ದಸರಾ ರಜೆ ವಿಸ್ತರಣೆ – ಸಮಯ ಸರಿದೂಗಿಸಲು ಹೆಚ್ಚುವರಿ ತರಗತಿ ನಡೆಸುವಂತೆ ಶಾಲೆಗಳಿಗೆ ಸೂಚನೆ

Date:

ರಾಜ್ಯದಲ್ಲಿ ನಡೆದ ಸಾಮಾಜಿಕ ಮತ್ತು ಶೈಕ್ಷಣಿಕ ಜಾತಿ ಸಮೀಕ್ಷೆಯನ್ನು ಪೂರ್ಣಗೊಳಿಸುವುದಕ್ಕಾಗಿ ಶಾಲೆಗಳ ದಸರಾ ರಜೆಯನ್ನು ವಿಸ್ತರಿಸಲಾಗಿತ್ತು. ರಜೆ ವಿಸ್ತರಣೆಯಿಂದ ನಡೆಯದೇ ಉಳಿದಿರುವ ತರಗತಿಗಳ ಸಮಯವನ್ನು ಸರಿದೂಗಿಸಲು ಹೆಚ್ಚುವರಿ ತರಗತಿಗಳನ್ನು ನಡೆಸುವಂತೆ ಶಾಲೆಗಳಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸೂಚಿಸಿದೆ. ಪ್ರತಿದಿನ ಒಂದು ಗಂಟೆ ಹೆಚ್ಚವರಿ ತರಗತಿ ನಡೆಸಬೇಕೆಂದು ತಿಳಿಸಿದೆ.

- Advertisement -

ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ 2026ರ ಫೆಬ್ರವರಿ 5ರವರೆಗೆ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ 2024ರ ಜನವರಿ 24ರವರೆಗೆ ಹೆಚ್ಚುವರಿ ತರಗತಿ ನಡೆಸುವಂತೆ ಇಲಾಖೆ ಸೂಚಿಸಿದೆ. ಆದರೆ, ಹೆಚ್ಚುವರಿ ತರಗತಿಯನ್ನು ಬೆಳಿಗ್ಗೆ ಅಥವಾ ಸಂಜೆ ನಡೆಸಬೇಕೆ ಎಂದು ಶಾಲೆಗಳು ನಿರ್ಧರಿಸಬಹುದು ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಸುತ್ತೋಲೆಯಲ್ಲಿ ಉಲ್ಲೇಖಿಸಿದಂತೆ, ದಸರಾ ರಜೆಯನ್ನು ವಿಸ್ತರಣೆ ಮಾಡಿದ್ದರಿಂಧ ಎರಡು ಅರ್ಧ ದಿನಗಳ (ಶನಿವಾರಗಳು) ಮತ್ತು ಎಂಟು ಪೂರ್ಣ ಶಾಲಾ ದಿನಗಳು ನಷ್ಟವಾಗಿವೆ. ಈ 10 ದಿನ ತರಗತಿಗಳು ನಡೆದಿಲ್ಲ. ಆ ದಿನಗಳ ಸಮಯದವನ್ನು ಜನವರಿ ಅಂತ್ಯದ ವೇಳೆಗೆ ಸರಿದೂಗಿಸಬೇಕೆಂದು ಇಲಾಖೆ ಲೆಕ್ಕಾಚಾರ ಹಾಕಿದೆ.

ಜಾತಿಗಣತಿ ಆರಂಭವಾದಾಗ ಕೆಲವು ತಾಂತ್ರಿಕ ತೊಡಕುಗಳು ಎದುರಾಗಿದ್ದವು. ಪರಿಣಾಮ, ಗಣತಿ ನಿರೀಕ್ಷಿತ ಅವಧಿಯೊಳಗೆ ಪೂರ್ಣಗೊಂಡಿರಲಿಲ್ಲ. ಹೀಗಾಗಿ, ಗಣತಿಯನ್ನು ಪೂರ್ಣಗೊಳಿಸಲು ಅಕ್ಟೋಬರ್ 16ರವರೆಗೆ ಗಡುವನ್ನು ವಿಸ್ತರಿಸಲಾಗಿತ್ತು. ಹೀಗಾಗಿ, ಶಾಲೆಗಳು ದೀಪಾವಳಿಯ ನಂತರವೇ ಪುನರಾರಂಭಗೊಂಡವು. ಶಾಲೆಗಳು ಹೆಚ್ಚುವರಿ ತರಗತಿಗಳನ್ನು ನಡೆಸುವಂತೆ ಆದೇಶ ಹೊರಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮನುಷ್ಯಕೇಂದ್ರಿತ ವೈಜ್ಞಾನಿಕ ಚಿಂತನೆ ಅತ್ಯಗತ್ಯ: ಡಾ. ರಾಜಪ್ಪ ದಳವಾಯಿ

ಮನುಷ್ಯನಿಗಿಂತ ಧರ್ಮ, ದೇವರು, ದೇವಾಲಯಗಳು ಹಾಗೂ ಧಾರ್ಮಿಕ ಸಂಸ್ಥೆಗಳು ಮುಖ್ಯವಾಗುವ ಪರಿಸ್ಥಿತಿ...

ಹಾಸನ | ಭಗತ್ ಸಿಂಗ್ ಕೇವಲ ಕ್ರಾಂತಿಕಾರಿಯಲ್ಲದೆ ವೈಜ್ಞಾನಿಕ ಮನೋಭಾವ ಉಳ್ಳವರಾಗಿದ್ದರು: ಡಾ. ಎಚ್ ಆರ್ ಸ್ವಾಮಿ

ಭಗತ್ ಸಿಂಗ್ ಅವರನ್ನು ಕೇವಲ ಒಬ್ಬ ಕ್ರಾಂತಿಕಾರಿ ಅಥವಾ ಸ್ವಾತಂತ್ರ್ಯ ಹೋರಾಟಗಾರನಾಗಿ...