇರುತ್ತಾರೆ ಎಂಬ ಪ್ರಜ್ಞೆ ಶರಣರಿಗೆ ಹನ್ನೆರಡನೇ ಶತಮಾನದಲ್ಲೇ ಇತ್ತು ಎಂದು ತೋರುತ್ತದೆ. ಹಾಗಾಗಿ ವಿಳಾಸ ಎಂಬ ಪದ ಅಲ್ಲಮನ ವಚನದಲ್ಲಿ ಪ್ರಯೋಗವಾಗಿದೆ. ಗುಹೇಶ್ವರಲಿಂಗಕ್ಕೆ ವಿಳಾಸವಾದೆಯಲ್ಲಾ ಸಂಗನಬಸವಣ್ಣಾ ಎಂದು ಅಲ್ಲಮ ಅಭಿಮಾನದಿಂದ ಹೇಳುವಲ್ಲಿ ಒಂದು ಅಚ್ಚರಿಯ ಅತಿರೇಕವಿದೆ. ಅಲ್ಲಮನ ಆರಾಧ್ಯ ದೈವ ಗುಹೇಶ್ವರ ಎಲ್ಲಿ ಇರುತ್ತಾನೆ ಎಂದರೆ ಕೇರ್ ಆಫ್ ಬಸವಣ್ಣ ಎಂಬ ವಿಳಾಸದಲ್ಲಿ! ಅಂದರೆ ಗುಹೇಶ್ವರ ಈ ಭೂಮಿಗೆ ಬಂದು ತಂಗಲು ಬಳಸುವುದು ಬಸವಣ್ಣನ ವಿಳಾಸವನ್ನು! ಇಂದಿನ ಆಧುನಿಕ ಆಡುಭಾಷೆಯಲ್ಲಿ ತಮಾಷೆಗಾಗಿ ಹೇಳುವುದಾದರೆ ಗುಹೇಶ್ವರನಿಗೆ ನೀನಿರುವ ಲೈವ್ ಲೊಕೇಶನ್ ಕೊಡು ಎಂದರೆ ಅದು ಬಸವಣ್ಣನಿರುವ ಜಾಗಕ್ಕೆ ನಮ್ಮನ್ನು ಕರೆದೊಯುತ್ತದೆ. ಅದು ಗುಹೇಶ್ವರನಿರುವ ವಿಳಾಸ.

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಸಾಯದ ಸಂಚು

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಅನುಪಮಸುಖಿ

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ನೀರಲಾದ ನಿರ್ಮಿತಂಗಳು

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಹೊದಕುಳಿ

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಅನುಪಮಸುಖಿ

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಆಶಾಪಾಶ ವಿರಹಿತರು

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಮಡದಿಯರ ಒಲುಮೆ

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಬಗೆದು ಬಿತ್ತಿದ ಬ್ರಹ್ಮಬೀಜ

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ತಾನಿದ್ದಲ್ಲಿ

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ನಿದ್ರೆಯೆಂಬ ಕಾಳೋರಗ 

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಕೀಲು ಮಡಗಿದಾತ

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಮಾದುದು ಮಾದುದಲ್ಲ

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಮಾಯದ ಮಂಜು

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ದಳದುಳಿ

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ಬಯಲು

ಇದನ್ನು ಓದಿದ್ದೀರಾ?: ಅಲ್ಲಮನ ಅನನ್ಯ ಪದಪ್ರಯೋಗಗಳು | ನಷ್ಟಸಂತಾನ

ಶಿವಕುಮಾರ್
ಹರಿಹರ ಶಿವಕುಮಾರ್
+ posts

ಲೇಖಕ, ವೃತ್ತಿಯಿಂದ ಚಾರ್ಟರ್ಡ್ ಅಕೌಂಟೆಂಟ್. ಲೆಕ್ಕಪರಿಶೋಧನೆ ಮತ್ತು ತೆರಿಗೆ ವಿಚಾರಗಳಲ್ಲಿ ಪರಿಣತಿ. ಕನ್ನಡದಲ್ಲಿ ಕಂಪ್ಯೂಟರ್ ಬಳಕೆ ಇವರ ಹವ್ಯಾಸ. ಕನ್ನಡ ಭಾಷೆ ಮತ್ತು ಸಾಹಿತ್ಯದಲ್ಲಿ ಆಸಕ್ತರು. ಶಿವಮೊಗ್ಗ ಜಿಲ್ಲೆಯವರು, ಸದ್ಯ ಬೆಂಗಳೂರಿನಲ್ಲಿ ನೆಲೆ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಹರಿಹರ ಶಿವಕುಮಾರ್
ಹರಿಹರ ಶಿವಕುಮಾರ್
ಲೇಖಕ, ವೃತ್ತಿಯಿಂದ ಚಾರ್ಟರ್ಡ್ ಅಕೌಂಟೆಂಟ್. ಲೆಕ್ಕಪರಿಶೋಧನೆ ಮತ್ತು ತೆರಿಗೆ ವಿಚಾರಗಳಲ್ಲಿ ಪರಿಣತಿ. ಕನ್ನಡದಲ್ಲಿ ಕಂಪ್ಯೂಟರ್ ಬಳಕೆ ಇವರ ಹವ್ಯಾಸ. ಕನ್ನಡ ಭಾಷೆ ಮತ್ತು ಸಾಹಿತ್ಯದಲ್ಲಿ ಆಸಕ್ತರು. ಶಿವಮೊಗ್ಗ ಜಿಲ್ಲೆಯವರು, ಸದ್ಯ ಬೆಂಗಳೂರಿನಲ್ಲಿ ನೆಲೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಿಲ್ಲಿ ಮಾತು | ಕರವಾ ಚೌತ್‌: ಪಿತೃಸತ್ತೆ, ಸಂಪ್ರದಾಯದಾಚೆಗಿನ ಪ್ರಶ್ನೆಗಳು

ಪ್ರತಿ ಕಾರ್ತಿಕ ಮಾಸದ ಕೃಷ್ಣಪಕ್ಷದ ಚೌತಿಗೆ ತಪ್ಪದೆ ಬರುವ ’ಕರವಾ ಚೌತ್’...

ಅವಳ ಕಣ್ಣೋಟ | ‘ಉಯರೆ’- ಸುಟ್ಟದ್ದು ಮುಖವಷ್ಟೇ, ಬದುಕಿನ ಮೇಲಿನ ಹಕ್ಕಲ್ಲ…

ಉಯರೆ’ ಪ್ರೀತಿಯ ಹೆಸರಿನಲ್ಲಿ ನಡೆಯುವ ನಿಯಂತ್ರಣವನ್ನು ಪ್ರಶ್ನಿಸುತ್ತದೆ, ಮಹಿಳೆಯ ನಿರಾಕರಣೆಯ ಹಕ್ಕನ್ನು...

ನಾಡ ದೇವತೆಯ ಬಳಿ ನನ್ನ ಅಳಲು; ವಿವೇಕಾನಂದ ಎಚ್. ಕೆ

ನಾಡ ದೇವಿ ತಾಯಿ ಚಾಮುಂಡೇಶ್ವರಿ, ನಿನಗೆ ತುಂಬು ಹೃದಯದ ಧನ್ಯವಾದಗಳು. ನಿನ್ನ...

ವಚನ ಕಲ್ಯಾಣ | ಕೂಡಲಸಂಗಮದೇವಾ, ಮರಣವೆ ಮಹಾನವಮಿ!

ಜೋಳವಾಳಿಯಾನಲ್ಲ, ವೇಳೆವಾಳಿಯವ ನಾನಯ್ಯಾ. ಹಾಳುಗೆಟ್ಟೋಡುವ ಆಳು ನಾನಲ್ಲವಯ್ಯಾ. ಕೇಳು, ಕೂಡಲಸಂಗಮದೇವಾ, ಮರಣವೆ...