ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾರ್ಚ್‌ 21ರಿಂದ ಆರಂಭ; ಈ ನಿಯಮಗಳ ಬಗ್ಗೆ ಎಚ್ಚರಿಕೆ ಇರಲಿ!

Date:

ರಾಜ್ಯದಲ್ಲಿ ಮಾರ್ಚ್‌ 21ರಿಂದ (ಶುಕ್ರವಾರ) ಎಸ್‌ಎಸ್‌ಎಸ್‌ ಪರೀಕ್ಷೆಗಳು ಆರಂಭವಾಗಲಿವೆ. ಸುಮಾರು 8.96 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹಾಜರಾಗುವುದಕ್ಕೂ ಮುನ್ನ ಮತ್ತು ಪರೀಕ್ಷಾ ಕೊಠಡಿಯಲ್ಲಿ ಪಾಲಿಸಬೇಕಾದ ಕೆಲವು ನಿಯಮಗಳನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸೂಚಿಸಿದೆ.

- Advertisement -

ರಾಜ್ಯಾದ್ಯಂತ ಒಟ್ಟು 2,818 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಪರೀಕ್ಷೆ ಬರೆಯುವ 8.96 ಲಕ್ಷ ವಿದ್ಯಾರ್ಥಿಗಳ ಪೈಕಿ, 4.61 ಲಕ್ಷ ಬಾಲಕರು, 4.34 ಲಕ್ಷ ಬಾಲಕಿಯರಿದ್ದಾರೆ. ಪರೀಕ್ಷೆಗಳು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.15ರವರೆಗೆ ನಡೆಯಲಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಮಾರ್ಚ್‌ 21ರಂದು ಕಲಿಕೆಯ ಪ್ರಥಮ ಭಾಷೆಗಳಾದ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್‌ ಹಾಗೂ ಸಂಸ್ಕೃತ ವಿಷಯಗಳ ಪರೀಕ್ಷೆಗಳು ನಡೆಯಲಿವೆ. 24ರಂದು ಗಣಿತ, 26ರಂದು ದ್ವಿತೀಯ ಭಾಷೆಗಳಾದ ಇಂಗ್ಲಿಷ್‌, ಕನ್ನಡ, 29ರಂದು ಸಮಾಜ ವಿಜ್ಞಾನ, ಏಪ್ರಿಲ್‌ 1ರಂದು ಅರ್ಥಶಾಸ್ತ್ರ, ಎಂಜಿನಿಯರಿಂಗ್‌ ವಿಷಯಗಳು, ಏಪ್ರಿಲ್ 2ರಂದು ವಿಜ್ಞಾನ ಹಾಗೂ ರಾಜ್ಯಶಾಸ್ತ್ರ, ಹಿಂದೂಸ್ತಾನಿ, ಕರ್ನಾಟಕ ಸಂಗೀತ, ಏಪ್ರಿಲ್ 4ರಂದು ತೃತೀಯ ಭಾಷೆಗಳಾದ ಹಿಂದಿ, ಕನ್ನಡ, ಇಂಗ್ಲಿಷ್‌, ಅರೇಬಿಕ್‌, ಪರ್ಷಿಯನ್‌, ಉರ್ದು, ಸಂಸ್ಕೃತ, ಕೊಂಕಣಿ, ತುಳು ಹಾಗೂ ಎನ್‌ಎಸ್‌ಕ್ಯೂಎಫ್‌ ವಿಷಯಗಳಿಗೆ ಪರೀಕ್ಷೆಗಳು ನಡೆಯಲಿವೆ.

ಪರೀಕ್ಷಾ ಕೇಂದ್ರಗಳಲ್ಲಿ ಅಕ್ರಮ ಅಥವಾ ನಕಲು ತಡೆಯಲು ಎಲ್ಲ ಕೇಂದ್ರಗಳಲ್ಲಿ ಸಿಟಿ ಟಿವಿ ಮತ್ತು ವೆಬ್ ಕ್ಯಾಸ್ಟಿಂಗ್‌ ಅಳವಡಿಸಲಾಗಿದೆ. ಇದನ್ನು ಜಿಲ್ಲಾ ಪಂಚಾಯಿತಿ ಸಿಇಒ ಕಚೇರಿಯಲ್ಲಿ ನಿಯಂತ್ರಣ ಕೊಠಡಿಯಿಂದ ನಿಯಂತ್ರಿಸಲಾಗುತ್ತದೆ. ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್‌ಟಿಡಿ, ಮೊಬೈಲ್ ಪೇಜರ್, ಝರಾಕ್ಸ್, ಟೈಪಿಂಗ್ ಮುಂತಾದವುಗಳನ್ನು ನಿಷೇಧಿಸಲಾಗಿದೆ.

ವಿದ್ಯಾರ್ಥಿಗಳ ಪಾಲಿಸಬೇಕಾದ ನಿಮಯಗಳು;

  • ಗುರುತಿನ ಚೀಟಿ ಹಾಗೂ ಹಾಲ್ ಟಿಕೆಟ್ಅನ್ನು ಕಡ್ಡಾಯವಾಗಿ ಹೊಂದಿರಬೇಕು.
  • ಮೊಬೈಲ್ ಫೋನ್, ಎಲೆಕ್ಟ್ರಿಕಲ್ ಉಪಕರಣಗಳ ಬಳಸುವಂತಿಲ್ಲ.
  • ವಿದ್ಯಾರ್ಥಿಗಳು, ಸರಳ ಕ್ಯಾಲ್ಕುಲೇಟರ್‌ಗಳನ್ನು ಮಾತ್ರವೇ ಬಳಸಬೇಕು.
  • ವಿದ್ಯಾರ್ಥಿಗಳು ಪರೀಕ್ಷಾ ಕೊಠಡಿಯಿಂದ ಹೊರಡುವ ಮುನ್ನ ಉತ್ತರ ಪತ್ರಿಕೆ ಮತ್ತು ಪ್ರಶ್ನೆ ಪತ್ರಿಕೆಗಳನ್ನು ಕಡ್ಡಾಯವಾಗಿ ಮೇಲ್ವಿಚಾರಕರಿಗೆ ಸಲ್ಲಿಸಬೇಕು.
  • ಪರೀಕ್ಷಾ ಅವಧಿಗಿಂತ ಮುಂಚೆ ಹೊರಕ್ಕೆ ಹೋಗುವ ವಿದ್ಯಾರ್ಥಿಗಳಿಗೆ ಪ್ರಶ್ನೆ ಪತ್ರಿಕೆ ನೀಡಲಾಗುವುದಿಲ್ಲ.
  • ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಹಾಗೂ ಮೌಖಿಕ ಪರೀಕ್ಷೆಗಳನ್ನು ಆಯಾ ಶಾಲೆಗಳಲ್ಲಿ ನಡೆಸಲಾಗುವುದು.
  • ಹಿಂದುಸ್ಥಾನಿ ಸಂಗೀತ ಮತ್ತು ಕರ್ನಾಟಕ ಸಂಗೀತ ವಿಷಯದ ಪರೀಕ್ಷೆಯನ್ನು ಮಧ್ಯಾಹ್ನ 2.00 ಗಂಟೆಯಿಂದ ಸಾಯಂಕಾಲ 5.15 ರವರೆಗೆ ನಿಗದಿಪಡಿಸಿದೆ.

ವಿಶೇಷ ಚೇತನ ವಿದ್ಯಾರ್ಥಿಗಳು ಮೂರು ಗಂಟೆಯ ಪ್ರಶ್ನೆಪತ್ರಿಕೆಗೆ ಉತ್ತರಿಸಲು ಹೆಚ್ಚುವರಿಯಾಗಿ 60 ನಿಮಿಷ, ಎರಡೂವರೆ ಗಂಟೆಯ ಪ್ರಶ್ನೆಪತ್ರಿಕೆಗೆ ಹೆಚ್ಚುವರಿ 50 ನಿಮಿಷ, ಎರಡು ಗಂಟೆಯ ಪ್ರಶ್ನೆಪತ್ರಿಕೆಗೆ ಹೆಚ್ಚುವರಿ 40 ನಿಮಿಷ, ಒಂದೂವರೆ ಗಂಟೆಯ ಪ್ರಶ್ನೆಪತ್ರಿಕೆಗೆ ಹೆಚ್ಚುವರಿ 30 ನಿಮಿಷ ಕಾಲಾವಕಾಶ ನೀಡಲಾಗುವುದು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉರ್ದು, ಮರಾಠಿ ಶಿಕ್ಷಕರ ಪೂರ್ಣ ನೇಮಕಾತಿಗೆ ಕರ್ನಾಟಕ ರಾಜ್ಯ ಮುಸ್ಲಿಂ ಒಕ್ಕೂಟ ಆಗ್ರಹ

ಉರ್ದು ಸೇರಿದಂತೆ ಭಾಷಾ ಅಲ್ಪಸಂಖ್ಯಾತ ಮಾಧ್ಯಮದ ಅಭ್ಯರ್ಥಿಗಳಿಗೆ ಶಿಕ್ಷಕರ ನೇಮಕಾತಿಯಲ್ಲಿ ನೀಡಿದ್ದ...

ಸ್ವಂತ ಸೂರಿಗಾಗಿ ಕಾಯುತ್ತಿರುವ ಅಂಗನವಾಡಿಗಳು: ಇನ್ನೆಷ್ಟು ದಿನ ಬಾಡಿಗೆ ಕಟ್ಟಡದಲ್ಲಿರಬೇಕು?

ಮಕ್ಕಳ ಭವಿಷ್ಯಕ್ಕೆ ಭದ್ರ ಬುನಾದಿ ಹಾಕಬೇಕಾದ ಅಂಗನವಾಡಿ ಕೇಂದ್ರಗಳೇ ಸ್ವಂತ ಸೂರಿಲ್ಲದೆ...

ಅನುಮೋದನೆ ಇಲ್ಲದೆ 8 ಸ್ನಾತಕೋತ್ತರ ಪದವಿ ಕೋರ್ಸ್‌ ಆರಂಭ: ಜಾನಪದ ವಿವಿಗೆ ಉನ್ನತ ಶಿಕ್ಷಣ ಇಲಾಖೆ ನೋಟಿಸ್‌

ಪ್ರಸ್ತುತ ಬ್ಯಾಚ್‌ಗಳ ವಿದ್ಯಾರ್ಥಿಗಳಿಗೆ ಕೋರ್ಸ್ ಪೂರ್ಣಗೊಳಿಸುವುದು, ಪರೀಕ್ಷೆ ಬರೆಯುವುದು ಹಾಗೂ ಪದವಿ...

ಅನುಮತಿ ಇಲ್ಲದೆ 4 ಬಾರಿ ವಿದೇಶಿ ಪ್ರವಾಸ; ಕುವೆಂಪು ವಿವಿ ಕುಲಪತಿ ಶರತ್ ಅನಂತಮೂರ್ತಿಗೆ ರಾಜ್ಯಪಾಲರ ನೋಟಿಸ್

ರಾಜ್ಯಪಾಲರು ಮತ್ತು ವಿಶ್ವವಿದ್ಯಾಲಯದ ಕುಲಾಧಿಪತಿಗಳ ಪೂರ್ವಾನುಮತಿ ಪಡೆಯದೆ ಕುವೆಂಪು ವಿವಿ ಕುಲಪತಿ...