ಈ ದಿನ ಸಂಪಾದಕೀಯ | ಯುವಜನರ ವಿಶ್ವಾಸ ಉಳಿಸಿಕೊಳ್ಳುವುದೇ ಕೆಪಿಎಸ್‌ಸಿ?

Date:

ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಸಾಂವಿಧಾನಿಕ ಸಂಸ್ಥೆ. ಈ ಸಂಸ್ಥೆ ಪಾರದರ್ಶಕವಾಗಿರಬೇಕು ಎಂದು ಬಯಸುವುದು ನಾಗರಿಕರ ಹಕ್ಕು. ಹಾಗೆಯೇ ಹುದ್ದೆಗಳ ಕನಸು ಕಾಣುವ ರಾಜ್ಯದ ಲಕ್ಷಾಂತರ ಯುವಜನರ ವಿಶ್ವಾಸ ಉಳಿಸಿಕೊಳ್ಳುವುದು ಮತ್ತು ನೇಮಕಾತಿಯು ನ್ಯಾಯಯುತವಾಗಿ ನಡೆಯುತ್ತದೆ ಎಂಬ ಭರವಸೆಯನ್ನು ಅವರಲ್ಲಿ ಮೂಡಿಸುವುದು ಆಯೋಗ ಮತ್ತು ರಾಜ್ಯ ಸರ್ಕಾರದ ಜವಾಬ್ದಾರಿ. ಸದ್ಯಕ್ಕೆ ಗಂಭೀರ ಸಮಸ್ಯೆಗಳಿಗೆ ಸಿಲುಕಿ ಸುದ್ದಿಯಲ್ಲಿದೆ. ಕೆಟ್ಟ ಕಾರಣಗಳಿಗೆ ಸದ್ದು ಮಾಡುತ್ತಿದೆ.

ನಾಗರಿಕ ಸೇವೆಯ ವಿವಿಧ ಹುದ್ದೆಗಳಿಗೆ ನೇಮಕಾತಿಗಾಗಿಯೇ ಸ್ಥಾಪಿತವಾದ ಕರ್ನಾಟಕ ಲೋಕಸೇವಾ ಆಯೋಗ ಸದ್ಯಕ್ಕೆ ಸುದ್ದಿಯಲ್ಲಿದೆ. ಎರಡು ಗಂಭೀರ ಸಮಸ್ಯೆಗಳಿಗೆ ಸಿಲುಕಿ ಚರ್ಚೆಯ ವಸ್ತುವಾಗಿದೆ.

ಒಂದು, ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಕಾರ್ಯದರ್ಶಿಗಳ ನಡುವಿನ ಶೀತಲ ಸಮರ. ಮತ್ತೊಂದು, ಆಯೋಗದ ಅಧ್ಯಕ್ಷರು ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪನವರ ಪುತ್ರ ಬಿ.ವೈ ವಿಜಯೇಂದ್ರ ಅವರಿಗೆ ಭಾರೀ ಮೊತ್ತ ಕೊಟ್ಟು ಆಯೋಗದ ಅಧ್ಯಕ್ಷ ಸ್ಥಾನವನ್ನು ಖರೀದಿಸಿದ್ದಾರೆ ಎಂದು ಎಕೆಎಸ್‌ಎಸ್‌ಸಿ ‍ಅಧ್ಯಕ್ಷ ಕಾಂತಕುಮಾರ್‌ ಮಾಡಿರುವ ಗಂಭೀರ ಆರೋಪ.

ಕೆಪಿಎಸ್‌ಸಿ ಸಾಂವಿಧಾನಿಕ ಸಂಸ್ಥೆ. ಈ ಸಂಸ್ಥೆ ಪಾರದರ್ಶಕವಾಗಿರಬೇಕು ಎಂದು ಬಯಸುವುದು ನಾಗರಿಕರ ಹಕ್ಕು. ಹಾಗೆಯೇ ಹುದ್ದೆಗಳ ಕನಸು ಕಾಣುವ ರಾಜ್ಯದ ಲಕ್ಷಾಂತರ ಯುವಜನರ ವಿಶ್ವಾಸ ಉಳಿಸಿಕೊಳ್ಳುವುದು ಮತ್ತು ನೇಮಕಾತಿಯು ನ್ಯಾಯಯುತವಾಗಿ ನಡೆಯುತ್ತದೆ ಎಂಬ ಭರವಸೆಯನ್ನು ಅವರಲ್ಲಿ ಮೂಡಿಸುವುದು ಆಯೋಗ ಮತ್ತು ರಾಜ್ಯ ಸರ್ಕಾರದ ಜವಾಬ್ದಾರಿ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಇಂತಹ ಸಂಸ್ಥೆಯಲ್ಲಿ ಈಗ ಆಡಳಿತಾತ್ಮಕ ಸಮಸ್ಯೆ ತಲೆದೋರಿದೆ. ಆಯೋಗದ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಕಾರ್ಯದರ್ಶಿಗಳ ನಡುವೆ ನಡಾವಳಿಗೆ ಸಂಬಂಧಿಸಿ ಸರಿ-ತಪ್ಪುಗಳ ಮೇಲಾಟ ನಡೆಯುತ್ತಿದೆ. ಇದು ಸಾಂವಿಧಾನಿಕ ಬಿಕ್ಕಟ್ಟನ್ನು ಸೃಷ್ಟಿಸಿದೆ. ಆಯೋಗದ ಆಂತರಿಕ ಕಚ್ಚಾಟ ಬಟಾ ಬಯಲಾಗಿದೆ. ದಕ್ಷತೆ ಮತ್ತು ಪಾರದರ್ಶಕತೆಯನ್ನು ಪ್ರಶ್ನಿಸುವಂತೆ ಮಾಡಿದೆ.

ಕಾನೂನು ಕೋಶದ ಮುಖ್ಯಸ್ಥರಾಗಿದ್ದ (ಎಚ್‌ಎಲ್‌ಸಿ) ಎಸ್‌.ಎಚ್‌. ಹೊಸಗೌಡರ್‌ ಅವರ ಅವಧಿ, ಸಂಭಾವನೆ, ರಾಜೀನಾಮೆಗೆ ಸಂಬಂಧಿಸಿದಂತೆ ಆರಂಭವಾದ ಆಡಳಿತಾತ್ಮಕ ಜಟಾಪಟಿ ಈಗ ಎಲ್ಲೆ ಮೀರಿದೆ. ಅಧ್ಯಕ್ಷರು ಮತ್ತು ಸದಸ್ಯರ ಕಾರ್ಯವೈಖರಿ ಕುರಿತು ಕೆಪಿಎಸ್‌ಸಿ ಕಾರ್ಯದರ್ಶಿ ಕೆ.ಎಸ್‌. ಲತಾ ಕುಮಾರಿ ಅವರು, ‘ಆಯೋಗ ಮತ್ತು ಸರ್ಕಾರಕ್ಕೆ ಮುಜುಗರ ಉಂಟಾಗದ ರೀತಿಯಲ್ಲಿ ಪಾರದರ್ಶಕತೆ ಮತ್ತು ದಕ್ಷತೆಯಿಂದ ಕಾರ್ಯನಿರ್ವಹಿಸುವಂತೆ ಆಯೋಗದ ಅಧ್ಯಕ್ಷರು ಮತ್ತು ಸದಸ್ಯರಿಗೆ ಅರಿವು ಮೂಡಿಸಬೇಕು. ವಿವಿಧ ಹುದ್ದೆಗಳಿಗೆ ನಿಯಮಾನುಸಾರ ಆಯ್ಕೆ ಪೂರ್ಣಗೊಳಿಸಲು ಸೂಚನೆ ನೀಡಬೇಕು’ ಎಂದು ರಾಜ್ಯದ ಮುಖ್ಯ ಕಾರ್ಯದರ್ಶಿ ರಜನೀಶ್‌ ಗೋಯಲ್‌ ಅವರಿಗೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದಾರೆ.

ಒಂದು, ಅಧ್ಯಕ್ಷರು ಮತ್ತು ಸದಸ್ಯರ ನಡವಳಿಕೆ ಕುರಿತು ತಿಳಿವಳಿಕೆ ತುಂಬಲು ರಾಜ್ಯಪಾಲರಿಗೆ ಸರ್ಕಾರ ಸೂಚಿಸಬೇಕು. ಇಲ್ಲ, ಕಾರ್ಯದರ್ಶಿ ಲತಾ ಕುಮಾರಿಯವರನ್ನು ವರ್ಗಾಯಿಸಬೇಕು. ಇಂತಹ ಇಕ್ಕಟ್ಟಿಗೆ ಸರ್ಕಾರ ಸಿಲುಕಿದೆ.

ಇದು ಆಯೋಗದ ಆಂತರಿಕ ಆಡಳಿತಕ್ಕೆ ಸಂಬಂಧಿಸಿದ ಸಮಸ್ಯೆಯಾದರೆ; ಕಾಲಕಾಲಕ್ಕೆ ಪರೀಕ್ಷೆಗಳನ್ನು ನಡೆಸಿ, ಫಲಿತಾಂಶ ಪ್ರಕಟಿಸುವುದರಲ್ಲಿ ವಿಳಂಬನೀತಿ ಅನುಸರಿಸುತ್ತಿರುವುದು ಮತ್ತೊಂದು ಅಧ್ವಾನಕ್ಕೆ ಕಾರಣವಾಗಿದೆ. ನಾಡಿನ ಯುವಜನತೆಯ ಭವಿಷ್ಯದೊಂದಿಗೆ ಚೆಲ್ಲಾಟವಾಡುತ್ತಿರುವ ಆಯೋಗ ಅಭ್ಯರ್ಥಿಗಳಿಂದ ಪ್ರತಿನಿತ್ಯ ಪ್ರತಿಭಟನೆ ಎದುರಿಸುತ್ತಿದೆ.

ಪರೀಕ್ಷಾ ಫಲಿತಾಂಶ ಪ್ರಕಟಿಸುವುದರಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವ ಆಯೋಗದ ಕ್ರಮ ಖಂಡಿಸಿ ಹಲವು ಅಭ್ಯರ್ಥಿಗಳು ಆಯೋಗದ ಕಚೇರಿ ಮುಂದೆ ಇತ್ತೀಚೆಗೆ ಪ್ರತಿಭಟನೆ ನಡೆಸಿದ್ದರು. ಈ ವೇಳೆ ವಿದ್ಯಾರ್ಥಿ ಮುಖಂಡ ಕಾಂತಕುಮಾರ್ ಅವರನ್ನು ಪೊಲೀಸರು ಬಂಧಿಸಿ, ಜಾಮೀನು ರಹಿತ ಕೇಸು ದಾಖಲಿಸಿ, ಆರು ದಿನ ಜೈಲಿಗೆ ಕಳಿಸಿದ್ದರು.

ಜಾಮೀನಿನ ಮೇಲೆ ಬಿಡುಗಡೆಗೊಂಡ ಕಾಂತಕುಮಾರ್‌, ‘ಪರೀಕ್ಷೆಗಳು ಪಾರದರ್ಶಕವಾಗಿರಲಿ, ಫಲಿತಾಂಶಗಳು ಶೀರ್ಘ ಪ್ರಕಟಗೊಳ್ಳಲಿ ಎಂಬ ಮನವಿಗೆ ಆಯೋಗ ಸ್ಪಂದಿಸುತ್ತಿಲ್ಲ. ಏಕೆಂದರೆ ಪರೀಕ್ಷೆ ಮತ್ತು ಫಲಿತಾಂಶಗಳಲ್ಲಿ ಪಾರದರ್ಶಕತೆ ಇಲ್ಲ. ಆಯೋಗದ ಅಧ್ಯಕ್ಷರಾದ ಶಿವಶಂಕರಪ್ಪ ಎಸ್. ಸಾಹುಕಾರ್, ಅಧ್ಯಕ್ಷ ಸ್ಥಾನದಲ್ಲಿ ಕೂರಲು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಪುತ್ರ ಬಿ.ವೈ. ವಿಜಯೇಂದ್ರರಿಗೆ ಭಾರೀ ಮೊತ್ತ ಕೊಟ್ಟಿದ್ದಾರೆ’ ಎಂದಿದ್ದಾರೆ.

ಆಯೋಗದ ವಿಳಂಬನೀತಿ, ಭ್ರಷ್ಟಾಚಾರ, ಸ್ವಜನಪಕ್ಷಪಾತಕ್ಕೆ ರೋಸತ್ತ ಕಾಂತಕುಮಾರ್, ಕೊಂಚ ಆವೇಷದಿಂದ ಆರೋಪ ಮಾಡಿರಬಹುದು. ಆದರೆ ಸರ್ಕಾರ ಇವರ ಆರೋಪವನ್ನು ಅಷ್ಟು ಸುಲಭವಾಗಿ ತಳ್ಳಿಹಾಕುವಂತಿಲ್ಲ. ಅವರನ್ನು ವಿಚಾರಣೆಗೊಳಪಡಿಸಿ, ಅಧ್ಯಕ್ಷರ ಆಯ್ಕೆಯಲ್ಲಿನ ಅವ್ಯವಹಾರವನ್ನು ಹೊರಗೆಳೆಯಬೇಕಾಗಿದೆ. ಹಾಗೆಯೇ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕೂಡ ಈ ಗಂಭೀರ ಆರೋಪಕ್ಕೆ ಉತ್ತರಿಸಲೇಬೇಕಾಗಿದೆ. ಸರ್ಕಾರ ಜನಪರವಾಗಿದ್ದರೆ, ಆಯೋಗದಲ್ಲಿ ನಡೆಯುತ್ತಿರುವ ಅನ್ಯಾಯ, ಅಕ್ರಮಗಳನ್ನು ಜನರ ಮುಂದೆ ಇಡಬೇಕಾಗಿದೆ. ಯುವಜನತೆಗೆ ನ್ಯಾಯ ಒದಗಿಸುವ ಕೆಲಸ ಮಾಡಬೇಕಿದೆ.

ಲೋಕಸೇವಾ ಆಯೋಗ ಬಹಳ ಹಿಂದಿನಿಂದಲೂ ಯಾವುದಾವುದೋ ಕಾರಣಗಳಿಗಾಗಿ ಸುದ್ದಿಯಾಗುತ್ತಲೇ ಇದೆ. ಹಣದಾಸೆಗೆ, ಸ್ವಜನಪಕ್ಷಪಾತಕ್ಕೆ, ಪುಢಾರಿಗಳ ಪುನರ್ವಸತಿಗೆ ಅಧಿಕಾರಸ್ಥ ರಾಜಕಾರಣಿಗಳು ಅನರ್ಹರನ್ನು-ಅಯೋಗ್ಯರನ್ನು ಆಯೋಗದ ಅಧ್ಯಕ್ಷ ಮತ್ತು ಸದಸ್ಯರನ್ನಾಗಿ ಆಯ್ಕೆ ಮಾಡಿದ್ದರಿಂದಾಗಿ ಇಷ್ಟೆಲ್ಲ ಅಧ್ವಾನ ಎಂಬುದು ಜನರ ಅಭಿಪ್ರಾಯವಾಗಿದೆ.

ಸಾಂವಿಧಾನಿಕ ಸಂಸ್ಥೆಯೊಂದು ಈ ಪರಿ ಕೆಟ್ಟುಹೋಗಿದ್ದನ್ನು ಕಂಡ ಹೈಕೋರ್ಟ್, ‘ನೇಮಕಾತಿ ಪರೀಕ್ಷೆಗಳ ಪರಿಶುದ್ಧತೆಯನ್ನು ಮರಳಿ ತರಬೇಕಾದರೆ ಕೆಪಿಎಸ್‌ಸಿಯನ್ನು ಸಂಪೂರ್ಣವಾಗಿ ‍ಪುನರ್‌ ರಚಿಸಬೇಕು, ಗರಿಷ್ಠ ಬದ್ಧತೆ ಉಳ್ಳವರನ್ನು ನೇಮಿಸಬೇಕು’ ಎಂದು ಸರ್ಕಾರಕ್ಕೆ ಸಲಹೆ ನೀಡಿದ್ದೂ ಆಗಿದೆ.

ನ್ಯಾಯಕ್ಕಾಗಿ ಅಭ್ಯರ್ಥಿಗಳು ಪದೇ ಪದೆ ಕೋರ್ಟ್ ಮೆಟ್ಟಿಲು ಹತ್ತುವುದು ಮುಂದುವರೆದಾಗ, ‘ಕರ್ನಾಟಕದ ಮರ್ಯಾದೆ ಕಾಪಾಡಲು, ಘನತೆ ಉಳಿಸಲು, ನ್ಯಾಯಯುತವಾಗಿ ನೇಮಕಾತಿ ಪ್ರಕ್ರಿಯೆ ನಡೆಯಲು ಕೇಂದ್ರ ಲೋಕಸೇವಾ ಆಯೋಗದ ಮಾದರಿಯ ಹೊಸ ಪದ್ಧತಿ ಅನುಷ್ಠಾನಕ್ಕೆ ತರಬೇಕು. ಲೋಪಗಳನ್ನು ಸರಿಪಡಿಸಲು ಸಾಧ್ಯವಿಲ್ಲದಿದ್ದರೆ, ಕೆಪಿಎಸ್‌ಸಿಯನ್ನು ರದ್ದು ಮಾಡಬೇಕು’ ಎಂದು ಹೈಕೋರ್ಟ್ ಕಟುವಾಗಿ ಹೇಳಿದ್ದೂ ಇದೆ.

ಸದ್ಯ ಆಯೋಗದಲ್ಲಿ ನಡೆಯುತ್ತಿರುವ ಆಡಳಿತಾತ್ಮಕ ಜಟಾಪಟಿ ಹಾಗೂ ನೇಮಕಾತಿ ಅಕ್ರಮಗಳು, ಆರೋಪಗಳು ಹೀಗೆಯೇ ಮುಂದುವರಿದರೆ ಅದರ ವಿರುದ್ಧ ಹತಾಶಗೊಂಡ ಯುವಜನರು ಸಿಡಿದೇಳಬಹುದು. ಅದು ಜನಾಂದೋಲನವಾಗಿ ಸರ್ಕಾರಕ್ಕೆ ಮತ್ತೊಂದು ಸಮಸ್ಯೆ ಸೃಷ್ಟಿಸಬಹುದು. ಆದಕಾರಣ, ಕರ್ನಾಟಕ ಲೋಕಸೇವಾ ಆಯೋಗದ ಶುದ್ಧೀಕರಣದ ಕೆಲಸ ತಕ್ಷಣ ಆರಂಭವಾಗಬೇಕಿದೆ. ಆ ಪ್ರಕ್ರಿಯೆಯನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕಿದೆ. ಆ ನಿಟ್ಟಿನಲ್ಲಿ ಕೇಂದ್ರ ಲೋಕಸೇವಾ ಆಯೋಗದ ರೀತಿ-ನೀತಿಗಳನ್ನು ಅಳವಡಿಸಿಕೊಳ್ಳಬೇಕಿದೆ. ಕೆಪಿಎಸ್‌ಸಿ ಮೇಲಿಟ್ಟ ಯುವಜನತೆಯ ವಿಶ್ವಾಸಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಕ್ಷಣವೇ ಇತ್ತ ಗಮನಹರಿಸಬೇಕಿದೆ.

ಈ ದಿನ ಸಂಪಾದಕೀಯ
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ಸಂಪಾದಕೀಯ | ಕುಮಾರಸ್ವಾಮಿಯವರನ್ನು ಸೋಲಿಸಲು ಬಿಜೆಪಿ ಸುಪಾರಿ ಕೊಟ್ಟಿದೆಯೇ, ಆತಂಕಕ್ಕೊಳಗಾಗಿದ್ದಾರೆಯೇ?

'ಮೋಶಾ'ಗಳ ಸೋಲಿಸುವ ಸುಪಾರಿಗೆ ವಿಚಲಿತರಾಗಿರುವ ಕುಮಾರಸ್ವಾಮಿಯವರು, ಬಿಜೆಪಿಯ ಹುನ್ನಾರವನ್ನು ಬಯಲು ಮಾಡಲಾಗದೆ...

ಈ ದಿನ ಸಂಪಾದಕೀಯ | ದೇವೇಗೌಡರ ದೈತ್ಯಶಕ್ತಿ, ಮೋದಿಯ ಮೋಡಿ ಮತ್ತು ದಂಗಾದ ಜನ

ಮೇಲ್ನೋಟಕ್ಕಿದು ಕೊಡು-ಕೊಳ್ಳುವ ಮೈತ್ರಿಯಂತೆ ಕಂಡರೂ, ಗೆದ್ದರೆ ಮಾತ್ರ ಇಬ್ಬರಿಗೂ ಲಾಭವಿದೆ. ಸೋತರೆ,...

ಈ ದಿನ ಸಂಪಾದಕೀಯ | ಬಯಲಾಗುತ್ತಿರುವ ಸುಳ್ಳುಗಳು, ಬೆತ್ತಲಾಗುತ್ತಿರುವ ಬಿಜೆಪಿ

ಹತ್ತು ವರ್ಷಗಳ ಕಾಲ ದೇಶವನ್ನಾಳಿದ ಬಿಜೆಪಿ, ತನ್ನ ಆಡಳಿತವನ್ನು, ಅಭಿವೃದ್ಧಿಯನ್ನು ದೇಶದ...