ಬಿಎಸ್ಸಿ ನರ್ಸಿಂಗ್ ‘ಸಿಇಟಿ’ಗೆ ಅರ್ಜಿ ಆಹ್ವಾನ

Date:

ಬಿಎಸ್ಸಿ ನರ್ಸಿಂಗ್ ಪರೀಕ್ಷೆಗೆ ಈ ವರ್ಷದಿಂದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಕಡ್ಡಾಯ ಎಂದು ಪ್ರಕಟಣೆಯಾದ ಬೆನ್ನಲ್ಲೆ, ಆನ್‌ಲೈನ್‌ ಮೂಲಕ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅರ್ಜಿ ಆಹ್ವಾನಿಸಿದೆ.

- Advertisement -

ಮ್ಯಾನೆಜ್‌ಮೆಂಟ್ ಸೀಟಿಗಾಗಿ ಹಲವು ವಿದ್ಯಾರ್ಥಿಗಳು ಪರದಾಡುವುದನ್ನು ತಪ್ಪಿಸುವ ಸಲುವಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಸಕ್ತ ವರ್ಷದಿಂದ ಬಿಎಸ್ಸಿ ನರ್ಸಿಂಗ್‌ ವಿಷಯಕ್ಕೂ ಸಿಇಟಿ ಕಡ್ಡಾಯ ಮಾಡಿದೆ. ಅರ್ಜಿ ಸಲ್ಲಿಕೆಗೆ ಏ.22 ಕೊನೆಯ ದಿನಾಂಕವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಬಿಎಸ್ಸಿ (ನರ್ಸಿಂಗ್) ಕೋರ್ಸ್‌ಗಳಿಗೆ ಸಿಇಟಿ ಮೂಲಕ ಪ್ರವೇಶಾತಿ ಬಯಸುವ ಅಭ್ಯರ್ಥಿಯು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಭೌತಶಾಸ್ತ್ರ, ರಸಾಯನಶಾಸ್ತ್ರ, ಜೀವಶಾಸ್ತ್ರ ವಿಷಯಗಳನ್ನು ಅಭ್ಯಸಿಸಿ ಒಟ್ಟಾರೆ ಕನಿಷ್ಠ ಶೇ.45ರಷ್ಟು ಅಂಕಗಳನ್ನು ಒಡೆದು ತೇರ್ಗಡೆಯಾಗಿರಬೇಕು. ಜೊತೆಗೆ, ಇಂಗ್ಲಿಷ್‌ ವಿಷಯವನ್ನೂ ಅಭ್ಯಾಸ ಮಾಡಿರಬೇಕು. ಎಸ್ಸಿ, ಎಸ್ಟಿ, ಮತ್ತು ಇತರೆ ಹಿಂದುಳಿದ ವರ್ಗಗಳಾದ ಪ್ರವರ್ಗ-1, 2ಎ, 3ಎ ಮತ್ತು 3ಬಿಗಳಿಗೆ ಸೇರಿರುವ ಅಭ್ಯರ್ಥಿಗಳು ಶೇ.40 ರಷ್ಟು ಅಂಕಗಳಿಸಿರಬೇಕು.

ಬಿಎಸ್ಸಿ ನರ್ಸಿಂಗ್ ಕೋಸ್‌ಗಳ ಪ್ರವೇಶಾತಿಗೆ ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳು ಏ. 22 ರಾತ್ರಿ 11.59 ರವರೆಗೆ ಸಿಇಟಿ-2023ಕ್ಕೆ ನೋಂದಣಿ ಮಾಡಿಕೊಂಡು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅದೇ ದಿನದೊಳಗೆ ನಿಗದಿತ ಶುಲ್ಕವನ್ನು ಪಾವತಿಸಬೇಕು.

ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್ https://cetonline.karnataka.gov.in/kea/ ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆಯಬಹುದಾಗಿದೆ.

ಈ ಸುದ್ದಿ ಓದಿದ್ದೀರಾ?: ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ಇರಲಿ: ಯುಜಿಸಿ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉರ್ದು, ಮರಾಠಿ ಶಿಕ್ಷಕರ ಪೂರ್ಣ ನೇಮಕಾತಿಗೆ ಕರ್ನಾಟಕ ರಾಜ್ಯ ಮುಸ್ಲಿಂ ಒಕ್ಕೂಟ ಆಗ್ರಹ

ಉರ್ದು ಸೇರಿದಂತೆ ಭಾಷಾ ಅಲ್ಪಸಂಖ್ಯಾತ ಮಾಧ್ಯಮದ ಅಭ್ಯರ್ಥಿಗಳಿಗೆ ಶಿಕ್ಷಕರ ನೇಮಕಾತಿಯಲ್ಲಿ ನೀಡಿದ್ದ...

ಸ್ವಂತ ಸೂರಿಗಾಗಿ ಕಾಯುತ್ತಿರುವ ಅಂಗನವಾಡಿಗಳು: ಇನ್ನೆಷ್ಟು ದಿನ ಬಾಡಿಗೆ ಕಟ್ಟಡದಲ್ಲಿರಬೇಕು?

ಮಕ್ಕಳ ಭವಿಷ್ಯಕ್ಕೆ ಭದ್ರ ಬುನಾದಿ ಹಾಕಬೇಕಾದ ಅಂಗನವಾಡಿ ಕೇಂದ್ರಗಳೇ ಸ್ವಂತ ಸೂರಿಲ್ಲದೆ...

ಅನುಮೋದನೆ ಇಲ್ಲದೆ 8 ಸ್ನಾತಕೋತ್ತರ ಪದವಿ ಕೋರ್ಸ್‌ ಆರಂಭ: ಜಾನಪದ ವಿವಿಗೆ ಉನ್ನತ ಶಿಕ್ಷಣ ಇಲಾಖೆ ನೋಟಿಸ್‌

ಪ್ರಸ್ತುತ ಬ್ಯಾಚ್‌ಗಳ ವಿದ್ಯಾರ್ಥಿಗಳಿಗೆ ಕೋರ್ಸ್ ಪೂರ್ಣಗೊಳಿಸುವುದು, ಪರೀಕ್ಷೆ ಬರೆಯುವುದು ಹಾಗೂ ಪದವಿ...

ಅನುಮತಿ ಇಲ್ಲದೆ 4 ಬಾರಿ ವಿದೇಶಿ ಪ್ರವಾಸ; ಕುವೆಂಪು ವಿವಿ ಕುಲಪತಿ ಶರತ್ ಅನಂತಮೂರ್ತಿಗೆ ರಾಜ್ಯಪಾಲರ ನೋಟಿಸ್

ರಾಜ್ಯಪಾಲರು ಮತ್ತು ವಿಶ್ವವಿದ್ಯಾಲಯದ ಕುಲಾಧಿಪತಿಗಳ ಪೂರ್ವಾನುಮತಿ ಪಡೆಯದೆ ಕುವೆಂಪು ವಿವಿ ಕುಲಪತಿ...