12ನೇ ತರಗತಿ ಅಂಕಗಳ ಆಧಾರದ ಮೇಲೆ MBBSಗೆ ಪ್ರವೇಶ ನೀಡಿ: ಮೋದಿಗೆ ವಿಜಯ್ ಒತ್ತಾಯ

Date:

ತಮಿಳುನಾಡಿನ ಕೋಟಾದಡಿ ಬರುವ ಎಂಬಿಬಿಎಸ್, ಬಿಡಿಎಸ್ ಹಾಗೂ ಆಯುಷ್ ಕೋರ್ಸ್‌ಗಳ ಎಲ್ಲ ಸೀಟುಗಳನ್ನು 12ನೇ ತರಗತಿಯ ಅಂಕಗಳ ಆಧಾರದ ಮೇಲೆ ಭರ್ತಿ ಮಾಡಲು ಅನುಮತಿ ನೀಡಬೇಕೆಂದು ತಮಿಳುನಾಡು ಸಿಎಂ ಸಿ ಜೋಸೆಫ್ ವಿಜಯ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದದ ನಡುವೆ ವಿಜಯ್ ಅವರು ತಮ್ಮ ರಾಜ್ಯದ ವಿದ್ಯಾರ್ಥಿಗಳಿಗೆ 12ನೇ ತರಗತಿಯ ಅಂಕಗಳ ಆಧಾರದಲ್ಲಿಯೇ ಸೀಟು ಹಂಚಿಕೆ ಮಾಡಲು ಒತ್ತಾಯಿಸಿದ್ದಾರೆ.

- Advertisement -

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ನೀತಿ ಆಯೋಗದ ಆಡಳಿತ ಮಂಡಳಿಯ 11ನೇ ಸಭೆಯಲ್ಲಿ ಸಿಎಂ ವಿಜಯ್ ಈ ಬೇಡಿಕೆಯನ್ನು ಮಂಡಿಸಿದ್ದಾರೆ. “ವಿದ್ಯಾರ್ಥಿಗಳ ಹಿತರಕ್ಷಣೆಗೆ ತಮಿಳುನಾಡು ಸರ್ಕಾರ ಬದ್ಧವಾಗಿದೆ. ಪದವಿ ಪೂರ್ವ ವೈದ್ಯಕೀಯ ಮತ್ತು ದಂತವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ನೀಟ್ ಪರೀಕ್ಷೆಯನ್ನು ರಾಜ್ಯ ಸರ್ಕಾರ ವಿರೋಧಿಸುತ್ತದೆ. ಏಕೆಂದರೆ, ನೀಟ್‌ನಿಂದಾಗಿ ಗ್ರಾಮೀಣ ಮತ್ತು ಸಾಮಾಜಿಕ-ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ವಿದ್ಯಾರ್ಥಿಗಳಿಗೆ ಭಾರಿ ತೊಂದರೆಯಾಗಿದೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

ಈ ಲೇಖನ ಓದಿದ್ದೀರಾ?: ನೆಹರೂ ದಾಖಲೆ ಮುರಿದ ಮೋದಿ: ದೇಶ ಮುನ್ನಡೆಯಿತೋ, ಹಿಂದಕ್ಕೆ ಹೋಯಿತೋ?

ಮುಂದುವರೆದರು, “ತಮಿಳುನಾಡು ಸರ್ಕಾರಕ್ಕೆ ತನ್ನ ರಾಜ್ಯ ಕೋಟಾದಡಿಯ ಎಂಬಿಬಿಎಸ್, ಬಿಡಿಎಸ್ ಮತ್ತು ಆಯುಷ್ ಸೀಟುಗಳನ್ನು ಸಂಪೂರ್ಣವಾಗಿ 12ನೇ ತರಗತಿಯ ಅಂಕಗಳ ಆಧಾರದ ಮೇಲೆ ಭರ್ತಿ ಮಾಡಲು ಅನುಮತಿ ನೀಡಬೇಕು” ಎಂದು ಅವರು ಕೋರಿದ್ದಾರೆ.

ನೀಟ್ ಪತ್ರಿಕೆ ಸೋರಿಕೆ ಹಗರಣದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ತೀವ್ರ ಟೀಕೆಗಳನ್ನು ಎದುರಿಸುತ್ತಿರುವ ಬೆನ್ನಲ್ಲೇ ವಿಜಯ್ ಈ ಬೇಡಿಕೆ ಇಟ್ಟಿರುವುದು ಪ್ರಾಮುಖ್ಯತೆ ಪಡೆದಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) ಜೂನ್ 21ರ ಭಾನುವಾರದಂದು ಮರು ಪರೀಕ್ಷೆ ನಡೆಸಲಿದೆ.  

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ, ಪೊಲೀಸರು, ಕಟ್ಟಡ ಕಾರ್ಮಿಕರಿಗೂ ಆಘಾತ!

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್,...

ವಿಜಯಪುರ | ಅಂತಿಮ ಮತದಾರರ ಪಟ್ಟಿ ಪ್ರಕಟ: ನಾಗಠಾಣದಲ್ಲಿ ಅತಿ ಹೆಚ್ಚು ಮತದಾರರು

ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ಅಕ್ಟೋಬರ್ 27ರಂದು...

ಆಸ್ಕರ್‌ 2027 | ಇವೇ, ರೇಸ್‌ನಲ್ಲಿರುವ 9 ಬಹುನಿರೀಕ್ಷಿತ ಸಿನಿಮಾಗಳು!

2027ರ ಪ್ರತಿಷ್ಠಿತ ಅಕಾಡೆಮಿ ಪ್ರಶಸ್ತಿ (ಆಸ್ಕರ್) ರೇಸ್‌ಗೆ ಈಗಿನಿಂದಲೇ ಕೌಂಟ್‌ಡೌನ್ ಆರಂಭವಾಗಿದೆ....