ಈ ದಿನ ಸಂಪಾದಕೀಯ | ಉಜಿರೆಯ ಸೌಜನ್ಯ ಕೊಲೆಯಾಗಿ 11 ವರ್ಷ; ಆರೋಪಿ ಸಂತೋಷ್‌ ರಾವ್‌ ನಿರ್ದೋಷಿಯಾದರೆ, ದೋಷಿ ಯಾರು?

Date:

ಹಿಂದೂ ಹೆಣ್ಣುಮಕ್ಕಳನ್ನು ಮರುಳು ಮಾಡಿ ಮುಸ್ಲಿಂ ಯುವಕರು ಲವ್‌ ಜಿಹಾದ್‌ ಮಾಡುತ್ತಿದ್ದಾರೆ ಎಂದು ಬೊಬ್ಬೆ ಹೊಡೆಯುವ, ಮೋಸಕ್ಕೊಳಗಾದ ಕೇರಳದ ಹಿಂದೂ ಯುವತಿಯರ ಬಗ್ಗೆ ಕಾಳಜಿ ತೋರುವ ಸಚಿವೆ ಶೋಭಾ ಕರಂದ್ಲಾಜೆ, ತನ್ನದೇ ಊರಿನಲ್ಲಿ ಕೊಲೆಯಾದ ಹಿಂದೂ ಯುವತಿ ಸೌಜನ್ಯಳ ಕುಟುಂಬದ ಕಣ್ಣೀರು ಒರೆಸುವ ನಿಟ್ಟಿನಲ್ಲಿ ಯಾವುದೇ ಪ್ರಯತ್ನ ಮಾಡಲಿಲ್ಲ 

ದಕ್ಷಿಣಕನ್ನಡ ಜಿಲ್ಲೆಯ ಪವಿತ್ರ ತೀರ್ಥಕ್ಷೇತ್ರ ಧರ್ಮಸ್ಥಳ. ಮಂಜುನಾಥನ ಹೆಸರಿನಲ್ಲಿ ಆಣೆ ಪ್ರಮಾಣ ಮಾಡುವುದು ಈಗಲೂ ಚಾಲ್ತಿಯಲ್ಲಿದೆ. ಅದೇ ಮಂಜುನಾಥನ ಕಾಲಬುಡದಲ್ಲಿ ಹನ್ನೊಂದು ವರ್ಷಗಳ ಹಿಂದೆ ಪಿಯುಸಿ ವಿದ್ಯಾರ್ಥಿನಿ ಸೌಜನ್ಯ ಎಂಬ ಬಡ ಹೆಣ್ಣುಮಗಳು ಅತ್ಯಾಚಾರವಾಗಿ, ಕೊಲೆಯಾಗಿ ಹೋದಳು. ಸತತ ಹನ್ನೊಂದು ವರ್ಷಗಳ ಕಾನೂನು ಹೋರಾಟದ ನಂತರವೂ, ಸಿಬಿಐ ತನಿಖೆ ನಡೆದರೂ ಪಾತಕಿಗಳು ಯಾರೆಂಬುದು ಪತ್ತೆಯಾಗಿಲ್ಲ. ಸತ್ಯದ ಪರ ನಿಲ್ಲುವವ ಎಂದು ಕೋಟ್ಯಂತರ ಜನ ನಂಬುವ ಮಂಜುನಾಥನಾಗಲಿ, ಅಣ್ಣಪ್ಪನಾಗಲಿ ತಮ್ಮ ಮೆಟ್ಟಿಲಿನ ಮೇಲೆ ನ್ಯಾಯ ಪ್ರಕಟಿಸಲಿಲ್ಲ. ದೇಶದ ಅತ್ಯುನ್ನತ ತನಿಖಾ ಸಂಸ್ಥೆ ಸಿಬಿಐ ಕೂಡಾ ಅಪರಾಧಿಗಳನ್ನು ಪತ್ತೆ ಮಾಡಲಿಲ್ಲ.

- Advertisement -

ಉಜಿರೆಯ ಕಾಲೇಜಿನಲ್ಲಿ ಪಿಯುಸಿ ಓದುತ್ತಿದ್ದ ಸೌಜನ್ಯ 2012 ಅಕ್ಟೋಬರ್‌ 9ರ ಸಂಜೆ ಕಾಲೇಜಿನಿಂದ ಬಸ್ಸಿನಲ್ಲಿ ಬಂದಿಳಿದಿದ್ದಾಳೆ. ಸೌಜನ್ಯ ತನ್ನ ಮನೆ ಕಡೆ ಹೆಜ್ಜೆ ಹಾಕುತ್ತಿದ್ದಾಗ ಆ ಸಂಜೆಯ ಜಿಟಿ ಜಿಟಿ ಮಳೆಯ ನಡುವೆಯೇ ಕಿರಾತಕರು ಆಕೆಯನ್ನು ಅಪಹರಿಸಿದ್ದರು. ರಾತ್ರಿಯಾದರೂ ಮನೆ ಸೇರದಿರುವ ಮಗಳ ಬಗ್ಗೆ ಆತಂಕಗೊಂಡ ಮನೆಯವರು, ಊರವರು ಸೇರಿ ಆಕೆ ಸಾಗಿದ ಹಾದಿಯಲ್ಲಿ ಪೊದೆಯನ್ನೂ ಬಿಡದೇ ಜಾಲಾಡಿದ್ದಾರೆ. ಇಡೀ ರಾತ್ರಿಯ ಹುಡುಕಾಟದಲ್ಲಿ ಯಾವ ಸುಳಿವೂ ಸಿಕ್ಕಿರಲಿಲ್ಲ. ಆದರೆ ಜನರು ಹುಡುಕಾಟ ನಡೆಸಿದ ಅದೇ ಜಾಗದಲ್ಲಿ ಮರುದಿನ(ಅ.10) 12 ಗಂಟೆಯ ಸುಮಾರಿಗೆ ಪೊಲೀಸರ ಪತ್ತೆಕಾರ್ಯದ ವೇಳೆ ಪೊದೆಯ ಮಧ್ಯೆ ಸೌಜನ್ಯಳ ಸುಕೋಮಲ ದೇಹ ಕಾಮುಕರ ಅಟ್ಟಹಾಸಕ್ಕೆ ಬಲಿಯಾಗಿ ಬಿದ್ದಿತ್ತು. ಮರುದಿನವೇ ಅ.11ರಂದು ಸಂತೋಷ್‌ ರಾವ್‌ ಎಂಬ ಮಾನಸಿಕ ಅಸ್ವಸ್ಥನನ್ನು ಸಾರ್ವಜನಿಕರು ಅನುಮಾನದಿಂದ ಹಿಡಿದು ಬೆಳ್ತಂಗಡಿ ಪೊಲೀಸರಿಗೆ ಒಪ್ಪಿಸಿದ್ದರು. ಬೆಳ್ತಂಗಡಿ ಸರ್ಕಲ್ ಇನ್ಸ್‌ಪೆಕ್ಟರ್ ಭಾಸ್ಕರ್ ರೈ ಮತ್ತು ಪಿಎಸ್ಐ ಯೋಗೀಶ್ ಕುಮಾರ್‌ ತಂಡದಿಂದ ತನಿಖೆ ನಡೆದು, ನಂತರ ಸಿಐಡಿಗೆ ವಹಿಸಲಾಗಿತ್ತು. ಸಾರ್ವಜನಿಕರ ಒತ್ತಾಯದ ಮೇರೆಗೆ 2013ರಲ್ಲಿ ರಾಜ್ಯ ಸರ್ಕಾರ ಸಿಬಿಐ ತನಿಖೆಗೆ ವಹಿಸಿತ್ತು. ಸುಮಾರು 11 ವರ್ಷಗಳ ಕಾಲ ತನಿಖೆ ನಡೆಸಿದ ಸಿಬಿಐ ಕೋರ್ಟ್‌ ಇದೇ 16ರಂದು ಸಂತೋಷ್‌ ರಾವ್‌ ನಿರ್ದೋಷಿ ಎಂಬ ತೀರ್ಪು ನೀಡಿದೆ. ಹಾಗಿದ್ದರೆ ನಿಜ ಅಪರಾಧಿಗಳು ಯಾರು? ಅವರನ್ನು ಪತ್ತೆ ಹಚ್ಚುವವರು ಯಾರು?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇಡೀ ರಾತ್ರಿ ಬಿಡದೇ ಮಳೆ ಸುರಿದಿದ್ದರೂ ಮೃತದೇಹದ ಬಳಿ ಸಿಕ್ಕಿದ್ದ ಆಕೆಯ ಬ್ಯಾಗ್‌, ಅದರಲ್ಲಿದ್ದ ಪುಸ್ತಕಗಳು ಒದ್ದೆಯಾಗಿರಲಿಲ್ಲ. ಸೌಜನ್ಯಳ ದೇಹ ಸಿಕ್ಕ ಜಾಗದಲ್ಲಿ ಕೊಲೆ ನಡೆದಿಲ್ಲ, ಬೇರೆಲ್ಲೋ ಕೊಲೆ ಮಾಡಿ ಆ ಜಾಗದಲ್ಲಿ ಎಸೆಯಲಾಗಿದೆ ಎಂಬ ಅನುಮಾನ ವ್ಯಕ್ತವಾಗಿತ್ತು. ಆಕೆಯ ಕುಟುಂಬ ಮತ್ತು ಊರವರ ಪ್ರಕಾರ ಪೊಲೀಸರು ಸ್ಥಳ ಮಹಜರು ಸಾಂದರ್ಭಿಕ ಸಾಕ್ಷ್ಯ ಸಂಗ್ರಹ, ಪೋಸ್ಟ್‌ಮಾರ್ಟಂ ಸಂದರ್ಭದಲ್ಲಿ ನಿರ್ಲಕ್ಷ್ಯ ತೋರಿದ್ದಾರೆ. ಆಕೆಯ ದೇಹದಲ್ಲಿ ಒಳ ಉಡುಪು ಇರಲಿಲ್ಲ. ಪೊಲೀಸರು ಆಕೆಯ ಮನೆಯಿಂದ ಒಳ ಉಡುಪು ತೆಗೆದುಕೊಂಡು ಹೋಗಿದ್ದರು. ಪ್ರಭಾವಿಗಳ ಮಕ್ಕಳ ರಕ್ಷಣೆಗಾಗಿ ಯಾರದ್ದೋ ಒತ್ತಡಕ್ಕೆ ಬಿದ್ದು ಪೊಲೀಸರು ಸಾಕ್ಷ್ಯಗಳನ್ನು ನಾಶಪಡಿಸಿದ್ದಾರೆ ಎಂದು ಹೇಳುತ್ತಲೇ ಬಂದಿದ್ದರು. ಕೊಲೆಯ ಪ್ರಮುಖ ಸಾಕ್ಷಿಗಳಲ್ಲಿ ಮೂವರು ಅಪಘಾತ ಸೇರಿದಂತೆ ಅನುಮಾನಾಸ್ಪದವಾಗಿ ಸತ್ತಿದ್ದಾರೆ. ಹೀಗೆ ಹತ್ತು ವರ್ಷಗಳಲ್ಲಿ ಸೌಜನ್ಯಳ ಕೊಲೆ ಪಾತಕಿಗಳು ಯಾರು ಎಂಬುದನ್ನು ಪತ್ತೆ ಹಚ್ಚಿ ಆ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂಬುದು ಅಲ್ಲಿನ ಜನಪ್ರತಿನಿಧಿಗಳಿಗೂ ಇಲ್ಲ.

ಇದನ್ನು ಓದಿ ಶಕ್ತಿ ಯೋಜನೆ | ಹೆಣ್ಣುಮಕ್ಕಳ ಪರ್ಸಿನಲ್ಲಿ ಚಿಕ್ಕಾಸು ಉಳಿದಿದೆ; ಬಿಟ್ಟಿ ಸಲಹೆಗಳು ಹೊಟ್ಟೆ ಕಿಚ್ಚಿನ ಹಳಹಳಿಕೆಗಳಷ್ಟೇ…

ಈ ಘಟನೆ ನಡೆದಾಗ ರಾಜ್ಯದಲ್ಲಿ ಸದಾನಂದ ಗೌಡರು ಮುಖ್ಯಮಂತ್ರಿಗಳಾಗಿದ್ದರು. ಸೌಜನ್ಯಳ ಊರಿನವರೇ ಆದ ಶೋಭಾ ಕರಂದ್ಲಾಜೆ ಇಂಧನ ಸಚಿವರಾಗಿದ್ದರು. ಹಿಂದೂ ಹೆಣ್ಣುಮಕ್ಕಳನ್ನು ಮರುಳು ಮಾಡಿ ಮುಸ್ಲಿಂ ಯುವಕರು ಲವ್‌ ಜಿಹಾದ್‌ ಮಾಡುತ್ತಿದ್ದಾರೆ ಎಂದು ಬೊಬ್ಬೆ ಹೊಡೆಯುವ, ಮೋಸಕ್ಕೊಳಗಾದ ಕೇರಳದ ಹಿಂದೂ ಯುವತಿಯ ಬಗ್ಗೆ ಕಾಳಜಿ ತೋರಿಸಿದ್ದ ಶೋಭಾ ಕರಂದ್ಲಾಜೆ, ಧರ್ಮಸ್ಥಳದಲ್ಲಿ ತನ್ನದೇ ಸಮುದಾಯದ, ಹಿಂದೂ ಯುವತಿ ಸೌಜನ್ಯಳ ಕುಟುಂಬದ ಕಣ್ಣೀರು ಒರೆಸುವ ನಿಟ್ಟಿನಲ್ಲಿ ಯಾವುದೇ ಪ್ರಯತ್ನ ಮಾಡಿಲ್ಲ. ಈ ಪ್ರಕರಣದಲ್ಲಿ ದೊಡ್ಡವರ ಮಕ್ಕಳ ಹೆಸರು ಕೇಳಿ ಬಂದಿರುವ ಕಾರಣ ಎಲ್ಲ ಜನ ಪ್ರತಿನಿಧಿಗಳೂ ಬಾಯಿಗೆ ಬೀಗ ಹಾಕಿ ಕೂತಿದ್ದಾರೆ. ವೀರೇಂದ್ರ ಹೆಗ್ಗಡೆಯವರ ಕುಟುಂಬದವರು ಈ ಪ್ರಕರಣದಲ್ಲಿ ಭಾಗಿಯಾಗಿಲ್ಲ ಎಂದು ಬ್ಯಾನರ್‌ ಹಿಡಿದು ಎಬಿವಿಪಿ ಸಂಘಟನೆ ಮೆರವಣಿಗೆ ನಡೆಸಿತ್ತು.

ಸೌಜನ್ಯ ಕೊಲೆ ಪ್ರಕರಣ ಒಂದೇ ಅಲ್ಲ, ಅಲ್ಲೇ ಪಕ್ಕದಲ್ಲೇ ಇರುವ ಮೂಡುಬಿದರೆಯ ಡಾ ಮೋಹನ ಆಳ್ವರ ಶಿಕ್ಷಣ ಸಂಸ್ಥೆಯ ಹಾಸ್ಟೆಲ್‌ನಲ್ಲಿ ಕಳೆದ ಹತ್ತು ವರ್ಷಗಳಲ್ಲಿ ಹತ್ತಾರು ಬಡ ಕುಟುಂಬದ ಹೆಣ್ಣುಮಕ್ಕಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಯಾವ ಸಾವುಗಳ ಬಗ್ಗೆಯೂ ಪಾರದರ್ಶಕ ತನಿಖೆ ನಡೆದಿಲ್ಲ. ಒಟ್ಟಿನಲ್ಲಿ ಬಡವರ ಸಾವುಗಳಿಗೆ ಬೆಲೆಯೇ ಇಲ್ಲ ಎಂಬಂತಾಗಿದೆ. ಮತ್ತೆ ಸೌಜನ್ಯ ಪ್ರಕರಣ ಮರು ತನಿಖೆ ನಡೆದು, ಅಪರಾಧಿಗಳು ಅದೆಷ್ಟೇ ದೊಡ್ಡವರ ಮಕ್ಕಳಾದರೂ ಶಿಕ್ಷೆ ಅನುಭವಿಸುವಂತಾಗಬೇಕು.

WhatsApp Image 2025 11 17 at 3.23.18 PM
ಈ ದಿನ ಸಂಪಾದಕೀಯ
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ಸಂಪಾದಕೀಯ | ಪ್ರಧಾನಿಗೂ ಸಿಗದ ʼಬಾರಾಖೂನ್ ಮಾಫಿʼ ಗ್ಯಾನೇಶ್ ಕುಮಾರ್‌ಗೆ ಯಾಕೆ? ಕೊಡಿಸಿದವರು ಯಾರು?

ಚುನಾವಣೆಯ ಕಾವಲುಗಾರನಿಗೆ ಕಾನೂನಿನ ಕವಚ ಕುಂಡಲಗಳನ್ನು ನೀಡಿ, ಕಾನೂನಿನ ಕೈಗಳು ಮುಟ್ಟದಂತೆ,...

ಈ ದಿನ ಸಂಪಾದಕೀಯ | ಎದ್ದು ನಿಂತ ಯುವಜನತೆ, ಹೊಸ ಬೆಳವಣಿಗೆಯತ್ತ ಭಾರತ

ಪ್ರಜಾಪ್ರಭುತ್ವವೆಂದರೆ ಕೇವಲ ಚುನಾವಣೆ, ಸರ್ಕಾರ ರಚನೆ, ಆಡಳಿತ ನಡೆಸುವುದಷ್ಟೇ ಅಲ್ಲ, ದನಿ...

ಈ ದಿನ ಸಂಪಾದಕೀಯ | ಗ್ಯಾನೇಶ್ ರಕ್ಷಣೆಗಾಗಿ ಯುವತಿಯರನ್ನು ಪೀಡಿಸುವ ಕೀಚಕರಾಗುತ್ತಿದ್ದಾರೆಯೇ ದೆಹಲಿ ಪೊಲೀಸರು?

ರಕ್ಷಕರೇ ಭಕ್ಷಕರಾಗುವ ಅದೇ ಹಳೆಯ ನಿರಾಶಾಜನಕ ಕತೆಯಿದು. ದೆಹಲಿ ಪ್ರತಿಭಟನೆಯಲ್ಲಿ ಪೊಲೀಸರ...

ಈ ದಿನ ಸಂಪಾದಕೀಯ | ಸಂಸದೀಯ ಸಮಿತಿ ಸಭೆಯಿಂದ ಸುಪ್ರೀಂ ಕೋರ್ಟ್‌ ಹಿಂದೆ ಸರಿದದ್ದು ಸ್ವಾಗತಾರ್ಹ!

ಸಂವಿಧಾನದ 143ನೇ ವಿಧಿಯಡಿ ಸಂಸದೀಯ ಸಮಿತಿಯು ಮಹತ್ವದ ಕಾನೂನು ರೂಪಿಸುವಾಗ, ಸುಪ್ರೀಂ...