ಪಠ್ಯದಲ್ಲಿ ಡಾರ್ವಿನ್‌ ಸಿದ್ಧಾಂತ ನಾಪತ್ತೆ; ಫ್ಯಾಸಿಸಂ ಜಾರಿ ತರುವ ಹುನ್ನಾರ

Date:

‘ಹಿಂದುತ್ವ’ವಾದಿಗಳು ‘ಫ್ಯಾಸಿಸಂ’ ಜಾರಿ ತರುವ ನೆಪದಲ್ಲಿ ಎನ್‌ಸಿಇಆರ್‌ಟಿ ಪಠ್ಯ ಕ್ರಮದಲ್ಲಿದ್ದ ಡಾರ್ವಿನ್‌ ಸಿದ್ಧಾಂತ ಕುರಿತ ಪಾಠ ಕೈ ಬಿಡಲಾಗಿದೆ. ಇದು ಬಿಜೆಪಿ ಸರ್ಕಾರದ ನಿರಂಕುಶ ಸರ್ವಾಧಿಕಾರಿ ನಡೆ ಎಂದು ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಕೂಡೆಂಟ್ ಆರ್ಗನೈಸೇಷನ್ (ಎಐಡಿಎಸ್‌ಒ) ಹೇಳಿದೆ.

ಶಾಲಾ ಪಠ್ಯಗಳ ಹೊರೆ ಕಡಿಮೆ ಮಾಡುವ ನೆಪದಲ್ಲಿ 9ನೇ ಮತ್ತು 10ನೇ ತರಗತಿಗಳ ವಿಜ್ಞಾನ ಪಠ್ಯಪುಸ್ತಕಗಳಿಂದ ಮಾನವ ವಿಕಾಸ ಸಿದ್ಧಾಂತ ತೆಗೆದು ಹಾಕಿರುವ ಎನ್‌ಸಿಇಆರ್‌ಟಿ ಕ್ರಮವನ್ನು ಖಂಡಿಸಬೇಕು ಎಂದು ಎಐಡಿಎಸ್‌ಒ ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್ ಹೇಳಿದ್ದಾರೆ.

“ಪಿಯುಸಿಗೆ ಬಂದಾಗ ವಿದ್ಯಾರ್ಥಿಯೂ ವಿಜ್ಞಾನ ವಿಭಾಗ ಆಯ್ಕೆ ಮಾಡಿದರೆ ಮಾತ್ರ ವಿಕಾಸ ಸಿದ್ಧಾಂತವನ್ನು ಓದಬಹುದಾಗಿದೆ. ಇದು ವಿದ್ಯಾರ್ಥಿಗಳ ಮುಂದಿನ ಭವಿಷ್ಯದ ಮೇಲೆ ಅಪಾಯಕಾರಿ ಪರಿಣಾಮ ಬೀಳುತ್ತದೆ. ಧಾರ್ಮಿಕ ನಂಬಿಕೆಗಳ ಸುತ್ತ ಹುಟ್ಟಿಕೊಂಡಿದ್ದ ಹಲವು ಗೊಂದಲಗಳಿಗೆ ಉತ್ತರ ನೀಡವ ಡಾರ್ವಿನ್‌ ಸಿದ್ಧಾಂತವನ್ನೇ ತೆಗೆದು ಹಾಕಿರುವುದು ಸರಿಯಾದ ಕ್ರಮವಲ್ಲ. ವಿದ್ಯಾರ್ಥಿಗಳಲ್ಲಿ ತಾರ್ಕಿಕ ಚಿಂತನೆ ಹಾಗೂ ವೈಜ್ಞಾನಿಕ ಮನೋಭಾವ ಬೆಳೆಸಲು ಇದು ಮಹತ್ವಪೂರ್ಣ ಸಿದ್ಧಾಂತ” ಎಂದು ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಸ್ವಾತಂತ್ರ್ಯ ಸಂಗ್ರಾಮ, ಸಾಂಸ್ಕೃತಿಕ ಪರಂಪರೆ ಹಾಗೂ ವೈವಿದ್ಯತೆ ಸೇರಿದಂತೆ ಮುಂತಾದವುಗಳ ಬಗ್ಗೆ ಮಾಹಿತಿ ಒದಗಿಸುತ್ತಿದ್ದ ಪಾಠಗಳನ್ನು ಕೈಬಿಡಲಾಗಿದೆ. ‘ಪ್ರಜಾತಂತ್ರ ಮತ್ತು ವೈವಿಧ್ಯತೆ’,’ಪ್ರಜಾತಂತ್ರದ ಸವಾಲುಗಳು’,’ಮೊಘಲ್ ಆಳ್ವಿಕರು ಮತ್ತುಅವರ ಆಳ್ವಿಕೆ’, ‘ವಸಾಹತುಶಾಹಿ ನಗರಗಳು’ಮತ್ತು’ಭಾರತದ ವಿಭಜನೆ’ಯಂತಹ ಅನೇಕ ಮಹತ್ವಪೂರ್ಣ ಅಧ್ಯಾಯಗಳನ್ನು ಕೈಬಿಡಲಾಗಿದೆ. ದೇಶವನ್ನು ಉಳಿಸಲು, ಶಿಕ್ಷಣದ ಮೇಲಿನ ಈ ದಾಳಿಯನ್ನು ವಿರೋಧಿಸಬೇಕು” ಎಂದು ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್ ಕರೆ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಒಂದು ನಿಮಿಷದ ಓದು | ಎಸ್ಸೆಸ್ಸೆಲ್ಸಿ ಮೌಲ್ಯಮಾಪಕರ ಸಂಭಾವನೆ ಹೆಚ್ಚಳ

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಥಮ ಸ್ಥಾನ

ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಫಲಿತಾಂಶ ಬುಧವಾರ...

2024-25ರ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ಮೇ 29ರಿಂದ ಶಾಲೆಗಳು ಆರಂಭ

2024-25ರ ಕರ್ನಾಟಕ ಶಾಲಾ ಶೈಕ್ಷಣಿಕ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆ ಪ್ರಕಟಿಸಿದ್ದು,...

ಏಪ್ರಿಲ್ 3ರಂದೇ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಎಂಬುದು ಸುಳ್ಳು; ಮತ್ತೆ ಯಾವಾಗಾ? ಇಲ್ಲಿದೆ ಮಾಹಿತಿ

ದ್ವಿತೀಯ ಪಿಯುಸಿ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ...