ನೀಟ್ ರದ್ದು ಮಾಡಿ – ರಾಜ್ಯಗಳಿಗೆ ಶಿಕ್ಷಣದ ಸಂಪೂರ್ಣ ಅಧಿಕಾರ ಕೊಡಿ: ಸಿಜೆಪಿ ಹೋರಾಟದ ನಡುವೆ ಟಿವಿಕೆ ಆಗ್ರಹ

Date:

‘ವೈದ್ಯಕೀಯ ಪ್ರವೇಶಕ್ಕಾಗಿ ನಡೆಸುವ ರಾಷ್ಟ್ರೀಯ ಮಟ್ಟದ ಪರೀಕ್ಷೆ ‘ನೀಟ್‌’ಅನ್ನು ರದ್ದುಗೊಳಿಸಲೇಬೇಕು. ಶಿಕ್ಷಣದ ಸಂಪೂರ್ಣ ಅಧಿಕಾರವನ್ನು ರಾಜ್ಯಗಳಿಗೆ ನೀಡಬೇಕು ಎಂದು ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರ ಟಿವಿಕೆ ಪಕ್ಷ ಒತ್ತಾಯಿಸಿದೆ.

- Advertisement -

ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಸಿಜೆಪಿ ಹೋರಾಟಗಳು ತೀವ್ರಗೊಂಡಿರುವ ನಡುವೆ, ನೀಟ್ ವಿರುದ್ಧ ಟಿವಿಕೆ ಕೂಡ ದನಿಗೂಡಿಸಿದೆ. “ನೀಟ್‌ನಲ್ಲಿ ನಡೆದಿರುವ ಅಕ್ರಮಗಳನ್ನು ಮಾತ್ರ ವಿರೋಧಿಸುವುದಲ್ಲ, ವೈದ್ಯಕೀಯ ಪ್ರವೇಶಕ್ಕಾಗಿ ನಡೆಸಲಾಗುತ್ತಿರುವ ‘ನೀಟ್’ ಪರೀಕ್ಷೆಯನ್ನೇ ಸಂಪೂರ್ಣವಾಗಿ ರದ್ದುಗೊಳಿಸಬೇಕು. ರಾಜ್ಯಗಳಿಗೆ ತಮ್ಮದೇ ವೈದ್ಯಕೀಯ ಪ್ರವೇಶ ವ್ಯವಸ್ಥೆಯನ್ನು ರೂಪಿಸುವ ಅವಕಾಶ ಇರಬೇಕು” ಎಂದು ಆಗ್ರಹಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಮಲೀಲೆಗಳಲ್ಲಿ ರಾಮ, ಹನುಮ, ಲಕ್ಷ್ಮಣ ಪಾತ್ರಗಳಲ್ಲಿ ದಾನಿಶ್ –...

ರಾಮನಾಗಿ ದಾನಿಶ್. ಹನುಮಂತನಾಗಿ ಯೂನುಸ್. ಲಕ್ಷ್ಮಣನಾಗಿ ಶೇರ್ ಖಾನ್. ರಾವಣನಾಗಿ ಇಕ್ಬಾಲ್ ಅಹ್ಮದ್. ಇವರೆಲ್ಲರೂ ಮುಸ್ಲಿಂ ಕಲಾವಿದರು. ಆದರೆ, ಇವರು ಅಭಿನಯಿಸಿರುವುದು ಹಿಂದುಗಳ ಮಹಾಕಾವ್ಯ ರಾಮಾಯಣದ ಪಾತ್ರಗಳಲ್ಲಿ. ಉತ್ತರ ಭಾರತದ ಹಲವು ರಾಮಲೀಲೆಗಳಲ್ಲಿ...

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಮಂಗಳವಾರ ಟಿವಿಕೆ ತನ್ನ ಹೇಳಿಕೆಯನ್ನು ಪ್ರಕಟಿಸಿದೆ. “ವೈದ್ಯಕೀಯ ಶಿಕ್ಷಣ ಸೇರಿದಂತೆ ಶಿಕ್ಷಣ ಕ್ಷೇತ್ರದ ಸಂಪೂರ್ಣ ಅಧಿಕಾರವನ್ನು ರಾಜ್ಯ ಸರ್ಕಾರಗಳಿಗೆ ನೀಡಬೇಕು. ಶಿಕ್ಷಣವನ್ನು ಮರಳಿ ರಾಜ್ಯ ಪಟ್ಟಿಗೆ ವರ್ಗಾಯಿಸುವ ಮೂಲಕ ರಾಜ್ಯಗಳಿಗೆ ಸ್ವತಂತ್ರವಾಗಿ ಶಿಕ್ಷಣ ನೀತಿಗಳನ್ನು ರೂಪಿಸುವ ಅಧಿಕಾರ ನೀಡಬೇಕು” ಎಂದು ಒತ್ತಾಯಿಸಿದೆ.

“ಶಿಕ್ಷಣವನ್ನು ರಾಜ್ಯ ಪಟ್ಟಿಗೆ ವರ್ಗಾಯಿಸಲು ಕಾನೂನು ಅಥವಾ ಸಾಂವಿಧಾನಿಕ ಅಡೆತಡೆಗಳಿದ್ದರೆ, ಮಧ್ಯಂತರ ಕ್ರಮವಾಗಿ ವಿಶೇಷ ಸಮವರ್ತಿ ಪಟ್ಟಿಯನ್ನು ರಚಿಸಿ, ವೈದ್ಯಕೀಯ ಶಿಕ್ಷಣ ಸೇರಿದಂತೆ ಶಿಕ್ಷಣಕ್ಕೆ ಸಂಬಂಧಿಸಿದ ಅಧಿಕಾರವನ್ನು ರಾಜ್ಯ ಸರ್ಕಾರಗಳಿಗೆ ನೀಡಬೇಕು. ಇದರಿಂದ ರಾಜ್ಯಗಳು ತಮ್ಮ ಅಗತ್ಯಗಳಿಗೆ ಅನುಗುಣವಾಗಿ ಶಿಕ್ಷಣ ವ್ಯವಸ್ಥೆಯನ್ನು ರೂಪಿಸಬಹುದು. ಇದು ಕೇವಲ ತಾತ್ಕಾಲಿಕ ಪರಿಹಾರವಲ್ಲ; ಶಿಕ್ಷಣ ಕ್ಷೇತ್ರದಲ್ಲಿ ಶಾಶ್ವತ ಬದಲಾವಣೆ ತರಲು ಅಗತ್ಯವಾದ ನೀತಿಯಾಗಿದೆ” ಎಂದು ಟಿವಿಕೆ ಹೇಳಿದೆ.  

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾಲ್ಕಿ | ಖಟಕ್ ಚಿಂಚೋಳಿಯಲ್ಲಿ ಧಮ್ಮಚಕ್ರ ಪ್ರವರ್ತನ ದಿನಾಚರಣೆ

ಭಾಲ್ಕಿ ತಾಲ್ಲೂಕಿನ ಖಟಕ್ ಚಿಂಚೋಳಿ ಗ್ರಾಮದಲ್ಲಿ 70ನೇ ಧಮ್ಮಚಕ್ರ ಪ್ರವರ್ತನ ದಿನ...

ದಸರಾ ಹಬ್ಬದಂದು 500ಕ್ಕೂ ಹೆಚ್ಚು ಶಸ್ತ್ರಾಸ್ತ್ರಗಳ ಪ್ರದರ್ಶಿಸಿದ ಉತ್ತರ ಪ್ರದೇಶದ ಶಾಸಕ

ಉತ್ತರ ಪ್ರದೇಶದ ಕುಂದಾ ಕ್ಷೇತ್ರದ 'ಜನಸತ್ತಾ ದಳ (ಲೋಕತಾಂತ್ರಿಕ)' ಪಕ್ಷದ ಪ್ರಭಾವಿ...

ಸಿಜೆಪಿಗೆ ಅಣ್ಣಾಮಲೈ ಬೆಂಬಲ: ‘ಬಂಧನವು ಅವರನ್ನು ಮತ್ತಷ್ಟು ಬಲಶಾಲಿಗಳನ್ನಾಗಿಸುತ್ತದೆ’ ಎಂದ ನಾಯಕ

ಚುನಾವಣಾ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ಅಕ್ರಮಗಳು ನಡೆದಿವೆ ಎಂದು...