ರಾಜ್ಯದ 9 ಹೊಸ ವಿಶ್ವವಿದ್ಯಾಲಯಗಳ ಬಾಗಿಲು ಬಂದ್

Date:

Advertisements

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಆರಂಭವಾಗಿದ್ದ 10 ಹೊಸ ವಿಶ್ವವಿದ್ಯಾಲಯಗಳ ಪೈಕಿ 9 ವಿಶ್ವವಿದ್ಯಾಲಯಗಳನ್ನು ಮುಚ್ಚು ರಾಜ್ಯ ಸಚಿವ ಸಂಪುಟ ಉಪಸಮಿತಿ ತೀರ್ಮಾನಿಸಿದೆ. ಹೀಗಾಗಿ, ಹಾಸನ, ಮಂಡ್ಯ, ಚಾಮರಾಜನಗರ, ಕೊಡಗು, ಹಾವೇರಿ, ಕೊಪ್ಪಳ, ಬಾಗಲಕೋಟೆ, ಮಹಾರಾಣಿ ಕ್ಲಸ್ಟರ್ ಮತ್ತು ನೃಪತುಂಗ ವಿಶ್ವವಿದ್ಯಾಲಯಗಳು ಬಂದ್‌ ಆಗುವ ಸಾಧ್ಯತೆ ಇದೆ. ಬೀದರ್ ವಿಶ್ವವಿದ್ಯಾಲಯ ಮಾತ್ರ ಮುಂದುವರೆಯಲಿದೆ.

ಹೊಸ ವಿಶ್ವವಿದ್ಯಾಲಯಗಳನ್ನು ಮುಚ್ಚಲು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅಧ್ಯಕ್ಷತೆಯಲ್ಲಿ ನೇಮಕವಾಗಿದ್ದ ಉಪಸಮಿತಿ ನಿರ್ಧರಿಸಿದೆ. ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ, ಅಧಿಕೃತ ನಿರ್ಣಯ ಕೈಗೊಳ್ಳಲು ಉಪಸಮಿತಿ ತೀರ್ಮಾನಿಸಿದೆ.

ಹೊಸ ವಿಶ್ವವಿದ್ಯಾಲಯಗಳನ್ನು ನಡೆಸಲು ಸರ್ಕಾರವು ಹೆಚ್ಚು ಹಣವನ್ನು ಭರಿಸಬೇಕು. ಪ್ರತಿಯೊಂದು ಹೊಸ ವಿಶ್ವವಿದ್ಯಾಲಯಗಳ ಸ್ಥಾಪನೆ ಮತ್ತು ಕಾರ್ಯಾಚರಣೆಗೆ ಸರಿಸುಮಾರು350 ಕೋಟಿ ರೂ. ಬೇಕಾಗುತ್ತದೆ. ಜೊತೆಗೆ, 100 ರಿಂದ 200 ಎಕರೆ ಭೂಮಿಯ ಅಗತ್ಯವಿದೆ. ಅಷ್ಟು ಪ್ರಮಾಣದ ಹಣ-ಜಮೀನು ಹೊಂದಿಸುವುದು ಸರ್ಕಾರಕ್ಕೆ ಹೊರೆಯಾಗಲಿದೆ. ಜೊತೆಗೆ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳ ನೇಮಕ, ವೇತನ, ಸಲಕರಣೆ, ವಾಹನ, ಪೀಠೋಪಕರಣ ಸೇರಿದಂತೆ ಮೌಲಸೌಕರ್ಯ ಖರೀದಿಯು ಹೊರೆಯಾಗಲಿದೆ ಎಂದು ಉಪಸಮಿತಿ ವರದಿ ಹೇಳಿದೆ.

10 ಹೊಸ ವಿಶ್ವವಿದ್ಯಾಲಯಗಳ ಪೈಕಿ ಬೀದರ್ ವಿಶ್ವವಿದ್ಯಾಲಯ ಮಾತ್ರ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಬೀದರ್ ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ 150 ಕಾಲೇಜುಗಳಿದ್ದು, ಎಲ್ಲ ಸೌಕರ್ಯಗಳೊಂದಿಗೆ ವಿಶ್ವವಿದ್ಯಾಲಯ ಮುನ್ನಡೆಯುತ್ತಿದೆ. ಹೀಗಾಗಿ, ಈ ಒಂದು ವಿಶ್ವವಿದ್ಯಾಲಯವನ್ನು ಮಾತ್ರ ಮುಂದುವರೆಸಲು ಉಪಸಮಿತಿ ಚಿಂತಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ರಾಜ್ಯ ಸರ್ಕಾರ ನಕ್ಸಲ್‌ ಪೀಡಿತ ಪ್ರದೇಶಗಳ ಅಭಿವೃದ್ಧಿಗೆ 7 ಕೋಟಿ 12ಲಕ್ಷ ಬಿಡುಗಡೆ

ಕರ್ನಾಟಕ ರಾಜ್ಯದಲ್ಲಿ ನಕ್ಸಲರು ಶರಣಾದಾಗ ನಕ್ಸಲ್ ಮುಕ್ತ ರಾಜ್ಯ ಎಂದು ಬಿರುದು...

ಸಮಸಮಾಜವನ್ನು ಬಯಸದವರು ಸಮೀಕ್ಷೆ ವಿರೋಧಿಸುತ್ತಿದ್ದಾರೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಜನರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಯಾವ ಜಾತಿಯವರನ್ನು ತುಳಿಯುವ...

ವೀರಶೈವ-ಲಿಂಗಾಯತರು ಕೆಟ್ಟರೆ ರಾಜ್ಯವೇ ಕೆಡುತ್ತದೆ: ಸಚಿವ ಈಶ್ವರ ಖಂಡ್ರೆ

ವೀರಶೈವ -ಲಿಂಗಾಯತರನ್ನು ಬೇರೆ ಮಾಡಲು ಯಾವುದೇ ಶಕ್ತಿಗೂ ಸಾಧ್ಯವಿಲ್ಲ. ಇಬ್ಬರೂ ಒಂದೇ...

ಕಾಫ್‌ ಸಿರಪ್ ದುರಂತ | ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ: ದಿನೇಶ್‌ ಗುಂಡೂರಾವ್‌

ದೇಶದ ಬೇರೆ ರಾಜ್ಯಗಳಲ್ಲಿ ಕಾಫ್‌ ಸಿರಪ್ ದುರಂತ ಸಂಭವಿಸಿದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ...

Download Eedina App Android / iOS

X