ಈ ದಿನ ಸಂಪಾದಕೀಯ | ರಾಜ್ಯದ ನಾಯಕರಿಗೆ ʼನಾಳೆ ಬಾʼ ಎನ್ನುತ್ತಿರುವ ʼಕೈʼ ಹೈಕಮಾಂಡ್‌; ಸಂಪುಟ ವಿಸ್ತರಣೆ ವಿಳಂಬ ಸಲ್ಲದು

Date:

ಪದೇ ಪದೇ ರಾಜ್ಯವೊಂದರ ತಮ್ಮದೇ ಸರ್ಕಾರದ ಪ್ರತಿನಿಧಿಗಳನ್ನು ಕರೆಸಿಕೊಂಡು ಕಾಯುವಂತೆ ಮಾಡುವುದು ಸರಿಯಲ್ಲ. ಪ್ರಚಂಡ ಬಹುಮತದಿಂದ ಆಯ್ಕೆಯಾದ ಕಾಂಗ್ರೆಸ್‌, ಸರ್ಕಾರ ರಚನೆಯಾಗಿ ಒಂದು ವರ್ಷ ತುಂಬುತ್ತಿದ್ದಂತೆ ಶುರುವಾದ ಅಧಿಕಾರ ಹಸ್ತಾಂತರದ ಪ್ರಹಸನ ಸುದೀರ್ಘ ಎರಡು ವರ್ಷಗಳ ಕಾಲ ನಡೆದು ಅಂತಿಮವಾಗಿ ಜೂನ್‌ ಮೊದಲ ವಾರದಲ್ಲಿ ಡಿ ಕೆ ಶಿವಕುಮಾರ್‌ ಅವರಿಗೆ ಮುಖ್ಯಮಂತ್ರಿಯಾದರು. ಸಿಎಂ ಮತ್ತು ಹದಿಮೂರು ಸಚಿವರ ಸರ್ಕಾರ ಅಸ್ತಿತ್ವಕ್ಕೆ ಬಂದು ಭರ್ತಿ ಎರಡು ತಿಂಗಳಾಗುತ್ತಿದೆ.

- Advertisement -

ರಾಜ್ಯದಲ್ಲಿ ಮೂರು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಡಿ ಕೆ ಶಿವಕುಮಾರ್‌ ಅವರಿಗೆ ಅಧಿಕಾರ ಬಿಟ್ಟುಕೊಟ್ಟು ಎರಡು ತಿಂಗಳಾಗುತ್ತಿದೆ. ಶಿವಕುಮಾರ್‌ ಜೊತೆಗೆ ಹದಿಮೂರು ನೂತನ ಸಚಿವರು ಅಧಿಕಾರ ವಹಿಸಿಕೊಂಡಿದ್ದಾರೆ. ಬಹಳ ಪ್ರಮುಖ ಖಾತೆಗಳಾದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕೃಷಿ ಇಲಾಖೆಗೆ ಸಚಿವರು ಇಲ್ಲದಿರುವುದು ನಿಜಕ್ಕೂ ಅನ್ಯಾಯ. ಜೂನ್‌ನಲ್ಲಿ ಶಾಲೆಗಳು ಆರಂಭವಾಗುತ್ತವೆ. ಬಿಸಿಯೂಟ, ಸಮವಸ್ತ್ರ, ಪಠ್ಯಪುಸ್ತಕ ವಿತರಣೆ ಸೇರಿದಂತೆ ಹಲವು ಯೋಜನೆಗಳು ಸುಸೂತ್ರವಾಗಿ ಜಾರಿಯಾಗಲು ಉತ್ತರದಾಯಿ ಸ್ಥಾನದಲ್ಲಿ ಸಚಿವರು ಇಲ್ಲದಿರುವುದು ಅಕ್ಷಮ್ಯ. ಅಷ್ಟೇ ಅಲ್ಲ ಜೂನ್‌ ತಿಂಗಳಿನಿಂದ ಮುಂಗಾರು ಕೃಷಿ ಚಟುವಟಿಕೆಗಳು ಬಿರುಸುಗೊಳ್ಳುವ ಕಾಲ. ಈ ಬಾರಿ ಭೀಕರ ಬರಗಾಲ ಇರುವ ಮುನ್ಸೂಚನೆ ಮೊದಲೇ ಇತ್ತು. ರಾಜ್ಯದ ಬಹುತೇಕ ಜಿಲ್ಲೆಗಳು ಮಳೆ ಕೊರತೆಯಿಂದ ಬಳಲುತ್ತಿವೆ. ರೈತ ಸಮಸ್ಯೆಗಳನ್ನು ಆಲಿಸಲು ಸಚಿವರೇ ಇಲ್ಲದಂತಹ ಪರಿಸ್ಥಿತಿಯನ್ನು ನಿರ್ಮಾಣ ಮಾಡಿರುವುದು ಸರ್ಕಾರದ ಸ್ವಯಂಕೃತ ಅಪರಾಧ. ಈ ಮಧ್ಯೆ ವಾರಕ್ಕೊಮ್ಮೆ ಸಿಎಂ ಡಿ ಕೆ ಶಿವಕುಮಾರ್‌, ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಲವು ಆಕಾಂಕ್ಷಿಗಳು ದೆಹಲಿಗೆ ಪರೇಡ್‌ ನಡೆಸುತ್ತಲೇ ಇದ್ದಾರೆ. ಸಂಪುಟ ವಿಸ್ತರಣೆಗೆ ಸಿದ್ದು-ಡಿಕೆ ಬಣದ ಜೊತೆಗೆ ಮಲ್ಲಿಕಾರ್ಜುನ ಖರ್ಗೆ ಅವರದ್ದೂ ಕೆಲವು ಹೆಸರುಗಳಿವೆ ಎಂದು ಹೇಳಲಾಗುತ್ತಿದೆ. ರಾಜ್ಯದ ನಾಯಕರು ಪಟ್ಟಿ ಫೈನಲ್‌ ಮಾಡಿದರೂ ಹೈಕಮಾಂಡ್‌ ಅಂತಿಮ ತೀರ್ಮಾನಕ್ಕೆ ಬರಲು ಮೀನಮೇಷ ಎಣಿಸುತ್ತಿರುವುದು ಸರಿಯಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಪ್ರತಿಸಲವೂ ಇನ್ನೇನು ಸಚಿವ ಸಂಪುಟ ಆಗುತ್ತದೆ. ಹೈಕಮಾಂಡ್‌ ಅಂತಿಮ ಪಟ್ಟಿ ಬಿಡುಗಡೆ ಮಾಡುತ್ತದೆ ಎಂಬ ಸುದ್ದಿ ಹರಿದಾಡಿ ತಣ್ಣಗಾಗುತ್ತಿದೆ. ಕೆಲದಿನಗಳ ಕಾಲ ರಾಹುಲ್‌ ಗಾಂಧಿ ಅವರ ವಿದೇಶ ಪ್ರವಾಸದ ನೆಪ ಹೇಳಲಾಯಿತು. ಎರಡು ವಾರಗಳ ಹಿಂದೆ ರಾಜ್ಯದ ನಾಯಕರು ದೆಹಲಿಗೆ ಹೋದರೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತುರ್ತು ಕಾರಣದಿಂದ ಬೆಂಗಳೂರಿಗೆ ಬಂದಿದ್ದರು. ಮತ್ತೆ ಸಭೆ ಮುಂದೂಡಲಾಯಿತು. ಇದೀಗ ಸಂಸತ್ತಿನ ಅಧಿವೇಶನದಲ್ಲಿ ವಿಪಕ್ಷಗಳು ನಿರಂತರವಾಗಿ ಪ್ರತಿಭಟನೆಯಲ್ಲಿ ತೊಡಗಿವೆ. ಈ ಮಧ್ಯೆ ಅಂತಿಮಪಟ್ಟಿಗೆ ಹೈಕಮಾಂಡ್‌ ಒಪ್ಪಿಗೆ ಪಡೆಯಲು ವಾರ ಪೂರ್ತಿ ಸಿಎಂ, ಮಾಜಿ ಸಿಂ ಮತ್ತು ಕೆಲವು ಶಾಸಕರು ದೆಹಲಿಯಲ್ಲಿ ಬೀಡುಬಿಟ್ಟಿದ್ದರು. ಪ್ರಮಾಣ ವಚನ ಸ್ವೀಕಾರಕ್ಕೆ ವೇದಿಕೆ ಸಿದ್ಧತೆ ನಡೆಸುತ್ತಿರುವ ಫೋಟೋಗಳು ಹರಿದಾಡಿದ್ದವು. ಅಷ್ಟರಲ್ಲಿ ರಾಹುಲ್‌ ಗಾಂಧಿ ಅವರ ಅಲಭ್ಯತೆ ನೆಪದಿಂದ ಗುರುವಾರ ಸಿಎಂ ವಾಪಸ್‌ ಬಂದಿದ್ದಾರೆ. ಹೀಗೆ ಪದೇ ಪದೇ ರಾಜ್ಯವೊಂದರ ತಮ್ಮದೇ ಸರ್ಕಾರದ ಪ್ರತಿನಿಧಿಗಳನ್ನು ಕರೆಸಿಕೊಂಡು ಕಾಯುವಂತೆ ಮಾಡುವುದು ಸರಿಯಲ್ಲ.

ಪ್ರಚಂಡ ಬಹುಮತದಿಂದ ಆಯ್ಕೆಯಾದ ಕಾಂಗ್ರೆಸ್‌, ಸರ್ಕಾರ ರಚನೆಯಾಗಿ ಒಂದು ವರ್ಷ ತುಂಬುತ್ತಿದ್ದಂತೆ ಶುರುವಾದ ಅಧಿಕಾರ ಹಸ್ತಾಂತರದ ಪ್ರಹಸನ ಸುದೀರ್ಘ ಎರಡು ವರ್ಷಗಳ ಕಾಲ ನಡೆದು ಅಂತಿಮವಾಗಿ ಮೇ ಕೊನೆಯ ವಾರದಲ್ಲಿ ಸಿದ್ದರಾಮಯ್ಯ ಅವರು ಡಿ ಕೆ ಶಿವಕುಮಾರ್‌ ಅವರಿಗೆ ಮುಖ್ಯಮಂತ್ರಿ ಅಧಿಕಾರ ಬಿಟ್ಟುಕೊಟ್ಟರು. ಜೂನ್‌ 3ರಂದು ಡಿ ಕೆ ಶಿವಕುಮಾರ್‌ ಮುಖ್ಯಮಂತ್ರಿಯಾಗಿ ಹಾಗೂ ಹದಿಮೂರು ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಭರ್ತಿ ಎರಡು ತಿಂಗಳಾಗುತ್ತಿದೆ. ಸಂಪುಟ ವಿಸ್ತರಣೆಗೆ ಹೈಕಮಾಂಡ್‌ ಯಾಕಿಷ್ಟು ನಿರ್ಲಕ್ಷ್ಯ ತೋರುತ್ತಿದೆ? ಚುನಾವಣೆಗೆ ಇನ್ನು ಕೇವಲ ಒಂದೂವರೆ ವರ್ಷ ಇದೆ. ಇನ್ನಿರುವ ಈ ಅವಧಿಯಲ್ಲಿ ಉತ್ತಮ ಆಡಳಿತ ಕೊಡಬೇಕು ಎಂಬ ಉತ್ಸಾಹ ಡಿ ಕೆ ಶಿವಕುಮಾರ್‌ ಅವರಿಗೆ ಇದೆ. ಆದರೆ, ಸಂಪುಟ ವಿಸ್ತರಣೆ ಆಗದೇ ಹಲವು ಇಲಾಖೆಗಳು ಸ್ತಬ್ಧಗೊಂಡಿವೆ. ವಿಪಕ್ಷಗಳಿಗೆ ಇದೇ ಒಂದು ಅಸ್ತ್ರವಾಗಿದೆ. ಹದಿನೈದು ದಿನಗಳಿಂದ ಮೂರು ಸಲ ರಾಜ್ಯದ ಕಾಂಗ್ರೆಸ್‌ ಮುಖಂಡರು ದೆಹಲಿಗೆ ಹೋಗಿದ್ದಾರೆ. ಆದರೂ ನಾನಾ ಕಾರಣಗಳಿಂದ ಸಂಪುಟ ವಿಸ್ತರಣೆ ನನೆಗುದಿಗೆ ಬಿದ್ದಿದೆ. ಇದು ಖಂಡಿತವಾಗಿ ಕಾಂಗ್ರೆಸ್‌ನ ಬಗ್ಗೆ ಸಾರ್ವಜನಿಕರಲ್ಲಿ ಭ್ರಮನಿರಸನ ಉಂಟು ಮಾಡುವುದರಲ್ಲಿ ಸಂದೇಹವೇ ಇಲ್ಲ.

ಬರದ ನಡುವೆಯೂ ತಮಿಳುನಾಡಿಗೆ ಅವರ ಪಾಲಿನ ನೀರು ಬಿಡಬೇಕು ಎಂಬ ತೀರ್ಮಾನ ಕಾವೇರಿ ನ್ಯಾಯ ಮಂಡಳಿ ಕೈಗೊಂಡಿದೆ. ಇದು ನಿಜಕ್ಕೂ ಅನ್ಯಾಯದ ಕ್ರಮ. ರಾಜ್ಯದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದೆ. ಹೆಚ್ಚು ನೀರು ಬೇಕಾಗುವ ಬೆಳೆ ಬೆಳೆಯಬೇಡಿ ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ರೈತರಿಗೆ ಕರೆ ಕೊಟ್ಟಿದ್ದಾರೆ. ಈ ಮಧ್ಯೆ ತಮಿಳುನಾಡಿಗೆ ನೀರು ಬಿಟ್ಟರೆ ಕರ್ನಾಟಕ ಕುಡಿಯುವ ನೀರಿಗೂ ತತ್ವಾರ ಎದುರಿಸಲಿದೆ. ಈಗಾಗಲೇ ಕನ್ನಡ ಸಂಘಟನೆಗಳು, ರೈತರು ಪ್ರತಿಭಟನೆ ಶುರು ಮಾಡಿದ್ದಾರೆ. ಕನ್ನಡ ಸಂಘಟನೆಗಳ ಒಕ್ಕೂಟ ಆ.13ರಂದು ಕರ್ನಾಟಕ ಬಂದ್‌ಗೆ ಕರೆ ಕರೆಕೊಟ್ಟಿದೆ. ಇಂತಹ ಸಂಕಷ್ಟದ ಸಮಯದಲ್ಲಿ ಮುಖ್ಯಮಂತ್ರಿ, ಶಾಸಕರು ಪದೇ ಪದೇ ದೆಹಲಿಗೆ ಹೋಗಿ ಅಲ್ಲಿ ಹೈಕಮಾಂಡ್‌ ಮನೆ ಕಾಯುವುದು ಒಪ್ಪುವ ಮಾತಲ್ಲ. ಸಚಿವ ಸ್ಥಾನದ ಆಕಾಂಕ್ಷಿ ಶಾಸಕರು ತಮ್ಮ ಕ್ಷೇತ್ರದ ಸಮಸ್ಯೆಗಳನ್ನು ಕಡೆಗಣಿಸಿದರೆ ಜನರ ಆಕ್ರೋಶ ಎದುರಿಸಬೇಕಾಗುತ್ತದೆ.

ಒಟ್ಟಾರೆ ರಾಜ್ಯದ ಅಭಿವೃದ್ಧಿಗೆ ಸಂಪುಟ ವಿಸ್ತರಣೆಯ ವಿಳಂಬ ನೀತಿ ತಡೆಯೊಡ್ಡುತ್ತಿದೆ. ಸೋಮವಾರ ಖಂಡಿತವಾಗಿ ಹೊಸ ಸಚಿವರು ಪ್ರಮಾಣ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಮತ್ತೆ ಅದು ಮುಂದೂಡದಿರಲಿ. ತಕ್ಷಣ ಸಂಪುಟ ವಿಸ್ತರಣೆಯ ತಿಕ್ಕಾಟ ಮುಗಿದು, ಸರ್ಕಾರ ಪೂರ್ಣ ಪ್ರಮಾಣದಲ್ಲಿ ಕಾರ್ಯಪ್ರವೃತ್ತವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಬೇಕು. 2028ಕ್ಕೂ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂಬ ಉತ್ಸಾಹದಲ್ಲಿರುವ ಕಾಂಗ್ರೆಸ್‌ ಮುಖಂಡರು ಈಗ ಅಧಿಕಾರ ಕೊಟ್ಟ ಜನರ ಸೇವೆಗೆ ಪ್ರಾಮಾಣಿಕ ಪ್ರಯತ್ನ ಮಾಡಬೇಕಿದೆ.

WhatsApp Image 2025 11 17 at 3.23.18 PM
ಈ ದಿನ ಸಂಪಾದಕೀಯ
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಷ್ಯಾದಿಂದ ತೈಲ ಖರೀದಿಸುತ್ತಿರುವ ಭಾರತಕ್ಕೆ ಅಮೆರಿಕದ ಶೇ.100ರಷ್ಟು ಸುಂಕದ ಬೆದರಿಕೆ

ರಷ್ಯಾ ವಿರುದ್ಧದ ನಿರ್ಬಂಧಗಳ ಮಸೂದೆಗೆ ತಿದ್ದುಪಡಿ ತಂದು, ಭಾರತ ಸೇರಿದಂತೆ ಹಲವು...

ಸಂಜೆ ಮಳೆಗೆ ಬೆಂಗಳೂರು ತತ್ತರ: ಟ್ರಾಫಿಕ್‌ನಲ್ಲಿ ಸಿಲುಕಿದ ಜನರು, 11 ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ

ಬೆಂಗಳೂರಿನಲ್ಲಿ ಸಂಜೆಯಾಗುತ್ತಿದ್ದಂತೆ ದಿಢೀರನೆ ಶುರುವಾದ ಭಾರೀ ಮಳೆಯಿಂದಾಗಿ ಸಿಲಿಕಾನ್ ಸಿಟಿಯ ಜನಜೀವನ...

ಪತಂಜಲಿ ಪ್ರಕರಣ: ಕಣ್ಣುಮುಚ್ಚಿಕೊಂಡು ಆದೇಶ ಹೊರಡಿಸಿದ ‘ಐಟಿಎಟಿ’ಗೆ ದೆಹಲಿ ಹೈಕೋರ್ಟ್ ತರಾಟೆ, 7 ಆದೇಶಗಳು ರದ್ದು

ಪತಂಜಲಿ ಆಯುರ್ವೇದ ಲಿಮಿಟೆಡ್‌ಗೆ ಸಂಬಂಧಿಸಿದಂತೆ 'ಆದಾಯ ತೆರಿಗೆ ಮೇಲ್ಮನವಿ ನ್ಯಾಯಾಧೀಕರಣ' (ITAT)...

ದುಬೈಗೆ ತೆರಳಬೇಕಿದ್ದ ಸ್ಪೈಸ್‌ಜೆಟ್‌ ವಿಮಾನಗಳ ವಿಳಂಬ: ದೆಹಲಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಪ್ರತಿಭಟನೆ

ದುಬೈಗೆ ತೆರಳಬೇಕಿದ್ದ ಸ್ಪೈಸ್‌ಜೆಟ್‌ನ ಎರಡು ವಿಮಾನಗಳು ಪದೇಪದೇ ವಿಳಂಬಗೊಂಡ ಹಿನ್ನೆಲೆಯಲ್ಲಿ ಅಸಮಾಧಾನಗೊಂಡ...