ಶಿಕ್ಷಣ ಕ್ಷೇತ್ರದ ಬದಲಾವಣೆಗೆ ಕಾಂಗ್ರೆಸ್ ಸರ್ಕಾರ ಆದ್ಯತೆ ನೀಡಲಿ: ನಿರಂಜನಾರಾಧ್ಯ ವಿ ಪಿ

Date:

  • ಪಠ್ಯಪುಸ್ತಕ, ಶಿಕ್ಷಣ ಕ್ಷೇತ್ರ ಸಂವಿಧಾನಕ್ಕೆ ಬದ್ಧವಾಗಿರಲಿ
  • ಶಿಕ್ಷಕರ ನೇಮಕ ವೇಗಗತಿಯಲ್ಲಿ ಆರಂಭವಾಗಲಿ

ಶಾಲಾ ಶಿಕ್ಷಣವನ್ನು ಹಾಳುಗೆಡವಿ, ರಾಜಕೀಯ ದಾಳವನ್ನಾಗಿ ಬಳಸಿಕೊಂಡಿದ್ದ ಬಿಜೆಪಿ ಸರ್ಕಾರದ ರೀತಿನೀತಿಗಳನ್ನು ಅಲ್ಲಗೆಳೆದು ಶಿಕ್ಷಣ ಕ್ಷೇತ್ರದಲ್ಲಿ ಅಗಬೇಕಿರುವ ಅಭಿವೃದ್ಧಿಯ ಬಗ್ಗೆ ಮೊದಲ ಸಚಿವ ಸಂಪುಟದಲ್ಲಿ ಚರ್ಚಿಸಬೇಕೆಂದು ಕರ್ನಾಟಕ ರಾಜ್ಯ ಶಾಲಾಭಿವೃದ್ಧಿ  ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆ ಮನವಿ ಮಾಡಿದೆ.

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭಿಮತ ಪಡೆದು ವಿಜಯ ಸಾಧಿಸಿದೆ. ಸನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಸಹ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದಾದ ನಂತರ ವಾಡಿಕೆಯಂತೆ ನಡೆಯುವ ಮೊದಲ ಸಚಿವ ಸಂಪುಟ ಸಭೆಯಲ್ಲಿ ಶಾಲಾ ಶಿಕ್ಷಣದಲ್ಲಾಗಿರುವ ಅನ್ಯಾಯದ ಬಗ್ಗೆ ಚರ್ಚಿಸಲು ಶಿಕ್ಷಣ ತಜ್ಞ ನಿರಂಜನಾರಾಧ್ಯ ವಿ ಪಿ ಅವರು ಮನವಿ ಮಾಡಿದ್ದಾರೆ.

ಈ ಹಿಂದೆ ಇದ್ದ ಬಿಜೆಪಿ ಸರ್ಕಾರ ಶಿಕ್ಷಣವನ್ನು ಸಂಪೂರ್ಣವಾಗಿ ರಾಜಕೀಯಕ್ಕೆ ಬಳಸಿಕೊಂಡಿತ್ತು. ರಾಷ್ಟ್ರೀಯತೆಯ ಹೆಸರಲ್ಲಿ ವಿದ್ಯಾರ್ಥಿಗಳ ತಲೆಯಲ್ಲಿ ವಿಷ ಬೀಜ ಬಿತ್ತುತ್ತಿದೆ. ಶಿಕ್ಷಣದ ಪ್ರಕ್ರಿಯೆಯನ್ನೇ ಸರ್ವನಾಶ ಮಾಡಲಾಗಿದೆ. ಬಡ ಮಕ್ಕಳಿಗೆ ಸಿಗುತ್ತಿದ್ದ ಹಲವು ಸಂವಿಧಾನಬದ್ಧ ಉತ್ತೇಜಕಗಳನ್ನು ಕಸಿದುಕೊಳ್ಳಲಾಗಿದೆ. ಸರ್ಕಾರಿ ಶಾಲೆಗಳನ್ನು ಹೀನಾಯವಾಗಿ ದುರ್ಬಲಗೊಳಿಸಿದ್ದಾರೆ. ಇದರಲ್ಲಿ ಹಲವು ಅಧಿಕಾರಿಗಳ ಪಾತ್ರವೂ ಇದೆ ಈ ಬಗ್ಗೆ ತಾವು ಗಮನ ಹರಿಸಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ರಾಜ್ಯದಲ್ಲಿನ ಹೊಸ ಸರ್ಕಾರ ಶಿಕ್ಷಣವನ್ನು ಸಾಮಾಜಿಕ ಒಳಿತು ಮತ್ತು ಸಾಮಾಜಿಕ ಪರಿವರ್ತನೆಯ ಸಾಧನವೆಂಬ ವಿಶಾಲ ದೃಷ್ಟಿಯಲ್ಲಿ ಪರಿಭಾವಿಸಬೇಕಾಗುತ್ತದೆ. ಎಲ್ಲಕ್ಕಿಂತ ಮುಖ್ಯವಾಗಿ, ಶಾಲೆ ಆರಂಭವಾಗಲು ಕೇವಲ 10 ದಿನಗಳು (ಮೇ 29,2023) ಮಾತ್ರ ಬಾಕಿ ಇದೆ. ಶಿಕ್ಷಣದ ವಿಷಯವನ್ನು ಅತ್ಯಂತ ಜರೂರಿನ ವಿಷಯವನ್ನಾಗಿ ಪರಿಗಣಿಸಿ, ಎಲ್ಲ ರೀತಿಯ ತುರ್ತು ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ?: ನಿರೀಕ್ಷೆಗಿಂತ ಕಡಿಮೆ ಫಲಿತಾಂಶ; ಮರು ಪರೀಕ್ಷೆಗೆ ಸಜ್ಜಾದ 151 ಪಿಯುಸಿ ವಿದ್ಯಾರ್ಥಿಗಳು

ಶಿಕ್ಷಣ ಕ್ಷೇತ್ರದಲ್ಲಿ ತರಬೇಕಾದ ತಕ್ಷಣದ ಆದ್ಯತೆ

2021-22  ನೇ ಸಾಲಿನಲ್ಲಿ ರಾಜ್ಯದಲ್ಲಿ ಖಾಲಿ ಇರುವ ಹುದ್ದೆಗಳ ಸಂಖ್ಯೆ ಸರಿ ಸುಮಾರು1,41,358 . ಈ ಪೈಕಿ 13,352  ಶಿಕ್ಷಕರನ್ನು ನೇಮಿಸಿಕೊಳ್ಳುವ ಪ್ರಕ್ರಿಯೆ ನಡೆಯುತ್ತಿದ್ದು, ಶಾಲೆ ಆರಂಭವಾಗುವ ಮುನ್ನ ಅವರು ಶಾಲೆಗಳಲ್ಲಿರುವಂತೆ ತುರ್ತು ಕ್ರಮ ವಹಿಸುವುದು.

2019-2010  ಸ್ಥಗಿತವಾಗಿರುವ ಬೈಸಿಕಲ್ ವಿತರಣೆ ಪುನರ್ ಆರಂಭಿಸುವುದು. ಮಧ್ಯಾಹ್ನದ ಬಿಸಿಯೂಟದ ವೆಚ್ಚಕ್ಕೆ ಈಗಿರುವ ಪ್ರತೀ ಮಗುವಿನ ಯುನಿಟ್ ವೆಚ್ಚವನ್ನು ಹೆಚ್ಚಿಸಬೇಕು. ಇಂದಿರಾ ಕ್ಯಾಂಟೀನ್ ನಲ್ಲಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಮಧ್ಯಾಹ್ನ ಉಚಿತ ಊಟ ಒದಗಿಸಬೇಕು . 

ಸ್ಪಷ್ಟ ಮಾರ್ಗಸೂಚಿ  ಹೊರಡಿಸುವುದು .

ರಾಷ್ಟ್ರೀಯ ಶಿಕ್ಷಣ ನೀತಿಯನ್ನು ವಿಧಾನ ಸಭೆಯ ಮೊದಲ ಅಧಿವೇಶನದಲ್ಲಿ ಸಾರಾಸಗಟಾಗಿ ತಿರಸ್ಕರಿಸಿ ರಾಜ್ಯ ಶಿಕ್ಷಣ ನೀತಿಯನ್ನು ರೂಪಿಸಿ, ಜಾರಿಗೊಳಿಸುವುದು. ಸಂವಿಧಾನಕ್ಕೆ ವಿರುದ್ಧವಾಗಿ ಪಠ್ಯ ಪರಿಷ್ಕರಣೆ ಮಾಡಿದ್ದ ಸಮಿತಿಯ ಅಧ್ಯಕ್ಷರು ಮತ್ತು ತಂಡದ ಸದಸ್ಯರ  ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವುದು. ಪಠ್ಯಗಳ ಸರಬರಾಜು ಮತ್ತು ಅವುಗಳಕ್ಕ ಮುದ್ರಣಕ್ಕೆ ಖರ್ಚಾದ ಹಣ ಅವರಿಂದಲೇ ವಸೂಲು ಮಾಡಬೇಕು.

ಸರ್ಕಾರಿ ಶಾಲೆಗಳನ್ನು ಸಾಮೂಹಿಕವಾಗಿ ಮುಚ್ಚುವ ಪ್ರಕ್ರಿಯೆಯನ್ನುಪೂರ್ಣವಾಗಿ ನಿಲ್ಲಿಸುವುದು. ಶಿಕ್ಷಣದ ಖಾಸಗೀಕರಣ ಮತ್ತು ವ್ಯಾಪಾರೀಕರಣವನ್ನು ಪೂರ್ಣವಾಗಿ ನಿಯಂತ್ರಿಸುವುದದು

ಮಕ್ಕಳಿಗೆ ಕ್ಷೀರ ಭಾಗ್ಯ ಮತ್ತು ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಬೆಳಗಿನ ಉಪಹಾರ ಯೋಜನೆಯನ್ನು ಜಾರಿಗೊಳಿಸುವುದು. ರಾಜ್ಯದಲ್ಲಿ ಅಪೌಷ್ಠಿಕತೆ ತೊಡೆದು ಹಾಕಲು ಅಂಗನವಾಡಿಯಿಂದ  10 ನೇ ತರಗತಿಯ ಎಲ್ಲಾ ಮಕ್ಕಳಿಗೆ  ಪ್ರತಿದಿನ ಮೊಟ್ಟೆ ವಿತರಿಸಲು ಕ್ರಮ ಕೈಗೊಳ್ಳಬೇಕು. ಖಾಸಗಿ ಸ್ವಾಯತ್ತ ವಿಶ್ವವಿದ್ಯಾಲಯಗಳನ್ನು ಅಣಬೆಯಂತೆ ತೆರೆಯಲು ನೀಡುವ ಅನುಮತಿಯನ್ನು ಸ್ಥಗಿತಗೊಳಿಸಬೇಕು. ರಾಜ್ಯ ಆಯವ್ಯಯದಲ್ಲಿ ಶಿಕ್ಷಣಕ್ಕೆ ಶೇ. 20 ರಷ್ಟು ಮೀಸಲಿಡಬೇಕು  ಎಂದು ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಕ್ಷೇತ್ರದ ರಕ್ಷಣೆಗೆ, ಅಭಿವೃದ್ಧಿಗೆ ಆದ್ಯತೆ: ಗೀತಾ ಶಿವರಾಜ್‌ಕುಮಾರ್

ಶಿವಮೊಗ್ಗ ಜಿಲ್ಲೆಯಲ್ಲಿ ಅಧಿಕಾರವು ರಾಜಕಾರಣಿಗಳ ಬಳಿಯಿದೆ. ಸಮಸ್ಯೆಗಳು ಸಾಕಷ್ಟಿವೆ. ಆದರೂ, ಕೆಲವು...

ಯಾದಗಿರಿ | ಅಂಗಡಿ, ಸಂತೆ ಪ್ರದೇಶದಲ್ಲಿ ಎಸ್‌ಯುಸಿಐ ಚುನಾವಣಾ ಪ್ರಚಾರ

ಯಾದಗಿರಿಯಲ್ಲಿ ಎಸ್‌ಯುಸಿಐ (ಕಮ್ಯುನಿಸ್ಟ್) ಪಕ್ಷ ಚುನಾವಣಾ ಪ್ರಚಾರದ ಅಂಗವಾಗಿ ಇಂದು ನಗರದ...

ಉಡುಪಿ‌ | ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಪ್ರಜಾಪ್ರಭುತ್ವ, ಸಂವಿಧಾನಕ್ಕೆ ಅಪಾಯ: ಮಂಜುನಾಥ್ ಗಿಳಿಯಾರ್ 

ಬಿಜೆಪಿ ಪ್ರಜಾಪ್ರಭುತ್ವ, ಸಾಮಾಜಿಕ ನ್ಯಾಯ ಮತ್ತು ಸಂವಿಧಾನ ವಿರೋಧಿಯಾಗಿದೆ. ದೇಶದಲ್ಲಿ ಮೀಸಲಾತಿ...

ಧಾರವಾಡ | ಸಚಿವ ಸಂತೋಷ್‌ ಲಾಡ್‌ಗೆ ವಿಜಯೇಂದ್ರ ಅಪಮಾನ; ಕ್ಷಮೆ ಯಾಚಿಸಲು ಆಗ್ರಹ

ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಅವರು ಕೀಳು ಮಟ್ಟದ ಪದ ಬಳಸಿ ಸಚಿವ...