ಈ ದಿನ ಸಂಪಾದಕೀಯ | ‘ಅಂಬೇಡ್ಕರ್‌’- ಅಮಿತ್‌ ಶಾ ಆಡಿದ ಮಾತಲ್ಲ, ಹೊಟ್ಟೆಯೊಳಗಿನ ಹೊಲಸು

Date:

ಅಮಿತ್‌ ಶಾ ರಾಜಕಾರಣಿಯಲ್ಲ, ವ್ಯಾಪಾರಿ. ಎಲ್ಲವೂ ಅವರಿಗೆ ಸರಕಿಗೆ ಸಮ. ರಾಜಕಾರಣವೂ ಅವರಿಗೆ ಒಂದು ಉದ್ಯಮ. ಇಂತಹ ವ್ಯಕ್ತಿಗಳ ಬಾಯಿಯಿಂದ ಬಂದಿರುವುದು ಮಾತಲ್ಲ, ಹೊಟ್ಟೆಯೊಳಗಿನ ಹೊಲಸು. ಇವರನ್ನು ಅದಕ್ಕಿಂತ ಕಡೆಯಾಗಿ ಕಂಡು ಕಸವಾಗಿಸುವುದೊಂದೇ ದಾರಿ.

ʼʼಈಗ ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್ ಎನ್ನುವುದು ವ್ಯಸನ ಆಗಿಬಿಟ್ಟಿದೆ. ಇಷ್ಟು ಸಲ ದೇವರ ನಾಮವನ್ನು ಜಪಿಸಿದ್ದರೆ ನಿಮಗೆ ಏಳೇಳು ಜನ್ಮಗಳಲ್ಲೂ ಸ್ವರ್ಗ ಪ್ರಾಪ್ತಿಯಾಗುತಿತ್ತುʼʼ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.

- Advertisement -

ಗೃಹ ಸಚಿವ ಎನ್ನುವುದು ದೇಶದ ಪ್ರತಿಷ್ಠಿತ ಪದವಿ. ಜವಾಬ್ದಾರಿಯುತ ಸ್ಥಾನ. ಇಂತಹ ಸ್ಥಾನದಲ್ಲಿರುವ ವ್ಯಕ್ತಿ, ದೇಶದ ದೇಗುಲವಾದ ಸಂಸತ್‌ ನಲ್ಲಿ ನಿಂತು ಈ ರೀತಿ ಮಾತನಾಡುತ್ತಾರೆಂದರೆ, ಈ ದೇಶಕ್ಕೆ ಆತ್ಮದಂತಹ ಸಂವಿಧಾನವನ್ನು ಕೊಟ್ಟ ಬಾಬಾ ಸಾಹೇಬ್‌ ಅಂಬೇಡ್ಕರ್‌ ಕುರಿತು ಅವರಲ್ಲಿರುವ ಅಸಹನೆ, ಅಸಹಿಷ್ಣುತೆ ಯಾವ ಮಟ್ಟಿನದು ಎನ್ನುವುದು ಅರ್ಥವಾಗುತ್ತದೆ. ಆ ಮೂಲಕ ಇವರ ಸಂವಿಧಾನದ ಬಗೆಗಿನ ಗೌರವ, ದಲಿತ ಪ್ರೀತಿ, ಮೀಸಲಾತಿಯ ಮಮಕಾರ ಬಟಾ ಬಯಲಾಗುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ...

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ದ ಆವರಣದಲ್ಲಿ ನಿರ್ಮಿಸಲಾಗಿರುವ ಸಬರಮತಿ ಆಶ್ರಮವು ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಪ್ರೇರಣಾ ಕೇಂದ್ರವಾಗಿ...

ಸ್ಮರಣೆ | ʼಗಾಂಧಿ ನೀ ನಮ್ಮೆಲ್ಲರೊಳಗೂ ಇರುವೆʼ

ನಿನ್ನ ಚಾಳೀಸಿನೊಳಗೆ ತೂರಿಕೊಂಡ ಸ್ವಚ್ಚ ಭಾರತವಿನ್ನೂ ಚರಂಡಿಯಲ್ಲಿ ಹೊರಳಾಡುತ್ತಿದೆ. ಕಪ್ಪು ಹಣದ ಕತ್ತಲೆ ಗಾಢವಾಗಿ, ಸೂತ್ರಧಾರಿಗಳು ಉಳ್ಳವರಾಗಿ ಕೈಲಾಸದಲ್ಲಿನ ಭವ್ಯ ಶಿವಾಲಯದಲ್ಲಿದ್ದಾರೆ. ಊರ ಹೊರಗಣ ಕೇರಿಯವರಿಗೆ ಕೊಳಕು ಬಳಿಯುವ ಕಾಯಕ ಮತ್ತು ಕೊಳಗೇರಿ...

ಬಾಬಾ ಸಾಹೇಬ್‌ ಅಂಬೇಡ್ಕರ್‌ ವ್ಯಕ್ತಿಯಲ್ಲ, ದಮನಿತರ ಶಕ್ತಿ. ತುಳಿತಕ್ಕೊಳಗಾದವರ ಆಶಾಕಿರಣ. ಇಡೀ ಜಗತ್ತು ಅವರ ಜ್ಞಾನವನ್ನು ಜಪಿಸಿದರೆ, ಸಂಘಪರಿವಾರ ಮತ್ತು ಬಿಜೆಪಿ ಅವರ ಜಾತಿಯನ್ನು ಜರಿಯುತ್ತದೆ. ಅವರ ವಿದ್ವತ್ತಿಗೆ ಕರುಬುತ್ತದೆ. ಅವರ ಸಮಾಜಮುಖಿ ಚಿಂತನೆಯನ್ನು ಅರಗಿಸಿಕೊಳ್ಳಲಾಗದೆ ಅಲುಬುತ್ತದೆ.

ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್…‌ ಅಮಿತ್‌ ಶಾರ ಈ ಅಸಹನೆ ಈಗ ವಿವಾದಕ್ಕೆ ತಿರುಗಿದೆ. ಭಾರಿ ಕೋಲಾಹಲ ಸೃಷ್ಟಿಸಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಸಭೆಯಲ್ಲಿ ಆಡಿದ ಮಾತನ್ನು ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ಅಸ್ತ್ರವಾಗಿಸಿಕೊಂಡಿವೆ. ಅಂಬೇಡ್ಕರ್‌ಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಪ್ರತಿಭಟನೆ ಹೋರಾಟ ನಡೆಸುತ್ತಿವೆ. ಇದೇ ವೇಳೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಅಮಿತ್ ಶಾ ಹೇಳಿಕೆ ಖಂಡಿಸಿ, ರಾಜೀನಾಮೆಗೆ ಒತ್ತಾಯಿಸಿದ್ದಾರೆ. ಸರ್ಕಾರಕ್ಕೆ ಗಡುವು ನೀಡಿದ್ದಾರೆ.

ಇಷ್ಟೆಲ್ಲ ಆದಮೇಲೆ, ಯಥಾಪ್ರಕಾರ ರಾಜಕಾರಣಿಗಳು ಆಡುವ ಮಾತಿನಂತೆಯೇ ಅಮಿತ್‌ ಶಾ ಕೂಡ, ʼನನ್ನ ಹೇಳಿಕೆಯನ್ನು ಕಾಂಗ್ರೆಸ್‌ ತಿರುಚಿದೆ, ಅಂಬೇಡ್ಕರ್ ಕುರಿತು ನನ್ನ ಹೇಳಿಕೆಯನ್ನು ತದ್ವಿರುದ್ಧವಾಗಿ ಪ್ರಚಾರ ಮಾಡುತ್ತಿದೆ. ಅಂಬೇಡ್ಕರ್‌ಗೆ ಅವಮಾನ ಮಾಡುತ್ತಲೇ ಬಂದಿರುವ ಕಾಂಗ್ರೆಸ್ ಇದೀಗ ಸುಳ್ಳು ಅಸ್ತ್ರವನ್ನು ಹಿಡಿದು ತಮ್ಮ ನಿಲುವು, ಮಾಡಿರುವ ಕೃತ್ಯಗಳನ್ನು ಮರೆ ಮಾಚಲು ಮುಂದಾಗಿದೆʼ ಎಂದಿದ್ದಾರೆ.

ಇದನ್ನು ಓದಿದ್ದೀರಾ?: ಈ ದಿನ ಸಂಪಾದಕೀಯ | ದೇವಾಲಯ ಪ್ರವೇಶಕ್ಕೆ ಅಂಗಲಾಚುವ ದಲಿತರಿಗೆ ಬಾಬಾಸಾಹೇಬರು ಹೇಳಿದ್ದ ಪಾಠಗಳೇನು?

ಅಮಿತ್‌ ಶಾ ಹೀಗೆ ಸ್ಪಷ್ಟೀಕರಣ ಕೊಡುವುದಲ್ಲ, ಎದೆ ಬಗೆದು ತೋರಿದರೂ ಯಾರೂ ನಂಬುವ ಸ್ಥಿತಿಯಲ್ಲಿಲ್ಲ. ಏಕೆಂದರೆ, ಅಮಿತ್‌ ಶಾ ಅವರ ಪೂರ್ವಾಶ್ರಮ ಆರೆಸ್ಸೆಸ್. ಸಂಘಪರಿವಾರದ ನಾಯಕರು ಅಂಬೇಡ್ಕರ್‌ ಮತ್ತು ಸಂವಿಧಾನದ ಬಗ್ಗೆ ತಳೆದ ಒಲವು-ನಿಲುವುಗಳನ್ನು ಅವಲೋಕಿಸಿದರೆ- ಅವರು ಸುಳ್ಳಾಡಿಲ್ಲ, ಹೊಟ್ಟೆಯಲ್ಲಿರುವ ಸತ್ಯವನ್ನು ಹೊರಹಾಕಿದ್ದಾರೆ ಎನ್ನುವುದು ಖಾತ್ರಿಯಾಗುತ್ತದೆ. ಪರಂಪರಾಗತ ದ್ವೇಷವನ್ನು ಕಾರಿಕೊಂಡಿದ್ದಾರೆ ಎನಿಸುತ್ತದೆ.

ಅರವತ್ತರ ಹರೆಯದ ಅಮಿತ್ ಭಾಯಿ ಅನಿಲ್‌ಚಂದ್ರ ಶಾ ಹುಟ್ಟಿದ್ದು ಮುಂಬೈನ ಜೈನ ಕುಟುಂಬದಲ್ಲಿ. ತಂದೆ ಅನಿಲ್ ಚಂದ್ ಶಾ ಪಿವಿಸಿ ಪೈಪ್ ವ್ಯಾಪಾರಸ್ಥ. ಇವರ ಮಗನಾದ ಅಮಿತ್, ಜೀವ ರಸಾಯನ ಶಾಸ್ತ್ರ ಪದವೀಧರ. ಶೇರು ದಳ್ಳಾಳಿಯಾಗಿ, ಗುಜರಾತ್‌ನ ಹಣಕಾಸು ಸಂಸ್ಥೆಯ ಅಧ್ಯಕ್ಷರಾಗಿ ಕೆಲಸ ಮಾಡಿದ ಅನುಭವ ಹೊಂದಿದವರು.

ಚಿಕ್ಕಂದಿನಿಂದಲೇ ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರೆಸ್ಸೆಸ್)ದೊಂದಿಗೆ ಗುರುತಿಸಿಕೊಂಡಿದ್ದ ಅಮಿತ್ ಶಾ ಸ್ವಯಂಸೇವಕರಾಗಿದ್ದರು. ಕಾಲೇಜು ದಿನಗಳಲ್ಲಿ ಎಬಿವಿಪಿಯ ಮುಖ್ಯಸ್ಥರಾಗಿ ಕೆಲಸ ಮಾಡಿದ್ದರು. 1982ರಲ್ಲಿ ಮೊದಲ ಬಾರಿಗೆ ಮೋದಿಯನ್ನು ಭೇಟಿ ಮಾಡಿದ್ದು ಕೂಡ ಆರೆಸ್ಸೆಸ್ ಅಂಗಳದಲ್ಲಿಯೇ. ಆ ಸಂದರ್ಭದಲ್ಲಿ ಮೋದಿ ಆರೆಸ್ಸೆಸ್‌ನ ಪ್ರಚಾರಕರಾಗಿದ್ದರು. ಆಗಿನಿಂದಲೇ ನರೇಂದ್ರ ಮೋದಿಯವರ ಸಂಪರ್ಕಕ್ಕೆ ಬಂದು, 1986ರಲ್ಲಿ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಗೊಂಡರು. 1997ರಲ್ಲಿ ಸರ್ಖೇಜ್ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಸ್ಪರ್ಧಿಸಿ ಗೆಲ್ಲುವ ಮೂಲಕ, ಕ್ಷೇತ್ರವನ್ನು ಹಿಡಿತಕ್ಕೆ ತೆಗೆದುಕೊಂಡ ಅಮಿತ್ ಶಾ ಸತತವಾಗಿ ನಾಲ್ಕು ಬಾರಿ ಗೆದ್ದರು.

ಆದರೆ ಇವರ ರಾಜಕೀಯ ಬದುಕಿನ ʼಭವ್ಯ ಭವಿಷ್ಯʼ ರೂಪುಗೊಂಡಿದ್ದು, ಅದು ಇಡೀ ದೇಶಕ್ಕೆ ಮತ್ತು ಪ್ರಪಂಚಕ್ಕೆ ಪರಿಚಯವಾಗಿದ್ದು 2002ರ ಗುಜರಾತ್ ನರಮೇಧದಲ್ಲಿ. ಚಿಕ್ಕ ವಯಸ್ಸಿನಲ್ಲಿಯೇ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಸಚಿವ ಸಂಪುಟದಲ್ಲಿ 10 ಖಾತೆಗಳನ್ನು ನಿರ್ವಹಿಸುವ ಸಚಿವರನ್ನಾಗಿ ಮಾಡಲಾಯಿತು. ಗೃಹಮಂತ್ರಿ ಅಮಿತ್ ಶಾ 2002ರಲ್ಲಿ ನಡೆದ ಗುಜರಾತ್ ನರಮೇಧದಲ್ಲಿ ಅದರಲ್ಲೂ ಸೋಹ್ರಾಬುದ್ದೀನ್, ಇಶ್ರತ್ ಜಹಾನ್, ಹರೇನ್ ಪಾಂಡ್ಯರ ನಕಲಿ ಎನ್‌ಕೌಂಟರ್ ಪ್ರಕರಣ ಹಾಗೂ ರಾಜ್ಯ ಪೊಲೀಸರಿಗೆ ಆದೇಶ ನೀಡಿ ಹಲವಾರು ಜನರನ್ನು ಕೊಲ್ಲಿಸಲು ಕಾರಣರಾದರೆಂಬ ಆಪಾದನೆಗೆ ಗುರಿಯಾಗಬೇಕಾಯಿತು. ಹಲವಾರು ಕೇಸುಗಳು ಮೈ ಮೆತ್ತಿಕೊಂಡವು. ಅಷ್ಟೇ ಅಲ್ಲ, ಸಿಬಿಐ ತನಿಖೆ ಕೈಗೆತ್ತಿಕೊಂಡು ಅಮಿತ್ ಶಾರನ್ನು ಮುಖ್ಯ ಆರೋಪಿಯನ್ನಾಗಿಸಿ ಜುಲೈ 25, 2010ರಂದು ಬಂಧಿಸಿ, ಮೂರು ತಿಂಗಳ ಕಾಲ ಜೈಲಿಗೂ ಅಟ್ಟಿತ್ತು.

2010ರಲ್ಲಿ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಗುಜರಾತ್ ಬಿಟ್ಟ ಅಮಿತ್ ಶಾ ಮತ್ತೆ ಮರಳಿದ್ದು 2012ರಲ್ಲಿ, ಗುಜರಾತ್ ಹೈಕೋರ್ಟ್ ಜಾಮೀನು ನೀಡಿದ ಮೇಲೆ. 2012ರ ಡಿಸೆಂಬರ್‌ನಲ್ಲಿ ನಡೆದ ಚುನಾವಣೆಯಲ್ಲಿ ಸ್ಪರ್ಧಿಸಿ ಮತ್ತೆ ಗೆಲ್ಲುವ ಮೂಲಕ ದೇಶದ ರಾಜಕಾರಣದ ದಿಕ್ಕನ್ನೇ ಬದಲಿಸಿಬಿಟ್ಟರು. ಇಲ್ಲಿಂದ ಅಮಿತ್ ಶಾರ ಹೊಸ ರಾಜಕಾರಣ, ಅಂದರೆ ಈ ದೇಶದ ಜನತೆ ಇಲ್ಲಿಯವರೆಗೆ ಕಂಡ, ಕೇಳಿದ ರಾಜಕಾರಣಕ್ಕಿಂತ ಭಿನ್ನವಾದ ಕುಟಿಲ ತಂತ್ರಗಾರಿಕೆಯ ರಾಜಕಾರಣ ಚಾಲ್ತಿಗೆ ಬಂತು.

ಇದನ್ನು ಓದಿದ್ದೀರಾ?: ಅಂಬೇಡ್ಕರ್ ಮೇಲೆ ಅಮಿತ್ ಶಾ ಅಸಹನೆ; ಬಾಬಾ ಸಾಹೇಬರ ವಿರುದ್ಧ ಸಂಘಿಗಳ ದ್ವೇಷ ಹೊಸದಲ್ಲ!

ಹೊಸ ರಾಜಕಾರಣದ ಮುಂದಾಳತ್ವವನ್ನು ನರೇಂದ್ರ ಮೋದಿ ವಹಿಸಿಕೊಂಡರೆ, ಅವರ ಹಿಂದಿನ ಚಾಲಕ ಶಕ್ತಿಯಾಗಿ ಅಮಿತ್ ಶಾ ನಿಯೋಜಿತಗೊಂಡರು. ಆಕರ್ಷಕ ವಾಗ್ಮಿಯಲ್ಲದ ಶಾ, ತಂತ್ರಗಳನ್ನು ಹೆಣೆಯುವುದರಲ್ಲಿ ನುರಿತವರು.

ಇಂತಹ ವ್ಯಕ್ತಿಯನ್ನು ನರೇಂದ್ರ ಮೋದಿಯವರು ದೇಶದ ಗೃಹ ಮಂತ್ರಿಯನ್ನಾಗಿ ಮಾಡಿದ್ದಾರೆ. ಆ ಸ್ಥಾನಕ್ಕೆ ಬೇಕಾದ ಹಿರಿತನ, ಅನುಭವ, ಯೋಗ್ಯತೆ, ಅರ್ಹತೆ, ನಾಯಕತ್ವ, ವಾಕ್ಚಾತುರ್ಯಗಳೆಂಬ ಗುಣಗಳು ಗೌಣವಾಗಿ; ಆ ಜಾಗವನ್ನು ವಿವಾದ, ತಂತ್ರಗಾರಿಕೆ, ನಿರ್ವಹಣೆ, ನಿಭಾವಣೆ, ಭಂಡತನ, ಕಿಲಾಡಿತನಗಳು ಆಕ್ರಮಿಸಿಕೊಂಡಿವೆ. ಅದು ಅಮಿತ್ ಶಾ ಅವರ ಆಯ್ಕೆಯಲ್ಲಿ ಎದ್ದು ಕಾಣುತ್ತಿದೆ. ಇದು ಭಾರತದ ರಾಜಕಾರಣದಲ್ಲಿ ಹೊಸ ಟ್ರೆಂಡ್ ಹುಟ್ಟುಹಾಕಿದೆ. ಒಬ್ಬ ವ್ಯಕ್ತಿ ಹೀಗೂ ರಾಜಕೀಯ ರಂಗದಲ್ಲಿ ಪ್ರವರ್ಧಮಾನಕ್ಕೆ ಬರಬಹುದು, ಒಂದು ದೇಶದ ಗೃಹ ಖಾತೆಯಂತಹ ಅತ್ಯುನ್ನತ ಸ್ಥಾನವನ್ನು ಅಲಂಕರಿಸಬಹುದು ಎಂಬುದನ್ನು ತೆರೆದು ತೋರುತ್ತಿದೆ.

ಮೂಲತಃ ಅಮಿತ್‌ ಶಾ ರಾಜಕಾರಣಿಯಲ್ಲ, ವ್ಯಾಪಾರಿ. ಎಲ್ಲವೂ ಅವರಿಗೆ ಸರಕಿಗೆ ಸಮ. ರಾಜಕಾರಣವೂ ಅವರಿಗೆ ಒಂದು ಉದ್ಯಮ. ಇಂತಹ ವ್ಯಕ್ತಿಗಳ ಬಾಯಿಯಿಂದ ಬಂದಿರುವುದು ಮಾತಲ್ಲ, ಹೊಟ್ಟೆಯೊಳಗಿನ ಮಲ. ಇವರನ್ನು ಅದಕ್ಕಿಂತ ಕಡೆಯಾಗಿ ಕಂಡು ಕಸವಾಗಿಸುವುದೊಂದೇ ದಾರಿ.

WhatsApp Image 2025 11 17 at 3.23.18 PM
ಈ ದಿನ ಸಂಪಾದಕೀಯ
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ಸಂಪಾದಕೀಯ | ಅಮೆರಿಕ ದಾದಾಗಿರಿಗೆ ಮೋದಿ ಮೌನ- ರಾಜತಾಂತ್ರಿಕತೆಯಲ್ಲ, ಶರಣಾಗತಿ!

ಅಮೆರಿಕ ಜೊತೆಗಿನ ಭಾರತದ ನಂಟು 'ಸಮಾನ ಸಾರ್ವಭೌಮತ್ವ'ದ ಮೇಲೆ ಆಧಾರಿತವಾಗಿರಬೇಕೇ ಹೊರತು,...

ಈ ದಿನ ಸಂಪಾದಕೀಯ | ಯಾರು ದೇಶದ್ರೋಹಿಗಳು? ಮೋದಿ ಭಾರತದ ಹೊಸ ನಿರೂಪಣೆ ಅಪಾಯಕಾರಿ

ಮೋದಿ ಅಧಿಕಾರಕ್ಕೆ ಬಂದ ನಂತರ ಬಿಜೆಪಿಯೇತರ ಪಕ್ಷಗಳ ಮುಖಂಡರನ್ನು, ಬಿಜೆಪಿ ವಿರೋಧಿಗಳನ್ನು,...

ಈ ದಿನ ಸಂಪಾದಕೀಯ | ಖರೀದಿ ಮೇಲೆ ತೆರಿಗೆ, ಖರೀದಿ ಹಣಕ್ಕೆ ಶುಲ್ಕ… ಇದು ಮೋದಿ ಡಿಜಿಟಲ್ ದರೋಡೆ!

ನಾವು ಒಂದು ವಸ್ತುವನ್ನು ಯುಪಿಐ ಮೂಲಕ ಖರೀದಿಸಿದರೆ, ಅದಕ್ಕೆ ತೆರಿಗೆ ತೆರಬೇಕು....

ಈ ದಿನ ಸಂಪಾದಕೀಯ | ಹಬ್ಬ-ಆಚರಣೆಗಳೇ ಬಿಜೆಪಿಯ ದ್ವೇಷದ ಅಸ್ತ್ರ; ಜನತೆ ಎಚ್ಚೆತ್ತುಕೊಳ್ಳಲಿ!

ತನ್ನ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಧಾರ್ಮಿಕ ಆಚರಣೆಗಳ ಪಾವಿತ್ರ್ಯವನ್ನು ಹಾಳುಗೆಡವುವ, ಹಬ್ಬಗಳನ್ನು...