26 ಬಾರಿ ಸೋತರೂ ಕುಗ್ಗದ ಛಲ; 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕ ಹುದ್ದೆ ಪಡೆದ ವೃದ್ಧ

Date:

ಸರಿಯಾದ ಪ್ರಯತ್ನ ಮತ್ತು ಛಲವಿದ್ದರೆ ವಯಸ್ಸು ಕೇವಲ ಒಂದು ಸಂಖ್ಯೆಯಷ್ಟೇ ಎಂಬುದನ್ನು ಉತ್ತರ ಪ್ರದೇಶದ ಬಾಗ್‌ಪತ್ ಜಿಲ್ಲೆಯ 59 ವರ್ಷದ ವಿಜಯ್ ಕುಮಾರ್ ಶರ್ಮಾ ಅವರು ಸಾಬೀತುಪಡಿಸಿದ್ದಾರೆ. ಕಳೆದ ಸುಮಾರು ನಾಲ್ಕು ದಶಕಗಳಿಂದ (40 ವರ್ಷ) ಖಾಸಗಿ ಶಾಲೆಯಲ್ಲಿ ಶಿಕ್ಷಕರಾಗಿ ಅತ್ಯಂತ ಕಷ್ಟಕರ ವಾತಾವರಣದಲ್ಲಿ ದುಡಿಯುತ್ತಿದ್ದ ಅವರು, ತಮ್ಮ 59ನೇ ವಯಸ್ಸಿನಲ್ಲಿ ಕೊನೆಗೂ ಸರ್ಕಾರಿ ಶಾಲೆಯ ಶಿಕ್ಷಕ ಹುದ್ದೆಗೆ ಆಯ್ಕೆಯಾಗಿದ್ದಾರೆ.

- Advertisement -

ಬಾಗ್‌ಪತ್ ಜಿಲ್ಲೆಯ ಬರಾವಡ್ ಗ್ರಾಮದ ನಿವಾಸಿಯಾಗಿರುವ ವಿಜಯ್ ಕುಮಾರ್ ಶರ್ಮಾ ಅವರು 1987ರಲ್ಲಿ ಪದವಿ ಪೂರ್ಣಗೊಳಿಸಿದ್ದರು. ಬಳಿಕ, ಹಿಂದಿ ಮತ್ತು ಸಂಸ್ಕೃತ ವಿಷಯಗಳಲ್ಲಿ ಸ್ನಾತಕೋತ್ತರ (PG) ಪದವಿ ಪಡೆದು, 2003ರಲ್ಲಿ ಬಿ.ಎಡ್ ಪೂರ್ಣಗೊಳಿಸಿದ್ದರು. ಸರ್ಕಾರಿ ಶಾಲೆಯಲ್ಲಿ ಶಿಕ್ಷಕನಾಗಬೇಕು ಎಂಬ ಕನಸನ್ನು ಹೊತ್ತಿದ್ದ ವಿಜಯ್, ಕಳೆದ 27 ವರ್ಷಗಳಲ್ಲಿ ಬರೋಬ್ಬರಿ 26 ಬಾರಿ ಪರೀಕ್ಷೆ ಬರೆದು ವಿಫಲರಾಗಿದ್ದರು. ಹಲವು ಬಾರಿ ಲಿಖಿತ ಪರೀಕ್ಷೆಯಲ್ಲಿ ತೇರ್ಗಡೆಯಾಗುತ್ತಿದ್ದರೂ, ಸಂದರ್ಶನದ ಹಂತದಲ್ಲಿ ಅವಕಾಶ ಕೈತಪ್ಪಿ ಹೋಗುತ್ತಿತ್ತು. ಆದರೂ ಧೃತಿಗೆಡದ ಶರ್ಮಾ, ಪ್ರಸಕ್ತ ವರ್ಷ ಉತ್ತರ ಪ್ರದೇಶ ಶಿಕ್ಷಣ ಸೇವಾ ಆಯ್ಕೆ ಆಯೋಗ (UPESSC) ನಡೆಸಿದ ತರಬೇತಿ ಪಡೆದ ಪದವೀಧರ ಶಿಕ್ಷಕರ (TGT) ಪರೀಕ್ಷೆಯಲ್ಲಿ ಯಶಸ್ವಿಯಾಗಿ ತೇರ್ಗಡೆಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

ಈ ಬಾರಿ, ಸರ್ಕಾರವು ಪರೀಕ್ಷಾ ಪ್ರಕ್ರಿಯೆಯಿಂದ ಸಂದರ್ಶನ ಸುತ್ತನ್ನು ರದ್ದುಗೊಳಿಸಿದೆ. ಇದು ತಮಗೆ ಮತ್ತು ತಮ್ಮಂತ ಅರ್ಹ ಅಭ್ಯರ್ಥಿಗಳಿಗೆ ಸಮಾನ ಅವಕಾಶ ಕಲ್ಪಿಸಿಕೊಟ್ಟಿತು ಎಂದು ವಿಜಯ್ ಶರ್ಮಾ ಹರ್ಷ ವ್ಯಕ್ತಪಡಿಸಿದ್ದಾರೆ.

ಈ ಲೇಖನ ಓದಿದ್ದೀರಾ?: SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್ ಶಾ ಏನು?

ಶ್ಯಾಮ್ಲಿ ಜಿಲ್ಲೆಯ ಐಲಮ್‌ನಲ್ಲಿರುವ ಸರ್ಕಾರಿ ಅನುದಾನಿತ ಹೈಸ್ಕೂಲ್‌ನಲ್ಲಿ 10ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಸಂಸ್ಕೃತ ಶಿಕ್ಷಕರಾಗಿ ಅವರು ಪಾಠ ಬೋಧಿಸಿದ್ದಾರೆ. ಸರ್ಕಾರಿ ನೌಕರರ ನಿವೃತ್ತಿ ವಯಸ್ಸು 62 ಆಗಿರುವುದರಿಂದ, ತಮಗೆ ಸೇವೆ ಸಲ್ಲಿಸಲು ಇನ್ನು ಕೇವಲ ಮೂರು ವರ್ಷ ಕಾಲಾವಕಾಶ ಮಾತ್ರ ಸಿಗಲಿದೆಯಾದರೂ, ಜೀವಮಾನದ ಕನಸು ನನಸಾಗಿರುವುದಕ್ಕೆ ತಮಗೆ ಅತೀವ ತೃಪ್ತಿ ಇದೆ ಎಂದು ಅವರು ಹೇಳಿದ್ದಾರೆ.

 ಸಾಮಾನ್ಯವಾಗಿ ಸರ್ಕಾರಿ ಉದ್ಯೋಗಗಳಿಗೆ ನೇಮಕಾತಿ ಹೊಂದಲು ಗರಿಷ್ಠ 34 ವರ್ಷಗಳ ವಯೋಮಿತಿ ಇರುತ್ತದೆ. ಆದರೆ, ಕೆಲವು ವಿಶೇಷ ಸಂದರ್ಭಗಳಲ್ಲಿ 59ನೇ ವಯಸ್ಸಿನಲ್ಲೂ ಸರ್ಕಾರಿ ಶಿಕ್ಷಕರಾಗಿ ನೇಮಕಗೊಳ್ಳಲು ಸಾಧ್ಯವಿದೆ. ಕೆಲವು ರಾಜ್ಯಗಳಲ್ಲಿ ಗುತ್ತಿಗೆ ಅಥವಾ ಅತಿಥಿ ಶಿಕ್ಷಕರಾಗಿ ದಶಕಗಳಿಂದ ಸೇವೆ ಸಲ್ಲಿಸಿದವರನ್ನು ಖಾಯಂಗೊಳಿಸುವಾಗ ಅಥವಾ ಉತ್ತರ ಪ್ರದೇಶದಲ್ಲಿನ ಟಿಜಿಟಿ ರೀತಿಯ ಪರೀಕ್ಷೆಗಳ ಮೂಲಕ ಸಾಮಾನ್ಯ ನೇಮಕಾತಿಯ ವಯೋಮಿತಿ ಮೀರಿದವರೂ ಸರ್ಕಾರಿ ಹುದ್ದೆಗೆ ನೇಮಕಗೊಳ್ಳಲು ಅವಕಾಶವಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಕಪಕ್ಷೀಯ ನಿರ್ಧಾರ ವಿವಾದದ ಬೆನ್ನಲ್ಲೇ ಸಭೆ: ಸರ್ವಮತದಿಂದ ತೀಮಾರ್ನಗಳ ತಗೆದುಕೊಂಡಿದ್ದು ಎಂದ ಇಸಿಐ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಹಾಗೂ ಚುನಾವಣಾ ಆಯುಕ್ತರಾದ...

ಮಂಗಳೂರು | ಕಾರಿಡಾರ್‌ ಗೋಡೆ ಕುಸಿದು ಐವರು ವಿದ್ಯಾರ್ಥಿಗಳಿಗೆ ಗಾಯ, ಓರ್ವ ಗಂಭೀರ

ಮಂಗಳೂರಿನ ಪಾಂಡೇಶ್ವರ ಸಮೀಪದ ಎಮ್ಮೆಕೆರೆ ಕ್ರಾಸ್ ಬಳಿಯ ರಾಮಲಕ್ಷ್ಮೀ ಹಾಲ್ ಸಭಾಭವನದಲ್ಲಿ...

ಸಿಇಸಿ ಗ್ಯಾನೇಶ್ ಕುಮಾರ್ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು: ಜನವಾದಿ ಮಹಿಳಾ ಸಂಘಟನೆ ಆಗ್ರಹ

ದೇಶದ ಚುನಾವಣಾ ಪ್ರಜಾಪ್ರಭುತ್ವದ ಮೇಲಿನ ಸಾರ್ವಜನಿಕ ವಿಶ್ವಾಸವನ್ನು ಪುನಃಸ್ಥಾಪಿಸಲು ಮುಖ್ಯ ಚುನಾವಣಾ...

ಕಲೆ ಉಳಿಯಲಿ, ಕೌಶಲ್ಯ ಬೆಳೆಯಲಿ: ಕರ್ನಾಟಕ ಪರ್ವ 2026ಕ್ಕೆ ಡಿ.ಕೆ ಶಿವಕುಮಾರ್ ಚಾಲನೆ

ಬೆಂಗಳೂರಿನ ಅರಮನೆ ಮೈದಾನದಲ್ಲಿ ಶನಿವಾರ ವೈವಿಧ್ಯತೆಯಲ್ಲಿ ಏಕತೆ, ಕೌಶಲ್ಯದಲ್ಲಿ ಸ್ವಾವಲಂಬನೆ ಎಂಬ...