ರಾಜ್ಯ ಸರ್ಕಾರದ ತೀರ್ಮಾನಗಳನ್ನು ‘ಬಿಟ್ಟಿ ಭಾಗ್ಯ’ ಎಂದಿದ್ದ ಶಿಕ್ಷಕ ಅಮಾನತು

Date:

ರಾಜ್ಯ ಸರ್ಕಾರದ ತೀರ್ಮಾನಗಳನ್ನು ‘ಬಿಟ್ಟಿ ಭಾಗ್ಯ’ ಎಂದು ಅವಹೇಳನ ಮಾಡಿದ ಹೊಸದುರ್ಗ ತಾಲೂಕಿನ ಶಿಕ್ಷಕನನ್ನು ಅಮಾನತು ಮಾಡಲಾಗಿದೆ.

ಸರ್ಕಾರ ಟೀಕಿಸುವ ಬರಹವನ್ನು ಫೇಸ್‌ಬುಕ್‌ ಖಾತೆಯಲ್ಲಿ ಪೋಸ್ಟ್‌ ಮಾಡಿದ ಆರೋಪದ ಮೇಲೆ ತಾಲೂಕಿನ ಕಾನುಬೇನಹಳ್ಳಿ ಶಿಕ್ಷಕ ಎಂ ಜಿ ಶಾಂತಮೂರ್ತಿ ಅವರನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಎಲ್‌ ಜಯಪ್ಪ ಅಮಾನತು ಮಾಡಿ, ಆದೇಶ ಹೊರಡಿಸಿದ್ದಾರೆ.

ಸಿದ್ದರಾಮಯ್ಯ ಅವರು ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿರುವ ಸಂದರ್ಭದಲ್ಲಿ ಶಾಂತಮೂರ್ತಿ ಅವರು, “ಎಸ್ ಎಂ ಕೃಷ್ಣ ಅವಧಿಯಲ್ಲಿ ₹3,590 ಕೋಟಿ, ಧರ್ಮಸಿಂಗ್ ₹15,635 ಕೋಟಿ, ಎಚ್ ಡಿ ಕುಮಾರಸ್ವಾಮಿ ₹3,545 ಕೋಟಿ, ಬಿ ಎಸ್‌ ಯಡಿಯೂರಪ್ಪ ₹25,653 ಕೋಟಿ, ಸದಾನಂದಗೌಡ ₹9,464 ಕೋಟಿ, ಜಗದೀಶ್‌ ಶೆಟ್ಟರ್ ₹13,464 ಕೋಟಿ, ಸಿದ್ದರಾಮಯ್ಯ ₹2,42,000 ಕೋಟಿ ಸಾಲ ಮಾಡಿದ್ದರು” ಎಂದು ಬರೆದುಕೊಂಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಎಸ್ಎಂ ಕೃಷ್ಣ ಅವಧಿಯಿಂದ ಶೆಟ್ಟರ್‌ವರೆಗೆ ಮಾಡಿದ ಒಟ್ಟು ಸಾಲ ₹71,331 ಕೋಟಿ, ಸಿದ್ದರಾಮಯ್ಯ ಅವರು ಮಾಡಿದ ‌ಸಾಲ ₹2,42,000 ಕೋಟಿ. ಹೀಗಿರುವಾಗ ‘ಬಿಟ್ಟಿ ಭಾಗ್ಯ’ ಕೊಡದೆ ಇನ್ನೇನು” ಎಂದು ಬರಹದಲ್ಲಿ ಟೀಕಿಸಿದ್ದರು. ಈ ಮಾಹಿತಿಯನ್ನು ವಾಟ್ಸ್‌ಆ್ಯಪ್‌ ಗ್ರೂಪ್‌ಗಳಿಗೂ ಶೇರ್‌ ಮಾಡಿದ್ದರು. ಈ ಹಿನ್ನೆಲೆ ಶಾಂತಮೂರ್ತಿ ಅವರನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಅಮಾನತು ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಮಂಡ್ಯ | ಒಂದೂ ಸ್ಥಾವವನ್ನು ಗೆಲ್ಲದ ಜೆಡಿಎಸ್‌ಗೆ ಮನ್‌ಮುಲ್ ಮೇಲೆ ಹಿಡಿತ ಕಳೆದುಕೊಳ್ಳುವ ಭೀತಿ

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಟಿ ಪರೀಕ್ಷೆಯಲ್ಲಿ ಪಠ್ಯಕ್ರಮದಿಂದ ಹೊರತಾದ ಪ್ರಶ್ನೆ: ತಜ್ಞರ ಸಮಿತಿ ರಚಿಸಿದ ಸರ್ಕಾರ

ಇತ್ತೀಚೆಗೆ ನಡೆದಿದ್ದ ಸಿಇಟಿ-2024 ಪರೀಕ್ಷೆಯಲ್ಲಿ ಪಠ್ಯಕ್ರಮದ ಹೊರತಾಗಿರುವ ಪ್ರಶ್ನೆಗಳ ಬಗ್ಗೆ ವಿವಾದ ಉಂಟಾದ...

ವಿಶೇಷ ಜಾತ್ರೆ | ತಲೆ ಮೇಲೆ ತೆಂಗಿನಕಾಯಿ ಒಡೆದುಕೊಂಡು ಮಳೆಗಾಗಿ ಪ್ರಾರ್ಥನೆ ಮಾಡಿದ ಖಾಜಿಸೊನ್ನೇನಹಳ್ಳಿ ಗ್ರಾಮಸ್ಥರು

ಅಕಾಲಿಕ ಮಳೆಯಿಂದ ರಾಜ್ಯದಲ್ಲಿ ಬಿರು ಬೇಸಿಗೆ ವಾತಾವರಣ ಸೃಷ್ಟಿಯಾಗಿದೆ. ದಿನದಿಂದ ದಿನಕ್ಕೆ...

ನೇಹಾ ಹತ್ಯೆ | ನನ್ನೊಂದಿಗೆ ಮಾತನಾಡಲು ನಿರಾಕರಿಸಿದ್ದಕ್ಕೆ ಕೊಲೆ ಮಾಡಿದೆ ಎಂದ ಆರೋಪಿ ಫಯಾಜ್ – ವರದಿ

ಹುಬ್ಬಳ್ಳಿಯ ನೇಹಾ ಹಿರೇಮಠ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ....

ಬೆಂಗಳೂರು | ಗನ್ ಇಟ್ಕೊಂಡು ಸಿಎಂಗೆ ಹಾರ : ಪಿಎಸ್​ಐ ಸೇರಿ ನಾಲ್ವರು ಅಮಾನತು

ಪ್ರಚಾರದ ವೇಳೆ ಓರ್ವ ಗನ ಇಟ್ಟುಕೊಂಡು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಹಾರ...