ಒಂದು ನಿಮಿಷದ ಓದು | ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಸಾಮೂಹಿಕ ನಕಲು; 16 ಶಿಕ್ಷಕರ ಅಮಾನತು

Date:

ಏ.3ರಂದು ನಡೆದ ಎಸ್ಸೆಸ್ಸೆಲ್ಸಿ ಗಣಿತ ಪರೀಕ್ಷೆಯಲ್ಲಿ ಸಾಮೂಹಿಕವಾಗಿ ನಕಲು ಮಾಡಲು ಅವಕಾಶ ಮಾಡಿಕೊಟ್ಟ ಆರೋಪದ ಮೇಲೆ ಮುಖ್ಯ ಶಿಕ್ಷಕ ಸೇರಿದಂತೆ 16 ಶಿಕ್ಷಕರನ್ನು ಅಮಾನತು ಮಾಡಲಾಗಿದೆ.

ಮಾರ್ಚ್‌ 31ರಿಂದ ರಾಜ್ಯಾದ್ಯಂತ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭವಾಗಿದೆ. ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಸರ್ಕಾರಿ ಪ್ರೌಢಶಾಲೆ ಗೊಬ್ಬುರು (ಬಿ) ಪರೀಕ್ಷಾ ಕೇಂದ್ರದಲ್ಲಿ ಸೋಮವಾರ ನಡೆದ ಎಸ್ಸೆಸ್ಸೆಲ್ಸಿ ಗಣಿತ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ನಕಲು ಮಾಡಲು ಶಿಕ್ಷಕರು ಅವಕಾಶ ಮಾಡಿಕೊಟ್ಟಿದ್ದರು ಎಂದು ಆರೋಪಿಸಲಾಗಿತ್ತು. ಇದೀಗ, ಆ ಶಿಕ್ಷಕರನ್ನು ಅಮಾನತು ಮಾಡಲಾಗಿದೆ ಎಂದು ಕಲಬುರಗಿ ಅಪರ ಪ್ರಾದೇಶಿಕ ಆಯುಕ್ತ ಆನಂದ ಪ್ರಕಾಶ್ ಆದೇಶ ಹೊರಡಿಸಿದ್ದಾರೆ.

ಕರ್ತವ್ಯದಲ್ಲಿದ್ದ ಪರೀಕ್ಷಾ ಸಿಬ್ಬಂದಿ, ಮೇಲ್ವಿಚಾರಕರು ಪರೀಕ್ಷೆಯಲ್ಲಿ ನಕಲು ಮಾಡಲು ಅವಕಾಶ ಮಾಡಿಕೊಟ್ಟು ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಹೆಚ್ಚುವರಿ ಆಯುಕ್ತರು ಪ್ರಕಾಶ್ ಮೀನಾ ತಿಳಿಸಿದ್ದಾರೆ. ಪರೀಕ್ಷಾ ಕೇಂದ್ರಕ್ಕೆ ದಿಢೀರ್ ಭೇಟಿ ನೀಡಿದ ಪೊಲೀಸ್ ವರಿಷ್ಠಾಧಿಕಾರಿ ಇಶಾ ಪಂತ್ ಸಲ್ಲಿಸಿದ ವರದಿ ಆಧರಿಸಿ ಶಿಕ್ಷಕರನ್ನು ಅಮಾನತು ಮಾಡಲಾಗಿದೆ.

ಎಸ್ಪಿ ಇಶಾ ಪಂತ್ ಅವರು ಸೋಮವಾರ ಶಾಲೆಗೆ ಭೇಟಿ ನೀಡಿ ಪರೀಕ್ಷಾ ಕೊಠಡಿಯ ಭದ್ರತಾ ವ್ಯವಸ್ಥೆಗಳ ಪರಿಶೀಲನೆ ನಡೆಸಿದರು. ಈ ವೇಳೆ, ವಿದ್ಯಾರ್ಥಿಗಳು ಪ್ರಶ್ನೆಗಳಿಗೆ ಉತ್ತರಿಸಲು ಮೈಕ್ರೋ ಜೆರಾಕ್ಸ್‌ ನಕಲು ಚೀಟಿಗಳನ್ನು ಬಳಸುತ್ತಿದ್ದರು. ಸಾಮೂಹಿಕ ನಕಲು ಮಾಡಲು ಅವಕಾಶ ನೀಡಲಾಗಿದೆ ಎಂದು ಇಶಾ ಪಂತ್ ವರದಿ ನೀಡಿದ್ದರು.

ನಕಲು ಮಾಡಲು ಅವಕಾಶ ಕೊಟ್ಟ ಮುಖ್ಯ ಶಿಕ್ಷಕ ಗೋಳಾಲ್ಲಪ್ಪ ಗುರಪ್ಪ, 15 ಸಹಾಯಕ ಶಿಕ್ಷಕರಾದ ಭೀಮಾಶಂಕರ ಮಡಿವಾಳ, ರವೀಂದ್ರ, ದೇವೇಂದ್ರಪ್ಪ ಯರಗಲ್, ಸವಿತಾ ಬಾಯಿ ಜಮಾದಾರ್, ಅನಿತಾ, ನಾಗಮ್ಮ, ರೇವಣಸಿದ್ದಪ್ಪ, ಪರ್ವೀನ್ ಸುಲ್ತಾನ, ಬಾಬು ಪವಾರ್, ಕವಿತಾ, ಜಯಶ್ರೀ, ವಿದ್ಯಾವತಿ, ಗಾಯತ್ರಿ ಬಿರಾದಾರ್, ಮೀನಾಕ್ಷಿ ಹಾಗೂ ಅರುಣಕುಮಾರ ಎಂಬುವವರನ್ನು ಅಮಾನತ್ತುಗೊಳಿಸಲಾಗಿದೆ.

ಈ ಸುದ್ದಿ ಓದಿದ್ದೀರಾ?: ಎಸ್ಸೆಸ್ಸೆಲ್ಸಿ ಫಲಿತಾಂಶ ಹೆಚ್ಚಳಕ್ಕೆ ಕೃಪಾಂಕ ಬೇಕೆ?

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಇತ್ತೀಚಿನ ದಿನಗಳಲ್ಲಿ ಎಲ್ಲಾ ಮಾದರಿಯ ಪರೀಕ್ಷೆಗಳಲ್ಲಿ ವಿಧ್ಯಾರ್ಥಿಗಳಿಗೆ ಸಾಮೂಹಿಕ ನಕಲು ಮಾಡಲು ಬಿಡುವುದು ಮತ್ತು ಶಿಕ್ಷಕರೇ ಸ್ವತಃ ಉತ್ತರ ಹೇಳಿಕೊಡುವುದು ಸರ್ವೇಸಾಮಾನ್ಯ ವಾದಂತೆ ಕಾಣುತ್ತಿದೆ. ಇದಕ್ಕೆ ಕಾರಣ ಸಂಬಂಧ ಪಟ್ಟ ಅಧಿಕಾರಿಗಳು ಮತ್ತು ಶಿಕ್ಷಣ ಸಂಸ್ಥೆಗಳ ಆಡಳಿತ ವರ್ಗದ ನಿರ್ಲಕ್ಷವೇ ಆಗಿದೆ. ಇದು ಹೀಗೇ ಮುಂದುವರಿದರೆ ನಮ್ಮ ಮುಂದಿನ ಪೀಳಿಗೆ ಉತ್ತಮ ಅಂಕಗಳು ಮತ್ತು ಪದವಿ ಪ್ರಮಾಣ ಪತ್ರಗಳನ್ನು ಪಡೆದಿರುವವರು ಆಗಿರುತ್ತರೆಯೇ ವಿನಃ ಉತ್ತಮ ಅಥವಾ ಶ್ರೇಷ್ಠ ಜ್ಞಾನವನ್ನು ಪಡೆದ ವಿಧ್ಯಾರ್ಥಿ ಗಳಾಗಿರಲು ಸಾಧ್ಯವಿಲ್ಲ. ಮುಂದೆ ಇವರು ಸಮಾಜದಲ್ಲಿ ವಿದ್ಯಾವಂತ ಅನಾಗರೀಕರಾಗಿ ಜೀವನ ನಡೆಸಬೇಕಾಗುತ್ತದೆ. ಮಾತ್ರವಲ್ಲ ಇದರಿಂದ ದೇಶವು ದುರ್ಬಲಗೊಳ್ಳುತ್ತದೆ ಆದ್ದರಿಂದ ದಯವಿಟ್ಟು ಸಂಬಂಧ ಪಟ್ಟ ಇಲಾಖೆಗಳು ಎಚ್ಚೆತ್ತು ಹದಗೆಟ್ಟಿರುವ ವ್ಯವಸ್ಥೆಯನ್ನು ಸರಿ ಪಡಿಸಲು ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ವಿನಂತಿ.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಎನ್ಇಪಿ ಅಧಿಕೃತವಾಗಿ ರದ್ದಾಗಿದೆಯೇ?’ ಬಗೆಹರಿಯದ ಬಿಕ್ಕಟ್ಟುಗಳು

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಅವರು 'ನಾವು ಎನ್‌ಇಪಿ 2020ಯನ್ನು ತಿರಸ್ಕರಿಸಿದ್ದೇವೆ....

ರಾಜ್ಯದಲ್ಲಿ 1,600 ಅಕ್ರಮ ಶಾಲೆಗಳು, ಪಿಯು ಕಾಲೇಜುಗಳಿವೆ: ಸಚಿವ ಮಧು ಬಂಗಾರಪ್ಪ

ರಾಜ್ಯದಲ್ಲಿ 1,600ಕ್ಕೂ ಹೆಚ್ಚು ಶಾಲೆಗಳು ಮತ್ತು ಪಿಯು ಕಾಲೇಜುಗಳು ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿವೆ....

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ-2 ಫಲಿತಾಂಶ ಪ್ರಕಟ

ಆಗಸ್ಟ್‌/ಸೆಪ್ಟೆಂಬರ್ 2023ರ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ-2 ಫಲಿತಾಂಶ ಪ್ರಕಟವಾಗಿದ್ದು, karresult.nic.in...

ಸೆ.12 ಸಂಜೆ 4 ಗಂಟೆ ನಂತರ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ-2 ಫಲಿತಾಂಶ ಪ್ರಕಟ

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ-2 ರ ಪರೀಕ್ಷಾ ಮೌಲ್ಯಮಾಪನ ಪೂರ್ಣಗೊಂಡಿದ್ದು, ಸೆ.12...