ಅಮೆರಿಕಾ ದಿಗ್ಬಂಧನ ಆರಂಭಕ್ಕೂ ಮುನ್ನವೇ ಹಾರ್ಮುಜ್ ಜಲಸಂಧಿ ದಾಟಿದ ಇರಾನ್‌ನ ಎರಡು ತೈಲ ಟ್ಯಾಂಕರ್‌ಗಳು

Date:

ಇರಾನ್ ಬಂದರುಗಳನ್ನು ಗುರಿಯಾಗಿಸಿಕೊಂಡು ಅಮೆರಿಕಾ ಯುದ್ಧನೌಕೆಗಳು ದಿಗ್ಬಂಧನ ವಿಧಿಸಲು ಸಜ್ಜಾಗುತ್ತಿರುವಂತೆಯೇ, ಇರಾನ್ ಸಂಪರ್ಕ ಹೊಂದಿರುವ ಎರಡು ತೈಲ ಟ್ಯಾಂಕರ್‌ಗಳು ಹಾರ್ಮುಜ್ ಜಲಸಂಧಿಯ ಮೂಲಕ ಕೊಲ್ಲಿಯಿಂದ ಯಶಸ್ವಿಯಾಗಿ ಹೊರಬಂದಿವೆ. ವರದಿಗಳ ಪ್ರಕಾರ, ‘ಒರೊರಾ’ ಟ್ಯಾಂಕರ್ ಇರಾನ್‌ನ ತೈಲ ಉತ್ಪನ್ನಗಳನ್ನು ಹೊತ್ತೊಯ್ಯುತ್ತಿದ್ದರೆ, ‘ನ್ಯೂ ಫ್ಯೂಚರ್’ ಟ್ಯಾಂಕರ್ ಯುಎಇಯಿಂದ ಡೀಸೆಲ್ ಹೊತ್ತು ಸಾಗಿದೆ ಎಂದು ಟೈಮ್ಸ್‌ ಆಫ್ ಇಂಡಿಯಾ ವರದಿ ಮಾಡಿದೆ.

- Advertisement -

ಪಾಕಿಸ್ತಾನದಲ್ಲಿ ನಡೆದಿದ್ದ ಅಮೆರಿಕಾ ಮತ್ತು ಇರಾನ್ ನಡುವಿನ ಶಾಂತಿ ಮಾತುಕತೆ ವಿಫಲಗೊಂಡಿದ್ದು, ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡ ದಟ್ಟವಾಗಿದೆ. ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ನಿರ್ದೇಶನದಂತೆ, ಏಪ್ರಿಲ್ 13ರಂದು ಬೆಳಿಗ್ಗೆ 10 ಗಂಟೆಯಿಂದ ಇರಾನ್‌ನ ಎಲ್ಲ ಬಂದರುಗಳ ಮೇಲೆ ನೌಕಾ ದಿಗ್ಬಂಧನ ಹೇರಲು ಅಮೆರಿಕಾ ಮುಂದಾಗಿದೆ. ಇರಾನ್‌ನ ಬಂದರುಗಳಿಗೆ ಹೋಗುವ ಮತ್ತು ಹೊರಬರುವ ಎಲ್ಲಾ ರಾಷ್ಟ್ರಗಳ ಹಡಗುಗಳಿಗೆ ಇದು ಅನ್ವಯಿಸುತ್ತದೆ ಎಂದು ಸೆಂಟ್ರಲ್ ಕಮಾಂಡ್ (CENTCOM) ತಿಳಿಸಿದೆ. ಆದರೆ ಇರಾನ್‌ಗೆ ಸಂಬಂಧಿಸದ ಹಡಗುಗಳ ಸಂಚಾರಕ್ಕೆ ಅಡ್ಡಿಯಿಲ್ಲ ಎಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದಿಕ್ಕು ತೋಚದೆ ತಬ್ಬಿಬ್ಬಾಗಿರುವ ಚುನಾವಣಾ ಆಯೋಗ: ದಿನೇ ದಿನೆ...

ಸೆಪ್ಟೆಂಬರ್ 23ರ 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯ ವರದಿಯ ನಂತರ ಆಯೋಗ ಹಲವು ಸ್ಪಷ್ಟನೆಗಳನ್ನು ನೀಡಿದ್ದರೂ, ಒಂದು ಮುಖ್ಯ ಪ್ರಶ್ನೆಗೆ ಇನ್ನೂ ಉತ್ತರವಿಲ್ಲ: ಕಾನೂನುಬದ್ಧವಾಗಿ ಮತದಾರರ ಪಟ್ಟಿಯಲ್ಲಿದ್ದ 16 ಲಕ್ಷಕ್ಕೂ ಹೆಚ್ಚು ಜನರ...

ಸ್ಟಿಂಗ್ ಆಪರೇಷನ್ | ಭ್ರಷ್ಟಾಚಾರ ಬಯಲಿಗೆಳೆಯುವ ಸಾಧನವಾಗಬೇಕೇ ವಿನಾ...

ಆಡಳಿತ ಪಕ್ಷವನ್ನು ಪ್ರಶ್ನಿಸುವುದು ಪ್ರಜಾಪ್ರಭುತ್ವದ ಮೂಲಭೂತ ಕರ್ತವ್ಯ. ಆದರೆ, ವಿರೋಧ ಪಕ್ಷಗಳಿಗೂ ತಮ್ಮ ಆರೋಪಗಳನ್ನು ಸಮರ್ಥಿಸುವ ಹೊಣೆಗಾರಿಕೆ ಇದೆ. ರಾಜಕೀಯ ಲಾಭಕ್ಕಾಗಿ ಗಂಭೀರ ಆರೋಪಗಳನ್ನು ಮುಂದಿಡುವುದು ಮತ್ತು ಅವುಗಳ ಸತ್ಯಾಸತ್ಯತೆಯನ್ನು ಪರಿಶೀಲಿಸುವ ಪ್ರಕ್ರಿಯೆಯನ್ನು...

ಬೇಡ್ತಿ ನದಿ ತಿರುವು ಯೋಜನೆಯೂ, ಬೊಮ್ಮಾಯಿ-ಕಾಗೇರಿ ಪೀಕಲಾಟವೂ

ಉತ್ತರ ಕನ್ನಡ ಜಿಲ್ಲೆಯ ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಇದ್ದಕ್ಕಿದ್ದಂತೆಯೇ ಬೇಡ್ತಿ-ವರದಾ ಮತ್ತು ಬೇಡ್ತಿ-ಧರ್ಮ-ವರದಾ ನದಿ ಜೋಡಣೆ ಎಂಬ ಅವಳಿ ಗುಮ್ಮಗಳು ಎದ್ದು ಕುಳಿತು ಬೆಚ್ಚಿ ಬೀಳಿಸಿವೆ. ಸ್ವರ್ಣವಲ್ಲೀ ಸ್ವಾಮಿ, ಎಂಪಿ ಕಾಗೇರಿ ಮತ್ತು...

ಇದನ್ನು ಓದಿದ್ದೀರಾ? ಸಾಮ್ರಾಜ್ಯಶಾಹಿಯ ಅಟ್ಟಹಾಸಕ್ಕೆ ಪ್ರತಿರೋಧದ ಕಿಚ್ಚು: ಅಮೆರಿಕ-ಇಸ್ರೇಲ್ ದಬ್ಬಾಳಿಕೆಯ ವಿರುದ್ಧ ಸಿಡಿದೆದ್ದ ಲೆಬನಾನ್

ಈ ನಿರ್ಧಾರಕ್ಕೆ ತೀವ್ರವಾಗಿ ಪ್ರತಿಕ್ರಿಯಿಸಿರುವ ಇರಾನ್ ಸೇನೆ, ಇದನ್ನು ‘ಕಡಲ್ಗಳ್ಳತನ’ ಎಂದು ಜರೆದಿದೆ. ಇರಾನ್ ಬಂದರುಗಳಿಗೆ ಧಕ್ಕೆಯಾದರೆ ಪರ್ಷಿಯನ್ ಕೊಲ್ಲಿ ಮತ್ತು ಒಮನ್ ಕೊಲ್ಲಿಯ ಯಾವ ಬಂದರುಗಳು ಸುರಕ್ಷಿತವಾಗಿರುವುದಿಲ್ಲ ಎಂದು ಎಚ್ಚರಿಸಿದೆ. ಫ್ರಾನ್ಸ್ ಮತ್ತು ಬ್ರಿಟನ್ ಅಮೆರಿಕಾದ ದಿಗ್ಬಂಧನದಿಂದ ದೂರ ಉಳಿದಿದ್ದು, ಹಾರ್ಮುಜ್ ಜಲಸಂಧಿಯಲ್ಲಿ “ಶಾಂತಿಯುತ ಬಹುರಾಷ್ಟ್ರೀಯ ಕಾರ್ಯಾಚರಣೆ” ಆರಂಭಿಸುವುದಾಗಿ ತಿಳಿಸಿವೆ. ಚೀನಾ ತಾನು ಇರಾನ್‌ಗೆ ಶಸ್ತ್ರಾಸ್ತ್ರ ಪೂರೈಸುತ್ತಿರುವ ಆರೋಪವನ್ನು ತಳ್ಳಿಹಾಕಿದೆ.

ಈ ದಿಗ್ಬಂಧನ ಮತ್ತು ಯುದ್ಧದ ಆತಂಕದಿಂದ ಜಾಗತಿಕ ಆರ್ಥಿಕತೆ ಮೇಲೆ ಭಾರಿ ಪೆಟ್ಟಾಗಿದೆ. ಬ್ರೆಂಟ್ ಕಚ್ಚಾ ತೈಲದ ಬೆಲೆ ಶೇಕಡಾ 7.3 ರಷ್ಟು ಏರಿಕೆಯಾಗಿ ಬ್ಯಾರೆಲ್‌ಗೆ 102.16 ಡಾಲರ್ ತಲುಪಿದೆ. ಯುಎಸ್ WTI ಕೂಡ ಶೇಕಡಾ 8.4 ರಷ್ಟು ಹೆಚ್ಚಾಗಿ 104.69 ಡಾಲರ್‌ಗೇರಿದೆ. ಪರಿಣಾಮವಾಗಿ ಜಗತ್ತಿನ ಷೇರು ಮಾರುಕಟ್ಟೆಗಳಲ್ಲಿ ಕುಸಿತ ಕಂಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಲ್ಲಾವುದ್ದೀನನ ಅದ್ಭುತ ದೀಪದಂತೆ ಜಿಎಸ್‌ಎಸ್;‌ ʼಹಣತೆಯಿಂದ ಹಣತೆಗೆʼ ಸಂವಾದದಲ್ಲಿ ಮೇಷ್ಟ್ರು ನೆನಪು

ಒಂದು ಹಣತೆಯಿಂದ ಮತ್ತೊಂದು ಹಣತೆಯನ್ನು ಹಚ್ಚಿದಾಗ ಮೊದಲ ಹಣತೆಯ ಬೆಳಕು ಕಡಿಮೆಯಾಗುವುದಿಲ್ಲ,...

ಪ್ರಜಾಪ್ರಭುತ್ವ ರಕ್ಷಣೆಗೆ ಹೋರಾಟ ನಿಲ್ಲದು: ‘ಇಂಡಿಯಾ’ ಒಕ್ಕೂಟ ನಾಯಕರೊಂದಿಗೆ ರಾಹುಲ್ ಗಾಂಧಿ ಚಹಾಕೂಟ

ದೇಶದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯಲ್ಲಿ ದೊಡ್ಡ...

ಸಿಜೆಐಗೆ ವಿಪಕ್ಷಗಳು ಬರೆದ ಪತ್ರದಲ್ಲಿ ಏನಿದೆ?

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ...

ಬಾಗಲಕೋಟೆ | ಸಮಾಜದ ಪ್ರಗತಿಗೆ ಪತ್ರಕರ್ತರ ಮಾರ್ಗದರ್ಶನ ಅಗತ್ಯ: ಅಶೋಕ ನಾರಾಯಣಿ

ಸಮಾಜದ ಸಮಸ್ಯೆಗಳಿಗೆ ಧ್ವನಿಯಾಗಿ, ಜನರಲ್ಲಿ ಜಾಗೃತಿ ಮೂಡಿಸಿ ಅಭಿವೃದ್ಧಿಯ ಹಾದಿಗೆ ದಿಕ್ಸೂಚಿಯಾಗುವ...