ಕರ್ನಾಟಕದಲ್ಲಿ ಒಟ್ಟು 57,000ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಿವೆ. ಅವುಗಳಲ್ಲಿ 20,375 ಶಾಲೆಗಳಲ್ಲಿ 35ಕ್ಕಿಂತ ಕಡಿಮೆ ವಿದ್ಯಾರ್ಥಿಗಳಿದ್ದಾರೆ ಎಂದು ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ್ ಗಮನ ಸೆಳೆದಿದ್ದಾರೆ.
ರಾಜ್ಯ ಬಜೆಟ್ ಅಧಿವೇಶನದಲ್ಲಿ ಅವರು ಮಾತನಾಡಿದರು. “ಸರ್ಕಾರಿ ಶಾಲೆಗಳಲ್ಲಿ ಫೇಸ್ ರೆಕಗ್ನಿಷನ್ ಅಟೆಂಡೆನ್ಸ್ ವ್ಯವಸ್ಥೆಯನ್ನು ಜಾರಿಗೆ ತರುತ್ತೇವೆಂದು ಸರ್ಕಾರ ಹೇಳಿದೆ. ಈ ವ್ಯವಸ್ಥೆಯನ್ನು ವಿದ್ಯಾರ್ಥಿಗಳಿಗೆ ಮಾತ್ರವಲ್ಲದೆ, ಶಿಕ್ಷಕರಿಗೂ ತರಬೇಕು” ಎಂದು ಹೇಳಿದ್ದಾರೆ.
“ಯಾವುದೇ ವಾರ್ಡ್‌ನಲ್ಲಿ ಸರ್ಕಾರಿ ಶಾಲೆ ಇದ್ದರೆ, ಆ ವಾರ್ಡ್‌ನಲ್ಲಿ ಆರ್‌ಟಿಇ ಅಡಿ ಖಾಸಗಿ ಶಾಲೆಗಳಿಗೆ ದಾಖಲಾತಿಗೆ ಅವಕಾಶ ಇರುವುದಿಲ್ಲ ಎಂದು ಈ ಹಿಂದೆ ಸರ್ಕಾರ ತಿದ್ದುಪಡಿ ಮಾಡಿತ್ತು. ಅದರಿಂದ, ಬಡವರ ಮಕ್ಕಳಿಗೆ ಆರ್‌ಟಿಇ ಅಡಿಯಲ್ಲಿ ಪ್ರವೇಶ ಪಡೆಯುವುದು ಕಷ್ಟವಾಗುತ್ತಿದೆ. ಕಾಯ್ದೆಯನ್ನು ಪರಿಶೀಲಿಸಿ, ತಿದ್ದುಪಡಿ ತರಬೇಕು” ಎಂದು ಒತ್ತಾಯಿಸಿದ್ದಾರೆ.