ಒಂದು ನಿಮಿಷದ ಓದು | ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ; ಶಿಕ್ಷಕ ಅಮಾನತು

Date:

Advertisements

ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿ, ರಾಜಕೀಯ ಮುಖಂಡರೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದ ಶಿಕ್ಷಕರೊಬ್ಬರನ್ನು ಅಮಾನತುಗೊಳಿಸಲಾಗಿದೆ.

ನೆಲಮಂಗಲದ ಸರ್ಕಾರಿ ಪದವಿ ಪೂರ್ವ ಕಾಲೇಜು ದೈಹಿಕ ಶಿಕ್ಷಕ ಅಂಜ‌ನ್ ಕುಮಾರ್ ಬಿ.ಜೆ ಅಮಾನತಾದ ಶಿಕ್ಷಕ. ಅವರನ್ನು ಅಮಾನತುಗೊಳಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆರ್. ಲತಾ ಆದೇಶ ಹೊರಡಿಸಿದ್ದಾರೆ.

ಚುನಾವಣೆ ಸಂಬಂಧ ನೆಲಮಂಗಲದ ಸೋಲೂರು ಹೋಬಳಿಯಲ್ಲಿ ಸ್ಥಾಪಿಸಲಾಗಿರುವ ಚೆಕ್‌ಪೋಸ್ಟ್‌ನಲ್ಲಿ ಪ್ರಾಧ್ಯಾಪಕ ಮತ್ತು ಮುಖ್ಯಸ್ಥ (ಎಸ್‌ಎಸ್‌ಟಿ) ತಂಡದ ಮುಖ್ಯಸ್ಥರಾಗಿ ಅಂಜನ್ ಕುಮಾರ್ ಬಿ.ಜೆ ಅವರನ್ನು ನೇಮಿಸಲಾಗಿತ್ತು. ಪ್ರತಿದಿನ ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಕಾರ್ಯನಿರ್ವಹಿಸುವತ್ತಿದ್ದರು. ಈ ವೇಳೆ, ರಾಜಕೀಯ ಪಕ್ಷದ ಪ್ರತಿನಿಧಿಗಳೊಂದಿಗೆ ಸೆಲ್ಫಿ ತೆಗೆದುಕೊಂಡು ಸಾಮಾಜಿಕ ಜಾಲತಾಣದಲ್ಲಿ ಅಪ್‌‌ಲೋಡ್ ಮಾಡಿದ್ದರು.

Advertisements
ಶಿಕ್ಷಕ ಅಮಾನತು

ಇದು ನೀತಿ‌ ಸಂಹಿತೆಯ ಉಲ್ಲಂಘನೆಯಾಗಿದ್ದು, ಪ್ರಜಾ ಪ್ರತಿನಿಧಿ ಕಾಯ್ದೆ 1951ರ ಅಡಿ ಶಿಸ್ತು ಕ್ರಮ ಕೈಗೊಳ್ಳಲು 181-ನೆಲಮಂಗಲ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಜಿಲ್ಲಾಧಿಕಾರಿಗೆ ವರದಿ ಸಲ್ಲಿಸಿದ್ದರು. ವರದಿ ಪರಿಶೀಲಿಸಿ ಅಮಾನತು ಪಡಿಸಿ ಇಲಾಖಾ ವಿಚಾರಣೆ ಕಾಯ್ದಿರಿಸಿ ಆದೇಶ ಹೊರಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸರ್ಕಾರಿ ಶಾಲೆ ಮುಚ್ಚುವಿಕೆ ವಿರೋಧಿಸಿ ಎಐಡಿಎಸ್‍ಒ 50 ಲಕ್ಷ ಸಹಿ ಸಂಗ್ರಹ; ಮುಖ್ಯಮಂತ್ರಿಗಳಿಗೆ ಸಲ್ಲಿಕೆ

ಕರ್ನಾಟಕ ರಾಜ್ಯ ಸರ್ಕಾರವು 6,200 ಸರ್ಕಾರಿ ಶಾಲೆಗಳನ್ನು "ವಿಲೀನ"ಗೊಳಿಸುವ ಹೆಸರಿನಲ್ಲಿ ಮುಚ್ಚಲು...

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

ದಾವಣಗೆರೆ | ಭಾರತದ ಗ್ರಂಥಾಲಯ ಪಿತಾಮಹ ರಂಗನಾಥ್ ಜನ್ಮದಿನ; ವಿವಿಯಲ್ಲಿ ಗ್ರಂಥಾಲಯ ಕಾರ್ಯಾಗಾರ

ಭಾರತದ ಗ್ರಂಥಾಲಯ ಪಿತಾಮಹ ಡಾ.ಎಸ್.ಆರ್. ರಂಗನಾಥನ್ ಅವರ 133ನೇ ಜನ್ಮದಿನದ ಅಂಗವಾಗಿ...

ರಾಜ್ಯ ಶಿಕ್ಷಣ ನೀತಿ ಆಯೋಗದಿಂದ ವರದಿ ಸಲ್ಲಿಕೆ, ದ್ವಿಭಾಷಾ ನೀತಿ ಅನುಷ್ಠಾನ ಸೇರಿ ಹಲವು ಶಿಫಾರಸು

ರಾಜ್ಯ ಶಿಕ್ಷಣ ನೀತಿ ಆಯೋಗವು ಶುಕ್ರವಾರ ರಾಜ್ಯ ಸರ್ಕಾರಕ್ಕೆ ತನ್ನ ಅಂತಿಮ...

Download Eedina App Android / iOS

X