ಎಸ್‌ಎಸ್‌ಎಲ್‌ಸಿ ಪ್ರಶ್ನೆಪತ್ರಿಕೆಯಲ್ಲಿ ಅಂಬೇಡ್ಕರ್‌ರನ್ನು ‘ಆಧುನಿಕ ಮನು’ ಎಂದು ಉಲ್ಲೇಖ; ವ್ಯಾಪಕ ಆಕ್ರೋಶ

Date:

ಎಸ್‌ಎಸ್‌ಎಲ್‌ಸಿ ಪ್ರಶ್ನೆಪತ್ರಿಕೆಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರನ್ನು ‘ಆಧುನಿಕ ಮನು’ ಎಂದು ಉಲ್ಲೇಖಿಸಿರುವುದು ಕಂಡುಬಂದಿದೆ. ಅಂಬೇಡ್ಕರ್‌ರನ್ನು ಮನುಗೆ ಹೋಲಿಕೆ ಮಾಡಿರುವುದರ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

- Advertisement -

ಶುಕ್ರವಾರ ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ದತಾ ಪರೀಕ್ಷೆಗಳು ನಡೆದಿವೆ. ಪರೀಕ್ಷೆಯಲ್ಲಿ ನೀಡಲಾಗಿದ್ದ ಇಂಗ್ಲಿಷ್ ವಿಷಯದ ಪ್ರಶ್ನೆಪತ್ರಿಕೆಯಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಅವರನ್ನು ‘ಆಧುನಿಕ ಮನು’ ಎಂದು ಉಲ್ಲೇಖಿಸಲಾಗಿದೆ. ‘ಡಾ. ಬಿ.ಆರ್ ಅಂಬೇಡ್ಕರ್ ವಾಸ್‌ ದಿ ಮಾಡೆರ್ನ್‌ ಮನು. ಹೌ?’ ಎಂದು ಪ್ರಶ್ನೆಯನ್ನು ಮುದ್ರಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಈ ಪ್ರಶ್ನೆ ಪತ್ರಿಕೆಯನ್ನು ಶಿಕ್ಷಣ ಇಲಾಖೆಯೇ ಮುದ್ರಿಸಿ, ಶಾಲೆಗಳಿಗೆ ಕಳಿಸಿದೆ ಎಂದು ತಿಳಿದುಬಂದಿದೆ. ಅಂಬೇಡ್ಕರರ ಆಶಯವೇ ನಮ್ಮ ನಿಲುವು, ಸಂವಿಧಾನವೇ ನಮ್ಮ ಧ್ಯೇಯ ಎಂದು ಹೇಳಿಕೊಳ್ಳುವ ಕಾಂಗ್ರೆಸ್‌ ಸರ್ಕಾರವೇ ಅಂಬೇಡ್ಕರ್ ಅವರನ್ನು ಆಧುನಿಕ ಮನು ಎಂದು ಕರೆದಿದೆ. ವಿವಾದವನ್ನು ಸೃಷ್ಠಿಸಿದೆ. ಕಾಂಗ್ರೆಸ್‌ ಸರ್ಕಾರದ ನಡೆಯ ವಿರುದ್ಧ ಆಕ್ರೋಶ ವ್ಯಕ್ತವಾಗಿವೆ.

ಎಸ್‌ಎಸ್‌ಎಲ್‌ಸಿ, ಪ್ರಶ್ನೆಪತ್ರಿಕೆ, ಅಂಬೇಡ್ಕರ್‌, ಆಧುನಿಕ ಮನು, SSLC, question paper, Ambedkar, modern Manu,

ಮನುಸ್ಮೃತಿಯನ್ನು ಬರೆದಿದ್ದ ಮನು ಒಬ್ಬ ಜಾತಿವಾದಿ. ಸಮಾಜದಲ್ಲಿ ವರ್ಣಾಶ್ರಮಗಳು ಜಾರಿಯಲ್ಲಿರಬೇಕು ಎಂದು ಪ್ರತಿಪಾದಿಸಿದ್ದವನು. ಶೂದ್ರರು-ಅಸ್ಪೃಶ್ಯರು ಮುಟ್ಟಲು ಅರ್ಹರಲ್ಲದವರು ಎಂದಿದ್ದವನು. ಮಹಿಳೆಯರು 2ನೇ ಪ್ರಜೆಗಳು, ಗಂಡಿನ ಅಧೀನದಲ್ಲಿರಬೇಕು ಎಂದು ಹೇಳಿದ್ದವನು. ಬಿಜೆಪಿ-ಆರ್‌ಎಸ್‌ಎಸ್‌ ಸೇರಿದಂತೆ ಹಿಂದುತ್ವವಾದಿಗಳು ಮನುವನ್ನು ತಮ್ಮ ಆರಾದ್ಯದೈವದಂತೆ ನೋಡುತ್ತಾರೆ. ಬಿಜೆಪಿ-ಆರ್‌ಎಸ್‌ಎಸ್‌ನ ಒಳ ಅಜೆಂಡಾ ಕೂಡ ಮನು ಬರೆದ ಮನುಸ್ಮೃತಿಯನ್ನೇ ಸಂವಿಧಾನ ಮಾಡಬೇಕೆಂಬುದಾಗಿದೆ.

ಶೂದ್ರರು, ತಳ ಸಮುದಾಯದವರು ಹಾಗೂ ಮಹಿಳಾ ವಿರೋಧಿಯಾಗಿದ್ದ ಮನುವಿಗೆ ಸಮಾನತಾವಾದಿ ಅಂಬೇಡ್ಕರ್‌ರನ್ನು ಹೋಲಿಕೆ ಮಾಡಿರುವುದಕ್ಕೆ ವ್ಯಾಪಕ ವಿರೋಧಗಳು ಕೇಳಿಬಂದಿವೆ.

ಅಂದಹಾಗೆ, ಮನು ರಚಿಸಿದದ ಮನುಸ್ಮೃತಿಯನ್ನು ಅಂಬೇಡ್ಕರ್ ಸುಟ್ಟುಹಾಕಿದ್ದರು. ಹಿಂದು ಧರ್ಮದಲ್ಲಿ ಎಲ್ಲರಿಗೂ ಎಲ್ಲ ಅವಕಾಶ, ಹಕ್ಕುಗಳು ದೊರೆಯಬೇಕೆಂದು ಸಂವಿಧಾನ ರಚನಾ ಸಭೆಯಲ್ಲಿ ‘ಹಿಂದು ಕೋಡ್‌ ಬಿಲ್‌’ಅನ್ನು ಮಂಡಿಸಿದ್ದರು.

ಆದರೆ, ಈಗ ಅಂಬೇಡ್ಕರ್ ಅವರು ವಿರೋಧಿಸಿದ್ದ ಮನುವಿಗೇ ಅಂಬೇಡ್ಕರರನ್ನು ಹೋಲಿಸಲಾಗುತ್ತಿದೆ. ಅಂಬೇಡ್ಕರರನ್ನು ‘ಆಧುನಿಕ ಮನು’ ಎಂದು ಕರೆಯಲಾಗುತ್ತಿದೆ. ಅಂಬೇಡ್ಕರ್ ಹಿಂದು ಧರ್ಮದ ಪರವಾಗಿದ್ದರು ಎಂದು ಬಣ್ಣಿಸಲು ಸಂಘಪರಿವಾರವು, ಹಿಂದು ಧರ್ಮದ ಸುಧಾರಣೆಗಾಗಿ ಅಂಬೇಡ್ಕರ್ ‘ಹಿಂದು ಕೋಡ್‌ ಬಿಲ್’ ರಚಿಸಿದ್ದರು. ಆದ್ದರಿಂದ ಅಂಬೇಡ್ಕರ್ ‘ಆಧುನಿಕ ಮನು’ ಎಂಬ ಸುಳ್ಳನ್ನು ಸಮಾಜದಲ್ಲಿ ಹರಿಬಿಟ್ಟಿದೆ. ಆ ಸುಳ್ಳನ್ನೇ ಸತ್ಯವೆಂದು ಭಾವಿಸಿ ಕೆಲವು ಅಂಬೇಡ್ಕರ್ ಅನುಯಾಯಿಗಳೂ ಅಂಬೇಡ್ಕರರನ್ನು ‘ಆಧುನಿಕ ಮನು’ ಎಂದು ಕರೆಯುವುದು ಕಂಡುಬಂದಿದೆ.

ಆದರೆ, ಅಂಬೇಡ್ಕರ್ ಹಿಂದು ಧರ್ಮದ ಸುಧಾಕರರಲ್ಲ. ಹಿಂದು ಧರ್ಮದಲ್ಲಿನ ಅನಿಷ್ಠ ಪದ್ದತಿಗಳ ವಿರುದ್ಧ ಹೋರಾಡಿದವರು. ಶೂದ್ರರು, ಅಸ್ಪೃಷ್ಯರು, ಹಿಂದುಳಿದವರು ಹಾಗೂ ಮಹಿಳೆಯರ ಹಕ್ಕುಗಳು ಮತ್ತು ಸಮಾನತೆಗಾಗಿ ಹೋರಾಟಿದವರು. ಮನುವಾದವನ್ನು ವಿರೋಧಿಸಿದವರು. ಅಂಬೇಡ್ಕರರನ್ನು ‘ಆಧುನಿಕ ಮನು’ ಎಂದು ಕರೆಯುವ ಪರಿಪಾಠವನ್ನು ಕೈಬಿಡಬೇಕು ಎಂದು ಅಂಬೇಡ್ಕರ್‌ ವಾದಿಗಳು ಒತ್ತಾಯಿಸುತ್ತಲೇ ಇದ್ದಾರೆ. ಆದಾಗ್ಯೂ, ಕಾಂಗ್ರೆಸ್‌ ಸರ್ಕಾರ ಅಂಬೇಡ್ಕರರನ್ನು ‘ಆಧುನಿಕ ಮನು’ ಎಂದು ಕರೆದು ಆಕ್ರೋಶಕ್ಕೆ ಗುರಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಮತ ಡಿಲೀಟ್‌ ಮಾಡಲು ಒಳಸಂಚು ಆರೋಪ : ಭಾಲ್ಕಿಯಲ್ಲಿ 32 ಜನರ ವಿರುದ್ಧ FIR

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಯಾವುದೇ ಆಧಾರ...

ಮಂಗಳೂರು ಎಂಆರ್‌ಪಿಎಲ್ ದುರಂತ: ಮೃತ ಕಾರ್ಮಿಕನ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ಘೋಷಣೆ

ಮಂಗಳೂರಿನ ಎಂಆರ್‌‌ಪಿಎಲ್ (MRPL) ಕಾರ್ಖಾನೆಯಲ್ಲಿ ನಡೆದ ದಾರುಣ ಅಪಘಾತದಲ್ಲಿ ಜೀವ ಕಳೆದುಕೊಂಡ...

‘ಎಫ್ಐಆರ್ ದಾಖಲಾಗುವವರೆಗೂ ಚುನಾವಣಾ ಆಯೋಗದ ಕಚೇರಿಯಿಂದ ಕದಲೋದೆ ಇಲ್ಲ’: ಪಟ್ಟು ಹಿಡಿದು ಕುಳಿತ ಸಿಎಂ

'ಎಫ್ಐಆರ್ ದಾಖಲಾಗುವವರೆಗೂ ಕದಲುವುದೇ ಇಲ್ಲ' ಎಂದು ಸ್ಪಷ್ಟವಾಗಿ ಹೇಳಿರುವ ಮುಖ್ಯಮಂತ್ರಿ ಡಿ.ಕೆ....