ಶಾಲಾ ವಾಹನಗಳಲ್ಲಿ ಮಹಿಳಾ ಸಹಾಯಕಿಯರನ್ನು ನೇಮಿಸಿಕೊಳ್ಳುವಂತೆ ಶಿಕ್ಷಣ ಇಲಾಖೆ ಸೂಚನೆ

Date:

ಮಕ್ಕಳ ರಕ್ಷಣೆಗಾಗಿ ಆದ್ಯತೆ ಮೇರೆಗೆ ಶಾಲಾ ಮುಖ್ಯಸ್ಥರು ಮತ್ತು ಆಡಳಿತ ಮಂಡಳಿಗಳು ಕ್ರಮವಹಿಸಬೇಕು. ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಬಸ್‌, ಕ್ಯಾಬ್‌, ವ್ಯಾನ್‌ನಂತಹ ಶಾಲಾ ವಾಹನಗಳಲ್ಲಿ ಮಹಿಳಾ ಸಹಾಯಕಿಯರನ್ನೇ ನೇಮಿಸಿಕೊಳ್ಳಬೇಕು. ಜತೆಗೆ, ಶಾಲಾ ಮಕ್ಕಳನ್ನು ಕರೆತರುವ ಎಲ್ಲ ಬಗೆಯ ವಾಹನಗಳ ಚಾಲಕರು ಎರಡು ವರ್ಷಗಳಿಗೊಮ್ಮೆ ಪೊಲೀಸರಿಂದ ಪಡೆದ ಸನ್ನಡತೆಯ ಪ್ರಮಾಣಪತ್ರ ಸಲ್ಲಿಸುವುದು ಕಡ್ಡಾಯಗೊಳಿಸಲಾಗಿದೆ ಎಂದು ಶಿಕ್ಷಣ ಇಲಾಖೆ ಸೂಚಿಸಿದೆ.

- Advertisement -

ಈ ಬಗ್ಗೆ ಸುತ್ತೋಲೆ ಹೊರಡಿಸಿರುವ ಇಲಾಖೆ ಆಯುಕ್ತೆ ಬಿ.ಬಿ.ಕಾವೇರಿ, “ಶಾಲಾ ವಾಹನಗಳಲ್ಲಿ ಕಾರ್ಯನಿರ್ವಹಿಸುವ ಚಾಲಕರು ಮತ್ತು ವಾಹನಗಳ ಸಹಾಯಕರು ಪೊಲೀಸ್ ವೆರಿಫಿಕೇಷನ್ ಮಾಡಿಸುವಂತೆ ಎಲ್ಲ ಶಾಲಾ ಆಡಳಿತ ಮಂಡಳಿಗಳು ಕ್ರಮವಹಿಸಬೇಕು” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಈ ಸುದ್ದಿ ಓದಿದ್ದೀರಾ? ಮುಂದಿನ 2 ದಿನ ರಾಜ್ಯದ ಬಹುತೇಕ ಕಡೆ ಭಾರೀ ಮಳೆ ಸಾಧ್ಯತೆ : ಹವಾಮಾನ ಇಲಾಖೆ

  • ಹಾಗೆಯೇ, ಕರ್ನಾಟಕ ಮೋಟಾರು ವಾಹನಗಳ 1989 ನಿಯಮದಂತೆ ವಾಹನಗಳಲ್ಲಿ ಮಕ್ಕಳ ಮೇಲೆ ನಡೆಯುವ ದೌರ್ಜನ್ಯ ತಡೆಯಲು ‘ಶಾಲಾ ವಾಹನ ಸುರಕ್ಷತಾ ಸಮಿತಿ’ ರಚಿಸಬೇಕು
  • ಶಾಲಾ ವಾಹನಗಳಲ್ಲಿ ಮಕ್ಕಳನ್ನು ಮನೆಯಿಂದ ಶಾಲೆಗೆ ಹಾಗೂ ಶಾಲೆಯಿಂದ ಮನೆಗೆ ಕರೆತರುವ ಸಂದರ್ಭದಲ್ಲಿ ಖಾಸಗಿ ಶಾಲಾ ವಾಹನಗಳಲ್ಲಿ ಚಾಲಕರಿಂದ ಮತ್ತು ವಾಹನಗಳ ಸಹಾಯಕರಿಂದ ಮಕ್ಕಳ ಮೇಲೆ ದೌರ್ಜನ್ಯ ಎಸಗುತ್ತಿರುವಂತಹ ಪ್ರಕರಣಗಳು ವರದಿಯಾಗುತ್ತಿವೆ. ಈ ಹಿನ್ನೆಲೆ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಬಸ್, ವ್ಯಾನ್, ಆಟೋ ರಿಕ್ಷಾ ಮತ್ತು ಇತರೆ ಶಾಲಾ ವಾಹನಗಳಲ್ಲಿ ಕಾರ್ಯನಿರ್ವಹಿಸುತ್ತಿರುವಂತಹ ಎಲ್ಲ ಚಾಲಕರ ಮತ್ತು ಸಹಾಯಕರ ಮಾನಸಿಕ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಸಂಬಂಧಿಸಿದ ಪೊಲೀಸ್ ಠಾಣೆಗಳಿಂದ ಅವರ ನಡತೆಯ ಬಗ್ಗೆ ನಡವಳಿಕೆ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಪಡೆಯಬೇಕು ಎಂದು ಹೇಳಿದೆ.
  • ಖಾಸಗಿ ಶಾಲಾ ವಾಹನಗಳಲ್ಲಿ, ಬಸ್, ವ್ಯಾನ್, ಆಟೋ ರಿಕ್ಷಾಗಳಲ್ಲಿ ಶಾಲಾ ಮಕ್ಕಳನ್ನು ಮನೆಯಿಂದ ಶಾಲೆಗೆ ಹಾಗೂ ಶಾಲೆಯಿಂದ ಮನೆಗೆ ಕರೆತರುವ ಕೆಲಸ ನಿರ್ವಹಿಸುವ ಚಾಲಕರು ಮತ್ತು ಸಹಾಯಕರ ನಡವಳಿಕೆ ಬಗ್ಗೆ ಸಂಬಂಧಿಸಿದ ಪೊಲೀಸ್ ಠಾಣೆಗಳಿಂದ ನಡತೆ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಪಡೆಯುವುದು ಹಾಗೂ ಪ್ರತಿ ಎರಡು ವರ್ಷಗಳಿಗೊಮ್ಮೆ ನವೀಕರಿಸುವುದು ಕಡ್ಡಾಯವಾಗಿದೆ.
  • ಚಾಲಕರ ಮತ್ತು ಸಹಾಯಕರಿಗೆ ಸಂಬಂಧಿಸಿದಂತೆ ಪೊಲೀಸ್ ಠಾಣೆಗಳಿಂದ ಪಡೆದ ನಡವಳಿಕೆ ಪ್ರಮಾಣ ಪತ್ರವನ್ನು ಆಯಾ ಶಾಲೆಯ ಎಸ್‌ಎಟಿಎಸ್‌(SATS) ತಂತ್ರಾಂಶದಲ್ಲಿ ಅಪ್‌ಲೋಡ್‌ ಮಾಡಬೇಕು.
  • ಖಾಸಗಿ ಶಾಲಾ ವಾಹನಗಳಲ್ಲಿ ಬಸ್, ವ್ಯಾನ್, ಶಾಲಾ ಮಕ್ಕಳನ್ನು ಮನೆಯಿಂದ ಶಾಲೆಗೆ ಹಾಗೂ ಶಾಲೆಯಿಂದ ಮನೆಗೆ ಕರೆತರುವ ಕೆಲಸವನ್ನು ನಿರ್ವಹಿಸಲು ಸಹಾಯಕರಾಗಿ ಮಹಿಳಾ ಸಹಾಯಕರನ್ನು ನೇಮಿಸಿಕೊಳ್ಳಬೇಕು.
  • ಪ್ರತಿ ಖಾಸಗಿ ಶಾಲಾ ವಾಹನಗಳಲ್ಲಿ ಕಡ್ಡಾಯವಾಗಿ ಸಿ.ಸಿ.ಕ್ಯಾಮರಾ ಅಳವಡಿಸಬೇಕು.
  • ಶಾಲಾ ವಾಹನಗಳಲ್ಲಿ ನಿಗದಿತ ಸಂಖ್ಯೆಗಿಂತ ಹೆಚ್ಚು ಮಕ್ಕಳನ್ನು ಕರೆದುಕೊಂಡು ಹೋಗದಂತೆ ನಿರ್ಬಂಧಿಸಬೇಕು.
  • ಶಾಲಾ ವಾಹನಗಳಲ್ಲಿ ಕೆಲಸ ನಿರ್ವಹಿಸುವ ಚಾಲಕರು ಮತ್ತು ಸಹಾಯಕರು ಪ್ರತಿದಿನ ಕೆಲಸ ಪ್ರಾರಂಭದ ಮೊದಲು ಮತ್ತು ಎಲ್ಲ ಮಕ್ಕಳನ್ನು ಮನೆಗೆ ಬಿಟ್ಟನಂತರ ಶಾಲೆಗೆ ಬಂದು ಹಾಜರಾತಿ ಪುಸ್ತಕದಲ್ಲಿ ಶಾಲಾ ಮುಖ್ಯಸ್ಥರ ಸಮ್ಮುಖದಲ್ಲಿ ಕಡ್ಡಾಯವಾಗಿ ಸಹಿ ಮಾಡಬೇಕು.
  • ಆಯಾ ವ್ಯಾಪ್ತಿಯ ಕ್ಷೇತ್ರ ಶಿಕ್ಷಣಾಧಿಕಾರಿಗಳು (ಬಿಇಒ) ಶಾಲೆಗಳಿಗೆ ಭೇಟಿ ನೀಡಿ, ಸುರಕ್ಷತೆಯ ಖಾತ್ರಿಪಡಿಸಬೇಕು ಮತ್ತು ಮಕ್ಕಳ ಮೇಲೆ ದೌರ್ಜನ್ಯ ಪ್ರಕರಣಗಳು ನಡೆದಿಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು. ಆಡಳಿತ ಮಂಡಳಿಗಳು ವಿವರಗಳನ್ನು ಪ್ರತಿ ವರ್ಷ ಬಿಇಒಗಳಿಗೆ ನೀಡಬೇಕು.
  • ಮಕ್ಕಳ ಸುರಕ್ಷತೆಗೆ ಸಂಬಂಧಿಸಿದಂತೆ, ಯಾವುದೇ ನಿಯಮ ಉಲ್ಲಂಘಿಸಿದಲ್ಲಿ ನಿಯಮಾನುಸಾರ ಶಿಸ್ತು ಕ್ರಮ ಜರುಗಿಸಲು ಸೂಕ್ತ ಕ್ರಮ ವಹಿಸುವುವಂತೆ ಸೂಚಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಸ್‌ಐಟಿ ರಚನೆಗೆ ಹೈಕೋರ್ಟ್ ಆದೇಶ

ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್‌ಸಿ) ಇತ್ತೀಚೆಗೆ ನಡೆಸಿದ್ದ ಪಶುವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ...

ಹವಾಮಾನ | ಸೆ. 21, 22ರಂದು ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದೆ. ಭಾರತೀಯ ಹವಾಮಾನ ಇಲಾಖೆಯ (IMD) ಬೆಂಗಳೂರು...

ಲಕ್ಷ್ಮಣ್ @ 89: ‘ಅಚಲ’ ಆಶಾವಾದಿ – ಹಸಿರು ಕಾವಲುಗಾರನ ಕಥನ

89ನೇ ವಸಂತಕ್ಕೆ ಕಾಲಿಡುತ್ತಿರುವ ಎ.ಸಿ. ಲಕ್ಷ್ಮಣ್ ಅವರು ಭರವಸೆ ಮತ್ತು ಆಶಾವಾದದ...