ಈ ದಿನ ಸಂಪಾದಕೀಯ | ಬಿ.ಆರ್ ಪಾಟೀಲ್‌ ಆರೋಪಗಳೂ, ಸರ್ಕಾರದ ನೈತಿಕತೆಯೂ

Date:

ಬಿ.ಆರ್ ಪಾಟೀಲ್ ಅವರ ಆರೋಪಗಳಿಗೆ ಸರ್ಕಾರ ಸ್ಪಷ್ಟನೆ ನೀಡಬೇಕು. ತನಿಖೆಗೆ ಆದೇಶಿಸಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಅದಕ್ಕಿಂತ ಹೆಚ್ಚಾಗಿ ಮುಖ್ಯಮಂತ್ರಿಗಳು ಮಾತನಾಡಬೇಕು.

ಕಾಂಗ್ರೆಸ್‌ ಶಾಸಕ, ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್ ಪಾಟೀಲ್ ಅವರ ಆಡಿಯೋ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ. ತಮ್ಮದೇ ಸರ್ಕಾರದ ವಿರುದ್ಧ ಬಿ.ಆರ್ ಪಾಟೀಲ್ ಗಂಭೀರ ಆರೋಪ ಮಾಡಿದ್ದಾರೆ. ರಾಜೀವ್ ಗಾಂಧಿ ವಸತಿ ನಿಗಮದಡಿ ಬಡವರಿಗೆ ಮನೆಗಳ ಹಂಚಿಕೆಯಲ್ಲಿ ಅವ್ಯವಹಾರ ನಡೆದಿದೆ. ಲಂಚ ನೀಡಿದವರಿಗೆ ಮಾತ್ರವೇ ಮನೆ ಹಂಚಲಾಗುತ್ತಿದೆ ಎಂದು ಪಾಟೀಲ್ ಆರೋಪಿಸಿದ್ದಾರೆ. ವೈರಲ್ ಆಗಿರುವ ಆಡಿಯೋ ತಮ್ಮದೇ ಎಂದೂ, ಮುಖ್ಯಮಂತ್ರಿಗಳು ಕರೆದರೆ ಹೋಗಿ ಮಾತನಾಡುತ್ತೇನೆಂದೂ ಕೂಡ ಪಾಟೀಲ್ ಸ್ಪಷ್ಟಪಡಿಸಿದ್ದಾರೆ. ಇದು, ಕಾಂಗ್ರೆಸ್‌ ಸರ್ಕಾರದ ನೈತಿಕತೆಯ ಪ್ರಶ್ನೆಯನ್ನು ಹುಟ್ಟುಹಾಕಿದೆ.

- Advertisement -

ವಸತಿ ಸಚಿವ ಜಮೀರ್ ಅಹ್ಮದ್ ಖಾನ್‌ರ ಖಾಸಗಿ ಕಾರ್ಯದರ್ಶಿ ಸರ್ಫರಾಜ್ ಖಾನ್‌ ಅವರೊಂದಿಗೆ ಬಿ.ಆರ್ ಪಾಟೀಲ್ ಮಾತನಾಡಿರುವ ಆಡಿಯೋ ಜೂನ್ 20ರಂದು ಹೊರಬಂದಿದೆ. ಆಡಿಯೋದಲ್ಲಿನ ಸಂಭಾಷಣೆಯಲ್ಲಿ- ತಮ್ಮ ಕ್ಷೇತ್ರ ಆಳಂದದಲ್ಲಿ ಮನೆಗಳ ಹಂಚಿಕೆಯಲ್ಲಿ ಭಾರೀ ಭ್ರಷ್ಟಾಚಾರ ನಡೆಯುತ್ತಿದೆ. ಮನೆಗಳ ಹಂಚಿಕೆಗೆ ಶಾಸಕರ ಶಿಫಾರಸು ಪತ್ರಗಳನ್ನು ನಿರ್ಲಕ್ಷಿಸಲಾಗಿದೆ. ಲಂಚ ನೀಡಿದವರಿಗೆ ಮಾತ್ರ ಮನೆಗಳನ್ನು ಮಂಜೂರು ಮಾಡಲಾಗಿದೆ. ಆಳಂದ ಕ್ಷೇತ್ರದಲ್ಲಿ ಸುಮಾರು 950 ಮನೆಗಳನ್ನು ಲಂಚ ಪಡೆದು ಹಂಚಿಕೆ ಮಾಡಲಾಗಿದೆ. ಈ ಪೈಕಿ, ಮುನ್ನಳ್ಳಿ (200 ಮನೆಗಳು), ಹಿಟ್ಟಾಲ ಶಿರೂರು (100 ಮನೆಗಳು), ದಂಗಾಪುರ (200 ಮನೆಗಳು), ಕವಲಗ (200 ಮನೆಗಳು) ಹಾಗೂ ಮಡಿಯಾಲ್ (200 ಮನೆಗಳು) ಸೇರಿವೆ. ನಾನೇನಾದರೂ ಬಾಯಿ ಬಿಟ್ಟರೆ ಸರ್ಕಾರದ ಬುನಾದಿಯೇ ಅಲುಗಾಡುತ್ತದೆ ಎಂದು ಬಿ.ಆರ್ ಪಾಟೀಲ್ ಎಚ್ಚರಿಕೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಈ ಹಿಂದೆ, ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರಾಗಿದ್ದ ಪಾಟೀಲ್ 2025ರ ಜನವರಿಯಲ್ಲಿ ಆ ಹುದ್ದೆಗೆ ರಾಜೀನಾಮೆ ನೀಡಿದ್ದರು. ”ತಮ್ಮ ಕ್ಷೇತ್ರಕ್ಕೆ ಸಾಕಷ್ಟು ಸರಿಯಾಗಿ ಅನುದಾನ ದೊರೆಯುತ್ತಿಲ್ಲ. ಸರ್ಕಾರದ ಕೆಲವು ನೀತಿಗಳ ಸರಿಯಿಲ್ಲ. ಮುಖ್ಯಮಂತ್ರಿಗಳ ಸಲಹೆಗಾರ ಹುದ್ದೆಯಲ್ಲಿದ್ದುಕೊಂಡು ಸಾಕಷ್ಟು ಪ್ರಭಾವ ಬೀರಲು ಹಾಗೂ ಕ್ಷೇತ್ರದಲ್ಲಿ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ” ಎಂದು ಹೇಳಿಕೊಂಡಿದ್ದರು. ಭ್ರಷ್ಟಾಚಾರದಲ್ಲಿ ಕಾಂಗ್ರೆಸ್‌ ಸರ್ಕಾರವೇ ನಂ.1 ಎಂದೂ ಆರೋಪಿಸಿದ್ದರು.

ಈಗ, ತಮ್ಮ ಹಿಂದಿನ ಆರೋಪಕ್ಕೆ ಪುಷ್ಟಿ ನೀಡುವಂತೆ ಮತ್ತೊಂದು ಆರೋಪ ಮಾಡಿದ್ದಾರೆ. ಅವರ ಈ ಆರೋಪ ಗಂಭೀರವಾದದ್ದು. ಸಚಿವ ಹುದ್ದೆಗೆ ಸಮನಾದ ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷರಾಗಿರುವವರೇ ಇಂತಹ ಆರೋಪ ಮಾಡಿದ್ದಾರೆ ಎಂದರೆ, ಇದರ ಸ್ವರೂಪ ತೀವ್ರತರವಾದದ್ದು. ಉನ್ನತ ಸ್ಥಾನದಲ್ಲಿರುವವರು ತಮ್ಮದೇ ಪಕ್ಷದ ಸರ್ಕಾರದ ವಿರುದ್ಧ ಇಂತಹ ಗಂಭೀರ ಆರೋಪ ಮಾಡಿರುವುದು ಸರ್ಕಾರದ ನೈತಿಕತೆ ವಿಚಾರದ ಕುರಿತಾಗಿ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ.

ಇದೇ ಕಾಂಗ್ರೆಸ್‌ 2023ರ ವಿಧಾನಸಭಾ ಚುನಾವಣೆಗೂ ಮುನ್ನ, ಬಿಜೆಪಿ ಸರ್ಕಾರದ ವಿರುದ್ಧ ‘40% ಕಮಿಷನ್’ ಆರೋಪ ಮತ್ತು ಪೇ-ಸಿಎಂ ಅಭಿಮಾನವನ್ನು ನಡೆಸಿತ್ತು. ಬಿಜೆಪಿ ಸರ್ಕಾರವು ಭಾರೀ ಭ್ರಷ್ಟಾಚಾರದಲ್ಲಿ ತೊಡಗಿದೆ, ಜನರನ್ನು ಲೂಟಿ ಮಾಡುತ್ತಿದೆ. ರಾಜ್ಯದ ಅಭಿವೃದ್ಧಿಗೆ ಯಾವುದೇ ಯೋಜನೆಗಳನ್ನು ರೂಪಿಸುತ್ತಿಲ್ಲವೆಂದು ಆರೋಪಿಸಿ, ಅಧಿಕಾರಕ್ಕೆ ಬಂದಿತ್ತು. ಆದರೆ, ಇಗ ತಮ್ಮದೇ ಶಾಸಕರು, ಅದರಲ್ಲೂ ಉನ್ನತ ಹುದ್ದೆಯಲ್ಲಿರುವವರೇ ತಮ್ಮ ಸರ್ಕಾರದ ವಿರುದ್ಧ ಆರೋಪಗಳನ್ನು ಮಾಡುತ್ತಿದ್ದಾರೆ. ಇದು, ಕಾಂಗ್ರೆಸ್‌ ಸರ್ಕಾರಕ್ಕೆ ತೀವ್ರ ಮುಜುಗರದ ಸಂಗತಿ. ಮಾತ್ರವಲ್ಲ, ಕಾಂಗ್ರೆಸ್‌ ಸರ್ಕಾರದ ಆಡಳಿತದ ಮೇಲೆ ಜನರ ವಿಶ್ವಾಸವನ್ನು ಕುಂದಿಸುತ್ತದೆ. ಸರ್ಕಾರದ ವಿಶ್ವಾಸಾರ್ಹತೆಗೆ ಧಕ್ಕೆ ತರುತ್ತದೆ.

ಬಿ.ಆರ್ ಪಾಟೀಲ್ ಅವರ ಆಡಿಯೋ ವೈರಲ್ ಆಗುತ್ತಿದ್ದಂತೆಯೇ ವಿಪಕ್ಷಗಳಾದ ಬಿಜೆಪಿ-ಜೆಡಿಎಸ್‌ ಹಾಗೂ ಮಾಧ್ಯಮಗಳು ಸರ್ಕಾರದ ವಿರುದ್ಧ ಮುಗಿಬಿದ್ದಿವೆ. ವಿರೋಧ ಪಕ್ಷಗಳು ಮತ್ತು ಮಾಧ್ಯಮಗಳ ದಾಳಿಯಲ್ಲಿ ಹೊಸತೇನು ಇಲ್ಲ. ಅವರು ಕೇಳುತ್ತಿರುವ ಪ್ರಶ್ನೆಗಳು ತಪ್ಪಲ್ಲ. ಆದರೆ, ಸ್ವಪಕ್ಷೀಯರೇ ಆದ ಬಿ.ಆರ್ ಪಾಟೀಲ್ ಮಾಡಿರುವ ಗಂಭೀರ ಆರೋಪ, ಸರ್ಕಾರದ ನೈತಿಕತೆಯನ್ನು ಪ್ರಶ್ನಿಸುವಂಥಾದ್ದು. ಸರ್ಕಾರವು ಪಾಟೀಲರ ಆರೋಪದ ಬಗ್ಗೆ ಅಧಿಕೃತವಾಗಿ ಈವರೆಗೆ ಪ್ರತಿಕ್ರಿಯಿಸಿಲ್ಲ. ಬದಲಾಗಿ, ನಿರುಮ್ಮಳ ಮತ್ತು ನಿರ್ಲಜ್ಜ ಮೌನ ತಾಳಿದೆ.

ಇದನ್ನು ಓದಿದ್ದೀರಾ?: ಮೌಢ್ಯ ಬಿತ್ತುವ ಕಾವೇರಿ ಆರತಿ ಯಾವ ಪುರುಷಾರ್ಥಕ್ಕೆ?

ಆಡಿಯೋ ಬಗ್ಗೆ ಪ್ರತಿಕ್ರಿಯಿಸಿರುವ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ‘ಈ ಆರೋಪದ ಬಗ್ಗೆ ತಮಗೆ ತಿಳಿದಿಲ್ಲ’ ಎಂದಷ್ಟೇ ಹೇಳಿದ್ದಾರೆ. ಗೃಹಸಚಿವ ಜಿ ಪರಮೇಶ್ವರ್, ‘ಯಾರು‌ ಲಂಚ ಕೇಳಿದ್ದಾರೋ ಅವರ ವಿರುದ್ಧ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ದೂರು ನೀಡಲಿ, ತನಿಖೆ ನಡೆಸಿ, ಕ್ರಮ ತೆಗೆದುಕೊಳ್ಳುತ್ತಾರೆ’ ಎಂದಿದ್ದಾರೆ. ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ‘ಆರೋಪದ ಬಗ್ಗೆ ಸರ್ಕಾರ ತನಿಖೆ ನಡೆಸುತ್ತದೆ’ ಎಂದಷ್ಟೇ ಹೇಳಿದ್ದಾರೆ. ಆದರೆ, ಬಿ.ಆರ್ ಪಾಟೀಲ್ ಅವರ ಆರೋಪವನ್ನು ಸರ್ಕಾರವು ಅಲ್ಲಗಳೆದಿಲ್ಲ ಅಥವಾ ಗಂಭೀರವಾಗಿ ತೆಗೆದುಕೊಂಡಂತೆಯೂ ಕಾಣುತ್ತಿಲ್ಲ. ತನಿಖೆ ನಡೆಸುವುದಾಗಿ ಸರ್ಕಾರದಿಂದ ಅಧಿಕೃತ ಹೇಳಿಕೆಯೂ ಬಂದಿಲ್ಲ.

ಈಗ, ಪಾಟೀಲ್ ಲಂಚದ ಆರೋಪ ಮಾಡಿದ್ದಾರೆ. ಅವರ ಆರೋಪವು ಸರ್ಕಾರದ ವಿಶ್ವಾಸಾರ್ಹತೆ ಮತ್ತು ನೈತಿಕತೆಯ ಕುರಿತು ಚರ್ಚೆ ಹುಟ್ಟುಹಾಕಿವೆ. ಸರ್ಕಾರದಲ್ಲಿ ಉನ್ನತ ಹುದ್ದೆಯಲ್ಲಿರುವವರೇ ಇಂತಹ ಆರೋಪ ಮಾಡಿರುವುದು ಸರ್ಕಾರಕ್ಕೆ ಸವಾಲಾಗಿ ಪರಿಣಮಿಸಿದೆ. ಆರೋಪವನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸದಿದ್ದರೆ, ಜನರ ವಿಶ್ವಾಸ ಕಳೆದುಕೊಳ್ಳುತ್ತದೆ.  

ಆದ್ದರಿಂದ, ಬಿ.ಆರ್ ಪಾಟೀಲ್ ಅವರ ಆರೋಪಗಳಿಗೆ ಸರ್ಕಾರ ಸ್ಪಷ್ಟನೆ ನೀಡಬೇಕು. ತನಿಖೆಗೆ ಆದೇಶಿಸಬೇಕು. ಇಲ್ಲವೇ, ಆರೋಪಗಳಿಗೆ ನೈತಿಕ ಹೊಣೆಹೊತ್ತು ವಸತಿ ಸಚಿವ ಜಮೀರ್ ಅಹ್ಮದ್ ಖಾನ್‌ ಅವರು ರಾಜೀನಾಮೆ ನೀಡಬೇಕು. ಸರ್ಕಾರ ಈ ಆರೋಪವನ್ನು ಗಂಭೀರವಾಗಿ ಪರಿಗಣಿಸದಿದ್ದರೆ, ಬಿ.ಆರ್ ಪಾಟೀಲ್ ಅವರು ತಮ್ಮ ಆರೋಪಕ್ಕೆ ಬದ್ಧರಾಗಿ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಹುದ್ದೆಗೆ ತಾವೇ ರಾಜೀನಾಮೆ ನೀಡಿ, ಸರ್ಕಾರದಿಂದ ಹೊರಬರಬೇಕು.

ಒಂದು ವೇಳೆ, ಸರ್ಕಾರ ತನಿಖೆ ನಡೆಸದೆ, ನಿರ್ಲಕ್ಷ್ಯ ಧೋರಣೆ ತಳೆದರೆ, ಸರ್ಕಾರದ ನಿರ್ಲಕ್ಷ್ಯದ ಕಾರಣಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ ನೀಡಿದರೆ, ಅದು ಸರ್ಕಾರಕ್ಕೆ ಭಾರೀ ಹೊಡೆತ ನೀಡಲಿದೆ. ರಾಜಕೀಯವಾಗಿ ಕಾಂಗ್ರೆಸ್‌ ಸರ್ಕಾರ ನೈತಿಕವಾಗಿ ದಿವಾಳಿಯಾಗಲಿದೆ. ಈ ಎಚ್ಚರಿಕೆ ಸರ್ಕಾರಕ್ಕಿದ್ದರೆ, ಶೀಘ್ರವೇ ತನಿಖೆ ನಡೆಸಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಅದಕ್ಕಿಂತ ಹೆಚ್ಚಾಗಿ ಮುಖ್ಯಮಂತ್ರಿಗಳು ಮಾತನಾಡಬೇಕು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ಸಂಪಾದಕೀಯ | ಸಾಮರಸ್ಯ ಇರಲೆನ್ನುವ ಆರೆಸ್ಸೆಸ್, ಸಮಾನತೆ ಬೇಕೆಂದು ಸಾರುವುದಿಲ್ಲವೇಕೆ?

ಜಾತಿಪದ್ಧತಿಯೊಂದಿಗೆ ರಾಜಿ ಮಾಡಿಕೊಂಡ ಆರೆಸ್ಸೆಸ್ ಪ್ರಣೀತ ಸಾಮರಸ್ಯ ವಾದದಿಂದ ಅಸ್ಪೃಶ್ಯರು, ದಲಿತರು...

ಈ ದಿನ ಸಂಪಾದಕೀಯ | ಅಮೆರಿಕ ದಾದಾಗಿರಿಗೆ ಮೋದಿ ಮೌನ- ರಾಜತಾಂತ್ರಿಕತೆಯಲ್ಲ, ಶರಣಾಗತಿ!

ಅಮೆರಿಕ ಜೊತೆಗಿನ ಭಾರತದ ನಂಟು 'ಸಮಾನ ಸಾರ್ವಭೌಮತ್ವ'ದ ಮೇಲೆ ಆಧಾರಿತವಾಗಿರಬೇಕೇ ಹೊರತು,...

ಈ ದಿನ ಸಂಪಾದಕೀಯ | ಯಾರು ದೇಶದ್ರೋಹಿಗಳು? ಮೋದಿ ಭಾರತದ ಹೊಸ ನಿರೂಪಣೆ ಅಪಾಯಕಾರಿ

ಮೋದಿ ಅಧಿಕಾರಕ್ಕೆ ಬಂದ ನಂತರ ಬಿಜೆಪಿಯೇತರ ಪಕ್ಷಗಳ ಮುಖಂಡರನ್ನು, ಬಿಜೆಪಿ ವಿರೋಧಿಗಳನ್ನು,...

ಈ ದಿನ ಸಂಪಾದಕೀಯ | ಖರೀದಿ ಮೇಲೆ ತೆರಿಗೆ, ಖರೀದಿ ಹಣಕ್ಕೆ ಶುಲ್ಕ… ಇದು ಮೋದಿ ಡಿಜಿಟಲ್ ದರೋಡೆ!

ನಾವು ಒಂದು ವಸ್ತುವನ್ನು ಯುಪಿಐ ಮೂಲಕ ಖರೀದಿಸಿದರೆ, ಅದಕ್ಕೆ ತೆರಿಗೆ ತೆರಬೇಕು....