ವೇದಗಣಿತ, ಜ್ಯೋತಿಷ್ಯ ಪರಿಚಯಿಸಲು ಮುಂದಾದ ಯುಜಿಸಿ; ಎಐಡಿಎಸ್‌ಒ ಕಿಡಿ

Date:

Advertisements
  • ಜ್ಯೋತಿಷ್ಯದ ಬಗ್ಗೆ ಅಂಧಾಭಿಮಾನ ಸೃಷ್ಟಿಸುವುದು ಸರ್ಕಾರದ ಉದ್ದೇಶ
  • ದಲಿತ ಮತ್ತು ಮಹಿಳೆಯರನ್ನು ಶಿಕ್ಷಣದಿಂದ ಹೊರಗಿಡಲು ವೈದಿಕ ಶಿಕ್ಷಣ ಕಾರಣ

ಹೊರ ರಾಷ್ಟ್ರದ ವಿದ್ಯಾರ್ಥಿಗಳನ್ನು ಆಕರ್ಷಿಸಲು ವಿಶ್ವವಿದ್ಯಾನಿಲಯ ಧನಸಹಾಯ ಆಯೋಗವು (ಯುಜಿಸಿ) ಧರ್ಮನಿರಪೇಕ್ಷ, ವೈಜ್ಞಾನಿಕ ಆಶಯಗಳಿಗೆ ವಿರುದ್ಧವಾಗಿರುವ ವೈದಿಕ ಶಿಕ್ಷಣ, ಜ್ಯೋತಿಷ್ಯ ಪರಿಚಯಿಸಲು ಮುಂದಾಗಿದೆ. ಯುಜಿಸಿ ನಿರ್ಧಾರವನ್ನು ಅಖಿಲ ಭಾರತ ಪ್ರಜಾಸತಾತ್ಮಕ ವಿದ್ಯಾರ್ಥಿಗಳ ಸಂಘಟನೆ (ಎಐಡಿಎಸ್‌ಒ) ವಿರೋಧ ವ್ಯಕ್ತಪಡಿಸಿದೆ.

“ಕೇಂದ್ರ ಸರ್ಕಾರದ ‘ಹೊಸ ಶಿಕ್ಷಣ ನೀತಿ-2020’ರ ಪ್ರಕಾರ ಅಂತರಾಷ್ಟ್ರೀಯ ವಿದ್ಯಾರ್ಥಿಗಳನ್ನು ಭಾರತಕ್ಕೆ ಆಕರ್ಷಿಸುವ ಸಲುವಾಗಿ ವೈದಿಕ ಗಣಿತ, ಸಂಸ್ಕೃತ, ಯೋಗ, ಆಯುರ್ವೇದ, ಜ್ಯೋತಿಷ್ಯದಂತಹ ವಿಷಯಗಳನ್ನು ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಹೊಸದಾಗಿ ಸೇರಿಸಬೇಕು” ಎಂದು ಯುಜಿಸಿ ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಆದೇಶ ಹೊರಡಿಸಿದೆ.

ದಲಿತರನ್ನು, ಮಹಿಳೆಯರನ್ನು ಶಿಕ್ಷಣದಿಂದ ದೂರವಿರುವಂತೆ ಮಾಡಲು ವೈದಿಕ ಶಿಕ್ಷಣ ಕಾರಣವಾಗಿತ್ತು. ಈ ಪುರಾಣಗಳ ವಿರುದ್ಧ ಜ್ಯೋತಿಬಾ ಫುಲೆ, ಸಾವಿತ್ರಿ ಬಾಯಿ ಫುಲೆ ಜೀವನಪರ್ಯಂತ ಹೋರಾಡಿದ್ದರು. ಇದೀಗ ಅದೇ ಅವೈಜ್ಞಾನಿಕ ಶಿಕ್ಷಣ ಪದ್ದತಿಯನ್ನು ಸರ್ಕಾರ ಜಾರಿ ಮಾಡಲು ಮುಂದಾಗಿದೆ ಎಂದು ಸಂಘಟನೆ ಕಿಡಿಕಾರಿದೆ.

Advertisements

ಬ್ರಿಟಿಷರು ಭಾರತೀಯರನ್ನು ಅಂಧಕಾರದಲ್ಲಿಡಲು ವೈದಿಕ ಶಿಕ್ಷಣ ಪರಿಚಯಿಸಲು ಹೊರಟಾಗ ಈಶ್ವರ ಚಂದ್ರ ವಿದ್ಯಾಸಾಗರರು ವೇದಶಾಸ್ತ್ರ, ವೈದಿಕ ಜ್ಞಾನದಿಂದ ಯಾವ ಉಪಯೋಗವೂ ಇಲ್ಲ, ಬದಲಾಗಿ ಸಮಾಜದ ಪ್ರಗತಿಗೆ ಇಂಗ್ಲೀಷ್ ಭಾಷೆ, ವಿಜ್ಞಾನ, ಇತಿಹಾಸ, ಭೌಗೋಳ ಶಾಸ್ತ್ರದ ಅವಶ್ಯಕತೆ ಇದೆ ಎಂದಿದ್ದರು. ಜ್ಯೋತಿಷ್ಯ ಶಾಸ್ತ್ರವನ್ನು ಮಾನಸಿಕ ರೋಗ ಎಂದು ಸ್ವಾಮಿ ವಿವೇಕಾನಂದರು ಹೀಗೆಳೆದಿದ್ದರು.

ಈ ಸುದ್ದಿ ಓದಿದ್ದೀರಾ?: ಸಂರಕ್ಷಣಾಧಿಕಾರಿ ಪರೀಕ್ಷೆ; ವರ್ಷಗಳೇ ಕಳೆದರೂ ಪ್ರಕಟವಾಗದ ಫಲಿತಾಂಶ

ಇಂತಹ ಅವೈಜ್ಞಾನಿಕ ವಿಷಯಗಳನ್ನು ಶಿಕ್ಷಣದಲ್ಲಿ ತರುವ ಸರ್ಕಾರದ ಉದ್ದೇಶವೇ ವಿದ್ಯಾರ್ಥಿಗಳಲ್ಲಿ ವೈದಿಕ ಶಿಕ್ಷಣ ಜ್ಯೋತಿಷ್ಯದ ಬಗ್ಗೆ ಅಂಧಾಭಿಮಾನ ಸೃಷ್ಟಿಸುವುದು. ‘ಧರ್ಮ, ಶಿಕ್ಷಣ ಹಾಗೂ ರಾಜಕೀಯದಿಂದ ಕೈತೆಗೆ’ ಎಂದಿದ್ದ ವಿವೇಕಾನಂದರ ಆಶಯಗಳ ವಿರುದ್ಧವಾಗಿ ಸರ್ಕಾರ ಕೋಮುದ್ವೇಷ ಸೃಷ್ಟಿಸಲು ಹೊರಟಿದೆ. ಸರ್ಕಾರದ ಈ ನಡೆಯನ್ನು ಎಐಡಿಎಸ್ಓ ಅತ್ಯುಗ್ರವಾಗಿ ಖಂಡಿಸುತ್ತದೆ.

ವಿಶ್ವ ವಿದ್ಯಾಲಯಗಳಿಗೆ ತನ್ನದೇ ಆದ ಸ್ವಾಯತ್ತತೆ ಇದೆ. ಅಂತಹ ಸಂದರ್ಭದಲ್ಲಿ, ಇದನ್ನೇ ವಿವಿಗಳು ಹಾಗೂ ಉನ್ನತ ಶಿಕ್ಷಣ ಸಂಸ್ಥೆಗಳು ಬೋಧಿಸಬೇಕು ಎಂದು ಹಲವು ನಿರ್ದೇಶನಗಳನ್ನು ಎನ್.ಇ.ಪಿ ಹೆಸರಿನಲ್ಲಿ ವಿಶ್ವವಿದ್ಯಾಲಯಗಳ ಮೇಲೆ ಹೇರುತ್ತಿರುವ ಯುಜಿಸಿಯ ಕ್ರಮ ಅತ್ಯಂತ ಅಪ್ರಜಾತಾಂತ್ರಿಕ ಹಾಗೂ ಸರ್ವಾಧಿಕಾರಿ ಧೋರಣೆಯಿಂದ ಕೂಡಿದೆ ಎಂದು ಎಐಡಿಎಸ್‌ಒ ಆಕ್ರೋಶ ವ್ಯಕ್ತಪಡಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸರ್ಕಾರಿ ಶಾಲೆ ಮುಚ್ಚುವಿಕೆ ವಿರೋಧಿಸಿ ಎಐಡಿಎಸ್‍ಒ 50 ಲಕ್ಷ ಸಹಿ ಸಂಗ್ರಹ; ಮುಖ್ಯಮಂತ್ರಿಗಳಿಗೆ ಸಲ್ಲಿಕೆ

ಕರ್ನಾಟಕ ರಾಜ್ಯ ಸರ್ಕಾರವು 6,200 ಸರ್ಕಾರಿ ಶಾಲೆಗಳನ್ನು "ವಿಲೀನ"ಗೊಳಿಸುವ ಹೆಸರಿನಲ್ಲಿ ಮುಚ್ಚಲು...

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

ದಾವಣಗೆರೆ | ಭಾರತದ ಗ್ರಂಥಾಲಯ ಪಿತಾಮಹ ರಂಗನಾಥ್ ಜನ್ಮದಿನ; ವಿವಿಯಲ್ಲಿ ಗ್ರಂಥಾಲಯ ಕಾರ್ಯಾಗಾರ

ಭಾರತದ ಗ್ರಂಥಾಲಯ ಪಿತಾಮಹ ಡಾ.ಎಸ್.ಆರ್. ರಂಗನಾಥನ್ ಅವರ 133ನೇ ಜನ್ಮದಿನದ ಅಂಗವಾಗಿ...

ರಾಜ್ಯ ಶಿಕ್ಷಣ ನೀತಿ ಆಯೋಗದಿಂದ ವರದಿ ಸಲ್ಲಿಕೆ, ದ್ವಿಭಾಷಾ ನೀತಿ ಅನುಷ್ಠಾನ ಸೇರಿ ಹಲವು ಶಿಫಾರಸು

ರಾಜ್ಯ ಶಿಕ್ಷಣ ನೀತಿ ಆಯೋಗವು ಶುಕ್ರವಾರ ರಾಜ್ಯ ಸರ್ಕಾರಕ್ಕೆ ತನ್ನ ಅಂತಿಮ...

Download Eedina App Android / iOS

X