CBSE ಡಿಜಿಟಲ್ ಮೌಲ್ಯಮಾಪನ ದೋಷ: ವಿದ್ಯಾರ್ಥಿಗಳ ಆತಂಕಕ್ಕೆ ಸುಪ್ರೀಂ ಕೋರ್ಟ್ ಕಳವಳ

Date:

CBSEಯ ಆನ್-ಸ್ಕ್ರೀನ್ ಮಾರ್ಕಿಂಗ್ (OSM) ಡಿಜಿಟಲ್ ಮೌಲ್ಯಮಾಪನ ವ್ಯವಸ್ಥೆಯಲ್ಲಿನ ದೋಷಗಳ ವಿರುದ್ಧ ವಿದ್ಯಾರ್ಥಿಗಳಲ್ಲಿ ಉಂಟಾಗಿರುವ ತೀವ್ರ ಆತಂಕ ಮತ್ತು ನಿರಾಶೆಯ ಬಗ್ಗೆ ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿದೆ. ಈ ವ್ಯವಸ್ಥೆಯಲ್ಲಿನ ಲೋಪದೋಷಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ನ್ಯಾಯಾಲಯಕ್ಕೆ ಸೂಕ್ತ ನೆರವು ನೀಡುವಂತೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ ಸೂಚಿಸಿದೆ.

- Advertisement -

ಸಿಬಿಎಸ್‌ಐಯಲ್ಲಿನ ಒಎಸ್‌ಎಂ ವ್ಯವಸ್ಥೆಯನ್ನು ಪ್ರಶ್ನಿಸಿ ರಾಕೇಶ್ ಬಿಂಜೋಲಾ ಎಂಬುವವರು ಅರ್ಜಿ ಸಲ್ಲಿಸಿದ್ದರು. ಅವರ ಅರ್ಜಿಯನ್ನು ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿಗಳಾದ ಜಾಯ್‌ಮಲ್ಯ ಬಾಗ್ಚಿ ಮತ್ತು ವಿ. ಮೋಹನಾ ಅವರನ್ನೊಳಗೊಂಡ ಪೀಠವು ವಿಚಾರಣೆ ನಡೆಸಿದೆ. “ಚಿಕ್ಕ ಮಕ್ಕಳಲ್ಲಿ ಮೂಡಿರುವ ನಿರಾಶೆ ಮತ್ತು ಆತಂಕದ ಪ್ರಮಾಣವನ್ನು ಒಮ್ಮೆ ಗಮನಿಸಿ. ಅವರನ್ನು ಡಿಜಿಟಲ್ ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ವ್ಯವಸ್ಥಿತವಾದ ದೋಷಗಳು ನಿರಂತರವಾಗಿ ಕಾಡುತ್ತಿದೆ” ಎಂದು ಪೀಠ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

“ನಾವು ಈ ಪ್ರಕರಣದಲ್ಲಿ ನಿಮ್ಮ (ಸಾಲಿಸಿಟರ್ ಜನರಲ್) ಸಹಾಯವನ್ನು ಕೋರುತ್ತಿದ್ದೇವೆ. ಇದನ್ನು ಯಾರದ್ದೋ ವಿರುದ್ಧದ ಹೋರಾಟ ಎಂದು ಭಾವಿಸಬೇಕಾಗಿಲ್ಲ. ಆದರೆ, ಈ ವ್ಯವಸ್ಥೆಯಲ್ಲಿ ಗಂಭೀರ ಲೋಪದೋಷಗಳಂತೂ ಇವೆ” ಎಂದು ನ್ಯಾಯಮೂರ್ತಿ ಬಾಗ್ಚಿ ಅವರು ಹೇಳಿದ್ದಾರೆ.

ಸರ್ಕಾರದ ಪರವಾಗಿ ಹಾಜರಾಗಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, “ವೈಯಕ್ತಿಕ ಅಂಕಪಟ್ಟಿಗಳಲ್ಲಿನ ವ್ಯತ್ಯಾಸಗಳ ಸಮಸ್ಯೆಗಳನ್ನು ಈಗಾಗಲೇ ಬಹುತೇಕ ಪರಿಹರಿಸಲಾಗಿದೆ. ಆದರೆ, ವ್ಯವಸ್ಥಿತ ದೋಷಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ” ಎಂದು ಹೇಳಿದ್ದಾರೆ.

“ಈ ಡಿಜಿಟಲ್ ಮೌಲ್ಯಮಾಪನ ವ್ಯವಸ್ಥೆಯನ್ನು ಪರಿಶೀಲಿಸಲು ಮತ್ತು ಅಗತ್ಯ ಸುಧಾರಣೆಗಳನ್ನು ಶಿಫಾರಸು ಮಾಡಲು ಕೇಂದ್ರ ಸರ್ಕಾರವು ಎಸ್. ರಾಧಾ ಚೌಹಾಣ್ ಅವರ ನೇತೃತ್ವದಲ್ಲಿ ಏಕಸದಸ್ಯ ಆಯೋಗವನ್ನು ರಚಿಸಿದೆ” ಎಂದು ಅವರು ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದಾರೆ.

ಅರ್ಜಿದಾರ ರಾಕೇಶ್‌ ಅವರು, “ಸಿಬಿಎಸ್‌ಇ ಬೋರ್ಡ್ ಪರೀಕ್ಷೆಗಳನ್ನು ಒಎಸ್ಎಂ ವ್ಯವಸ್ಥೆಯ ಮೂಲಕ ನಡೆಸಲು ಕೇಂದ್ರ ಮತ್ತು ಸಿಬಿಎಸ್‌ಇ ಮಂಡಳಿಗೆ ಸೂಕ್ತ ನಿಯಮಾವಳಿಗಳನ್ನು ರೂಪಿಸಲು ನಿರ್ದೇಶನ ನೀಡಬೇಕು. ಈ ವ್ಯವಸ್ಥೆಯನ್ನು ಜಾರಿಗೆ ತರಲು ಮತ್ತು ಮೇಲ್ವಿಚಾರಣೆ ನಡೆಸಲು ಉನ್ನತ ಮಟ್ಟದ ಸಮಿತಿಯನ್ನು ರಚಿಸಬೇಕು. ಅಂಕಗಳ ಸಮಸ್ಯೆಯಿಂದಾಗಿ ತೊಂದರೆಗೊಳಗಾಗಿರುವ ಹಾಗೂ ಈಗಾಗಲೇ ತಾತ್ಕಾಲಿಕ ಪ್ರವೇಶಾತಿ ಪಡೆದುಕೊಂಡಿರುವ ವಿದ್ಯಾರ್ಥಿಗಳಿಗೆ ಕನಿಷ್ಠ ಅರ್ಹತಾ ಅಂಕಗಳಲ್ಲಿ ಸಡಿಲಿಕೆ ನೀಡುವಂತೆ ಎಸ್‌ಬಿಎಸ್‌ಇಗೆ ನಿರ್ದೇಶನ ನೀಡಬೇಕು” ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.

ಸಿಬಿಎಸ್‌ಇ ಮತ್ತು ಕೇಂದ್ರ ಸರ್ಕಾರ ಕೈಗೊಳ್ಳುತ್ತಿರುವ ಕ್ರಮಗಳ ಕುರಿತು ಮುಂದಿನ ವಾರದೊಳಗೆ ಸಂಪೂರ್ಣ ವಿವರ ನೀಡುವಂತೆ ಸಾಲಿಸಿಟರ್ ಜನರಲ್‌ ಅವರಿಗೆ ಸುಪ್ರೀಂ ಕೋರ್ಟ್‌ ಸೂಚಿಸಿದೆ. ವಿಚಾರಣೆಯನ್ನು ಮುಂದಿನ ವಾರಕ್ಕೆ ಮುಂದೂಡಿದೆ.

ಆನ್-ಸ್ಕ್ರೀನ್ ಮಾರ್ಕಿಂಗ್ (OSM) ಎಂಬುದು ಸಿಬಿಎಸ್‌ಇಯ ಡಿಜಿಟಲ್ ಗ್ರೇಡಿಂಗ್ ವಿಧಾನವಾಗಿದೆ. ಇದರಲ್ಲಿ ಶಿಕ್ಷಕರು ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳನ್ನು ಭೌತಿಕವಾಗಿ ತಿದ್ದುವ ಬದಲಾಗಿ, ಸ್ಕ್ಯಾನ್ ಮಾಡಲಾದ ಉತ್ತರ ಪತ್ರಿಕೆಗಳ ಡಿಜಿಟಲ್ ಪ್ರತಿಗಳನ್ನು ಕಂಪ್ಯೂಟರ್ ಪರದೆಯ ಮೇಲೆ ನೋಡಿ ಮೌಲ್ಯಮಾಪನ ಮಾಡುತ್ತಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | SIR ರದ್ದತಿ ಆಗ್ರಹಿಸಿ ಸಿಪಿಐ(ಎಂ)ನಿಂದ ಮೇಣದಬತ್ತಿ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ...

ಸಿದ್ದರಾಮಯ್ಯ ‘ಸ್ಟಿಂಗ್’ ವಿವಾದದ ಅಸಲಿ ವೃತ್ತಾಂತವೇನು? ‘ಸತ್ಯಕ್ಕೇ ಜಯ’ ಎಂದು ಮಾಜಿ ಸಿಎಂ ಹೇಳಿದ್ದೇಕೆ?

ಕರ್ನಾಟಕ ರಾಜಕಾರಣದಲ್ಲಿ ಇದೀಗ ‘ಸ್ಟಿಂಗ್ ಆಪರೇಷನ್’ ಹೆಸರಿನಲ್ಲಿ ಹೊಸ ವಿವಾದ ಭುಗಿಲೆದ್ದಿದೆ....

ಐಡಿಬಿಐ ಬ್ಯಾಂಕ್ ಮಾರಾಟಕ್ಕೆ ಕೇಂದ್ರ ಸಂಪುಟ ಅಸ್ತು: ₹52,878 ಕೋಟಿಗೆ ಫೇರ್‌ಫ್ಯಾಕ್ಸ್ ತೆಕ್ಕೆಗೆ

ಐಡಿಬಿಐ (IDBI) ಬ್ಯಾಂಕ್‌ನ ‘ಕಾರ್ಯತಂತ್ರದ ಪುನರ್‌ರಚನೆ’ಗೆ (Strategic Restructuring) ಕೇಂದ್ರ ಸಚಿವ...