ನೀಟ್ ಪಿಜಿ 2026 | ಒಂದೇ ಪಾಳಿಯಲ್ಲಿ ಪರೀಕ್ಷೆ; ಪ್ರಶ್ನೆಗಳ ಸಂಖ್ಯೆ 180ಕ್ಕೆ ಕಡಿತ

Date:

ಆಗಸ್ಟ್ 30ರಂದು ನಡೆಯಲಿರುವ ನೀಟ್ ಪಿಜಿ (NEET PG 2026) ಸ್ನಾತಕೋತ್ತರ ವೈದ್ಯಕೀಯ ಪ್ರವೇಶ ಪರೀಕ್ಷೆಗೆ ಸಂಬಂಧಿಸಿದಂತೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಹಲವಾರು ಪ್ರಮುಖ ಬದಲಾವಣೆಗಳನ್ನು ಪ್ರಕಟಿಸಿದೆ. ದೇಶದಾದ್ಯಂತ ಸುಮಾರು 340 ನಗರಗಳ 1,300 ಕ್ಕೂ ಹೆಚ್ಚು ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಯನ್ನು ಒಂದೇ ಪಾಳಿಯಲ್ಲಿ ನಡೆಸಲು ‘ರಾಷ್ಟ್ರೀಯ ವೈದ್ಯಕೀಯ ಪರೀಕ್ಷಾ ಮಂಡಳಿ’ (NBEMS) ನಿರ್ಧರಿಸಿದೆ.

- Advertisement -

ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ತಮ್ಮ ಆದ್ಯತೆಯ ಮೇರೆಗೆ ಮೂರು ಪರೀಕ್ಷಾ ನಗರಗಳನ್ನು ಮತ್ತು ಅವುಗಳಿಗೆ ಸಂಬಂಧಿಸಿದ ರಾಜ್ಯಗಳನ್ನು ಆಯ್ಕೆ ಮಾಡಲು ಅವಕಾಶ ಒದಗಿಸಲಾಗಿದೆ. ಅಭ್ಯರ್ಥಿಗಳು ತಮ್ಮ ಪ್ರಯಾಣ ಮತ್ತು ವಸತಿ ವ್ಯವಸ್ಥೆಯನ್ನು ಮುಂಚಿತವಾಗಿಯೇ ಸುಲಭವಾಗಿ ಯೋಜಿಸಲು ಸಾಧ್ಯವಾಗುವಂತೆ, ಪರೀಕ್ಷೆಗೆ ಸುಮಾರು ಮೂರು ವಾರಗಳ ಮೊದಲು ಅಧಿಕೃತ ವೆಬ್‌ಸೈಟ್‌ನಲ್ಲಿ ಪರೀಕ್ಷಾ ನಗರ ಮಾಹಿತಿ ಚೀಟಿಯನ್ನು ಬಿಡುಗಡೆ ಮಾಡಲಾಗುವುದು ಎಂದು ಮಂಡಳಿ ಸೂಚಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

ಪರೀಕ್ಷಾ ವಿಧಾನದಲ್ಲೂ ಪ್ರಮುಖ ಬದಲಾವಣೆಯನ್ನು ತರಲಾಗಿದ್ದು, ಪರೀಕ್ಷೆಯ ಒಟ್ಟು ಪ್ರಶ್ನೆಗಳ ಸಂಖ್ಯೆಯನ್ನು 200ರಿಂದ 180ಕ್ಕೆ ಇಳಿಸಲಾಗಿದೆ. ಆದಾಗ್ಯೂ, ಒಟ್ಟು ಪರೀಕ್ಷಾ ಸಮಯವನ್ನು 3 ಗಂಟೆ 30 ನಿಮಿಷಗಳಿಗೇ (210 ನಿಮಿಷ) ನಿಗದಿ ಮಾಡಲಾಗಿದೆ. ಇದರಿಂದ ಅಭ್ಯರ್ಥಿಗಳಿಗೆ ಪ್ರತಿ ಪ್ರಶ್ನೆಗೆ ಆಲೋಚಿಸಿ ಉತ್ತರಿಸಲು ಹೆಚ್ಚಿನ ಸಮಯ ಸಿಗಲಿದೆ ಎಂದು‌ ಮಂಡಳಿ ತಿಳಿಸಿದೆ.

ಪರೀಕ್ಷೆಯ ಭದ್ರತೆ ಮತ್ತು ಪಾರದರ್ಶಕತೆಯನ್ನು ಹೆಚ್ಚಿಸಲು ಅರ್ಜಿ ಸಲ್ಲಿಕೆ ಮತ್ತು ಪರೀಕ್ಷೆಯ ದಿನದಂದು ಅಭ್ಯರ್ಥಿಗಳ ಆಧಾರ್ ಆಧಾರಿತ ಬಯೋಮೆಟ್ರಿಕ್ ಕಡ್ಡಾಯಗೊಳಿಸಲಾಗಿದೆ. ಒಂದು ವೇಳೆ ಬೆರಳಚ್ಚು ಯಶಸ್ವಿಯಾಗದಿದ್ದರೆ, ಕಣ್ಣಿನ ಪಾಪೆ (Iris-based) ಬಯೋಮೆಟ್ರಿಕ್ ಪರಿಶೀಲನೆಯನ್ನು ಪರೀಕ್ಷಾ ಕೇಂದ್ರಗಳಲ್ಲಿ ಬಳಸಲಾಗುತ್ತದೆ‌‌ ಎಂದು‌ ವಿವರಿಸಿದೆ.

ಪ್ರೆಸ್ ಇನ್ಫರ್ಮೇಷನ್ ಬ್ಯೂರೋ (PIB) ನೀಡಿರುವ ಅಂಕಿ-ಅಂಶಗಳ ಪ್ರಕಾರ, ಈ ವರ್ಷ ಒಟ್ಟು 2,73,183 ಅಭ್ಯರ್ಥಿಗಳು ನೀಟ್-ಪಿಜಿ 2026ರ ಪರೀಕ್ಷೆಗೆ ಅರ್ಜಿಸಲ್ಲಿಸಿದ್ದಾರೆ. ಇದು ಕಳೆದ ವರ್ಷದ ನೋಂದಣಿಗೆ ಹೋಲಿಸಿದರೆ 12.5% ಹೆಚ್ಚಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ ಶಕ್ತಿಗೆ ಕತ್ತರಿ

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ...

ಮೋದಿಯ ಮೋಸದ UPI ಶುಲ್ಕ ನೀತಿ; ತೀವ್ರ ವಿರೋಧದ ನಡುವೆಯೂ ಜಾರಿಗೆ ಮುಂದಾದ ಕೇಂದ್ರ

₹2,000ಕ್ಕಿಂತ ಹೆಚ್ಚಿನ UPI ವಹಿವಾಟುಗಳಿಗೆ ಪ್ರಸ್ತಾಪಿಸಿರುವ ಶೇ 0.4ರಷ್ಟು ಮರ್ಚೆಂಟ್ ಡಿಸ್ಕೌಂಟ್...

ಕಲಬುರಗಿ | ಪಿಎಸ್‌ಐ ಕಾರಿಗೆ ಬೆಂಕಿ ಹಚ್ಚಿ ಪರಾರಿಯಾದ ಪೊಲೀಸ್ ಪೇದೆ

ಖಾಕಿ ಧರಿಸಿ ರಕ್ಷಣೆ ಮಾಡಬೇಕಾದವರೇ ಅಪರಾಧ ಕೃತ್ಯಕ್ಕೆ ಇಳಿದಿರುವ ಘಟನೆ...

ಪ್ರಜಾಪ್ರಭುತ್ವದ ಅಣಕ: ಪಕ್ಷಾಂತರಕ್ಕಾಗಿ ಶಾಸಕರ ರಾಜೀನಾಮೆ ಮತ್ತು ಮರು ಸ್ಪರ್ಧೆಗೆ ಮದ್ರಾಸ್ ಹೈಕೋರ್ಟ್ ಕಿಡಿ

ಚುನಾವಣೆಯಲ್ಲಿ ಗೆದ್ದ ಕೆಲವೇ ದಿನಗಳಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಪಕ್ಷಾಂತರಗೊಂಡು...