1ನೇ ತರಗತಿ ಸೇರ್ಪಡೆಗೆ 5 ವರ್ಷ 5 ತಿಂಗಳು, ವಯೋಮಿತಿ ಸಡಿಲ: ಶಿಕ್ಷಣ ಸಚಿವ ಘೋಷಣೆ

Date:

ಕರ್ನಾಟಕದಲ್ಲಿ 1ನೇ ತರಗತಿಗೆ ಮಕ್ಕಳ ಸೇರ್ಪಡೆಗೆ ಇರುವ ವಯೋಮಿತಿಯನ್ನು ರಾಜ್ಯ ಸರ್ಕಾರ ಸಡಿಲಗೊಳಿಸಿದೆ. ಮಕ್ಕಳಿಗೆ 5 ವರ್ಷ 5 ತಿಂಗಳು ಆಗಿದ್ದರೂ ಅವರು ಶಾಲೆಗೆ ದಾಖಲಾಗಲು ಅವಕಾಶ ನೀಡಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ.

- Advertisement -

ಈ ಹಿಂದೆ, ಮಕ್ಕಳು 1ನೇ ತರಗತಿಗೆ ದಾಖಲಾಗಲು ಕಡ್ಡಾಯವಾಗಿ 6 ವರ್ಷದ ವಯೋಮಿತಿಯನ್ನು ಪೂರೈಸಿರಬೇಕಿತ್ತು. ಆದರೆ, ಇದೀಗ, ವಯೋಮಿತಿಯ ಮಾನದಂಡವನ್ನು ಸಡಿಲಿಸಲಾಗಿದೆ. 5 ವರ್ಷ 5 ತಿಂಗಳು ವಯೋಮಾನವನ್ನು ಪೂರೈಸಿದ್ದ ಮಕ್ಕಳು 1ನೇ ತರಗತಿಗೆ ದಾಖಲಾಗಬಹುದಾಗಿದೆ. ಆದಾಗ್ಯೂ, ಸಂಪೂರ್ಣ ಆರು ವರ್ಷ ಪೂರೈಸಿರದ ಮಕ್ಕಳು 1ನೇ ತರಗತಿಗೆ ದಾಖಲಾಗಲು ಅವರು ಯುಕೆಜಿ ಕಲಿತಿರಬೇಕು ಎಂದು ಮಧು ಬಂಗಾರಪ್ಪ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಎಲ್​ಕೆಜಿ, ಯುಕೆಜಿಯಲ್ಲಿ ಕಲಿತಿದ್ದರೆ ಮಾತ್ರವೇ 5 ವರ್ಷ 5 ತಿಂಗಳು ಆಸುಪಾಸಿನ ಮಕ್ಕಳಿಗೆ 1ನೇ ತರಗತಿಗೆ ಪ್ರವೇಶ ನೀಡಲಾಗುತ್ತದೆ. ಪೋಷಕರ ಒತ್ತಾಯದ ಮೇರೆಗೆ ಈ ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ. ವಯೋಮಿತಿ ಸಡಿಲಿಕೆಯು ಈ ವರ್ಷಕ್ಕೆ ಮಾತ್ರವೇ ಅನ್ವಯವಾಗುತ್ತದೆ” ಎಂದು ಸ್ಪಷ್ಟಪಡಿಸಿದ್ದಾರೆ.

ಈ ಹಿಂದೆ, 2022ರಲ್ಲಿ 1ನೇ ತರಗತಿಗೆ ಪ್ರವೇಶ ಪಡೆಯಲು ಮಕ್ಕಳು ಕಡ್ಡಾಯವಾಗಿ 6 ವರ್ಷ ಪೂರೈಸಿರಬೇಕು ಎಂದು ಕರ್ನಾಟಕ ಶಿಕ್ಷಣ ಇಲಾಖೆ ಆದೇಶಿಸಿತ್ತು. ಈ ಆದೇಶವು 2023–24ನೇ ಸಾಲಿನಲ್ಲಿಯೇ ಜಾರಿಗೆ ಬರಬೇಕಿತ್ತು. ಆದರೆ, ಪೋಷಕರಿಂದ ವ್ಯಾಪಕ ಆಕ್ಷೇಪ ವ್ಯಕ್ತವಾಗಿದ್ದರಿಂದ ನಿಯಮ ಜಾರಿಗೆ ಬಂದಿರಲಿಲ್ಲ. ಇದೀಗ, ವಯೋಮಿತಿ ಸಡಿಲಿಕೆ ಮಾಡಲಾಗಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ (2025-26) 2022ರ ಆದೇಶವು ಜಾರಿಗೆ ಬರಲಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

26 ಬಾರಿ ಸೋತರೂ ಕುಗ್ಗದ ಛಲ; 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕ ಹುದ್ದೆ ಪಡೆದ ವೃದ್ಧ

ಸರಿಯಾದ ಪ್ರಯತ್ನ ಮತ್ತು ಛಲವಿದ್ದರೆ ವಯಸ್ಸು ಕೇವಲ ಒಂದು ಸಂಖ್ಯೆಯಷ್ಟೇ ಎಂಬುದನ್ನು...

ಮೋದಿ ಜನ್ಮದಿನದ ನಾಟಕದಲ್ಲಿ ಅಭಿನಯಿಸಲು ನಕಾರ; ವಿದ್ಯಾರ್ಥಿಗೆ ‘ಅಂಕ ಕಡಿತ’ದ ಬೆದರಿಕೆ

ಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿರುವ ನಾಟಕದಲ್ಲಿ ಅಭಿನಯಿಸಲು ನಿರಾಕರಿಸಿದ ವಿದ್ಯಾರ್ಥಿಗಳಿಗೆ...

ಸೌಜನ್ಯ ಪ್ರಕರಣದ ಮರುತನಿಖೆಗೆ ಐಜಿಪಿ ಶಶಿಕುಮಾರ್ ನೇತೃತ್ವದಲ್ಲಿ SIT ರಚನೆ

'ಸೌಜನ್ಯ ಪ್ರಕರಣ'ದ ಮರುತನಿಖೆ ನಡೆಸುವಂತೆ ಸುಪ್ರೀಂಕೋರ್ಟ್ ನೀಡಿದ ನಿರ್ದೇಶನದ ಬೆನ್ನಲ್ಲೇ, ರಾಜ್ಯ...