ಸಿಬಿಎಸ್‌ಇ ಫಲಿತಾಂಶ: ಎರಡನೇ ಸ್ಥಾನ ಪಡೆದ ಸಿಲಿಕಾನ್ ಸಿಟಿ

Date:

ಕೇಂದ್ರಿಯ ಪ್ರೌಢಶಿಕ್ಷಣ ಮಂಡಳಿ (ಸಿಬಿಎಸ್‌ಇ)ಯ ದ್ವಿತೀಯ ಪಿಯುಸಿ ಮತ್ತು ಎಸ್ಸೆಸ್ಸೆಲ್ಸಿ ಫಲಿತಾಂಶ ಶುಕ್ರವಾರ ಬಿಡುಗಡೆಯಾಗಿದ್ದು, ಬೆಂಗಳೂರು ದೇಶದಲ್ಲೇ ಎರಡನೇ ಸ್ಥಾನ ಪಡೆದಿದೆ.   

ಸಿಬಿಎಸ್‌ಇ ಪರೀಕ್ಷೆಯಲ್ಲಿ ಹೆಚ್ಚಿನ ಫಲಿತಾಂಶ ಪಡೆದ 16 ನಗರಗಳ ಪೈಕಿ ಕೇರಳದ ತಿರುವನಂತಪುರಂ ಮೊದಲ ಸ್ಥಾನದಲ್ಲಿದೆ. ಕರ್ನಾಟಕದ ಬೆಂಗಳೂರು ನಂತರದ ಸ್ಥಾನದಲ್ಲಿದೆ.

ಸಿಬಿಎಸ್‌ಸಿ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಶೇ.93.12ರಷ್ಟು ಹಾಗೂ ದ್ವಿತಿಯ ಪಿಯುಸಿಯಲ್ಲಿ ಶೇ.87.33ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಬೆಂಗಳೂರಿನಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ಶೇ.99.18 ಬಂದಿದ್ದು, ದ್ವಿತೀಯ ಪಿಯುಸಿ ಫಲಿತಾಂಶ ಶೇ.98.64 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಹತ್ತನೇ ತರಗತಿಯ ರಾಜ್ಯವಾರು ಸಾಧನೆಯಲ್ಲಿ ಕರ್ನಾಟಕ ಆರನೇ ಸ್ಥಾನ ಪಡೆದುಕೊಂಡಿದೆ. ಈ ಪರೀಕ್ಷೆಗೆ ರಾಜ್ಯದ ಹಾಜರಾದ 74,842 ವಿದ್ಯಾರ್ಥಿಗಳಲ್ಲಿ 74,230 ಮಂದಿ ಪಾಸಾಗಿದ್ದಾರೆ. ಹತ್ತನೇ ತರಗತಿ ಫಲಿತಾಂಶದಲ್ಲಿ ರಾಜ್ಯ ಮೂರನೇ ಸ್ಥಾನ ಪಡೆದಿದೆ. 10 ನೇ ತರಗತಿಯಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.

ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾದ 19,468 ವಿದ್ಯಾರ್ಥಿಗಳಲ್ಲಿ 19,203 ಮಂದಿ ಉತ್ತೀರ್ಣರಾಗಿದ್ದಾರೆ. ಶೇ. 94.2 ರಷ್ಟು ಉತ್ತೀರ್ಣರಾಗಿದ್ದಾರೆ. ಬಾಲಕಿಯರು ಶೇ 92.2ರಷ್ಟಿದೆ ಉತ್ತೀರ್ಣರಾಗಿದ್ದಾರೆ. ಈ ವರ್ಷ ದೇಶಾದ್ಯಂತ ಒಟ್ಟಾರೆ ಉತ್ತೀರ್ಣ ಶೇಕಡಾವಾರು 87.3 ಆಗಿದೆ.

“ಕಳೆದ ಎರಡು ವರ್ಷಗಳ ಹಿಂದೆ ಕೋವಿಡ್ ಉಲ್ಬಣಗೊಂಡಿದ್ದ ಕಾರಣ ಪ್ರಸಕ್ತ ವರ್ಷ ದ್ವಿತೀಯ ಪರೀಕ್ಷೆ ಎದುರಿಸಿದ ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆ ಎದುರಿಸಿರಲಿಲ್ಲ. ಹೀಗಾಗಿ, ಕಳೆದ ವರ್ಷಕ್ಕೆ ಹೋಲಿಸಿಕೊಂಡರೆ ಈ ಬಾರಿಯ ಫಲಿತಾಂಶ ಕೆಳಗಾಗಿದೆ. ಆದರೂ. ಶೇ.80 ಕ್ಕೂ ಹೆಚ್ಚು ಫಲಿತಾಂಶ ಗಳಿಸಿರುವುದು ಉತ್ತಮ ಪ್ರದರ್ಶನ ಎಂದು ಸಿಬಿಎಸ್‌ಸಿಯಿಂದ ಮಾನ್ಯತೆ ಪಡೆದಿರುವ ಶಾಲೆಗಳ ಪ್ರಾಂಶುಪಾಲರು ಸಂತಸ ವ್ಯಕ್ತಪಡಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಮ್ಮ ಮೆಟ್ರೋ | ‘ಚಾಲಕ ರಹಿತ ರೈಲು’ ಸಂಚಾರಕ್ಕೆ ಶೀಘ್ರದಲ್ಲೇ ಸಿಗ್ನಲಿಂಗ್ ಟೆಸ್ಟ್

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೊದಲ ಬಾರಿಗೆ ಚಾಲಕ ರಹಿತ ರೈಲು ಶೀಘ್ರದಲ್ಲಿಯೇ...

ಬೆಂಗಳೂರು | ಕೊಲೆ ಆರೋಪ; ನಟ ದರ್ಶನ್, ಪವಿತ್ರ ಗೌಡ ಸೇರಿದಂತೆ ಇತರೆ ಆರೋಪಿಗಳು 5 ದಿನ ಪೋಲೀಸ್ ವಶಕ್ಕೆ

ಬೆಂಗಳೂರಿನ ರಾಜರಾಜೇಶ್ವರಿ ನಗರದ ಪಟ್ಟಣಗೆರೆಯ ಶೆಡ್ ಒಂದರಲ್ಲಿ ನಡೆದ ಚಿತ್ರದುರ್ಗದ ರೇಣುಕಾಸ್ವಾಮಿ...

ನಟ ದರ್ಶನ್ ಬಂಧನ | ಸಾಮಾಜಿಕ ಜಾಲತಾಣ, ನಾಗರಿಕ ಸಮಾಜ ಮತ್ತು ಕಾನೂನು ವೈಫಲ್ಯ

ಸದ್ಯ ರಾಜ್ಯದಲ್ಲಿ ನಟ ದರ್ಶನ್ ಅವರ ಬಂಧನ ಸುದ್ದಿಯಲ್ಲಿದೆ. ತಮ್ಮ ಆಪ್ತೆ...

ಆದೇಶ ಪಾಲಿಸದ ಕಲ್ಯಾಣ ಮಂಡಳಿ; ಹೈಕೋರ್ಟ್‌ ಅಸಮಾಧಾನ

ಬಡ ಕಟ್ಟಡ ಕಾರ್ಮಿಕ‌ರ ಮಕ್ಕಳಿಗೆ‌ ಧನಸಹಾಯ ನೀಡಲು ಹೈಕೋರ್ಟ್ ನೀಡಿದ್ದ ‌ಮಧ್ಯಂತರ...