ಒಂದು ನಿಮಿಷದ ಓದು | ಟೊಫೆಲ್ ಪರೀಕ್ಷೆಯ ಅವಧಿ ಕಡಿತ

Date:

ಮೂರು ಗಂಟೆ ಇದ್ದ ‘ದಿ ಟೆಸ್ಟ್‌ ಆಫ್‌ ಇಂಗ್ಲಿಷ್‌ ಆ್ಯಸ್‌ ಆ್ಯನ್‌ ಫಾರಿನ್‌ ಲಾಂಗ್ವೇಜ್‌’ (ಟಿಒಇಎಫ್‌ಎಲ್‌ ಅಥವಾ ಟೊಫೆಲ್‌) ಪರೀಕ್ಷೆಯ ಅವಧಿಯನ್ನು ಕಡಿತಗೊಳಿಸಲಾಗಿದೆ.

- Advertisement -

ಎಜುಕೇಷನಲ್‌ ಟೆಸ್ಟಿಂಗ್‌ ಸರ್ವಿಸಸ್‌ (ಇಟಿಎಸ್‌) ಆಯೋಜಿಸುವ ಟೊಫೆಲ್ ಪರೀಕ್ಷೆಯು ಜಗತ್ತಿನ ಅತಿ ಪ್ರಸಿದ್ಧ ಭಾಷಾ ಅರ್ಹತಾ ಪರೀಕ್ಷೆಗಳಲ್ಲಿ ಒಂದಾಗಿದೆ. ಈ ಹಿಂದೆ ಪರೀಕ್ಷೆ ಬರೆಯಲು ಮೂರು ಗಂಟೆ ಬೇಕಾಗುತ್ತಿತ್ತು. ಆದರೆ, ಈಗ 1:56 ಗಂಟೆಗೆ ತಗ್ಗಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಈ ಹಿಂದೆ ಪರೀಕ್ಷೆ ಬರೆದ ನಂತರ ಅಂಕ ಬಿಡುಗಡೆ ದಿನದ ಘೋಷಣೆಗಾಗಿಯೂ ದಿನಗಣನೆ ಮಾಡಬೇಕಾಗಿತ್ತು. ಆದರೀಗ ಅಭ್ಯರ್ಥಿಗಳು ಪರೀಕ್ಷೆ ಪೂರ್ಣಗೊಳಿಸಿದ ನಂತರ ಅಂಕ ಬಿಡುಗಡೆಯ ಅಧಿಕೃತ ದಿನಾಂಕದ ಕುರಿತು ಮಾಹಿತಿ ಪಡೆಯಬಹುದಾಗಿದೆ. ಇದರ ಜೊತೆಗೆ ಇನ್ನಿತರ ಬದಲಾವಣೆಗಳನ್ನು ಮಾಡಲಾಗಿದ್ದು, ಇದು ಈ ವರ್ಷದ ಜುಲೈ 26ರಿಂದಲೇ ಜಾರಿಯಾಗಲಿದೆ ಎಂದು ಇಟಿಎಸ್‌ ತಿಳಿಸಿದೆ.

ನೋಂದಣಿ ಪ್ರಕ್ರಿಯೆಯನ್ನು ಸರಳಗೊಳಿಸಲಾಗಿದೆ. ಮೊದಲ ಬಾರಿಗೆ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಶುಲ್ಕದ ಹಣವನ್ನು ಭಾರತೀಯ ರೂಪಾಯಿಗಳಲ್ಲಿ ಪಾವತಿಸಬಹುದು. ಸರಳೀಕೃತ ನೋಂದಣಿ ಪ್ರಕ್ರಿಯೆಯು 2023 ಜುಲೈನಿಂದ ಲಭ್ಯವಿರುತ್ತದೆ. ಪರೀಕ್ಷೆ ಎದರಿಸುವವರು ಈ ಹಿಂದೆಂದಿಗಿಂತಲೂ ತ್ವರಿತವಾಗಿ ಮತ್ತು ಸುಲಭವಾಗಿ ನೋಂದಾಯಿಸಿಕೊಳ್ಳಬಹುದು ಎಂದು ಇಟಿಎಸ್ ಹೇಳಿದೆ.

ಟೊಫೆಲ್‌ ಪರೀಕ್ಷೆ ನಡೆಸುವ ಉದ್ದೇಶವೇನೆಂದರೆ ವಿದ್ಯಾರ್ಥಿಗಳು ಇಂಗ್ಲಿಷ್‌ ಭಾಷೆಯಲ್ಲಿ ಹೊಂದಿರುವ ಪ್ರಾವೀಣ್ಯತೆಯನ್ನು ಪರೀಕ್ಷಿಸುವುದು. ಭಾರತ, ಬ್ರಿಟನ್‌, ಕೆನಡಾ, ಆಸ್ಟ್ರೇಲಿಯಾ ಸೇರಿದಂತೆ ಜಗತ್ತಿನ 160 ದೇಶಗಳ 11,500ಕ್ಕೂ ಅಧಿಕ ವಿಶ್ವವಿದ್ಯಾಲಯಗಳು ಹಾಗೂ ಇತರೆ ಶಿಕ್ಷಣ ಸಂಸ್ಥೆಗಳು ಈ ಪರೀಕ್ಷೆಗೆ ಮಾನ್ಯತೆ ನೀಡಿವೆ. ಈ ಸಂಸ್ಥೆಗಳು ವಿದ್ಯಾರ್ಥಿಗಳ ಆಯ್ಕೆಗೂ ಮುನ್ನ ಟೊಫೆಲ್‌ ಪರೀಕ್ಷೆಯಲ್ಲಿ ಅವರು ಪಡೆದಿರುವ ಅಂಕಗಳನ್ನು ಗಮನಿಸುತ್ತವೆ.

ಈ ಸುದ್ದಿ ಓದಿದ್ದೀರಾ?: ಒಂದು ನಿಮಿಷದ ಓದು | ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ; ಶಿಕ್ಷಕ ಅಮಾನತು

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉರ್ದು, ಮರಾಠಿ ಶಿಕ್ಷಕರ ಪೂರ್ಣ ನೇಮಕಾತಿಗೆ ಕರ್ನಾಟಕ ರಾಜ್ಯ ಮುಸ್ಲಿಂ ಒಕ್ಕೂಟ ಆಗ್ರಹ

ಉರ್ದು ಸೇರಿದಂತೆ ಭಾಷಾ ಅಲ್ಪಸಂಖ್ಯಾತ ಮಾಧ್ಯಮದ ಅಭ್ಯರ್ಥಿಗಳಿಗೆ ಶಿಕ್ಷಕರ ನೇಮಕಾತಿಯಲ್ಲಿ ನೀಡಿದ್ದ...

ಸ್ವಂತ ಸೂರಿಗಾಗಿ ಕಾಯುತ್ತಿರುವ ಅಂಗನವಾಡಿಗಳು: ಇನ್ನೆಷ್ಟು ದಿನ ಬಾಡಿಗೆ ಕಟ್ಟಡದಲ್ಲಿರಬೇಕು?

ಮಕ್ಕಳ ಭವಿಷ್ಯಕ್ಕೆ ಭದ್ರ ಬುನಾದಿ ಹಾಕಬೇಕಾದ ಅಂಗನವಾಡಿ ಕೇಂದ್ರಗಳೇ ಸ್ವಂತ ಸೂರಿಲ್ಲದೆ...

ಅನುಮೋದನೆ ಇಲ್ಲದೆ 8 ಸ್ನಾತಕೋತ್ತರ ಪದವಿ ಕೋರ್ಸ್‌ ಆರಂಭ: ಜಾನಪದ ವಿವಿಗೆ ಉನ್ನತ ಶಿಕ್ಷಣ ಇಲಾಖೆ ನೋಟಿಸ್‌

ಪ್ರಸ್ತುತ ಬ್ಯಾಚ್‌ಗಳ ವಿದ್ಯಾರ್ಥಿಗಳಿಗೆ ಕೋರ್ಸ್ ಪೂರ್ಣಗೊಳಿಸುವುದು, ಪರೀಕ್ಷೆ ಬರೆಯುವುದು ಹಾಗೂ ಪದವಿ...

ಅನುಮತಿ ಇಲ್ಲದೆ 4 ಬಾರಿ ವಿದೇಶಿ ಪ್ರವಾಸ; ಕುವೆಂಪು ವಿವಿ ಕುಲಪತಿ ಶರತ್ ಅನಂತಮೂರ್ತಿಗೆ ರಾಜ್ಯಪಾಲರ ನೋಟಿಸ್

ರಾಜ್ಯಪಾಲರು ಮತ್ತು ವಿಶ್ವವಿದ್ಯಾಲಯದ ಕುಲಾಧಿಪತಿಗಳ ಪೂರ್ವಾನುಮತಿ ಪಡೆಯದೆ ಕುವೆಂಪು ವಿವಿ ಕುಲಪತಿ...