ನೀಟ್‌ ಪರೀಕ್ಷೆ | ದಾಖಲೆ ಮಟ್ಟದಲ್ಲಿ ವಿದ್ಯಾರ್ಥಿಗಳು ಹಾಜರು

Date:

  • 13 ಭಾಷೆಗಳಲ್ಲಿ 720 ಅಂಕಗಳಿಗೆ ಪರೀಕ್ಷೆಯಿತ್ತು
  • ನಿಗದಿತ ಅವಧಿ ಮೀರಿ ಬಂದ ವಿದ್ಯಾರ್ಥಿಗಳಿಗೆ ಪ್ರವೇಶ ನಿರಾಕರಣೆ  

ವೈದ್ಯಕೀಯ ಶಿಕ್ಷಣ ಕೋರ್ಸ್‍ಗಳ ಪ್ರವೇಶಕ್ಕೆ ಮಣಿಪುರ ರಾಜ್ಯ ಹೊರತು ಪಡಿಸಿ, ಉಳಿದೆಲ್ಲ ರಾಜ್ಯಗಳ 400ಕ್ಕೂ ಹೆಚ್ಚು ನಗರಗಳಲ್ಲಿ ನೀಟ್ (ಪರೀಕ್ಷೆ) ನಡೆದಿದೆ. 20 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.

- Advertisement -

ಪರೀಕ್ಷೆ ನಡೆಯುತ್ತಿದ್ದ ದಿನದಂದೇ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನಲ್ಲಿ ರೋಡ್‌ ಶೋ ನಡೆಸಿದ್ದಾರೆ. ಇದರಿಂದ ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗಿದ್ದರು. ಗೊಂದಲಗಳ ನಡುವೆಯೂ ವಿದ್ಯಾರ್ಥಿಗಳು ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರಕ್ಕೆ ಹಾಜರಾಗಿ, ಪರೀಕ್ಷೆ ಬರೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ವೈದ್ಯಕೀಯ, ದಂತ ವೈದ್ಯಕೀಯ, ಆಯುರ್ವೇದ, ಪಶುವೈದ್ಯಕೀಯ, ಹೋಮಿಯೊಪಥಿ ಕೋರ್ಸ್‌ಗಳ ಪ್ರವೇಶಕ್ಕೆ ಪರೀಕ್ಷೆ ನಡೆಸಿತು. ಎಲ್ಲ ಕೇಂದ್ರಗಳ ಬಳಿ ಪೊಲೀಸ್‌ ಭದ್ರತೆ ಇತ್ತು. ವಿದ್ಯಾರ್ಥಿಗಳು ಧರಿಸಿ ಬಂದಿದ್ದ ಶೂ, ಆಭರಣಗಳನ್ನು ತೆಗೆಸಿ ಕೇಂದ್ರಕ್ಕೆ ಪ್ರವೇಶ ನೀಡಲಾಗಿತ್ತು.

ನೀಟ್ ಬರೆಯಲು 20,87,499 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ನೀಟ್‌ಗೆ ದೇಶದಲ್ಲೇ ಹೆಚ್ಚು ವಿದ್ಯಾರ್ಥಿಗಳು ನೋಂದಾಣಿ ಮಾಡಿಕೊಂಡಿದ್ದ ರಾಜ್ಯಗಳ ಪಟ್ಟಿಯಲ್ಲಿ ತಮಿಳುನಾಡು ಮೊದಲ ಸ್ಥಾನದಲ್ಲಿದೆ. 245 ಕೇಂದ್ರಗಳಲ್ಲಿ 1,47,581 ಅಭ್ಯರ್ಥಿಗಳು ಪರೀಕ್ಷೆಗೆ ನಡೆದಿದ್ದು, ಕಳೆದ ವರ್ಷಕ್ಕಿಂತ 5,295 ಹೆಚ್ಚು ಮಂದಿ ತಮಿಳುನಾಡಿನಲ್ಲಿ ಪರೀಕ್ಷೆ ಬರೆದಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಐಐಟಿಗಳಲ್ಲಿ ನೆಪಕ್ಕಷ್ಟೇ ಇರುವ ಎಸ್‌ಸಿ, ಎಸ್‌ಟಿ ವಿಭಾಗಗಳು

ಪರೀಕ್ಷೆಯಿಂದ ಹೊರಗುಳಿದ ಮಣಿಪುರ

ಮಣಿಪುರದಲ್ಲಿ 5,751 ವಿದ್ಯಾರ್ಥಿಗಳು ಹಾಜರಾಗಲು ಸಿದ್ಧರಾಗಿದ್ದರು. ಆದರೆ, ಅಲ್ಲಿ ಹಿಂಸಾಚಾರ ಕೈ ಮೀರಿದ್ದರಿಂದ ಗೃಹ ಸಚಿವಾಲಯದ ಮನವಿ ಮೇರೆಗೆ ಪರೀಕ್ಷೆಯನ್ನು ಮುಂದೂಡಲಾಗಿದೆ. ಅಲ್ಲಿನ 22 ಕೇಂದ್ರಗಳನ್ನು ಹೊರತುಪಡಿಸಿ ಭಾರತದಾದ್ಯಂತ 4,075 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅನುಮೋದನೆ ಇಲ್ಲದೆ 8 ಸ್ನಾತಕೋತ್ತರ ಪದವಿ ಕೋರ್ಸ್‌ ಆರಂಭ: ಜಾನಪದ ವಿವಿಗೆ ಉನ್ನತ ಶಿಕ್ಷಣ ಇಲಾಖೆ ನೋಟಿಸ್‌

ಪ್ರಸ್ತುತ ಬ್ಯಾಚ್‌ಗಳ ವಿದ್ಯಾರ್ಥಿಗಳಿಗೆ ಕೋರ್ಸ್ ಪೂರ್ಣಗೊಳಿಸುವುದು, ಪರೀಕ್ಷೆ ಬರೆಯುವುದು ಹಾಗೂ ಪದವಿ...

ಅನುಮತಿ ಇಲ್ಲದೆ 4 ಬಾರಿ ವಿದೇಶಿ ಪ್ರವಾಸ; ಕುವೆಂಪು ವಿವಿ ಕುಲಪತಿ ಶರತ್ ಅನಂತಮೂರ್ತಿಗೆ ರಾಜ್ಯಪಾಲರ ನೋಟಿಸ್

ರಾಜ್ಯಪಾಲರು ಮತ್ತು ವಿಶ್ವವಿದ್ಯಾಲಯದ ಕುಲಾಧಿಪತಿಗಳ ಪೂರ್ವಾನುಮತಿ ಪಡೆಯದೆ ಕುವೆಂಪು ವಿವಿ ಕುಲಪತಿ...

ಮಾತೃಭಾಷೆಯೇ ಜ್ಞಾನಭಾಷೆ: ಶಿಕ್ಷಣ ಯಾರ ಹಕ್ಕು?

ಶಿಕ್ಷಣ ಅಂಕಗಳಿಗಾಗಿ ಅಲ್ಲ; ಮನುಷ್ಯನನ್ನು ರೂಪಿಸುವುದಕ್ಕಾಗಿ. ಅದು ಮಾರುಕಟ್ಟೆಯ ಸರಕಲ್ಲ; ಪ್ರತಿಯೊಂದು...