ಏಪ್ರಿಲ್ 3ರಂದೇ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಎಂಬುದು ಸುಳ್ಳು; ಮತ್ತೆ ಯಾವಾಗಾ? ಇಲ್ಲಿದೆ ಮಾಹಿತಿ

Date:

ದ್ವಿತೀಯ ಪಿಯುಸಿ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (ಕೆಎಸ್‌ಇಎಬಿ) ಏಪ್ರಿಲ್‌ 3ರಂದು ಪ್ರಕಟಿಸಲಿದೆ ಎಂದು ಕೆಲವು ಸುದ್ದಿ ಮಾಧ್ಯಮಗಳು ವರದಿ ಮಾಡುತ್ತಿವೆ. ಆದರೆ, ಕೆಎಸ್‌ಇಎಬಿ 2024ರ ದ್ವಿತೀಯ ಪಿಯುಸಿ ಫಲಿತಾಂಶವನ್ನು ಇಂದು ಪ್ರಕಟಿಸುತ್ತಿಲ್ಲ.

- Advertisement -

“ಮಂಡಳಿಯ ಅಧ್ಯಕ್ಷರು ಖಚಿತಪಡಿಸಿದಂತೆ, ಏಪ್ರಿಲ್ 3 ರಂದು ಫಲಿತಾಂಶಗಳನ್ನು ಪ್ರಕಟಿಸಲಾಗುವುದು ಎಂದು ಹೇಳುವ ವರದಿಗಳು ಸುಳ್ಳು. ನಕಲಿ ಪತ್ರಿಕಾ ಹೇಳಿಕೆಯಿಂದ ಗೊಂದಲ ಸೃಷ್ಟಿಯಾಗಿದ್ದು, ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಂದುವರಿದಿದೆ” ಎಂದು ಮಂಡಳಿ ಸ್ಪಷ್ಟಪಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇಂ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೋರ್ಡ್ ಹೆಸರಿನಲ್ಲಿ ನಕಲಿ ಪತ್ರಿಕಾ ಹೇಳಿಕೆ ನೀಡಿರುವುದು ಸಾರ್ವಜನಿಕರಲ್ಲಿ ಗೊಂದಲ ಮೂಡಿಸಿದೆ. 2024ರ ದ್ವಿತೀಯ ಪಿಯುಸಿ ಫಲಿತಾಂಶವನ್ನುಸ ಏಪ್ರಿಲ್ 3 ರಂದು ಪ್ರಕಟಿಸಲಾಗುವುದು ಎಂಬ ಹೇಳಿಕೆಗಳು ನಕಲಿ ಎಂದು ಸ್ಥಳೀಯ ಪತ್ರಿಕೆಯೊಂದು ವರದಿ ಮಾಡಿದ್ದು ಮಂಡಳಿಯ ಅಧ್ಯಕ್ಷರನ್ನು ಉಲ್ಲೇಖಿಸಿದೆ.

“ಪ್ರಸ್ತುತ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ನಡೆಯುತ್ತಿದೆ. ಈ ಪ್ರಕ್ರಿಯೆ ಪೂರ್ಣಗೊಂಡ ನಂತರ, ದ್ವಿತೀಯ ಪಿಯುಸಿ ಫಲಿತಾಂಶ ಘೋಷಣೆಗೆ ದಿನಾಂಕ ಮತ್ತು ಸಮಯವನ್ನು ನಿಗದಿಪಡಿಸಲಾಗುವುದು” ಎಂದು ಮಂಡಳಿಯ ಅಧ್ಯಕ್ಷರು ತಿಳಿಸಿದ್ದಾರೆ.

“ಸಾಮಾಜಿಕ ಜಾಲತಾಣಗಳಲ್ಲಿ ಇಂತಹ ತಪ್ಪು ದಾರಿಗೆಳೆಯುವ ಹಾಗೂ ಅನಧಿಕೃತ ಮಾಹಿತಿಗಳಿಗೆ ವಿದ್ಯಾರ್ಥಿಗಳು ಮತ್ತು ಪೋಷಕರು ಮರುಳಾಗಬಾರದು. ದ್ವಿತೀಯ ಪಿಯುಸಿ ಫಲಿತಾಂಶ ದಿನಾಂಕ ಮತ್ತು ಪರೀಕ್ಷೆಗೆ ಸಂಬಂಧಿಸಿದ ಇತರ ವಿವರಗಳ ಬಗ್ಗೆ ಅಧಿಕೃತ ಮಾಹಿತಿಗಾಗಿ, ಮಂಡಳಿಯ ಅಧಿಕೃತ ವೆಬ್‌ಸೈಟ್ kseab.karnataka.gov.in ಗೆ ಭೇಟಿ ನೀಡಬೇಕು” ಎಂದು ಸಲಹೆ ನೀಡಿದರು.

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾದಾಗ, ಫಲಿತಾಂಶಗಳು karresults.nic.in ನಲ್ಲಿ ಲಭ್ಯವಿರುತ್ತವೆ. ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ವಿಷಯ ಯಾವುದು ಎನ್ನುವುದನ್ನು ತಿಳಿಸಿ ಪರಿಶೀಲಿಸಬಹುದು.

ಮಾರ್ಚ್ 1 ರಿಂದ 23 ರವರೆಗೆ 1,124 ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆದಿದ್ದು, ಸುಮಾರು 7 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ಮಾ.25ರಂದು ಮೌಲ್ಯಮಾಪನ ಕಾರ್ಯ ಆರಂಭವಾಗಿದೆ.

ಈ ಸುದ್ದಿ ಓದಿದ್ದೀರಾ? ಕೊಲ್ಕತ್ತಾ | ಅಪರಿಚಿತ ಮಹಿಳೆಯ ಕತ್ತರಿಸಿದ ದೇಹದ ಭಾಗಗಳು 3 ಪ್ಲಾಸ್ಟಿಕ್​ ಚೀಲಗಳಲ್ಲಿ ಪತ್ತೆ

ಈ ವರ್ಷ 3.3 ಲಕ್ಷ ವಿದ್ಯಾರ್ಥಿಗಳು ಮತ್ತು 3.6 ಲಕ್ಷ ವಿದ್ಯಾರ್ಥಿನಿಯರು ಸೇರಿದಂತೆ ಒಟ್ಟು 6.9 ಲಕ್ಷ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗಿದ್ದರು. ಪರೀಕ್ಷೆಗಳನ್ನು 2024ರ ಮಾರ್ಚ್ 1 ರಿಂದ ಮಾರ್ಚ್ 22 ರವರೆಗೆ ನಡೆಸಲಾಯಿತು. 2024ರ ದ್ವಿತೀಯ ಪಿಯುಸಿ ಪರೀಕ್ಷೆಯು 80+20 ಮಾದರಿಯನ್ನು ಅನುಸರಿಸಿದೆ. ಇದು 80 ಅಂಕಗಳ ಲಿಖಿತ ಪರೀಕ್ಷೆ ಮತ್ತು 20 ಅಂಕಗಳ ಆಂತರಿಕ ಮೌಲ್ಯಮಾಪನವನ್ನು ಒಳಗೊಂಡಿದೆ.

ಪ್ರಥಮ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (ಕೆಎಸ್‌ಇಎಬಿ) ಮಾರ್ಚ್ 30 ರಂದು ಪ್ರಥಮ ಪಿಯುಸಿ ಫಲಿತಾಂಶ ಪ್ರಕಟಿಸಿದೆ. ಇದೀಗ, ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಗಳ ಫಲಿತಾಂಶಕ್ಕಾಗಿ ಕುತೂಹಲದಿಂದ ಕಾಯುತ್ತಿದ್ದಾರೆ. ವರದಿಗಳ ಪ್ರಕಾರ, ಕೆಎಸ್‌ಇಎಬಿ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶಗಳನ್ನು ಏಪ್ರಿಲ್ ಮೂರನೇ ವಾರದಲ್ಲಿ ಪ್ರಕಟಿಸುವ ಸಾಧ್ಯತೆಯಿದೆ. ಪ್ರಥಮ ಪಿಯುಸಿ ಫಲಿತಾಂಶಗಳಂತೆಯೇ, ಮಂಡಳಿಯು ತನ್ನ ಅಧಿಕೃತ ವೆಬ್‌ಸೈಟ್ karresults.nic.in ನಲ್ಲಿ ದ್ವಿತೀಯ ಪಿಯುಸಿ ಫಲಿತಾಂಶಗಳನ್ನು ಬಿಡುಗಡೆ ಮಾಡುವ ನಿರೀಕ್ಷೆಯಿದೆ.

karresults.nic.in ನಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಹೇಗೆ ಪರಿಶೀಲಿಸುವುದು?

  • karresults.nic.in ನಲ್ಲಿ ಕರ್ನಾಟಕ ಫಲಿತಾಂಶ ಪೋರ್ಟಲ್‌ಗೆ ಭೇಟಿ ನೀಡಿ.
  • ಮುಖಪುಟದಲ್ಲಿ ನೀಡಲಾದ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದ ಲಿಂಕ್ ಅನ್ನು ತೆರೆಯಿರಿ.
  • ಲಾಗಿನ್ ಪುಟದಲ್ಲಿ, ನಿಮ್ಮ KSEAB ನೋಂದಣಿ ಸಂಖ್ಯೆಯನ್ನು ಹಾಕಿ ಮತ್ತು ವಿಷಯವನ್ನು ಆಯ್ಕೆ ಮಾಡಿ (ವಿಜ್ಞಾನ/ಕಲೆ/ವಾಣಿಜ್ಯ)
  •  ನಂತರ, ನಿಮ್ಮ ದ್ವಿತೀಯ ಪಿಯುಸಿ ಫಲಿತಾಂಶವನ್ನು ಮುಂದಿನ ಪುಟದಲ್ಲಿ ಪರಿಶೀಲಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕದ ನೀರಾವರಿ ಯೋಜನೆಗಳಿಗೆ ಕೇಂದ್ರದ ನೆರವು ಕೋರಿದ ಸಿಎಂ ಡಿಕೆ ಶಿವಕುಮಾರ್

ರಾಜ್ಯದ ಕುಡಿಯುವ ನೀರು, ನೀರಾವರಿ ಹಾಗೂ ಬರ ಪರಿಹಾರದ ಅಗತ್ಯಗಳನ್ನು ಈಡೇರಿಸಲು...

ಮೈಸೂರು ದಸರಾ: ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ...

SIR ಎಂಬ ತಾಂತ್ರಿಕ ರೋಗ ಮತದಾರರಿಗೆ ಶಾಪವಾಗಿದೆಯೇ?

ಎಸ್‌ಐಆರ್‌ ಪ್ರಕ್ರಿಯೆಯು ಯಶಸ್ವಿಯಾಗಿ ಮುಕ್ತಾಯಗೊಳ್ಳಲು ಸಾರ್ವಜನಿಕ ಜಾಗೃತಿ, ಅಧಿಕೃತ ಮಾಹಿತಿಯ ಸುಲಭ...