ಕೆಪಿಎಸ್‌ಸಿ | ಮರುಪರೀಕ್ಷೆಗೆ ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹ

Date:

Advertisements

ಆಗಸ್ಟ್ 27ರಂದು ರಾಜ್ಯದಲ್ಲಿ ಕರ್ನಾಟಕ ಲೋಕಸೇವಾ ಆಯೋಗವು ನಡೆಸಿದ ಗೆಜೆಟೆಡ್ ಪ್ರೊಬೆಷನರಿ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ತೀವ್ರ ಅನ್ಯಾಯವಾಗಿದ್ದು, ಪರೀಕ್ಷೆಗಳನ್ನು ರದ್ದುಪಡಿಸಿ ಹೊಸದಾಗಿ ಪರೀಕ್ಷೆ ನಡೆಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹಿಸಿದೆ.

“ಪರೀಕ್ಷೆ ಬರೆದ ವಿದ್ಯಾರ್ಥಿಗಳೇ ತಮ್ಮ ಅಳಲನ್ನು ಹಲವು ಮಾಧ್ಯಮಗಳ ಮುಂದೆ ತೋಡಿಕೊಂಡಿರುವುದನ್ನು ನೋಡಿ ಸಂಕಟವಾಗಿದೆ. ಅದಕ್ಕಿಂತಲೂ ಹೆಚ್ಚಾಗಿ ತಾವು ಮಾಡಿರುವ ಅನ್ಯಾಯವನ್ನು ಒಪ್ಪಿಕೊಳ್ಳದೇ ಬೇರೆ ಬೇರೆ ರೀತಿಯಲ್ಲಿ ಇದನ್ನು ಸಮರ್ಥಿಸಿಕೊಳ್ಳುತ್ತಿರುವ ಅಧಿಕಾರಿಗಳ ನಡೆಯನ್ನು ಕರ್ನಾಟಕ ರಕ್ಷಣಾ ವೇದಿಕೆ ತೀವ್ರವಾಗಿ ಖಂಡಿಸುತ್ತದೆ.

ಸುಮಾರು ಒಂದು ಲಕ್ಷದ ಮೂವತ್ತಾರು ಸಾವಿರ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರೆ ಇವರಲ್ಲಿ ಸುಮಾರು ಒಂದು ಲಕ್ಷಕ್ಕಿಂತಲೂ ಹೆಚ್ಚು ಮಂದಿ ಗ್ರಾಮೀಣ ಹಿನ್ನೆಲೆಯ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳು. ಕೆಲವಾರು ವರ್ಷಗಳಿಂದಲೂ ಇವರು ಕನ್ನಡ ಮಾಧ್ಯಮದ ಮೂಲಕವೇ ಕೆಎಎಸ್ ಪರೀಕ್ಷೆಗಾಗಿ ಅಧ್ಯಯನ ಮಾಡುತ್ತಿದ್ದವರು. ಇಂತವರಿಗೆ ಸರಿಯಾಗಿ ಅರ್ಥವೂ ಆಗದ ರೀತಿಯಲ್ಲಿ ಪ್ರಶ್ನೆಗಳನ್ನು ಕೊಟ್ಟಿದ್ದರ ಹಿಂದೆ ಯಾವ ಉದ್ದೇಶವಿದೆ? ಒಂದೋ ಎರಡೋ ಪ್ರಶ್ನೆಗಳಾಗಿದ್ದರೆ ಏನೋ ಲೋಪವಾಗಿದೆ ಎಂದುಕೊಳ್ಳಬಹುದು. ಸುಮಾರು 60 ಪ್ರಶ್ನೆಗಳಲ್ಲಿ ಅಂದರೆ 120 ಅಂಕಗಳ ಪ್ರಶ್ನೆಗಳಲ್ಲಿ ಪ್ರಶ್ನೆಗಳೇ ಅರ್ಥವಾಗದ ರೀತಿಯಲ್ಲಿ ಗೊಂದಲ ಮೂಡಿಸುವ ಪ್ರಶ್ನೆಗಳಿವೆ ಎಂದರೆ ಇದು ಸಣ್ಣಪುಟ್ಟ ಲೋಪವಾಗಿರಲು ಸಾಧ್ಯವಿಲ್ಲ. ಇದರ ಹಿಂದೆ ಯಾರ ಹುನ್ನಾರವಿದೆ ಎಂಬ ಪ್ರಶ್ನೆ ಉದ್ಭವಿಸಿದೆ.

Advertisements

ಭಾರತದ ನದಿ ವ್ಯವಸ್ಥೆ ಎಂದು ಕೊಡಬೇಕಾದ ಕಡೆ “ಚರಂಡಿ ವ್ಯವಸ್ಥೆ” ಎಂದೂ, ಭಾರವಾದ ಎಂಬುದರ ಬದಲಿಗೆ ಅತಿ ವೇಗವಾದ ಎಂದೂ, ಸಿಸ್ಟರ್ ಎಂಬುದಕ್ಕೆ ಸಹೋದರ ಎಂದೂ, ರಾಜ್ಯ ವಿಧಾನಸಭೆ ಎಂಬುದರ ಬದಲಿಗೆ ರಾಜ್ಯಸಭೆ ಎಂದೂ, ಕಲೆ ಎಂದು ಕೊಡುವ ಬದಲಿಗೆ ವಸ್ತು ಎಂದೂ, ಬೇರಿನಾಕಾರದ ಎಂದು ಕೊಡುವ ಬದಲಿಗೆ ಸಸ್ಯಾಂಕಿತ ಎಂದೂ, ತಪ್ಪಾದ ಇಲ್ಲವೇ ಸರಿಯಲ್ಲದ ಎಂದು ಕೊಡುವ ಕಡೆ ಸರಿಯಾದ ಎಂದೂ ವಿತ್ತೀಯ ಇಲ್ಲವೇ ಹಣಕಾಸು ಎಂದು ಕೊಡಬೇಕಾದ ಕಡೆ ಆರ್ಥಿಕ ಎಂದೂ ಕೆಎಎಸ್ ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಕೊಡುವುದು ಕೇವಲ ಭಾಷಾಂತರದ ಸಮಸ್ಯೆ ಎನಿಸುವುದಿಲ್ಲ. ಒಂದು ಪ್ರಶ್ನೆ ಪತ್ರಿಕೆ ತಯಾರು ಮಾಡಲು ಬೇಕಾದ ಕನಿಷ್ಟ ಮಟ್ಟದ ತಿಳಿವಳಿಕೆಯಾಗಲೀ, ಸೂಕ್ತ ತರಬೇತಿಯಾಗಲೀ, ಸೂಕ್ತ ಮಾನದಂಡವಾಗಲೀ ಕೆಪಿಎಸ್ಸಿ ಹೊಂದಿಲ್ಲ ಎಂಬುದಕ್ಕೆ ಇದು ನಿದರ್ಶನವಾಗಿದೆ.

ಇಷ್ಟು ಬೇಜವಾಬ್ದಾರಿ ಇರುವ ಅಧಿಕಾರಿಗಳಿಗೆ ಅಥವಾ ಸಂಸ್ಥೆಗಳಿಗೆ ಕನ್ನಡಿಗರ ತೆರಿಗೆ ಹಣದಲ್ಲಿ ಕೋಟ್ಯಂತರ ರೂಪಾಯಿಗಳನ್ನು ಸರ್ಕಾರ ವೆಚ್ಚ ಮಾಡುವುದು ಯಾವ ಪುರುಷಾರ್ಥಕ್ಕೆ? ಕರ್ನಾಟಕದಲ್ಲಿ ನಡೆಯುವ ಯಾವುದೇ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಮೊದಲು ಕನ್ನಡದಲ್ಲಿ ತಯಾರಾಗಬೇಕು. ಅದನ್ನು ನಂತರ ಇಂಗ್ಲಿಷಿಗೆ ತರ್ಜುಮೆ ಮಾಡಿಸಬೇಕು. ಆದರೆ ಇದನ್ನು ಕೆಪಿಎಸ್ಸಿ ಅನುಸರಿಸದೇ ದುಂಡಾವರ್ತನೆ ಪ್ರದರ್ಶಿಸಿದೆ. ಕರ್ನಾಟಕದಲ್ಲಿ ಪರೀಕ್ಷೆ ನಡೆಸುವಾಗ ಮೊದಲು ಇಂಗ್ಲಿಷ್ ಭಾಷೆಯಲ್ಲಿ ಪ್ರಶ್ನೆಪತ್ರಿಕೆ ತಯಾರಿಸಿ ಅದನ್ನು ಕನ್ನಡಕ್ಕೆ ಭಾಷಾಂತರ ಮಾಡಿಸುವುದು ಅವೈಜ್ಞಾನಿಕ ಮತ್ತು ಕನ್ನಡ ವಿರೋಧಿತನ. ಇದನ್ನು ಕರವೇ ತೀವ್ರವಾಗಿ ಖಂಡಿಸುವುದರ ಜೊತೆಗೆ ಈ ಕೂಡಲೇ ಇದನ್ನು ಸರಿಪಡಿಸಿಕೊಳ್ಳಬೇಕು ಎಂದು ಆಗ್ರಹಪಡಿಸುತ್ತದೆ.

ಈ ಕೂಡಲೇ ಕೆಪಿಎಸ್ಸಿ ಮೊನ್ನೆ ನಡೆಸಿದ ಪರೀಕ್ಷೆಯನ್ನು ಅಸಿಂಧು ಎಂದು ಪರಿಗಣಿಸಿ ಮರುಪರೀಕ್ಷೆಗೆ ಸೂಚನೆ ಹೊರಡಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹಿಸುತ್ತದೆ. ಇದಕ್ಕೆ ಯಾವುದೇ ಸಬೂಬು ಹೇಳಿ ತಮ್ಮ ಕನ್ನಡ ವಿರೋಧಿ ಧೋರಣೆಯನ್ನು ಮುಚ್ಚಿಕೊಳ್ಳುವುದನ್ನು ಕನ್ನಡಿಗರು ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡುತ್ತಿದ್ದೇವೆ. ಒಂದು ವೇಳೆ ಕೆಪಿಎಸ್‌ಸಿ ಕನ್ನಡಿಗರ ಆಗ್ರಹಕ್ಕೆ ಮಣಿಯದಿದ್ದರೆ ತೀವ್ರ ಸ್ವರೂಪದ ಹೋರಾಟ ಎದುರಿಸಬೇಕಾಗುತ್ತದೆ” ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ತಕ್ಷಣದ ಆಗ್ರಹಗಳು:
೧. ಕೆಪಿಎಸ್ಸಿ ಕೂಡಲೇ ಮರು ಪರೀಕ್ಷೆಗೆ ಆದೇಶ ಹೊರಡಿಸಬೇಕು.
೨. ಮೊನ್ನೆ ನಡೆದ ಪರೀಕ್ಷೆಯ ಕುರಿತು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು.
೩. ಕರ್ನಾಟಕ ಲೋಕಸೇವಾ ಆಯೋಗ ನಡೆಸುವ ಯಾವುದೇ ಪರೀಕ್ಷೆಯ ಪ್ರಶ್ನೆಪತ್ರಿಕೆ ಮೊದಲು ಕನ್ನಡದಲ್ಲಿ ತಯಾರಾಗುವಂತೆ ಆದೇಶ ಹೊರಡಿಸಬೇಕು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X