SSLC, ದ್ವಿತೀಯ PUC ವಾರ್ಷಿಕ ಪರೀಕ್ಷಾ ವೇಳಾಪಟ್ಟಿ ಪ್ರಕಟ

Date:

2025-2026ನೇ ಶೈಕ್ಷಣಿಕ ಸಾಲಿನ SSLC, ದ್ವಿತೀಯ PUC ವಾರ್ಷಿಯ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಪ್ರಕಟಿಸಿದೆ. ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಫೆಬ್ರವರಿ 28ರಿಂದ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ಮಾರ್ಚ್‌ 18ರಿಂದ ಆರಂಭಿಸಲಾಗುತ್ತದೆ ಎಂದು ಮಂಡಳಿ ತಿಳಿಸಿದೆ.

- Advertisement -

ದ್ವಿತೀಯ ಪಿಯುಸಿ ಪರೀಕ್ಷೆಗಳು ಫೆಬ್ರವರಿ 28ರಂದು ಆರಂಭವಾಗಿ ಮಾರ್ಚ್‌ 17ರಂದು ಮುಕ್ತಾಯಗೊಳ್ಳಲಿವೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಮಾರ್ಚ್‌ 18ರಿಂದ ಏಪ್ರಿಲ್ 1ರವರೆಗೆ ನಡೆಯಲಿದೆ ಎಂದು ಮಂಡಳಿ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ತಾತ್ಕಾಲಿಕ ಪರೀಕ್ಷಾ ವೇಳಾಪಟ್ಟಿಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರು ಆಕ್ಷೇಪಣೆಗಳನ್ನು ಸಲ್ಲಿಸಲು ಅಕ್ಟೋಬರ್ 9ರವರೆಗೆ ಅವಕಾಶ ಇರಲಿದೆ. ಯಾವುದೇ ಆಕ್ಷೇಪಣೆಗಳಿದ್ದರೂ, ಆಕ್ಷೇಪಣಾ ಅರ್ಜಿಗಳನ್ನು ಮಂಡಳಿಯ ಇಮೇಲ್‌ [email protected]ಗೆ ಕಳಿಸಬಹುದು ಎಂದು ತಿಳಿಸಿದೆ.

ದ್ವಿತೀಯ ಪಿಯು ಪರೀಕ್ಷಾ ವೇಳಾಪಟ್ಟಿ

ಫೆ.28 – ಕನ್ನಡ, ಅರೇಬಿಕ್‌,
ಮಾರ್ಚ್‌ 2 – ಭೂಗೋಳ ಶಾಸ್ತ್ರ, ಸಂಖ್ಯಾಶಾಸ್ತ್ರ, ಮನಃಶಾಸ್ತ್ರ,
ಮಾರ್ಚ್‌ 3 – ಇಂಗ್ಲಿಷ್‌,
ಮಾರ್ಚ್‌ 4 – ತೆಲುಗು, ತಮಿಳು, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್‌, ಮಲೆಯಾಳಂ,
ಮಾರ್ಚ್‌ 5 – ಇತಿಹಾಸ, ಗೃಹವಿಜ್ಞಾನ,
ಮಾರ್ಚ್‌ 6 – ಭೌತಶಾಸ್ತ್ರ,
ಮಾರ್ಚ್‌ 7 – ಐಚ್ಛಿಕ ಕನ್ನಡ, ಭೂಗರ್ಭ ಶಾಸ್ತ್ರ, ವ್ಯವಹಾರ ಅಧ್ಯಯನ,
ಮಾರ್ಚ್‌ 9 – ರಾಜ್ಯಶಾಸ್ತ್ರ, ಶಿಕ್ಷಣಶಾಸ್ತ್ರ, ಮೂಲಗಣಿತ,
ಮಾರ್ಚ್‌ 10 – ಅರ್ಥಶಾಸ್ತ್ರ,
ಮಾರ್ಚ್‌ 11 – ತರ್ಕಶಾಸ್ತ್ರ, ಜೀವಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ,
ಮಾರ್ಚ್‌ 12 – ಹಿಂದಿ,
ಮಾರ್ಚ್‌ 13 – ರಾಜ್ಯಶಾಸ್ತ್ರ,
ಮಾರ್ಚ್‌ 14 – ಲೆಕ್ಕಶಾಸ್ತ್ರ,
ಮಾರ್ಚ್‌ 16 – ಸಮಾಜ ಶಾಸ್ತ್ರ, ಗಣಿತ,
ಮಾರ್ಚ್‌ 17 – ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ, ರೀಟೇಲ್‌, ಆಟೊಮೊಬೈಲ್‌, ಹೆಲ್ತ್‌ಕೇರ್, ಬ್ಯೂಟಿ ಆ್ಯಂಡ್‌ ವೆಲ್‌ನೆಸ್‌.

ಎಸ್‌ಎಸ್‌ಎಲ್‌ಸಿ ಪರೀಕ್ಷಾ ವೇಳಾಪಟ್ಟಿ

ಮಾರ್ಚ್‌ 18 – ಪ್ರಥಮ ಭಾಷೆಗಳಾದ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್‌ (ಎನ್‌ಸಿಇಆರ್‌ಟಿ), ಸಂಸ್ಕೃತ,
ಮಾರ್ಚ್‌ 20 – ಗಣಿತ,
ಮಾರ್ಚ್‌ 23 – ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ತಾನಿ, ಕರ್ನಾಟಕ ಸಂಗೀತ,
ಮಾರ್ಚ್‌ 25 – ದ್ವಿತೀಯ ಭಾಷೆಗಳಾದ ಇಂಗ್ಲಿಷ್‌, ಕನ್ನಡ,
ಮಾರ್ಚ್‌ 28 – ಸಮಾಜ ವಿಜ್ಞಾನ,
ಮಾರ್ಚ್‌ 30 – ತೃತೀಯ ಭಾಷೆಗಳಾದ ಹಿಂದಿ, ಕನ್ನಡ, ಇಂಗ್ಲಿಷ್‌, ಅರೇಬಿಕ್‌, ಪರ್ಷಿಯನ್‌, ಉರ್ದು, ಸಂಸ್ಕೃತ, ಕೊಂಕಣಿ, ತುಳು, ಎನ್‌ಎಸ್‌ಕ್ಯೂಎಫ್‌,
ಏಪ್ರಿಲ್ 1 – ಅರ್ಥಶಾಸ್ತ್ರ, ಎಂಜಿನಿಯರಿಂಗ್‌ ವಿಷಯಗಳು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ ವಿವಿಯಲ್ಲಿ ಆಯುಧಪೂಜೆ ಕಡ್ಡಾಯ; ಸಾಹಿತಿಗಳು, ಶಿಕ್ಷಣ ತಜ್ಞರು ಖಂಡನೆ

ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರು ಎಲ್ಲ ಅಧ್ಯಯನ ವಿಭಾಗಗಳ ಶಿಕ್ಷಕ/ ಶಿಕ್ಷಕೇತರ ಸಿಬ್ಬಂದಿ...

ʼಬಾಂಬೆ ಬಾಯ್ಸ್‌ʼ ಪುಸ್ತಕ ಹೊರಬಂದರೆ ಮೂರೂ ಪಕ್ಷಗಳ ನಾಯಕರು ಬೆತ್ತಲು: ಎಚ್‌ ವಿಶ್ವನಾಥ್‌ ಹೊಸ ಬಾಂಬ್!‌

‘ಬಾಂಬೆ ಬಾಯ್ಸ್‌’ ಪುಸ್ತಕ ಪ್ರಕಟವಾದರೆ ರಾಜ್ಯದ ಮೂರೂ ಪ್ರಮುಖ ರಾಜಕೀಯ ಪಕ್ಷಗಳ...

ಪ್ರಜಾಪ್ರಭುತ್ವದ ಗಟ್ಟಿತನವಿರುವುದು ಪ್ರಜೆಗಳಿಗೆ ಸರ್ಕಾರವನ್ನು ಪ್ರಶ್ನಿಸುವ ಸ್ವಾತಂತ್ರ್ಯ ಇರುವಲ್ಲಿ: ಸಿಎಂ ಡಿ.ಕೆ ಶಿವಕುಮಾರ್

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರದ ಹೊಣೆಗಾರಿಕೆಯೇ ಬುನಾದಿಯಾಗಿದೆ. ಎಲ್ಲರೂ ಸರ್ಕಾರಕ್ಕೆ ಕುರುಡಾಗಿ ತಲೆಬಾಗುವುದೇ...