ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯ ಫಲಿತಾಂಶ ಪ್ರಕಟ: 6,675 ಮಂದಿ ಅರ್ಹತೆ

Date:

Advertisements

ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯ (KSET) ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪ್ರಕಟಿಸಿದ್ದು, 6,675 ಮಂದಿ ಅರ್ಹತೆ ಪಡೆದಿದ್ದಾರೆ.

ಕಲಾ, ವಿಜ್ಞಾನ, ವಾಣಿಜ್ಯ ವಿಭಾಗದ 41 ವಿಷಯಗಳಿಗೆ ಜನವರಿ 13ರಂದು ಪರೀಕ್ಷೆ ನಡೆಸಲಾಗಿತ್ತು. ಈ ಪರೀಕ್ಷೆಯಲ್ಲಿ 6,675 ಮಂದಿ ಅರ್ಹತೆ ಪಡೆದಿರುವುದಾಗಿ ಕೆಇಎ ತಿಳಿಸಿದೆ.

ಒಟ್ಟು 1,17,303 ಮಂದಿ ನೋಂದಾಯಿಸಿಕೊಂಡು, 95,201 ಮಂದಿ ಪರೀಕ್ಷೆಗೆ ಹಾಜರಾಗಿದ್ದರು. ಅವರ ಪೈಕಿ 6,675 ಮಂದಿ ಅರ್ಹತೆ ಪಡೆದಿದ್ದಾರೆ. ಇವರಲ್ಲಿ ಪುರಷರು 3,398, ಮಹಿಳೆಯರು 3,180 ಹಾಗೂ 97 ಮಂದಿ ಲೈಂಗಿಕ ಅಲ್ಪಸಂಖ್ಯಾತರು(ತೃತೀಯ ಲಿಂಗಿ) ಇದ್ದಾರೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಮಾಹಿತಿ ನೀಡಿದೆ. ಈ ಬಗ್ಗೆ ವಿವರಗಳಿಗಾಗಿ ಅಭ್ಯರ್ಥಿಗಳು KEA ವೆಬ್‌ಸೈಟ್‌ಗೆ ಭೇಟಿ ನೀಡಿ, ಪರಿಶೀಲಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದೆ.

Advertisements
ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸರ್ಕಾರಿ ಶಾಲೆ ಮುಚ್ಚುವಿಕೆ ವಿರೋಧಿಸಿ ಎಐಡಿಎಸ್‍ಒ 50 ಲಕ್ಷ ಸಹಿ ಸಂಗ್ರಹ; ಮುಖ್ಯಮಂತ್ರಿಗಳಿಗೆ ಸಲ್ಲಿಕೆ

ಕರ್ನಾಟಕ ರಾಜ್ಯ ಸರ್ಕಾರವು 6,200 ಸರ್ಕಾರಿ ಶಾಲೆಗಳನ್ನು "ವಿಲೀನ"ಗೊಳಿಸುವ ಹೆಸರಿನಲ್ಲಿ ಮುಚ್ಚಲು...

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

ದಾವಣಗೆರೆ | ಭಾರತದ ಗ್ರಂಥಾಲಯ ಪಿತಾಮಹ ರಂಗನಾಥ್ ಜನ್ಮದಿನ; ವಿವಿಯಲ್ಲಿ ಗ್ರಂಥಾಲಯ ಕಾರ್ಯಾಗಾರ

ಭಾರತದ ಗ್ರಂಥಾಲಯ ಪಿತಾಮಹ ಡಾ.ಎಸ್.ಆರ್. ರಂಗನಾಥನ್ ಅವರ 133ನೇ ಜನ್ಮದಿನದ ಅಂಗವಾಗಿ...

Download Eedina App Android / iOS

X