ಮೇ 25ರೊಳಗೆ ಅನಧಿಕೃತ ಶಾಲೆಗಳ ಮುಚ್ಚಲು ಸೂಚನೆ

Date:

  • 1,316 ಅನಧಿಕೃತ ಶಾಲೆಗಳ ಪತ್ತೆ ಹಚ್ಚಿರುವ ಶಿಕ್ಷಣ ಇಲಾಖೆ
  • ಅನಧಿಕೃತ ಶಾಲೆಗಳಿಂದ ಮಕ್ಕಳ ಭವಿಷ್ಯಕ್ಕೆ ಕುತ್ತು

ರಾಜ್ಯದಲ್ಲಿ ಅಕ್ರಮವಾಗಿ ತಲೆ ಎತ್ತಿರುವ ಶಾಲೆಗಳನ್ನು ಮೇ 25ರೊಳಗೆ ಮುಚ್ಚಿಸಬೇಕು. ಈ ಕುರಿತು ವರದಿಯನ್ನು ಸಲ್ಲಿಸಬೇಕು ಎಂದು ಶಿಕ್ಷಣ ಇಲಾಖೆಯ ಎಲ್ಲ ಜಿಲ್ಲಾ ಉಪನಿರ್ದೇಶಕರಿಗೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಆದೇಶಿಸಿದ್ದಾರೆ.

ರಾಜ್ಯದಲ್ಲಿ 1,316 ಅನಧಿಕೃತವಾಗಿ ಶಾಲೆಗಳಿವೆ ಎಂದು ಇಲಾಖೆ ಪತ್ತೆ ಹಚ್ಚಿದೆ. “ಹಿಂದಿನ ವರ್ಷದಲ್ಲಿ ಅಂದರೆ 2022-23ರಲ್ಲಿ ಅನಧಿಕೃತ ಶಾಲೆಗಳನ್ನು ಪಟ್ಟಿ ಮಾಡಲಾಗಿದೆ. ಈ ಅನಧಿಕೃತ ಶಾಲೆಗಳ ವಿರುದ್ಧ ಕಠಿಣ ಕ್ರಮವನ್ನು ಕೈಗೊಳ್ಳಬೇಕಾಗಿದೆ. 2023-24ರ ಸಾಲಿನಲ್ಲಿಯೂ ಈ ಅನಧಿಕೃತ ಶಾಲೆಗಳನ್ನು ಮುಂದುವರಿಸಿದರೆ, ಇಂತಹ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಪೂರೈಸುವ ಪ್ರಮಾಣ ಪತ್ರಗಳ ನೈಜತೆಯ ಬಗ್ಗೆ ದೃಢೀಕರಿಸುವುದು ಕಷ್ಟವಾಗುತ್ತದೆ. ಇದು ವಿದ್ಯಾರ್ಥಿಗಳ ಭವಿಷ್ಯದಲ್ಲಿ ತೊಂದರೆಯನ್ನುಂಟು ಮಾಡುತ್ತದೆ” ಎಂದು ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

2023-24ರ ಶೈಕ್ಷಣಿಕ ಸಾಲಿನಲ್ಲಿ ಯಾವುದೇ ಅನಧಿಕೃತ ಶಾಲೆಗಳು ನಡೆಯುವುದು ಕಂಡುಬಂದರೆ ಜಿಲ್ಲಾ ಉಪನಿರ್ದೇಶಕರನ್ನೇ ನೇರ ಹೊಣೆಗಾರರನ್ನಾಗಿ ಮಾಡಿ ಕ್ರಮ ಜರುಗಿಸಲಾಗುವುದು ಎನ್ನಲಾಗಿದೆ. ಶಾಲಾ ನೋಂದಣಿ ಅಥವಾ ಅನುಮತಿಯನ್ನು ಪಡೆಯದೇ ನಡೆಸುತ್ತಿರುವ ಶಾಲೆಗಳು, ನೋಂದಣಿ ಇಲ್ಲದೆ ಉನ್ನತೀಕರಿಸಿದ ತರಗತಿಗಳನ್ನು ನಡೆಸುತ್ತಿರುವ ಶಾಲೆಗಳು, ರಾಜ್ಯಪಠ್ಯಕ್ರಮದಲ್ಲಿ ಬೋಧಿಸಲು ಅನುಮತಿಯನ್ನು ಪಡೆದು, ಅನಧಿಕೃತವಾಗಿ ಕೇಂದ್ರ ಪಠ್ಯಕ್ರಮದಲ್ಲಿ ಬೋಧಿಸುತ್ತಿರುವ ಶಾಲೆಗಳು, ಅನಧಿಕೃತವಾಗಿ ಬೇರೆ ಮಾಧ್ಯಮದಲ್ಲಿ ಬೋಧಿಸುತ್ತಿರುವ ಶಾಲೆಗಳು ಅನಧಿಕೃತ ಶಾಲೆಗಳೆಂದು ಪರಿಗಣಿಸಲಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಕರ್ನಾಟಕ ಖಾಸಗಿ ಶಾಲಾ ಆಡಳಿತ ಮಂಡಳಿ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಸಮನ್ವಯ ಸಮಿತಿ (ಕೆಪಿಎಂಟಿಸಿಸಿ), “ಅನಧಿಕೃತ ಶಾಲೆಯ ಬಗ್ಗೆ ಮಾಹಿತಿ ಬಂದ ಕೂಡಲೇ ಶಿಕ್ಷಣ ಇಲಾಖೆಯು ಈ ಬಗ್ಗೆ ಕ್ರಮ ವಹಿಸಬೇಕು. ಅಕ್ರಮವಾಗಿ ನಿರ್ಮಾಣವಾಗಿರುವ ಶಾಲೆಗಳ ಬಗ್ಗೆ ಶೀಘ್ರವಾಗಿ ಮಾಹಿತಿ ನೀಡಿದರೆ ಪೋಷಕರು ತಮ್ಮ ಮಕ್ಕಳನ್ನು ಮುಂದಿನ ಶೈಕ್ಷಣಿಕ ವರ್ಷದಲ್ಲಿ ಯಾವ ಶಾಲೆಗೆ ಸೇರಿಸಬೇಕೆಂದು ಚಿಂತನೆ ನಡೆಸುತ್ತಾರೆ” ಎಂದು ಶಿಕ್ಷಣ ಇಲಾಖೆಯನ್ನು ಆಗ್ರಹಿಸಿದೆ.

ಈ ಸುದ್ದಿ ಓದಿದ್ದೀರಾ?: ಕೇಂದ್ರೀಕರಣಗೊಳ್ಳುತ್ತಿರುವ ಶಿಕ್ಷಣ; ಮುಂದಿನ ತಲೆಮಾರಿನ ಮಕ್ಕಳ ಶಿಕ್ಷಣ ಅತಂತ್ರ

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಥಮ ಸ್ಥಾನ

ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಫಲಿತಾಂಶ ಬುಧವಾರ...

2024-25ರ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ಮೇ 29ರಿಂದ ಶಾಲೆಗಳು ಆರಂಭ

2024-25ರ ಕರ್ನಾಟಕ ಶಾಲಾ ಶೈಕ್ಷಣಿಕ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆ ಪ್ರಕಟಿಸಿದ್ದು,...

ಏಪ್ರಿಲ್ 3ರಂದೇ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಎಂಬುದು ಸುಳ್ಳು; ಮತ್ತೆ ಯಾವಾಗಾ? ಇಲ್ಲಿದೆ ಮಾಹಿತಿ

ದ್ವಿತೀಯ ಪಿಯುಸಿ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ...