ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಇಂಡಿ ಕ್ಷೇತ್ರದ ಹಿರಿಯ ಹಾಗೂ ಜನಪ್ರಿಯ ಶಾಸಕ ಯಶವಂತರಾಯಗೌಡ ಪಾಟೀಲ್ ಅವರಿಗೆ ಸಚಿವ ಸ್ಥಾನ ನೀಡದಿರುವುದು ತೀವ್ರ ಅಸಮಾಧಾನ ಮತ್ತು ಬೇಸರಕ್ಕೆ ಕಾರಣವಾಗಿದೆ ಎಂದು ಸಾಮಾಜಿಕ ಹೋರಾಟಗಾರ್ತಿ ಡಾ. ಭುವನೇಶ್ವರಿ ಕಾಂಬಳೆ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, “ಪ್ರಜಾಪ್ರಭುತ್ವದಲ್ಲಿ ಪ್ರಾತಿನಿಧ್ಯ ಹಾಗೂ ಸಾಮಾಜಿಕ ನ್ಯಾಯವು ಸಂವಿಧಾನದ ಮೂಲ ತತ್ವಗಳಾಗಿವೆ. ಅಪಾರ ಜನಬೆಂಬಲ ಮತ್ತು ಆಡಳಿತಾತ್ಮಕ ಅನುಭವ ಹೊಂದಿರುವ ನಾಯಕರನ್ನು ಕಡೆಗಣಿಸಿರುವುದು ಅವರನ್ನು ನಂಬಿದ ಜನರ ಆಶಯಕ್ಕೆ ಧಕ್ಕೆಯಾಗಿದೆ” ಎಂದು ಅಭಿಪ್ರಾಯಪಟ್ಟರು.
ಸರ್ಕಾರವು ಜನಭಾವನೆ ಹಾಗೂ ಸಾಂವಿಧಾನಿಕ ಪ್ರಾತಿನಿಧ್ಯದ ಆಶಯವನ್ನು ಗೌರವಿಸಿ, ಸಚಿವ ಸಂಪುಟ ವಿಸ್ತರಣೆಯ ನಿರ್ಧಾರವನ್ನು ಮರುಪರಿಶೀಲಿಸಿ ಶಾಸಕ ಯಶವಂತರಾಯಗೌಡ ಪಾಟೀಲ್ ಅವರಿಗೆ ಸೂಕ್ತ ಸ್ಥಾನಮಾನ ನೀಡಬೇಕು ಎಂದು ಅವರು ಒತ್ತಾಯಿಸಿದರು.




