- ಶೇ.80 ರಷ್ಟು ವಿಶೇಷ ಚೇತನ ವಿದ್ಯಾರ್ಥಿಗಳು ಉತ್ತೀರ್ಣ
- ಉತ್ತರ ಪತ್ರಿಕೆಗಳ ಫೋಟೋ ಕಾಪಿ ಪಡೆಯಲು ಮೇ 14 ಕೊನೆಯ ದಿನ
ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಪೂರಕ ಪರೀಕ್ಷೆಯ ವೇಳಾಪಟ್ಟಿ ಶೀಘ್ರವೇ ಬಿಡುಗಡೆ ಮಾಡಲಾಗುವುದು. ಪೂರಕ ಪರೀಕ್ಷೆ ಬರೆಯಲು ಇಚ್ಛಿಸುವ ವಿದ್ಯಾರ್ಥಿಗಳು ಮೇ 15ರೊಳಗೆ ಅರ್ಜಿ ಸಲ್ಲಿಸಬೇಕು ಎಂದು ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷ ರಾಮಚಂದ್ರನ್ ಹೇಳಿದ್ದಾರೆ.
ಎಸ್ಸೆಸ್ಸೆಲ್ಸಿ ಫಲಿತಾಂಶದ ಉತ್ತರ ಪತ್ರಿಕೆಗಳ ಛಾಯಾಪ್ರತಿ, ಮರುಎಣಿಕೆ, ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಹಾಗೂ ಪೂರಕ ಪರೀಕ್ಷೆಗೆ ನೋಂದಾಯಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ದಿನಾಂಕ ಪ್ರಕಟಿಸಿದೆ.
“ಮರು ಮೌಲ್ಯಮಾಪನಕ್ಕೆ ಮೇ 15 ರಿಂದ ಮೇ 21ರವೆರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ವಿದ್ಯಾರ್ಥಿಗಳು ತಮ್ಮ ಉತ್ತರ ಪತ್ರಿಕೆಗಳ ಫೋಟೋ ಕಾಪಿ ಪಡೆದುಕೊಳ್ಳಲು ಇಂದಿನಿಂದ ಮೇ 14 ರವರೆಗೆ ಅರ್ಜಿ ಸಲ್ಲಿಬಹುಬುದು ಎಂದು ಮಂಡಳಿ ಹೇಳಿದೆ.
ಶೇ.80 ರಷ್ಟು ವಿಶೇಷ ಚೇತನ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಳೆದ ಬಾರಿ ಶೇ. 80.6 ರಷ್ಟು ವಿಶೇಷ ಚೇತನ ವಿದ್ಯಾರ್ಥಿಗಳು ಪಾಸ್ ಆಗಿದ್ದರು.
ಈ ಸುದ್ದಿ ಓದಿದ್ದೀರಾ?: ಎಸ್ಸೆಸ್ಸೆಲ್ಸಿ ಫಲಿತಾಂಶ | ಶೇ.87.87ರಷ್ಟು ಬಾಲಕಿಯರು ಉತ್ತೀರ್ಣರು
ಕಳೆದ ಐದು ವರ್ಷದ ಫಲಿತಾಂಶ ಹೀಗಿದೆ
2018-19ನೇ ಸಾಲಿನಲ್ಲಿ ಶೇ.73.70 ಫಲಿತಾಂಶ ಬಂದಿತ್ತು. 2019-20ನೇ ಸಾಲಿನಲ್ಲಿ ಶೇ.71.80, 2020-21ರಲ್ಲಿ ಕೋವಿಡ್ ಉಲ್ಬಣಗೊಂಡು ದೇಶದಾದ್ಯಂತ ಲಾಕ್ಡೌನ್ ಜಾರಿಯಲ್ಲಿತ್ತು. ಈ ವೇಳೆ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸದೆ, ವಿದ್ಯಾರ್ಥಿಯ ಹಿಂದಿನ ತರಗತಿಯ ಅಂಕಗಳ ಆಧಾರ ಮೇಲೆ ಕೃಪಾಂಕ ನೀಡಿ ಉತ್ತೀರ್ಣರನ್ನಾಗಿ ಮಾಡಲಾಗಿತ್ತು. ಆ ವರ್ಷ ಶೇ.99.99ರಷ್ಟು ಫಲಿತಾಂಶವಿತ್ತು. ಕಳೆದ ವರ್ಷ 2021-22 ಶೇ.83.89 ಫಲಿತಾಂಶ ಬಂದಿತ್ತು.