ಇಂದು ಪಿಯುಸಿ ಫಲಿತಾಂಶ: ಆನ್‌ಲೈನ್‌ನಲ್ಲಿ ಪರಿಶೀಲಿಸುವುದು ಹೇಗೆ?

Date:

Advertisements

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಇಂದು (ಏಪ್ರಿಲ್ 8ರ ಮಂಗಳವಾರ) ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ. ಪರೀಕ್ಷೆಯ ಫಲಿತಾಂಶವು ಇಂದು ಮಧ್ಯಾಹ್ನ ಪ್ರಕಟವಾಗಲಿದೆ.

ಮಧ್ಯಾಹ್ನ 12:30ಕ್ಕೆ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಲ್ಲೇಶ್ವರಂನಲ್ಲಿರುವ ಮಂಡಳಿಯ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಸ ಪ್ರಕಟಿಸಲಿದ್ದಾರೆ. ಸುದ್ಧಿಗೋಷ್ಠಿಯ ಬಳಿಕ ಮಧ್ಯಾಹ್ನ 1.30 ಕ್ಕೆ ಅಧಿಕೃತ ವೆಬ್‌ಸೈಟ್‌ನಲ್ಲಿ ಫಲಿತಾಂಶವನ್ನು ಪರಿಶೀಲಿಸಬಹುದು.

ದ್ವಿತೀಯ ಪಿಯುಸಿ ಪರೀಕ್ಷೆಯು ಕಳೆದ ಮಾರ್ಚ್ 1 ರಿಂದ ಆರಂಭಗೊಂಡು ಮಾರ್ಚ್ 20 ರಂದು ಮುಕ್ತಾಯಗೊಂಡಿತ್ತು. ಈ ಬಾರಿ ಸುಮಾರು 7.13 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಪರೀಕ್ಷೆ ಮುಗಿದ ಮರುದಿನದಿಂದಲೇ 76 ಕೇಂದ್ರಗಳಲ್ಲಿ ಸುಮಾರು 25 ಸಾವಿರಕ್ಕೂ ಹೆಚ್ಚು ಮೌಲ್ಯಮಾಪಕರು ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆಸಿದ್ದರು. ಏಪ್ರಿಲ್ 3 ವೇಳೆಗೆ ಮೌಲ್ಯಮಾಪನ ಪೂರ್ಣಗೊಂಡಿತ್ತು. ಇದೀಗ ಫಲಿತಾಂಶದ ಕಂಪ್ಯೂಟರೀಕರಣ ಕಾರ್ಯ ಮುಗಿಸಿ ಫಲಿತಾಂಶ ಪ್ರಕಟಣೆ ಆಗುತ್ತಿದೆ. ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನವನ್ನು ತ್ವರಿತಗತಿಯಲ್ಲಿ ನಡೆಸಲಾಗಿದೆ.

Advertisements

ಇದನ್ನು ಓದಿದ್ದೀರಾ? ಐಪಿಎಲ್ : ಮುಂಬೈ ವಿರುದ್ಧ ರೋಚಕವಾಗಿ ಗೆದ್ದ ಆರ್‌ಸಿಬಿ

1.30ರ ವೇಳೆಗೆ ವಿದ್ಯಾರ್ಥಿಗಳು ವೆಬ್‌ಸೈಟ್‌ https://karresults.nic.in ಅಥವಾ kseab.karnataka.gov.in ಭೇಟಿ ನೀಡಿ, ತಮ್ಮ ಫಲಿತಾಂಶ ವೀಕ್ಷಿಸಬಹುದು.

ಫಲಿತಾಂಶ ನೋಡೋದು ಹೇಗೆ?
ಹಂತ 1: ಅಧಿಕೃತ ವೆಬ್‌ಸೈಟ್‌ karresults.nic.in ಗೆ ಹೋಗಿ:
ಹಂತ 2: ಮುಖಪುಟದಲ್ಲಿ ಲಭ್ಯವಿರುವ ಕರ್ನಾಟಕ 2ನೇ ಪಿಯುಸಿ ಫಲಿತಾಂಶ 2025( Second PU Results 2025) ಲಿಂಕ್ ಅನ್ನು ಕ್ಲಿಕ್ ಮಾಡಿ
ಹಂತ 3: ಸ್ಟ್ರೀಮ್ ಆಯ್ಕೆಮಾಡಿ ಮತ್ತು ನೋಂದಣಿ ಸಂಖ್ಯೆಯನ್ನು ಟೈಪ್‌ ಮಾಡಿ
ಹಂತ 4: ಕರ್ನಾಟಕ 2 ನೇ ಪಿಯುಸಿ ಫಲಿತಾಂಶ 2025 ಪರದೆಯ ಮೇಲೆ ಕಾಣಿಸುತ್ತದೆ
ಹಂತ 5: ಸ್ಕೋರ್‌ಕಾರ್ಡ್ ಪಿಡಿಎಫ್ ವೀಕ್ಷಿಸಿ ಮತ್ತು ಡೌನ್‌ಲೋಡ್ ಮಾಡಿ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X