ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನ

Date:

Advertisements

1ರಿಂದ 8ನೇ ತರಗತಿಯಲ್ಲಿ ಕಲಿಯುವ ವಿದ್ಯಾರ್ಥಿಗಳಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು 2024-25ನೇ ಸಾಲಿಗೆ ಸಂಬಂಧಿಸಿದಂತೆ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗಾಗಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ(PRE-MATRIC SCHOLARSHIP) ಯೋಜನೆಯಡಿಯಲ್ಲಿ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆನ್‌ಲೈನ್‌ನ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅಕ್ಟೋಬರ್ 31ರಂದು ಕೊನೆಯ ದಿನಾಂಕವಾಗಿದೆ.

ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳೇನು?

Advertisements
  • ವಿದ್ಯಾರ್ಥಿಗಳು ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಜನಾಂಗಕ್ಕೆ ಸೇರಿದವರಾಗಿರಬೇಕು.
  • ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.
  • ಎಲ್ಲ ಮೂಲಗಳಿಂದ ವಿದ್ಯಾರ್ಥಿಯ/ಪಾಲಕರ/ಪೋಷಕರ ವಾರ್ಷಿಕ ಆದಾಯವು ರೂ.1.00 ಲಕ್ಷಗಳನ್ನು ಮೀರಿರಬಾರದು.

ಅರ್ಜಿ ಸಲ್ಲಿಸುವವರಿಗೆ ವಿಶೇಷ ಸೂಚನೆ:

  • ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 1ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಹೊಸದಾಗಿ ಅರ್ಜಿಯನ್ನು ಸಲ್ಲಿಸತಕ್ಕದ್ದು.
  • ಕಳೆದ ವರ್ಷದಲ್ಲಿ ವಿದ್ಯಾರ್ಥಿ ವೇತನ ಮಂಜೂರಾದ ವಿದ್ಯಾರ್ಥಿಗಳ ಅರ್ಜಿಗಳನ್ನು Auto Renewal ಎಂದು ಪರಿಗಣಿಸಲಾಗುವುದರಿಂದ ಸದರಿ ವಿದ್ಯಾರ್ಥಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.
  • ಹಿಂದಿನ ವರ್ಷ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸಿ ವಿದ್ಯಾರ್ಥಿವೇತನ ಮಂಜೂರಾಗದೇ ಇದ್ದಲ್ಲಿ ಅಂತಹ ವಿದ್ಯಾರ್ಥಿಗಳು ಹೊಸದಾಗಿ ಅರ್ಜಿ ಸಲ್ಲಿಸಬೇಕು.
  • ಪ್ರೀ ಮೆಟ್ರಿಕ್ ಯೋಜನೆಯ ಪ್ರಯೋಜನ ಪಡೆಯಲು ವಿದ್ಯಾರ್ಥಿಗಳು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಆಗಿರುವ ಬಗ್ಗೆ ಹಾಗೂ NPCI Mapping | Active ಆಗಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ.
ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

Download Eedina App Android / iOS

X