51,000 ಅತಿಥಿ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಚಾಲನೆ: ಮಧು ಬಂಗಾರಪ್ಪ

Date:

ಜೂನ್‌ ಆರಂಭದಲ್ಲಿ ಒಟ್ಟು 51 ಸಾವಿರ ಅತಿಥಿ ಶಿಕ್ಷಕರ ನೇಮಕಾತಿ ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ  ಶಿಕ್ಷಕರ ಹುದ್ದೆಗಳ ಭರ್ತಿ ಮಾಡುವ ಉದ್ದೇಶದಿಂದ ಶಾಲಾ ಶಿಕ್ಷಣ ಮತ್ತು ಸಾಕ್ಷರತ ಇಲಾಖೆ ಅಥಿತಿ ಶಿಕ್ಷಕರ ತಾತ್ಕಾಲಿಕ ನೇಮಕ ಪ್ರಕ್ರಿಯೆ ಕೈಗೊಳ್ಳಲಾಗಿದೆ”  ಎಂದು ತಿಳಿಸಿದರು.  

ಶೈಕ್ಷಣಿಕ ವರ್ಷಾರಂಭದ ಹಿನ್ನೆಲೆ ಶಾಲೆಗಳಲ್ಲಿ ಶಿಕ್ಷಕರ ಕೊರತೆಯಿಂದ ವಿದ್ಯಾರ್ಥಿಗಳ ಕಲಿಕೆಗೆ ಅಡ್ಡಿ ಉಂಟಾಗಬಾರದು ಎಂಬ ಉದ್ದೇಶದಿಂದ ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ಈ ಪ್ರಕ್ರಿಯೆ ಜರುಗಲಿದೆ. ಪ್ರಾಥಮಿಕ ಶಾಲೆಗಳಿಗೆ 40,000, ಪ್ರೌಡ ಶಾಲೆಗಳಿಗೆ 11,000 ಅಥಿತಿ ಶಿಕ್ಷಕರ ನೇಮಕಾತಿಗೆ ಆದೇಶ ಹೊರಡಿಸಲಾಗಿದೆ.

“ಇದು ತಾತ್ಕಾಲಿಕ ನೇಮಕಾತಿಯಾಗಿದ್ದು, ಖಾಯಂ ಶಿಕ್ಷಕರು ನೇಮಕವಾಗುವವರೆಗೂ ಇಲ್ಲವೇ 2026-27 ನೇ ಶೈಕ್ಷಣಿಕ ವರ್ಷದ ಅಂತ್ಯದವರೆಗೂ ಅತಿಥಿ ಶಿಕ್ಷಕರು ಸೇವೆ ಸಲ್ಲಿಸಲಿದ್ದಾರೆ” ಎಂದು ಸರ್ಕಾರ ಸ್ಪಷ್ಟ ಪಡಿಸಿದೆ.

ಕಲಿಕಾ ಚಟುವಟಿಕೆಗಳಲ್ಲಿ ವ್ಯತ್ಯಯ ಎದುರಾಗದಂತೆ ವಿದ್ಯಾರ್ಥಿಗಳ ಕಲಿಕಾ ಪ್ರಕ್ರಿಯೆ ಕುಂಠಿತವಾಗದಂತೆ ನಿಗಾ ವಹಿಸುವ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಅತಿಥಿ ಶಿಕ್ಷಕರಿಗೆ ಸಲ್ಲಬೇಕಾದ ಗೌರವಧನ ಪಾವತಿಗೆ ಅಗತ್ಯ ಅನುದಾನ ಹಾಗೂ ಜಿಲ್ಲಾವಾರು ಹಂಚಿಕೆಯ ಕುರಿತಾಗಿ ಪ್ರಸ್ತಾಪನೆ ಸಲ್ಲಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸರ್ಕಾರ ಸೂಚನೆ ನೀಡಿದೆ.


ಕೆಪಿಎಸ್‌ ಶಾಲೆಗಳು ದೇಶಕ್ಕೆ ಮಾದರಿ:
ಕೆಪಿಎಸ್‌ ಶಾಲೆಗಳೂ ದೇಶದ ಶಿಕ್ಷಣ ವ್ಯವಸ್ಥೆಗೆ ಮಾದರಿಯಾಗಿದ್ದು, ತೆಲಂಗಾಣ ಸರ್ಕಾರವೂ ಈ ಮಾದರಿಯನ್ನು ಅಳವಡಿಸಿಕೊಳ್ಳುವ ಸಿದ್ದತೆಯಲ್ಲಿದೆ ಎಂದು ಸಚಿವ ಮಧು ಬಂಗಾರಪ್ಪ ಸಂತಸ ವ್ಯಕ್ತಪಡಿಸಿದರು. ಶಿವಮೊಗ್ಗದಲ್ಲಿ 1,000 ಕೆಪಿಎಸ್‌ ಶಾಲೆಗಳ ನಿರ್ಮಾಣಕ್ಕೆ ಜೂನ್‌ 1 ರಂದು ಶಂಕು ಸ್ಥಾಪನೆ ನೆರವೇರಲಿದೆ. ಪ್ರತೀ ಶಾಲೆಗೆ ರೂ. 3.5 ಕೋಟಿ ಮೊತ್ತ ಭರಿಸಲಾಗುತ್ತಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.



eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು ಸಾಧ್ಯವಲ್ಲವೇ?

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ...

ಕ್ಯಾನ್ಸರ್ ರೋಗಿಗಳಿಗೆ ಗುಡ್‌ನ್ಯೂಸ್‌; ದುಬಾರಿ ಔಷಧಗಳ ಬೆಲೆ ಶೇ.70ರವರೆಗೆ ಇಳಿಕೆ?

ದೇಶದಲ್ಲಿ ದುಬಾರಿಯಾಗಿರುವ ಕೆಲವು ಕ್ಯಾನ್ಸರ್ ಔಷಧಗಳ ಬೆಲೆ ಶೀಘ್ರದಲ್ಲೇ ಭಾರಿ ಪ್ರಮಾಣದಲ್ಲಿ...