ಸಿಇಟಿ ಪರೀಕ್ಷೆಯಲ್ಲಿ ಪಠ್ಯಕ್ರಮದಿಂದ ಹೊರತಾದ ಪ್ರಶ್ನೆ: ತಜ್ಞರ ಸಮಿತಿ ರಚಿಸಿದ ಸರ್ಕಾರ

Date:

ಇತ್ತೀಚೆಗೆ ನಡೆದಿದ್ದ ಸಿಇಟಿ-2024 ಪರೀಕ್ಷೆಯಲ್ಲಿ ಪಠ್ಯಕ್ರಮದ ಹೊರತಾಗಿರುವ ಪ್ರಶ್ನೆಗಳ ಬಗ್ಗೆ ವಿವಾದ ಉಂಟಾದ ಬೆನ್ನಲ್ಲೇ, ಈ ಬಗ್ಗೆ ಪರಿಶೀಲನೆ ನಡೆಸಲು ಸರ್ಕಾರವು ತಜ್ಞರ ಸಮಿತಿ ರಚನೆ ಮಾಡಿ, ಆದೇಶಿಸಿದೆ.

- Advertisement -

ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಸಿಇಟಿ) ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಯಿಂದ ಏ.18 ಮತ್ತು 19ರಂದು ನಡೆಸಲಾಗಿತ್ತು. ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ ಮತ್ತು ಜೀವಶಾಸ್ತ್ರ ಸೇರಿದಂತೆ ನಾಲ್ಕು ವಿಷಯಗಳಲ್ಲಿ ನಡೆಸಲಾಗಿತ್ತು. ರಾಜ್ಯಾದ್ಯಂತ 3 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

ಪರೀಕ್ಷೆಗಳು ನಡೆದ ನಂತರ ಪತ್ರಿಕೆಗಳ ಹಲವಾರು ಪ್ರಶ್ನೆಗಳು ಸಿಇಟಿಯ ವಠ್ಯಕ್ರಮದ ಹೊರತಾಗಿವೆ ಎಂದು ಸುದ್ದಿ ವರದಿಗಳು ಉಲ್ಲೇಖಿಸಿವೆ. ಅನೇಕ ಪ್ರಶ್ನೆಗಳು ವಠ್ಯಕ್ರಮದ ಹೊರತಾಗಿರುವ ಕಾರಣ ಇದು ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರಿದೆ ಎಂದು ಕೋರಿರುವ ಮನವಿಗಳು ಸಹ ಸ್ವೀಕೃತವಾಗಿದೆ. ಆದುದರಿಂದ, ಗ್ರೇಸ್ ಅಂಕಗಳನ್ನು ಒದಗಿಸುವಂತೆ ಅಥವಾ ಪರೀಕ್ಷೆಯನ್ನು ಮರು ನಡೆಸುವಂತೆ ಬೇಡಿಕೆಗಳನ್ನು ಸಹ ಸಲ್ಲಿಸಲಾಗಿದೆ. ಪ್ರಶ್ನೆಗಳಿಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಕೆಇಎಯು ವಿದ್ಯಾರ್ಥಿಗಳಿಗೆ  ಏಪ್ರಿಲ್ 27ರವರೆಗೆ ಅವಕಾಶ ನೀಡಿದೆ. ಈ ಸಂಬಂಧ ಸರ್ಕಾರಕ್ಕೆ ವಿಸ್ತ್ರತ ವರದಿ ಸಲ್ಲಿಸುವಂತೆ ‘ಕೆಇಎ’ ಗೆ ಸೂಚಿಸಲಾಗಿದೆ ಎಂದು ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಶ್ರೀಕರ್ ಎಂ ಎಸ್ ತಿಳಿಸಿದ್ದಾರೆ.

ಏತನ್ಮಧ್ಯೆ, ಈ ಪ್ರಕರಣದ ಬಗ್ಗೆ, ಸರ್ಕಾರವು ಪರಿಶೀಲನೆ ನಡೆಸಿದೆ ಮತ್ತು ಸಿಇಟಿಯ ಪಠ್ಯಕ್ರಮದಿಂದ ಹೊರತಾಗಿರುವ ಪ್ರಶ್ನೆಗಳ ಸಂಖ್ಯೆಗಳನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು ಪ್ರತಿ 4 ವಿಷಯಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ತಜ್ಞರ ಸಮಿತಿಯನ್ನು ರಚಿಸಿದೆ. ತಜ್ಞರ ಸಮಿತಿಯು ತನ್ನ ವರದಿಯನ್ನು ತಕ್ಷಣವೇ ನೀಡುವಂತೆ ಆದೇಶಿಸಿದ್ದಾರೆ.

ಇದನ್ನು ಓದಿದ್ದೀರಾ? ದ್ವೇಷ ಭಾಷಣ ವಿವಾದದ ಬೆನ್ನಲ್ಲೇ ‘ಡ್ಯಾಮೇಜ್ ಕಂಟ್ರೋಲ್‌’ಗೆ ಮುಂದಾದ ಪ್ರಧಾನಿ ಮೋದಿ!

ಸಿಇಟಿ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ‘ಕೆಇಎ’ ಯು ಕಾರ್ಯನಿರ್ವಹಿಸಲಿದೆ. ತಜ್ಞರ ಸಮಿತಿಯ ವರದಿಯನ್ನು ಆಧರಿಸಿ ಈ ಬಗ್ಗೆ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು. ವಿದ್ಯಾರ್ಥಿಗಳ ಹಿತಾಸಕ್ತಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಮತ್ತು ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಉನ್ನತ ಶಿಕ್ಷಣ ಇಲಾಖೆಯು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಾತೃಭಾಷೆಯೇ ಜ್ಞಾನಭಾಷೆ: ಶಿಕ್ಷಣ ಯಾರ ಹಕ್ಕು?

ಶಿಕ್ಷಣ ಅಂಕಗಳಿಗಾಗಿ ಅಲ್ಲ; ಮನುಷ್ಯನನ್ನು ರೂಪಿಸುವುದಕ್ಕಾಗಿ. ಅದು ಮಾರುಕಟ್ಟೆಯ ಸರಕಲ್ಲ; ಪ್ರತಿಯೊಂದು...

‘ಶಿಕ್ಷಣದಲ್ಲಿ ಒಳಗೊಳ್ಳುವಿಕೆ-ಒಳಗೊಳ್ಳುವಿಕೆಯಲ್ಲಿ ಶಿಕ್ಷಣ’

ಶಿಕ್ಷಣವೆಂದರೆ ಕೇವಲ ಶಾಲೆಗೆ ಹೋಗುವುದು, ಪರೀಕ್ಷೆ ಬರೆಯುವುದು, ಅಂಕ ಗಳಿಸುವುದು ಮತ್ತು...

ಸಿ. ಪಾರ್ವತಮ್ಮ: ಸಾಮಾಜಿಕ ಮಾನವಶಾಸ್ತ್ರಜ್ಞೆಯ ಪ್ರಶ್ನೆಗಳು

ಪಾರ್ವತಮ್ಮನವರು ತಮ್ಮ ಅಧ್ಯಯನದ ಮೂಲಕ ಬ್ರಾಹ್ಮಣವಾದಿ ಸಮಾಜಶಾಸ್ತ್ರ ಚಿಂತನೆಗಳ ಎಲ್ಲಾ ಪದರುಗಳನ್ನು...