ಹಾಜರಾತಿ ಕೊರತೆ | ಪರೀಕ್ಷೆ ವಂಚಿತ ಪಿಯು ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಗೆ ಅವಕಾಶ

Date:

‘ಹಾಲ್‌ ಟಿಕೆಟ್’ ಇದೆ ಆದರೆ, ಕನಿಷ್ಠ ಹಾಜರಾತಿ ಇಲ್ಲ ಎಂದು ಪಿಯುಸಿ ಪರೀಕ್ಷೆಯಿಂದ ಹೊರಗುಳಿದಿದ್ದ ವಿದ್ಯಾರ್ಥಿಗಳು ಪೂರಕ ಪರೀಕ್ಷೆ ಬರೆಯಬಹುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಹೇಳಿದೆ.

2022-23ನೇ ಸಾಲಿನಲ್ಲಿ ಹಾಜರಾತಿ ಕೊರತೆಯಿಂದ ಪರೀಕ್ಷೆ ಕೇಂದ್ರದಿಂದ ಹೊರಗುಳಿದಿದ್ದ ವಿದ್ಯಾರ್ಥಿಗಳು ಮೇ 23ರಿಂದ ಪ್ರಾರಂಭವಾಗುವ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ನೊಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ಕನಿಷ್ಠ ಶೇ. 75ರಷ್ಟು ಹಾಜರಾತಿ ಹೊಂದಿರುವವರು ಮಾತ್ರ ದ್ವೀತಿಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಅರ್ಹರು ಎಂದು ಈ ಹಿಂದೆಯಿಂದಲೂ ಶಿಕ್ಷಣ ಇಲಾಖೆ ಸೂಚನೆ ನೀಡಿತ್ತು. ಕನಿಷ್ಠ ಹಾಜರಾತಿಯೂ ಇಲ್ಲದ ಕಾರಣಕ್ಕೆ ಕಲಾ ಮತ್ತು ವಾಣಿಜ್ಯ ವಿಭಾಗದಿಂದ ಹನ್ನೆರಡು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಮುಖ್ಯ ಪರೀಕ್ಷೆಯಿಂದ ವಂಚಿತರಾಗಿದ್ದರು. ಈ ವಿದ್ಯಾರ್ಥಿಗಳಿಗೆ ಮಾತ್ರ ಮಂಡಳಿ ಮತ್ತೊಂದು ಅವಕಾಶ ಮಾಡಿಕೊಟ್ಟಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ದ್ವಿತೀಯ ಪಿಯುಸಿ ಪರೀಕ್ಷೆ 2023 ಕ್ಕೆ ಅಂದಾಜು 7,26,195 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ರಾಜ್ಯದಲ್ಲಿ 1,109 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆದರು.

ಈ ಸುದ್ದಿ ಓದಿದ್ದೀರಾ?: ನಕಲಿ ಅಂಕಪಟ್ಟಿ | 51 ವಿದ್ಯಾರ್ಥಿಗಳ ಪ್ರವೇಶಾತಿ ರದ್ದು: ವಿಟಿಯು

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಪ್ರಿಲ್ 3ರಂದೇ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಎಂಬುದು ಸುಳ್ಳು; ಮತ್ತೆ ಯಾವಾಗಾ? ಇಲ್ಲಿದೆ ಮಾಹಿತಿ

ದ್ವಿತೀಯ ಪಿಯುಸಿ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ...

5, 8, 9ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ

ಹೈಕೋರ್ಟ್ ವಿಭಾಗೀಯ ಪೀಠದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದ ಹಿನ್ನೆಲೆ,...