‘ಈ ದಿನ’ ಸಂಪಾದಕೀಯ | ಬಗರ್‌ ಹುಕುಂ ಸಮಸ್ಯೆ ಬಗೆಹರಿಸಿದರಷ್ಟೇ ಅರಣ್ಯ ಒತ್ತುವರಿ ತೆರವು ಸಲೀಸು

Date:

ನೂತನ ಕಾರ್ಯಪಡೆಯ ಉದ್ದೇಶಗಳನ್ನು ಹೇಳುವಾಗ, ಎಲ್ಲ ಬಗೆಯ ಅರಣ್ಯ ಒತ್ತುವರಿಯನ್ನೂ ತೆರವು ಮಾಡುವುದಾಗಿ ಘೋಷಿಸಲಾಗಿದೆ. ಆದರೆ, ಈಗಾಗಲೇ ಹಗ್ಗಜಗ್ಗಾಟದಲ್ಲಿರುವ ಬಗರ್‌ ಹುಕುಂ ಜಮೀನುಗಳನ್ನು ಕಾರ್ಯಪಡೆ ಹೇಗೆ ನಿಭಾಯಿಸಲಿದೆ ಎಂಬುದರ ಕುರಿತ ಸ್ಪಷ್ಟತೆ ಮಾತ್ರ ಎಲ್ಲಿಯೂ ಇಲ್ಲ

ವನ್ಯಜೀವಿಗಳೊಂದಿಗಿನ ಮಾನವ ಸಂಘರ್ಷಕ್ಕೆ ಕಡಿವಾಣ ಮತ್ತು ಅರಣ್ಯ ಒತ್ತುವರಿ ತೆರವು ಉದ್ದೇಶಗಳನ್ನು ಇಟ್ಟುಕೊಂಡು ನೂತನ ಕಾರ್ಯಪಡೆ ರಚನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂದಾಯ ಇಲಾಖೆ, ಗೃಹ ಇಲಾಖೆ, ಗ್ರಾಮೀಣಾಭಿವೃದ್ಧಿ ಇಲಾಖೆ, ನಗರಾಭಿವೃದ್ಧಿ ಇಲಾಖೆಯ ಅಧಿಕಾರಿಗಳು ಕಾರ್ಯಪಡೆಯ ಭಾಗವಾಗಲಿದ್ದಾರೆ. ಅರಣ್ಯ ಇಲಾಖೆಯ ಉನ್ನತ ಅಧಿಕಾರಿ ನೇತೃತ್ವ ವಹಿಸಲಿದ್ದಾರೆ. ಉದ್ದೇಶ ಮತ್ತು ತಂಡದ ವಿನ್ಯಾಸ ಗಮನಿಸಿದರೆ, ಮೇಲ್ನೋಟಕ್ಕೆ ಸಮತೋಲನ ಸಾಧಿಸಲಾಗಿದೆ ಮತ್ತು ಈ ಸಂದರ್ಭಕ್ಕೆ ಇದು ಅವಶ್ಯವಾಗಿ ಆಗಬೇಕಿದ್ದ ಕೆಲಸ. ಆದರೆ, ಕಾರ್ಯಪಡೆ ಸುಗಮವಾಗಿ ಕಾರ್ಯನಿರ್ವಹಿಸಬೇಕೆಂದರೆ, ಕೆಲವು ತಾಂತ್ರಿಕ ಸಂಗತಿಗಳನ್ನು ಮೊದಲೇ ಬಗೆಹರಿಸಿಕೊಳ್ಳಬೇಕಾದ ಅನಿವಾರ್ಯತೆ ಇದೆ.

- Advertisement -

ರಾಜ್ಯದಲ್ಲಿ ಎರಡು ಲಕ್ಷ ಎಕರೆಯಷ್ಟು ಅರಣ್ಯ ಪ್ರದೇಶ ಒತ್ತುವರಿಯಾಗಿದೆ ಎಂಬುದು ಅರಣ್ಯ ಇಲಾಖೆಯ ಅಂದಾಜು. ಕಾರ್ಯಪಡೆಯ ಉದ್ದೇಶಗಳನ್ನು ವಿಸ್ತರಿಸಿ ಹೇಳುವಾಗ, ಈ ಎಲ್ಲ ಅರಣ್ಯ ಒತ್ತುವರಿಯನ್ನೂ ತೆರವು ಮಾಡುವುದಾಗಿ ಘೋಷಿಸಲಾಗಿದೆ. ಆದರೆ, ಈಗಾಗಲೇ ಹಗ್ಗಜಗ್ಗಾಟದಲ್ಲಿರುವ ಬಗರ್‌ ಹುಕುಂ ಜಮೀನುಗಳನ್ನು ಕಾರ್ಯಪಡೆ ಹೇಗೆ ನಿಭಾಯಿಸಲಿದೆ ಎಂಬುದರ ಕುರಿತ ಸ್ಪಷ್ಟತೆ ಎಲ್ಲಿಯೂ ಇಲ್ಲ. ಹಿಂದೊಮ್ಮೆ ಅರಣ್ಯವಾಗಿದ್ದ ಭೂಮಿಯನ್ನು ನಿಯಮಗಳ ಅನುಸಾರ ಕಂದಾಯ ಇಲಾಖೆಯ ಸುಪರ್ದಿಗೆ ಕೊಡಲಾಗಿತ್ತು. ಅದಾದ ಹಲವು ವರ್ಷಗಳ ನಂತರ, ಅರಣ್ಯ ಇಲಾಖೆಯು ಹಳೆಯ ದಾಖಲಾತಿಗಳನ್ನು ಇಟ್ಟುಕೊಂಡು, ಕಂದಾಯ ಇಲಾಖೆಯಿಂದ ಭೂಮಿ ಸಾಗುವಳಿ ಪಡೆದವರಿಗೆ ಅಕ್ಷರಶಃ ಕಿರುಕುಳ ಕೊಡಲು ಆರಂಭಿಸಿತು. ಹೀಗೆ ಶುರುವಾದ ಅರಣ್ಯ ಮತ್ತು ಕಂದಾಯ ಇಲಾಖೆಯ ನಡುವಿನ ಜಟಾಪಟಿಯಿಂದ, ಸಾಗುವಳಿ ಪಡೆದ ರೈತರಷ್ಟೇ ಅಲ್ಲದೆ, ಇನ್ನೇನು ಸಾಗುವಳಿ ಚೀಟಿ ಪಡೆಯಲಿದ್ದ ರೈತರು ಕೂಡ ಸಂಕಷ್ಟಕ್ಕೆ ಸಿಲುಕಿದರು. ಇದೇ ಕಾರಣಕ್ಕೆ, ಯಾವುದೇ ಅಧಿಕೃತ ದಾಖಲೆಗಳಿಲ್ಲದೆ ಉಳುಮೆ ಮಾಡುತ್ತಿರುವ (ಬಗರ್‌ ಹುಕುಂ) ರೈತರ ಬದುಕು ಹಲವು ವರ್ಷಗಳಿಂದ ಅತಂತ್ರ ಸ್ಥಿತಿಯಲ್ಲಿದೆ. ಸರ್ಕಾರಗಳು, ಸರ್ಕಾರಗಳನ್ನು ರಚಿಸಿದ ಪಕ್ಷಗಳು ಬದಲಾಗುತ್ತಲೇ ಇದ್ದರೂ, ಅಧಿಕಾರ ಹಿಡಿಯುವ ಎಲ್ಲ ಪಕ್ಷಗಳೂ ತಮ್ಮದು ರೈತಪರ ಸರ್ಕಾರ ಅಂತ ಎಷ್ಟೇ ಬೀಗಿದರೂ, ಈ ರೈತರ ವಿಷಯದಲ್ಲಿನ ನಯವಂಚನೆ ತಪ್ಪಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು?...

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ ಪ್ರಕರಣವು ಕಾಕ್‌ಪಿಟ್‌ನೊಳಗಿನ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ.ಈ ವಿಮಾನದ ಯೆಮೆನ್ ಮೂಲದ ಸಹ-ಪೈಲಟ್‌, ಹರಿತ ವಸ್ತುವಿನಿಂದ ಪೈಲಟ್ ಮೇಲೆ...

ಜಾಗತಿಕ ಬಿಕ್ಕಟ್ಟಿನ ನೆಪ, ಮರೆಯಾದ ದೇಶದ ಹಿತ: ಜೈಶಂಕರ್...

ಬೆಲೆ ಏರಿಕೆಯ ಬೇಗೆಯಲ್ಲಿ ಜನಸಾಮಾನ್ಯರು ನರಳುತ್ತಿದ್ದರೆ, ಗದ್ದೆಯಲ್ಲಿ ರೈತ ರಸಗೊಬ್ಬರಕ್ಕಾಗಿ ಕಣ್ಣೀರು ಸುರಿಸುತ್ತಿದ್ದಾನೆ. ಆದರೆ, ಇದಕ್ಕೆ ಸ್ಪಂದಿಸಬೇಕಾದ ಮೋದಿ ಸರ್ಕಾರ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಮೂಲಕ ಜಾಗತಿಕ ವೇದಿಕೆಗಳಲ್ಲಿ ವಿದೇಶಿ ಯುದ್ಧಗಳತ್ತ...

ಗಾಯದ ಮೇಲೆ ಬರೆ ಹಾಕಿದಂತೆ, ಮಳೆಯಾಶ್ರಿತ ಜಮೀನುಗಳ ರೈತರನ್ನು ಬರ, ಅತಿವೃಷ್ಟಿ, ಬೆಲೆ ಏರಿಳಿತ, ಮಾರುಕಟ್ಟೆಯ ಅನಿಶ್ಚಿತತೆ ಕಂಗಾಲು ಮಾಡುತ್ತಿವೆ. ಈ ರೈತರು, ಬೆಳೆ ಬೆಳೆಯಲು ಬ್ಯಾಂಕ್‌ಗಳಿಂದ ಸಾಲ ಪಡೆಯಲಾಗಲೀ, ಹೈನುಗಾರಿಕೆಯಂತಹ ಉಪಕಸುಬುಗಳನ್ನು ಮಾಡಲೆಂದು ಸರ್ಕಾರದಿಂದ ಸಹಾಯಧನ ಪಡೆಯಲಾಗಲೀ, ಕೃಷಿ ಇಲಾಖೆಯಿಂದ ಸಿಗುವ ಸಬ್ಸಿಡಿಗಳನ್ನು ಪಡೆಯಲಾಗಲೀ ಸಾಧ್ಯವೇ ಇಲ್ಲ. ಏಕೆಂದರೆ, ಉಳುಮೆ ಮಾಡುತ್ತಿರುವ ಭೂಮಿ ಅವರದಲ್ಲ. ಈ ಸಮಸ್ಯೆ ಬಗೆಹರಿಯಬೇಕೆಂದರೆ, ಅರಣ್ಯ ಮತ್ತು ಕಂದಾಯ ಇಲಾಖೆಗಳ ನಡುವೆ ಸಮನ್ವಯ ಸಾಧ್ಯವಾಗಬೇಕು. ಜೊತೆಗೆ, ಅರಣ್ಯ ಸಚಿವರು, ಉಪಮುಖ್ಯಮಂತ್ರಿ, ವಿರೋಧ ಪಕ್ಷಗಳ ನಾಯಕರು ಹಾಗೂ ಮುಖ್ಯಮಂತ್ರಿಗಳ ಒತ್ತಾಸೆ ಕೂಡ ಅತ್ಯವಶ್ಯ. ಇದು ಸಾಧ್ಯವಾದರೆ ಮಾತ್ರ ನೂತನ ಕಾರ್ಯಪಡೆಯ ಉದ್ದೇಶಗಳು ಈಡೇರಬಲ್ಲವು. ಇಲ್ಲದಿದ್ದರೆ, ಅರಣ್ಯ ಒತ್ತುವರಿ ತೆರವು ಈಗ ಹೇಗೆ ಅತಂತ್ರ ಸ್ಥಿತಿಯಲ್ಲಿದೆಯೋ ಮುಂದೆಯೂ ಅದೇ ರೀತಿ ಇರಲಿದೆ. ವನ್ಯಜೀವಿಗಳ ಜೊತೆಗಿನ ಮಾನವ ಸಂಘರ್ಷವೂ ತಾರಕಕ್ಕೆ ಏರಲಿದೆ.

ಈದಿನ.ಕಾಮ್ ಆಡಿಯೊಗಳನ್ನು ಆಲಿಸಲು ಕ್ಲಿಕ್ ಮಾಡಿ:
ನುಡಿ ಹಲವು | ಅಂಕಣ | ವೈವಿಧ್ಯ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ಸಂಪಾದಕೀಯ | ಅಮೆರಿಕ ದಾದಾಗಿರಿಗೆ ಮೋದಿ ಮೌನ- ರಾಜತಾಂತ್ರಿಕತೆಯಲ್ಲ, ಶರಣಾಗತಿ!

ಅಮೆರಿಕ ಜೊತೆಗಿನ ಭಾರತದ ನಂಟು 'ಸಮಾನ ಸಾರ್ವಭೌಮತ್ವ'ದ ಮೇಲೆ ಆಧಾರಿತವಾಗಿರಬೇಕೇ ಹೊರತು,...

ಈ ದಿನ ಸಂಪಾದಕೀಯ | ಯಾರು ದೇಶದ್ರೋಹಿಗಳು? ಮೋದಿ ಭಾರತದ ಹೊಸ ನಿರೂಪಣೆ ಅಪಾಯಕಾರಿ

ಮೋದಿ ಅಧಿಕಾರಕ್ಕೆ ಬಂದ ನಂತರ ಬಿಜೆಪಿಯೇತರ ಪಕ್ಷಗಳ ಮುಖಂಡರನ್ನು, ಬಿಜೆಪಿ ವಿರೋಧಿಗಳನ್ನು,...

ಈ ದಿನ ಸಂಪಾದಕೀಯ | ಖರೀದಿ ಮೇಲೆ ತೆರಿಗೆ, ಖರೀದಿ ಹಣಕ್ಕೆ ಶುಲ್ಕ… ಇದು ಮೋದಿ ಡಿಜಿಟಲ್ ದರೋಡೆ!

ನಾವು ಒಂದು ವಸ್ತುವನ್ನು ಯುಪಿಐ ಮೂಲಕ ಖರೀದಿಸಿದರೆ, ಅದಕ್ಕೆ ತೆರಿಗೆ ತೆರಬೇಕು....

ಈ ದಿನ ಸಂಪಾದಕೀಯ | ಹಬ್ಬ-ಆಚರಣೆಗಳೇ ಬಿಜೆಪಿಯ ದ್ವೇಷದ ಅಸ್ತ್ರ; ಜನತೆ ಎಚ್ಚೆತ್ತುಕೊಳ್ಳಲಿ!

ತನ್ನ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಧಾರ್ಮಿಕ ಆಚರಣೆಗಳ ಪಾವಿತ್ರ್ಯವನ್ನು ಹಾಳುಗೆಡವುವ, ಹಬ್ಬಗಳನ್ನು...