ಬಿಎಸ್ಸಿ ನರ್ಸಿಂಗ್ ಶಿಕ್ಷಣಕ್ಕೆ ಸಿಇಟಿ ಕಡ್ಡಾಯ

Date:

  • ಹೆಚ್ಚು ಪ್ರವೇಶ ಶುಲ್ಕ ವಸೂಲಿಗೆ ಕಡಿವಾಣ
  • ಕೆಇಎ’ಯಿಂದ ಏ.14 ರಿಂದ ಅರ್ಜಿ ಪ್ರಕ್ರಿಯೆ ಆರಂಭ

ಮುಂದಿನ ದಿನಗಳಲ್ಲಿ ನರ್ಸಿಂಗ್ ಶಿಕ್ಷಣ ಪಡೆಯಬೇಕೆಂದು ಇಚ್ಚಿಸುವವರು ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಕಡ್ಡಾಯವಾಗಿ ಬರೆಯಲೇಬೇಕೆಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಹೇಳಿದೆ

ಈ ಹಿಂದೆ ಬಿಎಸ್ಸಿ ಕೋರ್ಸ್‌ಗಳಿಗೆ ಯಾವುದೇ ಪ್ರವೇಶ ಪರೀಕ್ಷೆಯಿಲ್ಲದೆ ಕೆಇಎ ಮೂಲಕ ನರ್ಸಿಂಗ್ ಸೀಟುಗಳನ್ನು ಹಂಚಿಕೆ ಮಾಡಲಾಗುತ್ತಿತ್ತು. ಕೆಇಎ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್‌ ಅರ್ಜಿಯನ್ನು ಕರೆಯಲಾಗುತ್ತಿತ್ತು. ದ್ವಿತೀಯ ಪಿಯು ಅಂಕಗಳ ಆಧಾರದ ಮೇಲೆ ಸರ್ಕಾರಿ ಕೋಟಾದ ಶೇ.20ರಷ್ಟು ಸೀಟುಗಳನ್ನು ಹಂಚಿಕೆ ಮಾಡಲಾಗುತ್ತಿತ್ತು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ಎಸ್.ಎಸ್ ಮಾಹಿತಿ ನೀಡಿದ್ದಾರೆ.

ಪ್ರಸಕ್ತ ವರ್ಷದಿಂದ ನರ್ಸಿಂಗ್ ಪದವಿ ಪಡೆಯಲು ಇಚ್ಛಿಸುವವರು ಸಿಇಟಿ ಎದುರಿಸಬೇಕಾಗಿದೆ. ಈ ಕುರಿತು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅಧಿಸೂಚನೆಯನ್ನು ಪ್ರಕಟಸಲಿದ್ದು, ಸಿಇಟಿ-2023ಕ್ಕೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಏಪ್ರಿಲ್ 14 ರಿಂದ ಮೂರು ದಿನಗಳವರೆಗೆ ಅವಕಾಶ ನೀಡಲಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ?: ಒಂದು ನಿಮಿಷದ ಓದು | ಏ.25ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ?

ಸಿಇಟಿ ಪರೀಕ್ಷೆ ನಂತರ ಕೌನ್ಸೆಲಿಂಗ್ ಮತ್ತಿತ್ತರ ಕ್ರಮಗಳು ಇರುತ್ತದೆ. ಈ ವರ್ಷದಿಂದ ಕೋರ್ಸ್‌ಗೆ ಸರ್ಕಾರಿ ಮತ್ತು ಮ್ಯಾನೇಜ್‌ಮೆಂಟ್ ಕೋಟಾ ಎರಡು ಇವೆ. ಇದೇ ಮೊದಲ ಬಾರಿಗೆ ನರ್ಸಿಂಗ್‌ ಶಿಕ್ಷಣದಲ್ಲಿ ಇನ್ನಷ್ಟು ಗುಣಮಟ್ಟ ತರಲು ಕೆಸಿಇಟಿ ನಡೆಸಲು ನಿರ್ಧರಿಸಲಾಗಿದೆ.

ಮ್ಯಾನೆಜ್ ಮೆಂಟ್ ಸೀಟುಗಳಿಗಾಗಿ ವಿದ್ಯಾರ್ಥಿಗಳ ಬಳಿ ಶಿಕ್ಷಣ ಸಂಸ್ಥೆಗಳು ಹೆಚ್ಚು ಹಣ ವಸೂಲಿ ಮಾಡಿಕೊಳ್ಳುತ್ತವೆ. ಇವೆಲ್ಲದಕ್ಕೂ ಕಡಿವಾಣ ಹಾಕುವ ನಿಟ್ಟಿನಲ್ಲಿ, ಬಿಎಸ್ಸಿಗೆ ಸಿಇಟಿ ಕಡ್ಡಾಯ ಮಾಡಲಾಗಿದೆ. ರಾಜ್ಯದಲ್ಲಿ ಒಟ್ಟು 498 ನೋಂದಾಯಿತ ನರ್ಸಿಂಗ್ ಕಾಲೇಜುಗಳು ಸುಮಾರು 35,000 ಸೀಟುಗಳನ್ನು ನೀಡುತ್ತಿವೆ. ಈ ಹಿಂದೆ ಕೆಇಎ ಒಟ್ಟು 7,332 ಸರ್ಕಾರಿ ಕೋಟಾ ಸೀಟುಗಳನ್ನು ಭರ್ತಿ ಮಾಡಿತ್ತು. ಉಳಿದ ಸೀಟುಗಳನ್ನು ನರ್ಸಿಂಗ್ ಸಂಸ್ಥೆಗಳು ಮ್ಯಾನೇಜ್‌ಮೆಂಟ್ ಕೋಟಾ ಸೀಟುಗಳಾಗಿ ಭರ್ತಿ ಮಾಡಿತ್ತು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಥಮ ಸ್ಥಾನ

ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಫಲಿತಾಂಶ ಬುಧವಾರ...

2024-25ರ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ಮೇ 29ರಿಂದ ಶಾಲೆಗಳು ಆರಂಭ

2024-25ರ ಕರ್ನಾಟಕ ಶಾಲಾ ಶೈಕ್ಷಣಿಕ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆ ಪ್ರಕಟಿಸಿದ್ದು,...

ಏಪ್ರಿಲ್ 3ರಂದೇ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಎಂಬುದು ಸುಳ್ಳು; ಮತ್ತೆ ಯಾವಾಗಾ? ಇಲ್ಲಿದೆ ಮಾಹಿತಿ

ದ್ವಿತೀಯ ಪಿಯುಸಿ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ...