ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪಿಎಚ್‌ಡಿ ಫೆಲೋಶಿಪ್‌: ಆಸಕ್ತರಿಂದ ಅರ್ಜಿ ಆಹ್ವಾನ

Date:

Advertisements

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2024-25ನೇ ಸಾಲಿನಲ್ಲಿ ಕರ್ನಾಟಕದ ವಿಶ್ವವಿದ್ಯಾಲಯಗಳ ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿಎಚ್‌ಡಿ ಅಧ್ಯಯನ ಪ್ರಾರಂಭಿಸಿರುವ ಹಿಂದುಳಿದ ವರ್ಗಗಳ ಅರ್ಹ ಹೊಸ ಅಭ್ಯರ್ಥಿಗಳಿಂದ ಮಾಸಿಕ ವ್ಯಾಸಂಗ ವೇತನ/ಫೆಲೋಶಿಪ್‌ಗಾಗಿ ಅರ್ಜಿ ಆಹ್ವಾನಿಸಲಾಗಿದೆ.

2024-25ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿಎಚ್.ಡಿ ಅಧ್ಯಯನ ಪ್ರಾರಂಭಿಸಿರುವ (ದಿನಾಂಕ:10.01.2024 ಮತ್ತು ಅದರ ನಂತರ ಪ್ರಥಮ ವರ್ಷದ ಪಿಎಚ್.ಡಿ ಪ್ರಾರಂಭಿಸಿರಬೇಕು) ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, II(ಎ), III(ಎ) ಹಾಗೂ III(ಬಿ) ಗೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಮಾಸಿಕ ವ್ಯಾಸಂಗ ವೇತನ/ಫೆಲೋಶಿಪ್ ಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಕರ್ನಾಟಕದ ಶಾಸನಬದ್ಧ ವಿಶ್ವ ವಿದ್ಯಾಲಯಗಳಲ್ಲಿ/ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪಿಎಚ್.ಡಿ ಅಧ್ಯಯನ ಮಾಡುತ್ತಿರುವ ಹೊಸ ಅಭ್ಯರ್ಥಿಗಳು ಮಾತ್ರ ಆಫ್-ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

Advertisements
WhatsApp Image 2025 02 04 at 5.27.56 PM

ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು 10-02-2025 ರ ಸಂಜೆ 5.30 ಗಂಟೆವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ವಿವರಗಳು ಇಲಾಖಾ ವೆಬ್-ಸೈಟ್ https://bcwd.karnataka.gov.in ನಲ್ಲಿ ಲಭ್ಯವಿದ್ದು, ಅಭ್ಯರ್ಥಿಗಳು ಎಲ್ಲಾ ಮಾಹಿತಿಯನ್ನು ಓದಿ, ತಿಳಿದುಕೊಂಡು ನಂತರ ಅರ್ಜಿ ಸಲ್ಲಿಸಬೇಕು. 2024-25 ರ ಅರ್ಥಿಕ ವರ್ಷವು ಮುಕ್ತಾಯಗೊಳ್ಳುತ್ತಿರುವ ಕಾರಣ ವಿಸ್ತರಿಸಲಾಗುವುದಿಲ್ಲ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಯುಕ್ತರಾದ ಅಕ್ರಂ ಪಾಷಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಬಂಟ್ವಾಳ | ಆತ್ಮರಕ್ಷಣೆಯ ರಿವಾಲ್ವರ್‌ನಿಂದ ಮಿಸ್‌ಫೈರ್: ಜಿಲ್ಲಾ ಕಾಂಗ್ರೆಸ್‌ ಮುಖಂಡನಿಗೆ ಗಾಯ, ಆಸ್ಪತ್ರೆಗೆ ದಾಖಲು

ಮುಖ್ಯ ಅರ್ಹತೆ ಮತ್ತು ಸೂಚನೆಗಳು:

  1. ಅಭ್ಯರ್ಥಿಯು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು.
  2. ಹಿಂದುಳಿದ ವರ್ಗಗಳ ಪ್ರವರ್ಗ-1, II(ಎ), III(ಎ) ಅಥವಾ III(ಬಿ)ಗೆ ಸೇರಿರಬೇಕು.
  3. ಅಭ್ಯರ್ಥಿ ಮತ್ತು ಕುಟುಂಬದ ಒಟ್ಟು ವಾರ್ಷಿಕ ಆದಾಯ ಮಿತಿಯು ಪ್ರವರ್ಗ 1ಕ್ಕೆ 4.50 ಲಕ್ಷ, ಪ್ರವರ್ಗ II(2), III(ಎ) III(ಬಿ)ಯವರಿಗೆ 3.50 ಲಕ್ಷದ ಒಳಗಿರಬೇಕು.
  4. ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ ಶೇ.55 ಅಂಕಗಳನ್ನು ಪಡೆದಿರಬೇಕು.
  5. ಅಭ್ಯರ್ಥಿಗಳು ಪೂರ್ಣಾವಧಿ ಪಿಎಚ್.ಡಿ ಅಧ್ಯಯನಕ್ಕಾಗಿ ಮಾಡಿಸುವ ನೋಂದಣಿ ದಿನಾಂಕವು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನೀಡುವ ವ್ಯಾಸಂಗ ವೇತನ/ಫೆಲೋಶಿಪ್‌ಗಾಗಿ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕಕ್ಕೆ ಹಿಂದಿನ 2 ವರ್ಷದೊಳಗಿದ್ದು, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಸಾಲಿನಿಂದ ಪ್ರಥಮ ವರ್ಷದ ಪಿಎಚ್.ಡಿ ಅಧ್ಯಯನದಲ್ಲಿ ತೊಡಗಿರಬೇಕು.

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 8050770004 ಯನ್ನು ಸಂಪರ್ಕಿಸಬಹುದೆಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸರ್ಕಾರಿ ಶಾಲೆ ಮುಚ್ಚುವಿಕೆ ವಿರೋಧಿಸಿ ಎಐಡಿಎಸ್‍ಒ 50 ಲಕ್ಷ ಸಹಿ ಸಂಗ್ರಹ; ಮುಖ್ಯಮಂತ್ರಿಗಳಿಗೆ ಸಲ್ಲಿಕೆ

ಕರ್ನಾಟಕ ರಾಜ್ಯ ಸರ್ಕಾರವು 6,200 ಸರ್ಕಾರಿ ಶಾಲೆಗಳನ್ನು "ವಿಲೀನ"ಗೊಳಿಸುವ ಹೆಸರಿನಲ್ಲಿ ಮುಚ್ಚಲು...

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

ದಾವಣಗೆರೆ | ಭಾರತದ ಗ್ರಂಥಾಲಯ ಪಿತಾಮಹ ರಂಗನಾಥ್ ಜನ್ಮದಿನ; ವಿವಿಯಲ್ಲಿ ಗ್ರಂಥಾಲಯ ಕಾರ್ಯಾಗಾರ

ಭಾರತದ ಗ್ರಂಥಾಲಯ ಪಿತಾಮಹ ಡಾ.ಎಸ್.ಆರ್. ರಂಗನಾಥನ್ ಅವರ 133ನೇ ಜನ್ಮದಿನದ ಅಂಗವಾಗಿ...

Download Eedina App Android / iOS

X