ಪ್ರಮಾಣವಚನ ಹಿನ್ನೆಲೆ | ಸಿಇಟಿ ಅಭ್ಯರ್ಥಿಗಳಿಗೆ ಮಾರ್ಗಸೂಚಿ ಬಿಡುಗಡೆ

Date:

ಸಿಇಟಿ ಇರುವ ದಿನವೇ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕಾರ ಇರುವುದರಿಂದ ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳು ಸಂಚಾರ ದಟ್ಟಣೆಯಲ್ಲಿ ಸಿಲುಕದಿರಲು ಬೆಂಗಳೂರು ಸಂಚಾರ ಪೊಲೀಸ್ ವಿಭಾಗದ ವಿಶೇಷ ಆಯುಕ್ತ ಡಾ.ಎಂ ಎ ಸಲೀಂ ಸೂಚನೆ ಹೊರಡಿಸಿದ್ದಾರೆ.

ಪರೀಕ್ಷಾ ಕೇಂದ್ರಗಳಿಗೆ ತೆರಳುವವರು ಕಂಠೀರವ ಸ್ಟೇಡಿಯಂ ಸಮೀಪವಿರುವ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗುವ ವಿದ್ಯಾರ್ಥಿಗಳು ಬೆಳಗ್ಗೆ 8.30ರ ಒಳಗಾಗಿ ಕೇಂದ್ರಗಳಿಗೆ ತಲುಪುವಂತೆ ಸೂಚನೆ ನೀಡಲಾಗಿದೆ. ಪ್ರತ್ಯೇಕವಾಗಿ ಬಿಷಪ್ ಕಾಟನ್ ಮಹಿಳಾ ಪದವಿಪೂರ್ವ ಕಾಲೇಜು, ಗುಡ್ ವಿಲ್ ಬಾಲಕಿಯರ ಪದವಿಪೂರ್ವ ಕಾಲೇಜು, ಸೆಂಟ್ ಜೋಸೆಫ್ಸ್ ಪದವಿಪೂರ್ವ ಕಾಲೇಜಿನಲ್ಲಿ ಸಿಇಟಿ ಬರೆಯುವವರು ಬೆಳಗ್ಗೆ 8.30ಕ್ಕೆ ಬರಲು ಸೂಚನೆ ನೀಡಲಾಗಿದೆ.

ಪರೀಕ್ಷಾ ಕೇಂದ್ರಕ್ಕೆ ತಲುಪುವಲ್ಲಿ ಸಂಕಷ್ಟ ಎದುರಿಸುತ್ತಿರುವ ಯಾವುದೇ ವಿದ್ಯಾರ್ಥಿಗೆ ಸಂಚಾರ ಸಂಬಂಧಿತ ಸಹಾಯ ಬೇಕಿದ್ದಲ್ಲಿ, ರಸ್ತೆಯಲ್ಲಿ ಕರ್ತವ್ಯನಿರತ ಸಂಚಾರ ಪೊಲೀಸರನ್ನು ಸಂಪರ್ಕಿಸಲು ಕೋರಲಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಮಧ್ಯಾಹ್ನದ ಸಿಇಟಿ ಪರೀಕ್ಷೆಗೆ ಸೆಂಟ್ ಜೋಸೆಫ್ ಪಿಯು ಇಂಡಿಯನ್ ಕಾಲೇಜು, ಕೇಂದ್ರಕ್ಕೆ ಬರುವ ವಿದ್ಯಾರ್ಥಿಗಳು ಸೆಂಟ್ ಮಾರ್ಕ್ಸ್ ರಸ್ತೆ, ವಿಠಲ್ ಮಲ್ಯ ರಸ್ತೆ ಮೂಲಕ ಬಂದು ಯೂಬಿ ಸಿಟಿಯ ಮುಂಭಾಗದ ಗೇಟ್‌ನಿಂದ ಕಾಲೇಜಿಗೆ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ.

ಸೆಂಟ್ ಜೋಸೆಫ್ ಪರೀಕ್ಷಾ ಕೇಂದ್ರಕ್ಕೆ ಬರುವ ವಿದ್ಯಾರ್ಥಿಗಳಿಗೆ ಅಗತ್ಯ ಊಟೋಪಚಾರ ಏರ್ಪಡಿಸಲಾಗುತ್ತದೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮತ್ತು ಸೆಂಟ್ ಜೋಸೆಫ್ ಪಿಯು ಕಾಲೇಜಿನ ಅಧಿಕಾರಿಗಳು ಹೇಳಿದ್ದಾರೆ.

ನಗರದ ಯಾವುದಾದರೂ ರಸ್ತೆಯಲ್ಲಿ ವಾಹನ ಕೆಟ್ಟು ನಿಂತಲ್ಲಿ ಅಥವಾ ಅಪಘಾತ ಸಂಭವಿಸಿದಲ್ಲಿ ಗಮನಿಸಿದ ಕೂಡಲೇ ಸಂಚಾರ ನಿಯಂತ್ರಣ ಕೋಣೆ ದೂರವಾಣಿ ಸಂಖ್ಯೆ-080-22943131 ಅಥವಾ 080-22943030 ಗೆ ಕರೆ ಮಾಡಿ ಮಾಹಿತಿ ನೀಡಬಹುದು ಎನ್ನಲಾಗಿದೆ.

ಮುಂಜಾಗ್ರತಾ ಕ್ರಮವಾಗಿ ಮೇ 20 ಮತ್ತು 21ರಂದು ಎರಡು ದಿನಗಳ ಕಾಲ ಸಿಇಟಿ ಪರೀಕ್ಷೆ ನಡೆಯುವ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿ ಮಾಡಿ ಎಂದು ಡಾ.ಎಂ ಎ ಸಲೀಂ ಆದೇಶ ಹೊರಡಿಸಿದ್ದಾರೆ. ಆದೇಶದಲ್ಲಿರುವಂತೆ, ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿಗಳು ಸಹ ತೆರೆಯುವಂತೆ ಇಲ್ಲ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಬಿಜೆಪಿ ಶ್ರೀಮಂತರ ಓಲೈಕೆ ರಾಜಕಾರಣ ಮಾಡುತ್ತಿದೆ: ಕಿಮ್ಮ‌ನೆ ರತ್ನಾಕರ

ಬಿಜೆಪಿಯಿಂದ ಶ್ರೀಮಂತರ ಓಲೈಕೆಯ ರಾಜಕಾರಣ ನಡೆಯುತ್ತಿದೆ‌. ಅದನ್ನು ತಡೆಯಬೇಕಿದೆ ಎಂದು ಮಾಜಿ...

ಬೆಂಗಳೂರು | ಬರೋಬ್ಬರಿ ₹67.5 ಕೋಟಿಗೆ ಸೇಲ್ ಆದ ಕೋರಮಂಗಲದ ನಿವೇಶನ

ರಾಜ್ಯ ರಾಜಧಾನಿ ಬೆಂಗಳೂರು ಅಭಿವೃದ್ಧಿ ಹೊಂದುತ್ತಿರುವ ನಗರ. ನಗರದಲ್ಲಿ ಒಂದು ಸ್ವಂತ...

ತುಮಕೂರು | ‘ದಲಿತರ ಸಂವಿಧಾನ’ ಎಂದು ವಿವಾದ ಸೃಷ್ಟಿಸಿದ ಬಿಜೆಪಿ ಶಾಸಕ ಬಿ ಸುರೇಶ್ ಗೌಡ

ಲೋಕಸಭಾ ಚುನಾವಣೆಯಲ್ಲಿ ಸಂವಿಧಾನ ಬದಲಾವಣೆ ವಿಷಯ ಮಹತ್ವ ಪಡೆದುಕೊಂಡಿದೆ. ಸಂವಿಧಾನ ಬದಲಿಸುತ್ತೇವೆ...

ಬೆಂಗಳೂರು | ಗೋವಾ ಕನ್ನಡಿಗರ ಮೇಲೆ ದೌರ್ಜನ್ಯ; ನ್ಯಾಯಕ್ಕಾಗಿ ರಾಷ್ಟ್ರಪತಿಗೆ ಕರವೇ ಮನವಿ

ಗೋವಾ ಕನ್ನಡಿಗರ ರಕ್ಷಣೆಗೆ ರಾಷ್ಟ್ರಪತಿಯರು ಮಧ್ಯೆ ಪ್ರವೇಶಿಸಿ ನ್ಯಾಯ ನೀಡಬೇಕು ಎಂದು...