ಉದ್ಯೋಗಾವಕಾಶ ಕೊರತೆ; ‘ಕನ್ನಡ ಎಂಎ’ ದಾಖಲಾತಿಯಲ್ಲಿ ತೀವ್ರ ಕುಸಿತ

Date:

ಕಳೆದ ಕೆಲವು ವರ್ಷಗಳಿಂದ ಕನ್ನಡ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆಯುವ ವಿದ್ಯಾರ್ಥಿಗಳ ಸಂಖ್ಯೆ ತೀವ್ರವಾಗಿ ಕಡಿಮೆಯಾಗಿದೆ ಎಂದು ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳ ಕನ್ನಡ ಪ್ರಾಧ್ಯಾಪಕರು ಹೇಳುತ್ತಿದ್ದಾರೆ. ಈ ಕುಸಿತಕ್ಕೆ ಹಲವಾರು ಕಾರಣಗಳಿವೆ. ಅವುಗಳಲ್ಲಿ, ಸೀಮಿತ ಕೆಲಸದ ಅವಕಾಶಗಳು, ವಿಭಾಗಗಳಲ್ಲಿ ಶಾಶ್ವತ ಉಪನ್ಯಾಸಕರ ಕೊರತೆ ಹಾಗೂ ಮಾನವಿಕ ವಿಷಯಗಳಲ್ಲಿ ಕೋರ್ಸ್‌ಗಳನ್ನು ಕಲಿಸಲು ಹೊಸ ಕಾಲೇಜುಗಳು ಇಲ್ಲದಿರುವುದು ಪ್ರಧಾನವಾಗಿದೆ.

- Advertisement -

“ಕನ್ನಡದಲ್ಲಿ ಎಂಎ ಮುಗಿದ ನಂತರ ಉದ್ಯೋಗಾವಕಾಶಗಳು ಸೀಮಿತವಾಗಿವೆ. ಸಂಶೋಧನೆ ಮತ್ತು ಬೋಧನೆಯ ಹೊರತಾಗಿ, ಅಭ್ಯರ್ಥಿಗಳಿಗೆ ಕೆಲಸದ ಅವಕಾಶಗಳಿರುವುದು ಮಾಧ್ಯಮ ಮತ್ತು ಮನರಂಜನಾ ಉದ್ಯಮದಲ್ಲಿ ಮಾತ್ರ. ಅನೇಕ ಹೊಸ ಪಿಯು ಕಾಲೇಜುಗಳು ತೆರೆಯುತ್ತಿದ್ದರೂ, ಅವು ವಿಜ್ಞಾನ ಮತ್ತು ವಾಣಿಜ್ಯವನ್ನು ಕಲಿಸಲು ಆದ್ಯತೆ ನೀಡುತ್ತವೆ. ಸಾಹಿತ್ಯ ಅಥವಾ ಭಾಷೆ ವಿಷಯಗಳು ಪದವಿ ಕೋರ್ಸ್‌ಗಳಲ್ಲಿ ನಾಲ್ಕು ಸೆಮಿಸ್ಟರ್‌ಗಳ ಬದಲಿಗೆ ಎರಡು ಸೆಮಿಸ್ಟರ್‌ಗಳಿಗೆ ಮಾತ್ರ ಸೀಮಿತವಾಗಿವೆ. ಆದ್ದರಿಂದ, ಸರ್ಕಾರಿ ಕಾಲೇಜುಗಳು ಮತ್ತು ಖಾಸಗಿ ಕಾಲೇಜುಗಳಲ್ಲಿ ಸಾಹಿತ್ಯವನ್ನು ಕಲಿಸಲು ಕಡಿಮೆ ಉಪನ್ಯಾಸಕರನ್ನು ನೇಮಿಸಿಕೊಳ್ಳಲಾಗುತ್ತದೆ” ಎಂದು ತುಮಕೂರು ವಿಶ್ವವಿದ್ಯಾಲಯದ ಪ್ರೊಫೆಸರ್ ನಿತ್ಯಾನಂದ ಬಿ ಶೆಟ್ಟಿ ಹೇಳಿರುವುದಾಗಿ ‘ಟಿಎನ್‌ಐಇ’ ವರದಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ನಮ್ಮ ವಿಶ್ವವಿದ್ಯಾಲಯದಲ್ಲಿ ಮೊದಲ ಮತ್ತು ಎರಡನೇ ವರ್ಷದಲ್ಲಿ ಒಟ್ಟು 70 ವಿದ್ಯಾರ್ಥಿಗಳಿದ್ದಾರೆ. 52 ವಿದ್ಯಾರ್ಥಿಗಳು ಕನ್ನಡದಲ್ಲಿ ಪೂರ್ಣ ಸಮಯ ಮತ್ತು ಅರೆಕಾಲಿಕ ಪಿಎಚ್‌ಡಿ ಮಾಡುತ್ತಿದ್ದಾರೆ. ಕಳೆದ ವರ್ಷವೂ ವಿದ್ಯಾರ್ಥಿಗಳ ಸಂಖ್ಯೆ ಇಷ್ಟೇ ಇತ್ತು. ವಿಶ್ವವಿದ್ಯಾಲಯಗಳಲ್ಲಿ ಭಾಷೆಗೆ ಗುಣಮಟ್ಟದ ಶಿಕ್ಷಕರ ಕೊರತೆ ಇದೆ” ಎಂದು ಅವರು ಹೇಳಿದ್ದಾರೆ.

“ಈಗ ನೇಮಕಗೊಂಡ ಶಿಕ್ಷಕರು ಅಥವಾ ಪ್ರಾಧ್ಯಾಪಕರು ಶಾಸ್ತ್ರೀಯ ಪಠ್ಯ ಅಥವಾ ಆಧುನಿಕ ಸಾಹಿತ್ಯದಲ್ಲಿ ಪರಿಣತಿಯನ್ನು ಹೊಂದಿರುವುದಿಲ್ಲ. ಅವರು ನಿರ್ದಿಷ್ಟ ಸಾಹಿತ್ಯ ಪಠ್ಯದ ವಿಮರ್ಶಾ ಸಾಮಗ್ರಿಗಳನ್ನು ಬಳಸಿಕೊಂಡು ವಿದ್ಯಾರ್ಥಿಗಳಿಗೆ ಸಾಹಿತ್ಯವನ್ನು ಕಲಿಸುತ್ತಾರೆ. ಉದಾಹರಣೆಗೆ, ಅವರು ಪಂಪ ಭಾರತವನ್ನು ವಿದ್ಯಾರ್ಥಿಗಳಿಗೆ ವಿವರವಾಗಿ ವಿವರಿಸುವುದಿಲ್ಲ. ಅವರು ಈ ಕೃತಿಯ ವಿಮರ್ಶೆಯನ್ನು ಮಾತ್ರ ಓದಿ, ವಿವರಿಸುತ್ತಾರೆ. ಹೀಗಾಗಿ, ವಿದ್ಯಾರ್ಥಿಗಳು ವಿಶ್ಲೇಷಣಾತ್ಮಕ ಅಥವಾ ತಾರ್ಕಿಕ ಕೌಶಲ್ಯಗಳನ್ನು ಹೇಗೆ ಬೆಳೆಸಿಕೊಳ್ಳಲು ಸಾಧ್ಯ?” ಎಂದಿದ್ದಾರೆ.

ಈ ಲೇಖನ ಓದಿದ್ದೀರಾ?: ನೆನಕೆ | ಏಕೀಕರಣದ ಏಕೈಕ ಹುತಾತ್ಮನಿಗೆ ಗೌರವ ಸಲ್ಲಿಸುವ ಸುಸಂದರ್ಭ

ಬೆಂಗಳೂರು ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಕೇಂದ್ರದ ನಿರ್ದೇಶಕ ಡೊಮಿನಿಕ್ ಡೇವಿಡಪ್ಪ, “ಇಲ್ಲಿ ಕನ್ನಡ ವಿಭಾಗದಲ್ಲಿ ಎರಡು ವಿಭಿನ್ನ ವಿಭಾಗಗಳಿವೆ. ಒಂದು ವಿಭಾಗ ಕನ್ನಡ ಸಾಹಿತ್ಯವಾಗಿದ್ದರೆ, ಎರಡನೆಯದು ತುಲನಾತ್ಮಕ (ಹೋಲಿಕೆ) ಅಧ್ಯಯನ. ಈ ವರ್ಷ, 53 ವಿದ್ಯಾರ್ಥಿಗಳು ಕನ್ನಡ ಸಾಹಿತ್ಯದಲ್ಲಿ ಎಂಎ ವ್ಯಾಸಂಗ ಮಾಡುತ್ತಿದ್ದಾರೆ ಮತ್ತು ತುಲನಾತ್ಮಕ ಅಧ್ಯಯನದಲ್ಲಿ 13 ವಿದ್ಯಾರ್ಥಿಗಳು ಇದ್ದಾರೆ. ಕಳೆದ ವರ್ಷ, ಕನ್ನಡ ಸಾಹಿತ್ಯದಲ್ಲಿ 57 ಮತ್ತು ತುಲನಾತ್ಮಕ ಅಧ್ಯಯನದಲ್ಲಿ 19 ವಿದ್ಯಾರ್ಥಿಗಳು ಇದ್ದರು. ಗಮನಾರ್ಹವಾಗಿ, ಕನ್ನಡವನ್ನು ಕಲಿಯುವ ಹೆಚ್ಚಿನ ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶಗಳಿಂದ ಬಂದವರು” ಎಂದು ವಿವರಿಸಿದ್ದಾರೆ.

ಅನೇಕ ಗ್ರಾಮೀಣ ವಿದ್ಯಾರ್ಥಿಗಳು ಕನ್ನಡ ಸಾಹಿತ್ಯವನ್ನು ಕಲಿಯುತ್ತಾರೆ ಎಂಬುದನ್ನು ಪ್ರತಿಪಾದಿಸಿದ ಮೈಸೂರು ವಿಶ್ವವಿದ್ಯಾಲಯದ ಕುವೆಂಪು ಕನ್ನಡ ಅಧ್ಯಯನ ಕೇಂದ್ರದ ಅತಿಥಿ ಉಪನ್ಯಾಸಕ ಡಾ. ಚಂದ್ರಶೇಖರ ಬೆಟ್ಟಳ್ಳಿ, “ನಮ್ಮ ವಿಭಾಗದಲ್ಲಿ ಕನ್ನಡದಲ್ಲಿ ಎಂಎ ವ್ಯಾಸಂಗ ಮಾಡುತ್ತಿರುವ 76 ವಿದ್ಯಾರ್ಥಿಗಳಿದ್ದಾರೆ. ಅವರಲ್ಲಿ ಹೆಚ್ಚಿನವರು ಗ್ರಾಮೀಣ ಪ್ರದೇಶಗಳಿಂದ ಬಂದವರು. ಶಾಲೆಗಳಲ್ಲಿ ಶಿಕ್ಷಕರಾಗಲು ಅಥವಾ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯಲು ಅವರು ಆಶಿಸುತ್ತಾರೆ” ಎಂದು ಹೇಳಿದ್ದಾರೆ. ಆದಾಗ್ಯೂ, ಕನ್ನಡ ವಿಭಾಗದಲ್ಲಿ ಕೇವಲ ಇಬ್ಬರು ಖಾಯಂ ಉಪನ್ಯಾಸಕರು ಮತ್ತು 14 ಅತಿಥಿ ಉಪನ್ಯಾಸಕರಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮನುಷ್ಯಕೇಂದ್ರಿತ ವೈಜ್ಞಾನಿಕ ಚಿಂತನೆ ಅತ್ಯಗತ್ಯ: ಡಾ. ರಾಜಪ್ಪ ದಳವಾಯಿ

ಮನುಷ್ಯನಿಗಿಂತ ಧರ್ಮ, ದೇವರು, ದೇವಾಲಯಗಳು ಹಾಗೂ ಧಾರ್ಮಿಕ ಸಂಸ್ಥೆಗಳು ಮುಖ್ಯವಾಗುವ ಪರಿಸ್ಥಿತಿ...

ಹಾಸನ | ಭಗತ್ ಸಿಂಗ್ ಕೇವಲ ಕ್ರಾಂತಿಕಾರಿಯಲ್ಲದೆ ವೈಜ್ಞಾನಿಕ ಮನೋಭಾವ ಉಳ್ಳವರಾಗಿದ್ದರು: ಡಾ. ಎಚ್ ಆರ್ ಸ್ವಾಮಿ

ಭಗತ್ ಸಿಂಗ್ ಅವರನ್ನು ಕೇವಲ ಒಬ್ಬ ಕ್ರಾಂತಿಕಾರಿ ಅಥವಾ ಸ್ವಾತಂತ್ರ್ಯ ಹೋರಾಟಗಾರನಾಗಿ...