ಏಷ್ಯಾ U-15 ಬಾಕ್ಸಿಂಗ್‌ ಚಾಂಪಿಯನ್‌ಶಿಪ್: ಉಜ್ಬೇಕಿಸ್ತಾನದಲ್ಲಿ ಚಿನ್ನ ಗೆದ್ದ ಕಾಶ್ಮೀರದ ಪೋರ

Date:

ಉಜ್ಬೇಕಿಸ್ತಾನದಲ್ಲಿ ನಡೆದ ಏಷ್ಯಾ ಅಂಡರ್-15 ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಜಮ್ಮು ಮತ್ತು ಕಾಶ್ಮೀರದ 13 ವರ್ಷದ ಯುವ ಬಾಕ್ಸರ್ ಮೊಹಮ್ಮದ್ ಯಾಸಿರ್ ಚಿನ್ನದ ಪದಕ ಗೆಲ್ಲುವ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದಾರೆ.

- Advertisement -

ರಾಜೌರಿಯ ಖೇಲೋ ಇಂಡಿಯಾ ಕೇಂದ್ರದಲ್ಲಿ ತರಬೇತಿ ಪಡೆಯುತ್ತಿದ್ದ ಈ ಯುವ ಬಾಕ್ಸರ್‌ನ ಅಪ್ರತಿಮ ಗೆಲುವಿನ ಬೆನ್ನಲ್ಲೇ, ಜಮ್ಮು ಮತ್ತು ಕಾಶ್ಮೀರದಲ್ಲಿರುವ ‘ಖೇಲೋ ಇಂಡಿಯಾ’ ತರಬೇತಿ ಕೇಂದ್ರಗಳತ್ತ ಇಡೀ ದೇಶದ ಗಮನ ನೆಟ್ಟಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಈ ಟೂರ್ನಿಯ 58 ಕೆಜಿ ವಿಭಾಗದ ಫೈನಲ್ ಪಂದ್ಯದಲ್ಲಿ ಯಾಸಿರ್ ಆತಿಥೇಯ ಉಜ್ಬೇಕಿಸ್ತಾನದ ಬಾಕ್ಸರ್ ಅನ್ನು 4-1 ಅಂತರದಿಂದ ಸೋಲಿಸಿ ಬಂಗಾರದ ಪದಕ ಮುಡಿಗೇರಿಸಿಕೊಂಡಿದ್ದರು. ಇದಕ್ಕೂ ಮುನ್ನ ನಡೆದ ಪಂದ್ಯಗಳಲ್ಲಿ ಆತ ತಜಕಿಸ್ತಾನ, ಕಜಕಿಸ್ತಾನ ಮತ್ತು ಇರಾನ್ ದೇಶದ ಬಲಿಷ್ಠ ಬಾಕ್ಸರ್‌ಗಳನ್ನೂ ಮಣಿಸಿದ್ದರು. ಯಾಸಿರ್‌ನ ಈ ಯಶಸ್ಸನ್ನು ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಉಮರ್ ಅಬ್ದುಲ್ಲಾ ಮುಕ್ತಕಂಠದಿಂದ ಶ್ಲಾಘಿಸಿದ್ದು, ಈ ಗೆಲುವು ನಮ್ಮ ಪ್ರದೇಶದಿಂದ ಹೊರಹೊಮ್ಮುತ್ತಿರುವ ಅಪಾರ ಕ್ರೀಡಾ ಪ್ರತಿಭೆಗೆ ಸಾಕ್ಷಿಯಾಗಿದೆ ಎಂದಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಸ್ಥಾಪಿಸಲಾಗಿರುವ 100ಕ್ಕೂ ಹೆಚ್ಚು ಖೇಲೋ ಇಂಡಿಯಾ ಕೇಂದ್ರಗಳು ಇಂದು ಅಲ್ಲಿನ ಯುವ ಪೀಳಿಗೆಯ ಪಾಲಿಗೆ ಗೇಮ್ ಚೇಂಜರ್ ಆಗಿ ಹೊರಹೊಮ್ಮುತ್ತಿವೆ. ತಳಮಟ್ಟದ ಅತ್ಯಾಧುನಿಕ ಮೂಲಸೌಕರ್ಯಗಳು ಮತ್ತು ಫ್ಲಡ್‌ಲೈಟ್ ಕ್ರೀಡಾಂಗಣಗಳು ದೂರದ ಹಳ್ಳಿಗಳಲ್ಲಿದ್ದ ಪ್ರತಿಭೆಗಳನ್ನೂ ಮೈದಾನಕ್ಕೆ ಸೆಳೆಯುತ್ತಿವೆ.

ಈ ಕುರಿತು ಮಾತನಾಡಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕಮಿಷನರ್ ಸೆಕ್ರೆಟರಿ ಡಾ. ಶಾಹಿದ್ ಇಕ್ಬಾಲ್ ಚೌಧರಿ, ಜಮ್ಮು ಮತ್ತು ಕಾಶ್ಮೀರ ಸರ್ಕಾರವು ಕ್ರೀಡಾ ವ್ಯವಸ್ಥೆಯನ್ನು ಬಲಪಡಿಸಲು ಬದ್ಧವಾಗಿದ್ದು, ನಮ್ಮ ಕ್ರೀಡಾಪಟುಗಳು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿಂಚಲು ಉತ್ತಮ ಅವಕಾಶಗಳು, ಅತ್ಯಾಧುನಿಕ ಮೂಲಸೌಕರ್ಯ ಹಾಗೂ ಸೂಕ್ತ ಮಾರ್ಗದರ್ಶನವನ್ನು ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಅಧಿಕೃತ ಅಂಕಿ-ಅಂಶಗಳ ಪ್ರಕಾರ, 2021 ರಿಂದ ಜಮ್ಮು ಮತ್ತು ಕಾಶ್ಮೀರಕ್ಕೆ ದೇಶದಲ್ಲೇ ಅತಿ ಹೆಚ್ಚು ಅಂದರೆ 100 ಖೇಲೋ ಇಂಡಿಯಾ ಕೇಂದ್ರಗಳನ್ನು ಮಂಜೂರು ಮಾಡಲಾಗಿದೆ. ಇತಿಹಾಸದಲ್ಲೇ ಮೊದಲ ಬಾರಿಗೆ ಕುಪ್ವಾರಾ, ಬಂಡಿಪೋರಾ, ಬಾರಾಮುಲ್ಲಾ, ಶೋಪಿಯಾನ್, ಬುದ್ಗಾಮ್, ಗಂದರ್ಬಲ್, ಕುಲ್ಗಾಮ್, ಅನಂತನಾಗ್, ರಾಜೌರಿ, ಪೂಂಚ್, ದೋಡಾ, ಭದ್ರವಾ, ಕಿಸ್ತ್ವಾರ್ ಮತ್ತು ರಾಂಬನ್‌ನಂತಹ ದೂರದ ಜಿಲ್ಲೆಗಳಲ್ಲಿ ಕ್ರೀಡಾ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲಾಗಿದೆ. ಜಮ್ಮು-ಕಾಶ್ಮೀರ ಮತ್ತು ಲಡಾಖ್‌ನಲ್ಲಿ ಸದ್ಯ 22 ಒಳಾಂಗಣ ಕ್ರೀಡಾಂಗಣಗಳು, ಸಿಂಥೆಟಿಕ್ ಟರ್ಫ್‌ಗಳು ಮತ್ತು ಫ್ಲಡ್‌ಲೈಟ್ ಮೈದಾನಗಳಿದ್ದು, ತಡರಾತ್ರಿಯವರೆಗೂ ಕ್ರೀಡಾ ಚಟುವಟಿಕೆಗಳು ನಡೆಯುತ್ತವೆ. ಪ್ರಸ್ತುತ ಸುಮಾರು 3,300 ಯುವಕ-ಯುವತಿಯರು ಈ ಕೇಂದ್ರಗಳಲ್ಲಿ ಉಚಿತ ತರಬೇತಿ ಪಡೆಯುತ್ತಿದ್ದು, ಆಧುನಿಕ ಕ್ರೀಡಾ ಕಿಟ್‌ಗಳು ಮತ್ತು ತರಬೇತುದಾರರ ಸೌಲಭ್ಯವನ್ನು ಹೊಂದಿದ್ದಾರೆ.

ಇದನ್ನೂ ಓದಿ: ಅಮೆರಿಕ ಒತ್ತಡ; ರಷ್ಯಾ ಬದಲು ವೆನೆಜುವೆಲಾದಿಂದ ಕಚ್ಚಾ ತೈಲ ಆಮದು ಇನ್ನಷ್ಟು ಹೆಚ್ಚಿಸುತ್ತಾ ಮೋದಿ ಸರ್ಕಾರ?

ಈ ಕ್ರೀಡಾ ಕೇಂದ್ರಗಳ ಪ್ರಭಾವ ಆಟಕ್ಕಷ್ಟೇ ಸೀಮಿತವಾಗಿರದೆ, ದೊಡ್ಡ ಸಾಮಾಜಿಕ ಬದಲಾವಣೆ ತರುತ್ತಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಹಂಚಿಕೊಂಡಿದ್ದಾರೆ.

“ಹಿಂದೆ ಕಲ್ಲು ತೂರಾಟ ಮತ್ತು ಸಮಾಜ ವಿರೋಧಿ ಚಟುವಟಿಕೆಗಳಿಗೆ ಹೆಸರಾಗಿದ್ದ ಸೂಕ್ಷ್ಮ ಪ್ರದೇಶಗಳ ಮೈದಾನಗಳಲ್ಲಿ ಈಗ ರಾತ್ರಿಯ ವೇಳೆಯೂ ಫುಟ್‌ಬಾಲ್, ವಾಲಿಬಾಲ್ ಮತ್ತು ಕ್ರಿಕೆಟ್ ಪಂದ್ಯಾವಳಿಗಳು ಯಶಸ್ವಿಯಾಗಿ ನಡೆಯುತ್ತಿವೆ. ಪ್ರಸ್ತುತ ಜಮ್ಮು ಮತ್ತು ಕಾಶ್ಮೀರದ ಕ್ರೀಡಾಪಟುಗಳು ಬಾಕ್ಸಿಂಗ್, ವುಶು, ಟೇಕ್ವಾಂಡೋ, ಪೆನ್‌ಕಾಕ್ ಸಿಲಾಟ್ ಮತ್ತು ಕಾರ್ಫ್‌ಬಾಲ್ ಕ್ರೀಡೆಗಳಲ್ಲಿ ಭಾರತವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರತಿನಿಧಿಸುತ್ತಿದ್ದಾರೆ. ಸುಡಾನ್‌ನಲ್ಲಿ ನಡೆದ ನಾರ್ಡಿಕ್ ಇಂಟರ್ನ್ಯಾಷನಲ್ ವುಶು ಚಾಂಪಿಯನ್‌ಶಿಪ್‌ನಲ್ಲಿ ರಶೀದ್ ಶಫಿ ಚಿನ್ನ ಗೆದ್ದಿದ್ದರೆ, ಮಲೇಷ್ಯಾ, ಥೈಲ್ಯಾಂಡ್, ನೇಪಾಳ, ಅಬುಧಾಬಿ ಮತ್ತು ಚೀನಾದಲ್ಲೂ ಇಲ್ಲಿನ ಪ್ರತಿಭೆಗಳು ಕಣಕ್ಕಿಳಿದಿದ್ದಾರೆ.

ರಾಷ್ಟ್ರೀಯ ಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ಜಮ್ಮು ಮತ್ತು ಕಾಶ್ಮೀರ ಇದುವರೆಗೆ 119 ಚಿನ್ನ, 124 ಬೆಳ್ಳಿ ಮತ್ತು 148 ಕಂಚಿನ ಪದಕಗಳನ್ನು ಮುಡಿಗೇರಿಸಿಕೊಂಡಿದ್ದು, ಒಟ್ಟು 1,265 ಕ್ಕೂ ಹೆಚ್ಚು ಅಥ್ಲೀಟ್‌ಗಳು ರಾಷ್ಟ್ರ ಮಟ್ಟದಲ್ಲಿ ಭಾಗವಹಿಸಿ ಮಿಂಚಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸುಳ್ಳು ಹೇಳಿಕೆ ಆರೋಪ: 6 CBI ಅಧಿಕಾರಿಗಳ ವಿರುದ್ಧ ಕ್ರಿಮಿನಲ್‌ ಕ್ರಮಕ್ಕೆ ದೆಹಲಿ ಹೈಕೋರ್ಟ್‌ ಸೂಚನೆ

ಪ್ರಕರಣವೊಂದರಲ್ಲಿ ಸರ್ಕಾರದೊಂದಿಗೆ ನಡೆದ ಪತ್ರವ್ಯವಹಾರದ ಕುರಿತು ನ್ಯಾಯಾಲಯಕ್ಕೆ ಸುಳ್ಳು ಮಾಹಿತಿ ನೀಡಿದ...

ಬೀದರ್‌ | ಕಲಾಪ್ರತಿಭೋತ್ಸವ: ವಿವಿಧ ಸ್ಪರ್ಧೆಗಳಿಗೆ ಅರ್ಜಿ ಆಹ್ವಾನ

ಮಕ್ಕಳು ಹಾಗೂ ಯುವಜನರಲ್ಲಿರುವ ಕಲಾ ಪ್ರತಿಭೆಯನ್ನು ಗುರುತಿಸಿ, ಪ್ರೋತ್ಸಾಹಿಸುವ ಉದ್ದೇಶದಿಂದ ಕನ್ನಡ...

ಈಶಾನ್ಯ ಶಿಕ್ಷಕರ ಕ್ಷೇತ್ರ ಚುನಾವಣೆ : 14 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧ, 1 ನಾಮಪತ್ರ ತಿರಸ್ಕೃತ

ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಒಂದು ಸ್ಥಾನಕ್ಕೆ ನಡೆಯಲಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ ಜೇಬಿಗೂ ಕತ್ತರಿ!

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ...