ಕಳೆದ ವರ್ಷ 10ನೇ ತರಗತಿಯಲ್ಲಿ 27 ಲಕ್ಷ ವಿದ್ಯಾರ್ಥಿಗಳು ಅನುತ್ತೀರ್ಣ; ಕೇಂದ್ರ ಶಿಕ್ಷಣ ಸಚಿವಾಲಯ ಮಾಹಿತಿ

Date:

  • ಅನುತ್ತೀರ್ಣರಾದ ವಿದ್ಯಾರ್ಥಿಗಳಲ್ಲಿ 11 ರಾಜ್ಯಗಳ ಪಾಲು ಹೆಚ್ಚಾಗಿದೆ
  • ಕೇರಳದಲ್ಲಿ ಉತ್ತೀರ್ಣರ ಪ್ರಮಾಣ ಶೇ. 99.85 ರಷ್ಟಿದೆ ಎಂದು ಸಚಿವಾಲಯ

2021-2022ನೇ ಸಾಲಿನಲ್ಲಿ 10ನೇ ತರಗತಿಗೆ ದಾಖಲಾದ ಸರಿಸುಮಾರು 35 ಲಕ್ಷ ವಿದ್ಯಾರ್ಥಿಗಳು 11ನೇ ತರಗತಿಗೆ ದಾಖಲಾಗಿಲ್ಲ ಎಂದು ಕೇಂದ್ರ ಶಿಕ್ಷಣ ಸಚಿವಾಲಯ ನಡೆಸಿದ ವಿಶ್ಲೇಷಣಾ ವರದಿ ಮಾಹಿತಿ ನೀಡಿದೆ. ಈ 35 ಲಕ್ಷ ವಿದ್ಯಾರ್ಥಿಗಳ ಪೈಕಿ 27.5 ಲಕ್ಷ ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದು, 7.5 ಲಕ್ಷ ವಿದ್ಯಾರ್ಥಿಗಳು 10ನೇ ತರಗತಿ ಪರೀಕ್ಷೆಗೆ ಹಾಜರಾಗಿಲ್ಲ.

ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ (ಸಿಬಿಎಸ್‌ಸಿ) ಮತ್ತು ಭಾರತೀಯ ಶಾಲಾ ಪ್ರಮಾಣಪತ್ರ ಪರೀಕ್ಷಾ ಮಂಡಳಿ (ಸಿಐಎಸ್‌ಸಿಇ) ಸೇರಿದಂತೆ ಕೇಂದ್ರೀಯ ಪರೀಕ್ಷಾ ಮಂಡಳಿಗಳಲ್ಲಿ ವಿದ್ಯಾರ್ಥಿಗಳ ವೈಫಲ್ಯ ಪ್ರಮಾಣವು ಶೇ 5ಕ್ಕಿಂತ ಕಡಿಮೆಯಿದ್ದರೆ, ಇದು ರಾಜ್ಯ ಮಟ್ಟದ ಪರೀಕ್ಷಾ ಮಂಡಳಿಗಳಲ್ಲಿ ಶೇ. 16 ಕ್ಕಿಂತ ಹೆಚ್ಚಿದೆ.

ಕೇಂದ್ರ ಶಾಲಾ ಶಿಕ್ಷಣ ಸಚಿವಾಲಯದ ಕಾರ್ಯದರ್ಶಿಯಾದ ಸಂಜಯ್ ಕುಮಾರ್, ವಿವಿಧ ಶಾಲಾ ಮಂಡಳಿಗಳಲ್ಲಿ ಬೋಧಿಸುವ ಪಠ್ಯಕ್ರಮದ ಗಮನಾರ್ಹ ವ್ಯತ್ಯಾಸವು ವಿಶೇಷವಾಗಿ ಭೌತಶಾಸ್ತ್ರ, ರಸಾಯನಶಾಸ್ತ್ರ ಹಾಗೂ ಜೀವಶಾಸ್ತ್ರಗಳಿಗೆ ಸಂಬಂಧಿಸಿದೆ. ಇದರಿಂದಾಗಿ ಜಂಟಿ ಪ್ರವೇಶ ಪರೀಕ್ಷೆ (ಜೆಇಇ), ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ, (ಎನ್‌ಇಇಟಿ), ಸಾಮಾನ್ಯ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆ (ಸಿಯುಇಟಿ) ಸೇರಿದಂತೆ ರಾಷ್ಟ್ರೀಯ ಮಟ್ಟದ ಸಾಮಾನ್ಯ ಪರೀಕ್ಷೆಗಳಿಗೆ ಅಡೆತಡೆಗಳನ್ನು ಸೃಷ್ಟಿಸುತ್ತದೆ” ಎನ್ನುತ್ತಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ನೀಟ್‌ ಪರೀಕ್ಷೆಯ ಬಗ್ಗೆ ಕೇಂದ್ರ ಶಿಕ್ಷಣ ಸಚಿವಾಲಯವು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯಿಂದ ಅಂಕಿಅಂಶಗಳನ್ನು ಕೋರಿದೆ ಮತ್ತು ನೀಟ್‌ ಪರೀಕ್ಷೆಯಲ್ಲಿ ಯಾವ ಮಂಡಳಿಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತವೆ ಎಂಬುದನ್ನು ವಿಶ್ಲೇಷಿಸಲು ಸಚಿವಾಲಯ ಬಯಸಿದೆ” ಎಂದು ಕೇಂದ್ರ ಶಾಲಾ ಶಿಕ್ಷಣ ಸಚಿವಾಲಯದ ಕಾರ್ಯದರ್ಶಿಯಾದ ಸಂಜಯ್ ಕುಮಾರ್‌ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕಾನೂನುಬಾಹಿರ ಚಟುವಟಿಕೆ; ಬೆಳ್ಳಂಬೆಳಗ್ಗೆ ಕರ್ನಾಟಕದ 16 ಸ್ಥಳಗಳಲ್ಲಿ ಎನ್‌ಐಎ ದಾಳಿ    

10ನೇ ತರಗತಿ ಪರೀಕ್ಷೆಗಳಲ್ಲಿ ಅನುತ್ತೀರ್ಣರಾದ ಅಥವಾ ಹಾಜರಾಗಲು ಸಾಧ್ಯವಾಗದ 35 ಲಕ್ಷ ವಿದ್ಯಾರ್ಥಿಗಳ ಪೈಕಿ ಕೇವಲ 4.5 ಲಕ್ಷ ವಿದ್ಯಾರ್ಥಿಗಳು ಮಾತ್ರ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ (ಎನ್‌ಐಒಎಸ್‌) ಮೂಲಕ ಪರೀಕ್ಷೆಗೆ ಹಾಜರಾಗಿದ್ದಾರೆ ಮತ್ತು ಅಲ್ಲಿಯೂ ಅವರ ವೈಫಲ್ಯದ ಪ್ರಮಾಣ ಶೇ. 47ರಿಂದ ಶೇ. 55ರ ನಡುವೆ ಇದೆ.

ದೇಶದ 60 ರಾಜ್ಯ ಮಟ್ಟದ ಶೈಕ್ಷಣಿಕ ಮಂಡಳಿಗಳಲ್ಲಿ ಅಧ್ಯಯನ ಮಾಡುವ 10 ಮತ್ತು 12ನೇ ತರಗತಿಗಳ ವಿದ್ಯಾರ್ಥಿಗಳ ಉತ್ತೀರ್ಣ ಮತ್ತು ಅನುತ್ತೀರ್ಣರಾಗುವ ಫಲಿತಾಂಶಗಳು ಒಂದು ರಾಜ್ಯದಿಂದ ಇನ್ನೊಂದಕ್ಕೆ ಗಣನೀಯವಾಗಿ ಬದಲಾಗುತ್ತವೆ. ಅನುತ್ತೀರ್ಣರಾದ ಬಹುತೇಕ ಶಾಲೆಗಳಲ್ಲಿ ಕಳಪೆ ಶೈಕ್ಷಣಿಕ ಗುಣಮಟ್ಟ ಹಾಗೂ ಮೂಲಸೌಕರ್ಯ ಕೊರತೆ ಹೆಚ್ಚಾಗಿದೆ ಎಂದು ಸಂಜಯ್ ಕುಮಾರ್‌ ತಿಳಿಸಿದ್ದಾರೆ.  

10ನೇ ತರಗತಿ ಅನುತ್ತೀರ್ಣ ಹಾಗೂ ಶಾಲಾ ವಂಚಿತರಾದ ಶೇ. 85ರಷ್ಟು ವಿದ್ಯಾರ್ಥಿಗಳು ಬಹುತೇಕ 11 ರಾಜ್ಯದವರಾಗಿದ್ದು, ಅವುಗಳೆಂದರೆ, ಉತ್ತರ ಪ್ರದೇಶ, ಬಿಹಾರ, ಮಧ್ಯಪ್ರದೇಶ, ಗುಜರಾತ್, ತಮಿಳುನಾಡು, ರಾಜಸ್ಥಾನ, ಕರ್ನಾಟಕ, ಅಸ್ಸಾಂ, ಪಶ್ಚಿಮ ಬಂಗಾಳ, ಹರಿಯಾಣ ಮತ್ತು ಛತ್ತೀಸ್‌ಗಢ.

“ಮೇಘಾಲಯದಲ್ಲಿ 10ನೇ ತರಗತಿಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳ ಶೇಕಡಾವಾರು ಶೇ. 57ರಷ್ಟು ಕಡಿಮೆಯಾಗಿದೆ ಎಂದು ವಿಶ್ಲೇಷಣೆ ಬಹಿರಂಗಪಡಿಸುತ್ತದೆ. ಮಧ್ಯಪ್ರದೇಶದಲ್ಲಿ ಶೇ. 61ರಷ್ಟಿದ್ದರೆ, ಜಮ್ಮು ಕಾಶ್ಮೀರದಲ್ಲಿ ಶೇ. 62ರಷ್ಟಿದೆ. ಉದಾಹರಣೆಗೆ, ಪಂಜಾಬ್‌ನಂತಹ ರಾಜ್ಯಗಳಲ್ಲಿ ಉತ್ತೀರ್ಣರಾಗುವ ಪ್ರಮಾಣ ಶೇ. 97.8 ರಷ್ಟಿದೆ. ಕೇರಳದಲ್ಲಿ ಉತ್ತೀರ್ಣರ ಪ್ರಮಾಣ ಶೇ. 99.85 ರಷ್ಟಿದೆ ಎಂದು ಅಂಕಿಅಂಶಗಳಲ್ಲಿ ತಿಳಿಸಲಾಗಿದೆ.

ರಾಜ್ಯ ಶೈಕ್ಷಣಿಕ ಶಾಲಾ ಮಂಡಳಿಗಳು ಕಡಿಮೆ ತರಬೇತಿ ಪಡೆದ ಶಿಕ್ಷಕರನ್ನು ಹೊಂದಿವೆ (12 ಲಕ್ಷ) ಮತ್ತು ಪ್ರತಿ ಶಾಲೆಗೆ ಸರಾಸರಿ 10 ಶಿಕ್ಷಕರಿದ್ದಾರೆ. ಕೇಂದ್ರ ಶಿಕ್ಷಣ ಸಚಿವಾಲಯದ ತಜ್ಞರು ತರಬೇತಿ ವಿಷಯ ಪಡೆದ ಶಿಕ್ಷಕರಿಗೆ ಮತ್ತು ಹೆಚ್ಚಿನ ನೇಮಕಾತಿಗೆ ಕೇಂದ್ರೀಕೃತ ಗಮನವನ್ನು ನೀಡುವಂತೆ ಶಿಫಾರಸು ಮಾಡಿದ್ದಾರೆ. ಇದರ ಜೊತೆ ಶೈಕ್ಷಣಿಕ ಗುಣಮಟ್ಟ ಹಾಗೂ ಮೂಲಸೌಕರ್ಯಕ್ಕೂ ಹೆಚ್ಚಿನ ಗಮನ ನೀಡಬೇಕೆಂದು ಶಿಕ್ಷಣ ಸಚಿವಾಲಯದ ತಜ್ಞರು ಸಲಹೆ ನೀಡಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

’70 ಕೋಟಿ ಭಾರತೀಯರಿಗಿಂತ ಅಧಿಕ ಸಂಪತ್ತು 21 ಬಿಲಿಯನೇರ್‌ಗಳಲ್ಲಿದೆ ಅನ್ನೋದನ್ನ ಮೋದಿ ಹೇಳಲ್ಲ’

ದ್ವೇ‍ಷ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ನೇತೃತ್ವದ...

ʼಈ ದಿನʼ ಸಮೀಕ್ಷೆ | “ನಾ ಖಾವೂಂಗ, ಖಾನೇದೂಂಗ” ಎನ್ನುತ್ತಲೇ ಭ್ರಷ್ಟಾಚಾರ ಮಾಡಿದ ಮೋದಿ ಸರ್ಕಾರ

ಮೋದಿ ಸರ್ಕಾರದ ಅವಧಿಯಲ್ಲಿ ಭ್ರಷ್ಟಾಚಾರ ಕಡಿಮೆಯಾಗಲಿದೆ ಎಂದು ಭಾವಿಸಿ ಮತ ಹಾಕಿದ್ದ...

ದಿನಪತ್ರಿಕೆಯಲ್ಲಿ ಕ್ಷಮಾಪಣೆಯನ್ನು ನಿಮ್ಮ ಜಾಹೀರಾತಿನಷ್ಟು ಗಾತ್ರದಲ್ಲೇ ಪ್ರಕಟಿಸಲಾಗಿದೆಯೇ: ರಾಮ್‌ದೇವ್‌ಗೆ ಸುಪ್ರೀಂ ತರಾಟೆ

ದಾರಿತಪ್ಪಿಸುವ ಜಾಹೀರಾತು ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಿರಂತರವಾಗಿ ಪತಂಜಲಿ ಸಂಸ್ಥಾಪಕರಾದ...

ಸಕ್ಕರೆ ಪ್ರಮಾಣ ಹೆಚ್ಚಳ: ಕೇಜ್ರಿವಾಲ್‌ಗೆ ಇನ್ಸುಲಿನ್ ನೀಡಲಾಗಿದೆ ಎಂದ ತಿಹಾರ್ ಜೈಲಿನ ಅಧಿಕಾರಿ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ರಕ್ತದಲ್ಲಿ ಸಕ್ಕರೆ ಪ್ರಮಾಣ ಅಧಿಕವಾದ...